Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೇತ್ರನು 2:23 - ಕನ್ನಡ ಸತ್ಯವೇದವು C.L. Bible (BSI)

23 ಅವರು, ಅವಮಾನಪಡಿಸಿದವರನ್ನು ಪ್ರತಿಯಾಗಿ ಅವಮಾನಪಡಿಸಲಿಲ್ಲ. ಅವರು ಯಾತನೆಯನ್ನು ಅನುಭವಿಸುವಾಗಲೂ ಯಾರಿಗೂ ಬೆದರಿಕೆ ಹಾಕಲಿಲ್ಲ. ಬದಲಿಗೆ, ಸತ್ಯಸ್ವರೂಪರೂ ನ್ಯಾಯಾಧಿಪತಿಯೂ ಆದ ದೇವರಿಗೆ ತಮ್ಮನ್ನೇ ಒಪ್ಪಿಸಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಬಯ್ಯುವವರನ್ನು ಆತನು ಪ್ರತಿಯಾಗಿ ಬಯ್ಯಲಿಲ್ಲ, ಆತನು ಬಾಧೆಯನ್ನನುಭವಿಸಿದಾಗ ಯಾರನ್ನೂ ಬೆದರಿಸದೆ, ನ್ಯಾಯವಾಗಿ ತೀರ್ಪು ಮಾಡುವಾತನಿಗೆ ತನ್ನ ಕಾರ್ಯವನ್ನು ಒಪ್ಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಆತನು ಬಾಧೆಯನ್ನನುಭವಿಸಿದಾಗ ಯಾರನ್ನೂ ಬೆದರಿಸದೆ ನ್ಯಾಯವಾಗಿ ತೀರ್ಪುಮಾಡುವಾತನಿಗೆ ತನ್ನ ಕಾರ್ಯವನ್ನು ಒಪ್ಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಜನರು ಕ್ರಿಸ್ತನನ್ನು ಬಯ್ದರೂ ಆತನು ಅವರನ್ನು ಬಯ್ಯಲಿಲ್ಲ. ಆತನು ಸಂಕಟವನ್ನು ಅನುಭವಿಸಿದರೂ ಜನರನ್ನು ಹೆದರಿಸಲಿಲ್ಲ. ಆತನು ತನ್ನ ಕಾರ್ಯವನ್ನು ದೇವರಿಗೆ ವಹಿಸಿದನು. ಸರಿಯಾದ ನ್ಯಾಯತೀರ್ಪು ನೀಡುವಾತನು ದೇವರೊಬ್ಬನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಬೈಯ್ಯುವವರನ್ನು ಅವರು ಪ್ರತಿಯಾಗಿ ಬೈಯಲಿಲ್ಲ. ಅವರು ಬಾಧೆಯನ್ನನುಭವಿಸಿದಾಗ ಯಾರನ್ನೂ ಬೆದರಿಸದೆ ನ್ಯಾಯವಾಗಿ ತೀರ್ಪುಮಾಡುವ ತಂದೆಗೆ ತಮ್ಮನ್ನು ಒಪ್ಪಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

23 ತೆಕಾ ಅವ್ಮಾನ್ ಕರಲ್ಲ್ಯಾ ತನ್ನಾ ತೆನಿ ಫಾಟಿ ಜವಾಬ್ ದಿವ್ನ್ ಅವ್ಮಾನ್ ಕರುಕ್ನಾ, ತೆಕಾ ಕಸ್ಟ್ ದಿಲ್ಲ್ಯಾ ತನ್ನಾ ತೆನಿ ಧಮ್ಕಿ ದಿವ್ಕ್ ನಾ, ಖರೆ ತೆನಿ ಅಪ್ನಾಕುಚ್ ದೆವಾಚ್ಯಾ ಬರೊಸ್ಯಾ ವೈರ್ ಸೊಡುನ್ ದಿಲ್ಯಾನ್ ತೊ ದೆವ್ ನಿಯತ್ತಿಚೊ ಹೊವ್ನ್ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೇತ್ರನು 2:23
32 ತಿಳಿವುಗಳ ಹೋಲಿಕೆ  

ಬಾಧೆಗಳಿಗೊಳಗಾದ, ಹಿಂಸೆ ಸಹಿಸಿದ ಆತ ಬಾಯ್ದೆರೆಯದೆ. ಹೌದು, ಬಾಯ್ದೆರೆಯದಿದ್ದ ಬಲಿಗೊಯ್ದ ಕುರಿಮರಿಯಂತೆ ತುಪ್ಪಟ ಕತ್ತರಿಸುವವನ ಮುಂದಿರುವ ಮೂಕ ಕುರಿಮರಿಯಂತೆ.


ಆದ್ದರಿಂದ, ದೇವರ ಚಿತ್ತಾನುಸಾರ ಹಿಂಸೆಬಾಧೆಯನ್ನು ಅನುಭವಿಸುವವರು ತಮ್ಮ ಸತ್ಕ್ರಿಯೆಗಳಲ್ಲಿ ನಿರತರಾಗಿರಲಿ. ಸೃಷ್ಟಿಕರ್ತನಿಗೆ ಶರಣಾಗಲಿ. ಆತ ಅವರನ್ನೆಂದಿಗೂ ಕೈಬಿಡನು.


ಪಾಪಿಗಳಿಂದ ತಮಗುಂಟಾದ ಕಠಿಣ ವಿರೋಧವನ್ನು ಯೇಸುಸ್ವಾಮಿ ಹೇಗೆ ಸಹಿಸಿಕೊಂಡರೆಂಬುದನ್ನು ಮನಸ್ಸಿನಲ್ಲಿಡಿ. ಆಗ ನೀವು ಬೇಸತ್ತು ಎದೆಗುಂದಲಾರಿರಿ.


ಪ್ರಭುವಿಗೆ ಬಿಡು ಜೀವನಯಾತ್ರಾ ಚಿಂತೆಯನು I ಭರವಸೆಯಿಂದಿರು, ಆತನದನು ಸಾಗಿಸುವನು II


ಪ್ರಭುವೇ, ಇಗೋ, ಇವರು ನಮ್ಮನ್ನು ಬೆದರಿಸುತ್ತಿದ್ದಾರೆ; ನಿಮ್ಮ ಸಂದೇಶವನ್ನು ಧೈರ್ಯವಾಗಿ ಸಾರಲು ಶರಣರಾದ ನಮಗೆ ನೆರವು ನೀಡಿರಿ.


ಇನ್ನು ನನಗೆ ಉಳಿದಿರುವುದು ಒಂದೇ: ಸಜ್ಜನರಿಗೆ ಸಲ್ಲುವಂಥ ಜಯಮಾಲೆ ನನಗೀಗ ಸಿದ್ಧವಾಗಿದೆ. ಅದನ್ನು ನೀತಿವಂತ ನ್ಯಾಯಾಧಿಪತಿಯಾದ ಪ್ರಭು ಆ ದಿನದಂದು ನನಗೆ ಕೊಡುವರು; ನನಗೆ ಮಾತ್ರವಲ್ಲ, ಅವರ ಪ್ರತ್ಯಕ್ಷತೆಯನ್ನು ಪ್ರೀತಿಯಿಂದ ನಿರೀಕ್ಷಿಸುತ್ತಿರುವ ಎಲ್ಲರಿಗೂ ಕೊಡುವರು.


ಇದಕ್ಕಾಗಿಯೇ ಇಷ್ಟೆಲ್ಲಾ ಕಷ್ಟಕಾರ್ಪಣ್ಯಗಳನ್ನು ನಾಚಿಕೆಪಡದೆ ಅನುಭವಿಸುತ್ತಿದ್ದೇನೆ. ನಾನು ಯಾರಲ್ಲಿ ವಿಶ್ವಾಸವನ್ನಿಟ್ಟಿದ್ದೇನೆ ಎಂದು ಚೆನ್ನಾಗಿ ಬಲ್ಲೆ. ನನ್ನ ವಶಕ್ಕೆ ಒಪ್ಪಿಸಿರುವುದನ್ನು ಆ ದಿನದವರೆಗೂ ಕಾಪಾಡುವುದಕ್ಕೆ ಅವರು ಶಕ್ತರು. ಆದ್ದರಿಂದ ನಾನು ಪೂರ್ಣ ಭರವಸೆಯಿಂದ ಇದ್ದೇನೆ.


ಯೇಸುಸ್ವಾಮಿ, “ಪಿತನೇ, ನನ್ನಾತ್ಮವನ್ನು ನಿಮ್ಮ ಕೈಗೊಪ್ಪಿಸುತ್ತೇನೆ,” ಎಂದು ಗಟ್ಟಿಯಾಗಿ ಕೂಗಿ ಪ್ರಾಣಬಿಟ್ಟರು.


ನನಗಾಧಾರ ನೀನಲ್ಲವೆ? ನನ್ನಾತ್ಮವನು ನಿನಗೊಪ್ಪಿಸಿರುವೆ I ನಂಬಿಕಸ್ತನಾದ ದೇವನೆ, ನೀಯೆನ್ನ ಮುಕ್ತಗೊಳಿಸಿರುವೆ II


ಹೌದು ದೇವಾ, ನೀ ವಿಚಾರಿಪವನು; ದುಃಖದುಗುಡ ಲೆಕ್ಕಿಸುವವನು I ತಬ್ಬಲಿಗಳಿಗೆ ತಂದೆ ನೀನು, ನಿರ್ಗತಿಕ ನಿನಗೆ ಶರಣಾಗತನು II


ನಾನು ಈ ದೃಶ್ಯವನ್ನೂ ಕಂಡೆ: ಸ್ವರ್ಗವು ತೆರೆದಿತ್ತು. ಬಿಳಿಯ ಕುದುರೆಯೊಂದು ಕಾಣಿಸಿತು. ಅದರ ಮೇಲೆ ಒಬ್ಬನು ಕುಳಿತಿದ್ದನು. ನಂಬಿಕಸ್ಥನೆಂದೂ ಸತ್ಯವಂತನೆಂದೂ ಆತನ ಹೆಸರು; ಆತನು ನಿಷ್ಪಕ್ಷಪಾತದಿಂದ ನ್ಯಾಯತೀರ್ಪು ಕೊಡುವವನು; ನ್ಯಾಯಬದ್ಧವಾಗಿ ಯುದ್ಧಮಾಡುವವನು.


ಮುಯ್ಯಿಗೆ ಮುಯ್ಯಿ ತೀರಿಸಬೇಡಿರಿ; ಶಾಪಕ್ಕೆ ಪ್ರತಿಶಾಪ ಹಾಕದೆ ಆಶೀರ್ವಾದ ಮಾಡಿರಿ. ಹೀಗೆ ಮಾಡಿದರೆ ದೇವರ ಆಶೀರ್ವಾದವನ್ನು ಬಾಧ್ಯವಾಗಿ ಪಡೆಯುವಿರಿ.


ನೀವು ಅನುಭವಿಸುತ್ತಿರುವುದೆಲ್ಲ ದೇವರ ಸಾಮ್ರಾಜ್ಯಕ್ಕಾಗಿ. ಈ ಕಷ್ಟಾನುಭವಗಳ ಮೂಲಕ ದೇವರು ನಿಮ್ಮನ್ನು ತಮ್ಮ ಸಾಮ್ರಾಜ್ಯಕ್ಕೆ ಅರ್ಹರನ್ನಾಗಿ ಮಾಡುತ್ತಾರೆ. ಇವುಗಳಲ್ಲಿ ನೀವು ತೋರಿಸುವ ಸಹನೆ ಹಾಗೂ ವಿಶ್ವಾಸ ಇವುಗಳೇ ದೇವರು ನ್ಯಾಯವಾದ ತೀರ್ಪು ಮಾಡುತ್ತಾರೆಂಬುದಕ್ಕೆ ಸ್ಪಷ್ಟ ನಿದರ್ಶನಗಳು.


ಯಜಮಾನರೇ, ನೀವು ಕೂಡ ನಿಮ್ಮ ಸೇವಕರೊಡನೆ ಯೋಗ್ಯವಾದ ರೀತಿಯಲ್ಲಿ ವರ್ತಿಸಿರಿ. ಅವರನ್ನು ಬೆದರಿಸುವುದನ್ನು ಬಿಟ್ಟುಬಿಡಿ. ಸ್ವರ್ಗಲೋಕದಲ್ಲಿ ನಿಮಗೂ ಅವರಿಗೂ ಒಬ್ಬ ಯಜಮಾನ ಇರುತ್ತಾನೆ. ಆತ ಪಕ್ಷಪಾತಿಯಲ್ಲ ಎಂಬುದನ್ನು ಮರೆಯದಿರಿ.


ಆದರೆ ನಿನ್ನದು ಕಠಿಣ ಹೃದಯ, ಮೊಂಡುಸ್ವಭಾವ. ಆದ್ದರಿಂದ ದೇವರ ಕೋಪ ಹಾಗು ನ್ಯಾಯವಾದ ತೀರ್ಪು ವ್ಯಕ್ತವಾಗುವ ದಿನದಂದು ನಿನಗೆ ವಿಧಿಸಲಾಗುವ ಶಿಕ್ಷೆಯನ್ನು ನೀನಾಗಿಯೇ ಸಂಗ್ರಹಿಸಿಕೊಳ್ಳುತ್ತಿದ್ದೀಯೆ.


ಏಕೆಂದರೆ, ಅವರು ಒಂದು ದಿನವನ್ನು ಗೊತ್ತುಮಾಡಿದ್ದಾರೆ; ಆ ದಿನದಂದು ತಾವು ನೇಮಿಸಿದ ಒಬ್ಬ ವ್ಯಕ್ತಿಯ ಮುಖಾಂತರ ಇಡೀ ಜಗತ್ತಿಗೆ ನ್ಯಾಯನಿರ್ಣಯ ಮಾಡುವರು. ಇದನ್ನು ಎಲ್ಲರಿಗೂ ಖಚಿತಪಡಿಸಲೆಂದೇ ಆ ವ್ಯಕ್ತಿಯನ್ನು ಮರಣದಿಂದ ಪುನರುತ್ಥಾನಗೊಳಿಸಿದ್ದಾರೆ.”


ಇತ್ತ ಸೌಲನು ಯೇಸುಸ್ವಾಮಿಯ ಅನುಯಾಯಿಗಳಿಗೆ ಬೆದರಿಕೆ ಹಾಕುತ್ತಾ ಅವರನ್ನು ಸಂಹರಿಸಬೇಕೆಂದಿದ್ದನು.


ಆದುದರಿಂದ ಆತನು ಯೇಸುವನ್ನು ಅನೇಕ ವಿಧವಾಗಿ ಪ್ರಶ್ನಿಸಿದನು. ಆದರೆ ಅವರು ಒಂದಕ್ಕೂ ಉತ್ತರಕೊಡಲಿಲ್ಲ.


ಪ್ರಭು ಧರೆಗೆ ನ್ಯಾಯತೀರಿಸಲು ಬಂದೇ ಬರುವನು ಖರೆಯಾಗಿ I ಜಗಕು, ಜನತೆಗು ತೀರ್ಪಿಡುವನು ನೀತಿನಿಯಮಾನುಸಾರವಾಗಿ II


ನ್ಯಾಯಕ್ಕನುಸಾರ ತೀರ್ಪನೀಡುವಂಥವನು ದೇವನು I ದುರುಳರ ಮೇಲೆ ದಿನಬಿಡದೆ ಕೋಪವುಳ್ಳವನು ಆತನು II


ಹೀಗೆ ದುಷ್ಟರಿಗೂ ಶಿಷ್ಟರಿಗೂ ಭೇದಮಾಡದೆ ದುಷ್ಟರ ಸಂಗಡ ಸಜ್ಜನರನ್ನೂ ಸಂಹರಿಸುವುದು ನಿಮ್ಮಿಂದ ಎಂದಿಗೂ ಆಗಬಾರದು. ಇಡೀ ಜಗತ್ತಿನ ನ್ಯಾಯಾಧಿಪತಿ ಸರಿಯಾಗಿ ನ್ಯಾಯತೀರಿಸಬೇಕಲ್ಲವೇ?" ಎಂದನು.


ಅವರು ತನ್ನ ಮೇಲೆ ಕಲ್ಲುಬೀರುತ್ತಿದ್ದಾಗ ಸ್ತೇಫನನು, “ಪ್ರಭು ಯೇಸುವೇ, ನನ್ನಾತ್ಮವನ್ನು ಸ್ವೀಕರಿಸಿ,” ಎಂದು ಪ್ರಾರ್ಥಿಸಿದನು.


ನಮಗೇನೋ ಶಿಕ್ಷೆ ನ್ಯಾಯವಾಗಿದೆ, ನಮ್ಮ ಕೃತ್ಯಕ್ಕೆ ತಕ್ಕ ಫಲ ಸಿಕ್ಕಿದೆ; ಇವರಾದರೋ, ನಿರಪರಾಧಿ!” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು