1 ಪೇತ್ರನು 2:20 - ಕನ್ನಡ ಸತ್ಯವೇದವು C.L. Bible (BSI)20 ನೀವು ತಪ್ಪುಮಾಡಿ, ಶಿಕ್ಷೆಗೆ ಗುರಿಯಾದಾಗ ತಾಳ್ಮೆಯಿಂದಿದ್ದರೆ ಅದೇನೂ ದೊಡ್ಡ ಕಾರ್ಯವಲ್ಲ. ಆದರೆ ಒಳ್ಳೆಯದನ್ನು ಮಾಡಿಯೂ ಬರುವ ಹಿಂಸೆಬಾಧೆಗಳನ್ನು ತಾಳ್ಮೆಯಿಂದ ಸಹಿಸಿಕೊಂಡರೆ, ದೇವರು ನಿಮ್ಮನ್ನು ಮೆಚ್ಚುತ್ತಾರೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ತಪ್ಪುಮಾಡಿ ಗುದ್ದು ತಿನ್ನುವುದರಲ್ಲಿ ನೀವು ಸಹಿಸಿಕೊಂಡರೆ ಅದರಿಂದೇನು ಕೀರ್ತಿ? ಆದರೆ ಒಳ್ಳೆಯದನ್ನು ಮಾಡಿ ಬಾಧೆಪಡುವುದರಲ್ಲಿ ನೀವು ಸಹಿಸಿಕೊಂಡರೆ ಅದು ದೇವರ ಮುಂದೆ ಶ್ಲಾಘ್ಯವಾಗಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ತಪ್ಪುಮಾಡಿ ಗುದ್ದು ತಿನ್ನುವದರಲ್ಲಿ ನೀವು ತಾಳ್ಮೆಯಿಂದಿದ್ದರೆ ಅದರಿಂದೇನು ಕೀರ್ತಿ? ಆದರೆ ಒಳ್ಳೇದನ್ನು ಮಾಡಿ ಬಾಧೆಪಡುವದರಲ್ಲಿ ನೀವು ತಾಳ್ಮೆಯಿಂದಿದ್ದರೆ ಅದು ದೇವರ ಮುಂದೆ ಶ್ಲಾಘ್ಯವಾಗಿದೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 ಆದರೆ ನಿಮ್ಮ ತಪ್ಪಿಗಾಗಿ ನೀವು ದಂಡಿಸಲ್ಪಟ್ಟರೆ ಆ ದಂಡನೆಯನ್ನು ನೀವು ಅನುಭವಿಸಿದ್ದಕ್ಕೆ ನಿಮಗೇನೂ ಕೀರ್ತಿ ಬರುವುದಿಲ್ಲ. ಆದರೆ ನೀವು ಒಳ್ಳೆಯದನ್ನು ಮಾಡಿದ್ದರಿಂದ ಸಂಕಟಕ್ಕೆ ಒಳಗಾಗಿ ಅದನ್ನು ತಾಳ್ಮೆಯಿಂದ ಸಹಿಸಿಕೊಂಡರೆ ಅದು ದೇವರನ್ನು ಸಂತೋಷ ಪಡಿಸುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ತಪ್ಪುಮಾಡಿ ಶಿಕ್ಷೆ ಹೊಂದುವುದರಲ್ಲಿ ನೀವು ತಾಳ್ಮೆಯಿಂದಿದ್ದರೆ ಅದರಿಂದೇನು ಹೆಚ್ಚಳ? ಆದರೆ ಒಳ್ಳೆಯದನ್ನು ಮಾಡಿ ಬಾಧೆಪಡುವುದರಲ್ಲಿ ನೀವು ತಾಳ್ಮೆಯಿಂದಿದ್ದರೆ ಇದು ದೇವರಿಗೆ ಮೆಚ್ಚುಗೆಯಾಗಿದೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್20 ಕಶ್ಯಾಕ್ ಮಟ್ಲ್ಯಾರ್, ತಿಯಾ ಚುಕ್ ಕರುನ್ ತೆಚಿ ಶಿಕ್ಷಾ ಸೊಸಲ್ಲ್ಯಾರ್ ತುಕಾ ಕಾಯ್ ಗಾವಲ್ಲ್ಯಾಸಾರ್ಕೆ ಹೊಲೆ? ಖರೆ ತುಮಿ ಬರೆ ಕರುನ್ ತುಮ್ಕಾ ಕಸ್ಟ್ ಸೊಸ್ಲ್ಯಾರ್ ತೆಚ್ಯಾ ಸಾಟ್ನಿ ದೆವ್ ಆಶಿರ್ವಾದ್ ದಿತಾ, ತೊ ತರಾಸ್ ತಾಳ್ಮೆನ್ ಸೊಸುನ್ ಘೆಟಲೆ ಹೊಲ್ಯಾರ್ ತೆ ದೆವಾಕ್ ಉಮ್ಮೆದ್ ಅನಿ ಖುಶಿ ಹೊಯ್ ಸಾರ್ಕೆ ಕರ್ತಾ, ದೆವಾ ತುಮ್ಕಾ ಹೆಚ್ಯಾ ಸಾಟ್ನಿ ಆಶಿರ್ವಾದ್ ಕರ್ತಾ. ಅಧ್ಯಾಯವನ್ನು ನೋಡಿ |