Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೇತ್ರನು 2:25 - ಕನ್ನಡ ಸತ್ಯವೇದವು C.L. Bible (BSI)

25 ನೀವು ದಾರಿತಪ್ಪಿದ ಕುರಿಗಳಂತೆ ಅಲೆಯುತ್ತಿದ್ದಿರಿ. ಈಗಲಾದರೋ ನಿಮ್ಮ ಆತ್ಮಗಳನ್ನು ಕಾಯುವ ಕುರಿಗಾಹಿಯೂ ಸಂರಕ್ಷಕನೂ ಆದಾತನ ಬಳಿಗೆ ಮರಳಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ನೀವು ದಾರಿತಪ್ಪಿದ ಕುರಿಗಳಂತೆ ಇದ್ದವರು. ಆದರೆ ಈಗ ನೀವು ತಿರುಗಿಕೊಂಡು ನಿಮ್ಮ ಆತ್ಮಗಳ ಕುರುಬನೂ ಪಾಲಕನೂ ಆಗಿರುವಾತನ ಬಳಿಗೆ ಬಂದಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ನೀವು ಕುರಿಗಳಂತೆ ದಾರಿತಪ್ಪಿ ತೊಳಲುವವರಾಗಿದ್ದಿರಿ, ಆದರೆ ಈಗ ನೀವು ತಿರುಗಿಕೊಂಡು ನಿಮ್ಮ ಆತ್ಮಗಳನ್ನು ಕಾಯುವ ಕುರುಬನೂ ಅಧ್ಯಕ್ಷನೂ ಆಗಿರುವಾತನ ಬಳಿಗೆ ಬಂದಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ನೀವು ದಾರಿ ತಪ್ಪಿದ ಕುರಿಗಳಾಗಿದ್ದಿರಿ. ಆದರೆ ಈಗ ನೀವು ನಿಮ್ಮ ಕುರುಬನ ಬಳಿಗೆ ಅಂದರೆ ನಿಮ್ಮ ಆತ್ಮಗಳನ್ನು ಕಾಪಾಡುವಾತನ ಬಳಿಗೆ ಹಿಂತಿರುಗಿ ಬಂದಿರುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಏಕೆಂದರೆ, “ನೀವು ಕುರಿಗಳಂತೆ ದಾರಿ ತಪ್ಪಿದವರಾಗಿದ್ದೀರಿ.” ಆದರೆ ಈಗ ನೀವು ತಿರುಗಿ ನಿಮ್ಮ ಆತ್ಮಗಳ ಕುರುಬ ಹಾಗೂ ಸಭಾಧ್ಯಕ್ಷರೂ ಆಗಿರುವ ಕ್ರಿಸ್ತ ಯೇಸುವಿನ ಬಳಿಗೆ ಬಂದಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

25 ಕಶ್ಯಾಕ್ ಮಟ್ಲ್ಯಾರ್, ತುಮಿ ವಾಟ್ ಚುಕುನ್ ಗೆಲ್ಲ್ಯಾ ಬಕ್ರ್ಯಾಂಚ್ಯಾ ಸಾರ್ಕೆ ಹೊತ್ಯಾಶಿ ಖರೆ ಅತ್ತಾ ತುಮ್ಕಾ ತುಮ್ಚ್ಯಾ ಮುಖಂಡಾಕ್ಡೆ ಅನಿ ತುಮ್ಚೆ ಆತ್ಮೆ ರಾಕ್ತಲ್ಯಾಕ್ಡೆ ಹಾನುನ್ ಹೊಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೇತ್ರನು 2:25
24 ತಿಳಿವುಗಳ ಹೋಲಿಕೆ  

ತೊಳಲುತ್ತಿದ್ದೆವು ನಾವೆಲ್ಲರು ದಾರಿತಪ್ಪಿದ ಕುರಿಗಳಂತೆ ಹಿಡಿಯುತ್ತಿದ್ದನು ಪ್ರತಿಯೊಬ್ಬನು ತನ್ನ ತನ್ನ ದಾರಿಯನ್ನೆ. ನಮ್ಮೆಲ್ಲರ ದೋಷವನು ಸರ್ವೇಶ್ವರ ಹಾಕಿದ್ದ ಆತನ ಮೇಲೆ.


ನನ್ನ ಕುರಿಗಳು ಮಲೆನಾಡಿನಲ್ಲೆಲ್ಲಾ ಎತ್ತರವಾದ ಪ್ರತಿಯೊಂದು ಬೆಟ್ಟದ ಮೇಲೆ ಅಲೆದಾಡಿದವು; ಹೌದು, ನನ್ನ ಕುರಿಗಳು ಭೂಮಂಡಲದಲ್ಲೆಲ್ಲಾ ಚದರಿಹೋದವು; ಯಾರೂ ಅವುಗಳ ಹಿಂದೆ ಹೋಗಿ ಹುಡುಕಲಿಲ್ಲ.


ನೀವು ನಿಮ್ಮ ವಿಷಯದಲ್ಲಿ ಹಾಗೂ ಪವಿತ್ರಾತ್ಮ ನಿಮ್ಮ ಪಾಲನೆಗೆ ವಹಿಸಿರುವ ಮಂದೆಯ ವಿಷಯದಲ್ಲಿ ಜಾಗರೂಕರಾಗಿರಿ. ಪ್ರಭು ತಮ್ಮ ಸ್ವಂತ ರಕ್ತ ಸುರಿಸಿ ಸಂಪಾದಿಸಿದ ಧರ್ಮಸಭೆಗೆ ಉತ್ತಮ ಕುರಿಗಾಹಿಗಳಾಗಿರಿ.


ಆತ ಮೇಯಿಸುವನು ತನ್ನ ಮಂದೆಯನ್ನು ಕುರುಬನ ಹಾಗೆ ಮರಿಗಳನ್ನು ಕೈಗೆ ಎತ್ತಿಕೊಳ್ಳುವನು, ಅಪ್ಪಿಕೊಳ್ಳುವನು ಎದೆಗೆ ನಡೆಸುವನು ಹಾಲೂಡಿಸುವ ಕುರಿಗಳನ್ನು ಮೆಲ್ಲಗೆ.


ಪ್ರಭು, ದಾರಿತಪ್ಪಿದ ಕುರಿ ನಾನು I ಪರಾಂಬರಿಸು ನಿನ್ನ ದಾಸನನು I ಮರೆಯೆನು ನಿನ್ನಾಜ್ಞೆಗಳನು II


ಆ ಜನಸಮೂಹವನ್ನು ಕಂಡಾಗ ಅವರ ಮನ ಕರಗಿತು.


“ನಿಮ್ಮಲ್ಲಿ ಒಬ್ಬನಿಗೆ ನೂರು ಕುರಿಗಳು ಇವೆಯೆನ್ನೋಣ. ಅವುಗಳಲ್ಲಿ ಒಂದು ಕುರಿ ತಪ್ಪಿಸಿಕೊಂಡು ಹೋಯಿತೆಂದು ಇಟ್ಟುಕೊಳ್ಳಿ. ಆಗ ನಿಮಗೇನು ಅನ್ನಿಸುತ್ತದೆ? ಅವನು ಉಳಿದ ತೊಂಬತ್ತೊಂಬತ್ತು ಕುರಿಗಳನ್ನು ಗುಡ್ಡದಲ್ಲೇ ಬಿಟ್ಟು, ತಪ್ಪಿಸಿಕೊಂಡುಹೋದ ಆ ಒಂದು ಕುರಿಯನ್ನು ಹುಡುಕಿಕೊಂಡು ಹೋಗುವುದಿಲ್ಲವೇ?


ಆಗ ಮಾತ್ರ, ಪ್ರಧಾನ ಕುರಿಗಾಹಿ ಪ್ರತ್ಯಕ್ಷನಾಗುವಾಗ ಮಲಿನವಾಗದ ಮಹಿಮಾನ್ವಿತ ಜಯಮಾಲೆಯನ್ನು ಪಡೆಯುವಿರಿ.


ಸಭೆಯೆಂಬ ಕುರಿಮಂದೆಗೆ ಮಹಾಪಾಲಕರಾದ ಯೇಸುಸ್ವಾಮಿ ಶಾಶ್ವತ ಒಡಂಬಡಿಕೆಯನ್ನು ನಿಶ್ಚಯಪಡಿಸುವುದಕ್ಕಾಗಿ ತಮ್ಮ ರಕ್ತವನ್ನು ಸುರಿಸಿದರು. ಶಾಂತಿದಾತರಾದ ದೇವರು ನಮ್ಮ ಪ್ರಭುವನ್ನು ಸಾವಿನಿಂದ ಜೀವಕ್ಕೆ ಎಬ್ಬಿಸಿದರು.


ಇಸ್ರಯೇಲರ ದೇವರಾದ ಸರ್ವೇಶ್ವರ, ತಮ್ಮ ಜನರೆಂಬ ಕುರಿಗಳನ್ನು ಮೇಯಿಸುವ ಕುರಿಗಾಹಿಗಳ ದ್ರೋಹವನ್ನು ಅರಿತಿದ್ದಾರೆ. ಅಂಥವರನ್ನು ಕುರಿತು ಹೀಗೆನ್ನುತ್ತಾರೆ : “ನೀವು ನನ್ನ ಮಂದೆಯನ್ನು ಚದರಿಸಿ ಓಡಿಸಿಬಿಟ್ಟಿದ್ದೀರಿ. ಅವುಗಳ ಬಗ್ಗೆ ಎಚ್ಚರ ವಹಿಸಲೇ ಇಲ್ಲ. ನಿಮ್ಮ ನೀಚಕಾರ್ಯಗಳ ನಿಮಿತ್ತ ನಿಮ್ಮನ್ನು ವಿಚಾರಣೆಗೆ ಗುರಿಪಡಿಸುವೆನು.


ಹೀಗಿರುವಲ್ಲಿ ದೇವಜನರಾದ ಸಹೋದರರೇ, ಸ್ವರ್ಗಸೌಭಾಗ್ಯದಲ್ಲಿ ಸಹಭಾಗಿಗಳಾಗಲು ಕರೆ ಹೊಂದಿದವರೇ, ದೇವರು ಕಳುಹಿಸಿದಂಥವರು ಹಾಗೂ ನಾವು ವಿಶ್ವಾಸಿಸುವ ಧರ್ಮದ ಪ್ರಧಾನಯಾಜಕರು ಆದ ಯೇಸುವನ್ನು ಭಕ್ತಿಯಿಂದ ಧ್ಯಾನಿಸಿರಿ.


ನನ್ನ ದಾಸ ದಾವೀದನು ಅವರಿಗೆ ರಾಜನಾಗಿರುವನು; ಅವರೆಲ್ಲರಿಗು ಒಬ್ಬನೇ ಪಾಲಕನಿರುವನು; ಅವರು ನನ್ನ ನಿಯಮಗಳನ್ನು ಅನುಸರಿಸಿ, ನನ್ನ ವಿಧಿಗಳನ್ನು ಕೈಕೊಂಡು ಆಚರಿಸುವರು.


ಕಿವಿಗೊಟ್ಟು ಆಲಿಸೋ, ಇಸ್ರಯೇಲರ ಮೇಷಪಾಲನೇ I ಜೋಸೆಫನ ವಂಶಜರನು ಕುರಿಹಿಂಡಂತೆ ಕರೆತಂದವನೇ I ವಿರಾಜಿಸು, ಕೆರೂಬಿಯರ ಮಧ್ಯೆ ಆಸೀನನಾದವನೇ II


ಸೇನಾಧೀಶ್ವರ ಸರ್ವೇಶ್ವರ ಇಂತೆನ್ನುತ್ತಾರೆ: “ನನ್ನ ಕುರಿಗಾಹಿಗೆ ವಿರುದ್ಧವಾಗಿ, ನನ್ನಾಸಂಗಡಿಗನಿಗೆದುರಾಗಿ, ಓ ಖಡ್ಗವೇ, ಎಚ್ಚರಗೊಳ್ಳು; ಕೊಲ್ಲು ಕುರಿಗಾಹಿಯನು. ಆಗ ಚದರುವುವು ಕುರಿಗಳು, ಕೈಮಾಡಲಿರುವೆ ಮರಿಗಳ ಮೇಲೂ.


“ಬೇಟೆಗಾರನಿಂದ ತಪ್ಪಿಸಿಕೊಂಡು ಓಡುತ್ತಿರುವ ಜಿಂಕೆಯಂತೆಯೂ ಒಟ್ಟುಗೂಡಿಸಲು ಯಾರೂ ಇಲ್ಲದಂಥ ಕುರಿಗಳಂತೆಯೂ ಪ್ರತಿಯೊಬ್ಬನು ಸ್ವಜನರ ಕಡೆಗೆ ತಿರುಗುವನು; ಸ್ವದೇಶದ ಕಡೆಗೆ ಓಡುವನು.


ಗಾಯಗೊಂಡನಾತ ನಮ್ಮ ಪಾಪಗಳ ನಿಮಿತ್ತ ಜಜ್ಜರಿತನಾದ ನಮ್ಮ ದ್ರೋಹಗಳ ದೆಸೆಯಿಂದ. ಶಿಕ್ಷೆಗೊಳಗಾದ ನಮ್ಮ ರಕ್ಷೆಗಾಗಿ ಪೆಟ್ಟುತಿಂದ ನಮ್ಮ ಸ್ವಸ್ಥತೆಗಾಗಿ.


ತಾನೂ ದುರ್ಬಲ ಮಾನವನಾದ ಕಾರಣ, ಆತನು ಅಜ್ಞಾನಿಗಳನ್ನೂ ದುರ್ಮಾರ್ಗಿಗಳನ್ನೂ ಸಹಾನುಭೂತಿಯಿಂದ ಕಾಣಬಲ್ಲನು.


ಪೂರ್ವಕಾಲದಲ್ಲಿ ನೋವನು ನಾವೆಯನ್ನು ಕಟ್ಟುತ್ತಿದ್ದಾಗ ತಾಳ್ಮೆಯಿಂದಿದ್ದ ದೇವರಿಗೆ ಅವಿಧೇಯರಾಗಿದ್ದ ಆತ್ಮಗಳೇ ಅವು. ನಾವೆಯೊಳಗಿದ್ದು ಕೆಲವರು, ಅಂದರೆ ಎಂಟು ಜನರು, ಜಲದಿಂದ ರಕ್ಷಣೆಹೊಂದಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು