Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೇತ್ರನು 2:22 - ಕನ್ನಡ ಸತ್ಯವೇದವು C.L. Bible (BSI)

22 ಅವರು ಯಾವ ಪಾಪವನ್ನೂ ಮಾಡಲಿಲ್ಲ. ಅವರ ಬಾಯಿಂದ ಅಬದ್ಧವಾದ ಮಾತೊಂದೂ ಕೇಳಿಬರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಆತನು ಯಾವ ಪಾಪವನ್ನೂ ಮಾಡಲಿಲ್ಲ, ಆತನ ಬಾಯಲ್ಲಿ ಯಾವ ವಂಚನೆಯೂ ಸಿಕ್ಕಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಆತನು ಯಾವ ಪಾಪವನ್ನೂ ಮಾಡಲಿಲ್ಲ, ಆತನ ಬಾಯಲ್ಲಿ ಯಾವ ವಂಚನೆಯೂ ಸಿಕ್ಕಲಿಲ್ಲ; ಬೈಯುವವರನ್ನು ಆತನು ಪ್ರತಿಯಾಗಿ ಬೈಯಲಿಲ್ಲ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 “ಆತನು (ಕ್ರಿಸ್ತನು) ಪಾಪವನ್ನು ಮಾಡಲಿಲ್ಲ. ಆತನ ಬಾಯಿಂದ ಯಾವ ಸುಳ್ಳು ಮಾತೂ ಬರಲಿಲ್ಲ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 “ಕ್ರಿಸ್ತ ಯೇಸುವು ಯಾವ ಪಾಪವನ್ನೂ ಮಾಡಲಿಲ್ಲ, ಅವರ ಬಾಯಲ್ಲಿ ಯಾವ ವಂಚನೆಯೂ ಸಿಕ್ಕಲಿಲ್ಲ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

22 ತೆನಿ ಕಸ್ಲೆ ಬಿ ಪಾಪ್ ಕರುಕ್ ನಾ, ತೆಚ್ಯಾ ತೊಂಡಾತ್ನಾ ಕಸ್ಲಿ ಬಿ ಝುಟೆ ಬೊಲ್ನೆಬಿ ಯೆವ್ಕ್ ನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೇತ್ರನು 2:22
16 ತಿಳಿವುಗಳ ಹೋಲಿಕೆ  

ಮಾಡಲಿಲ್ಲ ಆತ ಯಾವ ಪಾಪಕೃತ್ಯ ಅವನ ಬಾಯಲಿರಲಿಲ್ಲ ವಂಚನೆಯ ವಾಕ್ಯ ಹೂಣಿದರಾತನನು ಸತ್ತಮೇಲೆ ದುರುಳರ ಹಾಗೂ ದುಷ್ಕರ್ಮಿಗಳ ನಡುವೆ.


ಈ ಪ್ರಧಾನಯಾಜಕ, ನಮ್ಮ ದೌರ್ಬಲ್ಯಗಳನ್ನು ಕಂಡು ಅನುಕಂಪ ತೋರದೆ ಇರುವವರಲ್ಲ. ಅವರು, ನಮ್ಮಂತೆಯೇ ಇದ್ದುಕೊಂಡು ಎಲ್ಲಾ ವಿಷಯಗಳಲ್ಲೂ ಶೋಧನೆ ಸಂಕಟಗಳನ್ನು ಅನುಭವಿಸಿದರು. ಆದರೆ ಪಾಪವನ್ನು ಮಾತ್ರ ಮಾಡಲಿಲ್ಲ.


ಪಾಪವನ್ನೇ ಅರಿಯದ ಕ್ರಿಸ್ತಯೇಸುವನ್ನು ದೇವರು ನಮಗೋಸ್ಕರ ಪಾಪಸ್ವರೂಪಿಯನ್ನಾಗಿಸಿದರು. ಕ್ರಿಸ್ತಯೇಸುವಿನಲ್ಲಿ ನಾವು ದೇವರೊಡನೆ ಸತ್ಸಂಬಂಧವನ್ನು ಪಡೆಯಲೆಂದೇ ಹೀಗೆ ಮಾಡಿದರು.


ಪಾಪರಹಿತರಾದ ಕ್ರಿಸ್ತಯೇಸು ಪಾಪಪರಿಹಾರ ಮಾಡಲೆಂದೇ ಕಾಣಿಸಿಕೊಂಡರೆಂದು ನೀವು ಬಲ್ಲಿರಿ.


ಸುಳ್ಳು ಮಾತು ಅವರ ಬಾಯಿಂದ ಬರುವುದಿಲ್ಲ; ಅವರು ನಿರ್ದೋಷಿಗಳು.


ಪ್ರಿಯಮಕ್ಕಳೇ, ನೀವು ಪಾಪಮಾಡಬಾರದೆಂದೇ ನಾನಿದನ್ನು ನಿಮಗೆ ಬರೆಯುತ್ತಿದ್ದೇನೆ. ಒಂದು ವೇಳೆ ಯಾರಾದರೂ ಪಾಪಮಾಡಿದ್ದೇ ಆದರೆ ನಮ್ಮ ಪರವಾಗಿ ಪಿತನ ಬಳಿಯಲ್ಲಿ ಬಿನ್ನಯಿಸಲು ಒಬ್ಬರಿದ್ದಾರೆ. ಅವರೇ ಸತ್ಯಸ್ವರೂಪರಾದ ಯೇಸುಕ್ರಿಸ್ತರು.


ಹಾಗೆಯೇ, ಎಲ್ಲಾ ಮಾನವರ ಪಾಪಗಳನ್ನು ಹೊತ್ತು ಹೋಗಲಾಡಿಸಲು ಕ್ರಿಸ್ತಯೇಸು ಒಮ್ಮೆಗೇ ಎಲ್ಲಾ ಕಾಲಕ್ಕೂ ತಮ್ಮನ್ನೇ ಬಲಿಯಾಗಿ ಸಮರ್ಪಿಸಿಕೊಂಡರು. ಅವರು ಮತ್ತೆ ಪ್ರತ್ಯಕ್ಷರಾಗುವರು; ಪಾಪನಿವಾರಣೆ ಮಾಡಲೆಂದು ಅಲ್ಲ, ತಮ್ಮನ್ನು ನಂಬಿ ನಿರೀಕ್ಷಿಸಿಕೊಂಡಿರುವವರನ್ನು ಜೀವೋದ್ಧಾರ ಮಾಡಲೆಂದು.


ನಮಗೇನೋ ಶಿಕ್ಷೆ ನ್ಯಾಯವಾಗಿದೆ, ನಮ್ಮ ಕೃತ್ಯಕ್ಕೆ ತಕ್ಕ ಫಲ ಸಿಕ್ಕಿದೆ; ಇವರಾದರೋ, ನಿರಪರಾಧಿ!” ಎಂದನು.


ನನ್ನಲ್ಲಿ ತಪ್ಪಿದೆಯೆಂದು ಸಮರ್ಥಿಸಬಲ್ಲವರು ನಿಮ್ಮಲ್ಲಿ ಯಾರಿದ್ದಾರೆ? ನಾನು ಸತ್ಯವನ್ನೇ ಆಡುವುದಾದರೆ ನನ್ನನ್ನು ನೀವು ನಂಬುವುದಿಲ್ಲವೇಕೆ?


ತಮ್ಮ ಬಳಿಗೆ ಬರುತ್ತಿದ್ದ ನತಾನಿಯೇಲನನ್ನು ಕಂಡ ಯೇಸು, “ಇಗೋ ನೋಡಿ, ನಿಜವಾದ ಇಸ್ರಯೇಲನು, ಈತನಲ್ಲಿ ಕಪಟವಿಲ್ಲ,” ಎಂದು ನುಡಿದರು.


ನಡೆದುದನ್ನು ಕಂಡ ಶತಾಧಿಪತಿ ದೇವರನ್ನು ಹೊಗಳುತ್ತಾ, “ಈ ಮನುಷ್ಯ ಖಂಡಿತವಾಗಿ ಸತ್ಪುರುಷನೇ ಸರಿ,” ಎಂದನು.


ಅದೂ ಅಲ್ಲದೆ, ಪಿಲಾತನು ನ್ಯಾಯಪೀಠದಲ್ಲಿ ಕುಳಿತಿರುವಾಗ, “ನೀವು ಆ ಸತ್ಪುರುಷನ ತಂಟೆಗೆ ಹೋಗಬೇಡಿ; ಆತನ ದೆಸೆಯಿಂದ ಕಳೆದ ರಾತ್ರಿ ಕನಸಿನಲ್ಲಿ ಬಹಳ ಸಂಕಟಪಟ್ಟಿದ್ದೇನೆ,” ಎಂದು ಅವನ ಪತ್ನಿ ಹೇಳಿಕಳುಹಿಸಿದಳು.


“ನಾನು ನಿರ್ದೋಷಿಯನ್ನು ಹಿಡಿದುಕೊಟ್ಟು ಪಾಪಕಟ್ಟಿಕೊಂಡೆ,” ಎಂದು ಹೇಳಿದನು. ಅದಕ್ಕೆ ಅವರು, ಅದರಿಂದ ನಮಗೇನು? ಅದನ್ನು ನೀನೇ ನೋಡಿಕೋ,’ ಎಂದುಬಿಟ್ಟರು.


ಕಾದಿಡು ನಾಲಿಗೆಯನು ಕೇಡನು ಆಡದಂತೆ I ಬಿಗಿಯಿಡು ತುಟಿಯನ್ನು ಕುಟಿಲವನು ನುಡಿಯದಂತೆ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು