Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೇತ್ರನು 2:5 - ಕನ್ನಡ ಸತ್ಯವೇದವು C.L. Bible (BSI)

5 ನೀವೂ ಸಹ ಸಜೀವ ಶಿಲೆಗಳಾಗಿದ್ದೀರಿ; ಆಧ್ಯಾತ್ಮಿಕ ದೇವಾಲಯವನ್ನು ನಿರ್ಮಿಸಲು ನಿಮ್ಮನ್ನೇ ಅರ್ಪಿಸಿಕೊಳ್ಳಿ. ಆ ದೇವಾಲಯದಲ್ಲೇ ಯೇಸುಕ್ರಿಸ್ತರ ಮುಖಾಂತರ ದೇವರಿಗೆ ಮೆಚ್ಚುಗೆಯಾಗಿರುವ ಆಧ್ಯಾತ್ಮಿಕ ಬಲಿಗಳನ್ನು ಸಮರ್ಪಿಸುವ ಪವಿತ್ರ ಯಾಜಕವರ್ಗದವರು ನೀವಾಗಿರುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ನೀವು ಸಹ ಜೀವವುಳ್ಳ ಕಲ್ಲುಗಳಾಗಿದ್ದು ಆತ್ಮೀಕವಾದ ಮಂದಿರವಾಗುವುದಕ್ಕೆ ಕಟ್ಟಲ್ಪಡುತ್ತಾ ಇದ್ದೀರಿ. ಯೇಸು ಕ್ರಿಸ್ತನ ಮೂಲಕ ದೇವರಿಗೆ ಸಮರ್ಪಕವಾದ ಆತ್ಮೀಕ ಯಜ್ಞಗಳನ್ನು ಸಮರ್ಪಿಸುವುದಕ್ಕೆ ಪವಿತ್ರ ಯಾಜಕ ವರ್ಗದವರಾಗಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ನೀವು ಸಹ ಜೀವವುಳ್ಳ ಕಲ್ಲುಗಳಾಗಿದ್ದು ಆತ್ಮ ಸಂಬಂಧವಾದ ಮಂದಿರವಾಗಲಿಕ್ಕೆ ಕಟ್ಟಲ್ಪಡುತ್ತಾ ಇದ್ದೀರಿ, ಮತ್ತು ಯೇಸು ಕ್ರಿಸ್ತನ ಮೂಲಕ ದೇವರಿಗೆ ಸಮರ್ಪಕವಾದ ಆತ್ಮೀಯಯಜ್ಞಗಳನ್ನು ಸಮರ್ಪಿಸುವದಕ್ಕೆ ಪವಿತ್ರ ಯಾಜಕವರ್ಗದವರಾಗಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ನೀವೂ ಸಹ ಜೀವವುಳ್ಳ ಕಲ್ಲುಗಳಾಗಿದ್ದೀರಿ. ಆತ್ಮಸಂಬಂಧವಾದ ದೇವಾಲಯವಾಗುವದಕ್ಕಾಗಿ ನೀವೇ ಕಟ್ಟಲ್ಪಡುತ್ತಿದ್ದೀರಿ; ದೇವರಿಂದ ಸ್ವೀಕೃತವಾಗುವಂಥ ಆತ್ಮಿಕ ಯಜ್ಞಗಳನ್ನು ಯೇಸು ಕ್ರಿಸ್ತನ ಮೂಲಕ ದೇವರಿಗೆ ಅರ್ಪಿಸುವ ಪವಿತ್ರ ಯಾಜಕರಾಗಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ನೀವು ಸಹ ಜೀವವುಳ್ಳ ಕಲ್ಲುಗಳಾಗಿದ್ದು ಆತ್ಮಿಕ ಮಂದಿರವಾಗುವುದಕ್ಕೆ ನಿರ್ಮಿತವಾಗುತ್ತಾ ಇದ್ದೀರಿ. ಕ್ರಿಸ್ತ ಯೇಸುವಿನ ಮೂಲಕ ದೇವರಿಗೆ ಸಮರ್ಪಕವಾದ ಆತ್ಮಿಕ ಯಜ್ಞಗಳನ್ನು ಸಮರ್ಪಿಸಲು ನೀವು ಪವಿತ್ರ ಯಾಜಕವರ್ಗದವರಾಗಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

5 ಥೈ ತುಮಿಬಿ ಝಿತ್ತೆ ಗುಂಡೆ ಹೊವ್ನ್ ಪವಿತ್ರ್ ಯಾಜಕಾಂಚ್ಯಾ ಸಾರ್ಕೆ ಸೆವಾ ಕರುನ್ ಜೆಜು ಕ್ರಿಸ್ತಾಚ್ಯಾ ವೈನಾ ಆತ್ಮಿಕ್ ಅನಿ ದೆವಾಕ್ ಸ್ವಿಕಾರ್ ಹೊತಲಿ ಬಲಿ ಭೆಟ್ವುತ್ಯಾಶಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೇತ್ರನು 2:5
34 ತಿಳಿವುಗಳ ಹೋಲಿಕೆ  

ನೀವು ದೇವರು ಆಯ್ದುಕೊಂಡ ಜನಾಂಗ, ರಾಜಯಾಜಕರು, ಪವಿತ್ರ ಪ್ರಜೆ, ದೇವರ ಸ್ವಕೀಯ ಜನ; ಅವರ ಅದ್ಭುತ ಕಾರ್ಯಗಳನ್ನು ಪ್ರಚುರಪಡಿಸುವುದಕ್ಕಾಗಿಯೇ ಆಯ್ಕೆಯಾದವರು. ಕಾರ್ಗತ್ತಲಿನಿಂದ ತಮ್ಮ ಅದ್ಭುತಕರವಾದ ಬೆಳಕಿಗೆ ನಿಮ್ಮನ್ನು ಕರೆತಂದವರು ಅವರೇ.


ನಾವು ದೇವರ ಸಹಕಾರ್ಮಿಕರು. ನೀವು ದೇವರೆ ಸಾಗುವಳಿಮಾಡುವ ಹೊಲ; ಅವರೆ ನಿರ್ಮಿಸುತ್ತಿರುವ ಮಂದಿರ.


ಏರ್ಪಡಿಸಿದೆ ನೀ ಅವರನು ನಮ್ಮ ದೇವರಿಗೋಸ್ಕರ ರಾಜವಂಶವಾಗಿ, ಯಾಜಕವರ್ಗವಾಗಿ. ಆಳುವರವರು ಸಮಸ್ತ ಭುವಿಯ ಮೇಲೆ.”


ನೀವು ದೇವರ ಆಲಯವಾಗಿದ್ದೀರಿ. ದೇವರ ಆತ್ಮವು ನಿಮ್ಮಲ್ಲಿ ವಾಸಿಸುತ್ತದೆಂದು ನಿಮಗೆ ಚೆನ್ನಾಗಿ ತಿಳಿದಿದೆ.


“ಸರ್ವೇಶ್ವರನ ಯಾಜಕರು’ ಎಂಬ ಬಿರುದು ನಿಮ್ಮದಾಗುವುದು “ನಮ್ಮ ದೇವರ ಪರಿಚಾರಕರು” ಎಂಬ ಹೆಸರು ನಿಮಗೆ ಬರುವುದು. ಅನುಭವಿಸುವಿರಿ ಅನ್ಯರಾಷ್ಟ್ರಗಳ ಸಂಪತ್ತನ್ನು ಹೆಮ್ಮೆಪಡುವಿರಿ ಆ ಸಿರಿ ನಿಮ್ಮದಾಯಿತೆಂದು.


ಕ್ರಿಸ್ತಯೇಸುವಾದರೋ, ದೇವರ ಮನೆಯಲ್ಲಿ ಅಧಿಕಾರ ಹೊಂದಿದ ಪ್ರಾಮಾಣಿಕ ಪುತ್ರನಾಗಿದ್ದಾರೆ. ನಾವು ನಿರೀಕ್ಷಿಸುತ್ತಿರುವ ಭಾಗ್ಯದ ಬಗ್ಗೆ ನಮಗಿರುವ ಶ್ರದ್ಧೆಯನ್ನೂ ಶೌರ್ಯವನ್ನೂ ಕಳೆದುಕೊಳ್ಳದೆ ದೃಢವಾಗಿದ್ದರೆ, ನಾವೇ ಅವರ ಮನೆಯಾಗಿರುತ್ತೇವೆ.


ಆ ಪ್ರಥಮ ಪುನರುತ್ಥಾನದಲ್ಲಿ ಸೇರಿರುವ ದೇವಜನರು ಭಾಗ್ಯವಂತರು. ಇಂಥವರ ಮೇಲೆ ಎರಡನೆಯ ಮರಣಕ್ಕೆ ಅಧಿಕಾರವಿಲ್ಲ. ಅವರು ದೇವರಿಗೂ ಕ್ರಿಸ್ತೇಸುವಿಗೂ ಯಾಜಕರಾಗಿ ಸೇವೆಸಲ್ಲಿಸುವರು; ಮತ್ತು ಕ್ರಿಸ್ತೇಸುವಿನೊಡನೆ ಒಂದು ಸಾವಿರ ವರ್ಷಗಳ ಕಾಲ ಆಳುವರು.


ದೇವರು ನಿಮಗೆ ಅನುಗ್ರಹಿಸಿರುವ ಪವಿತ್ರಾತ್ಮರಿಗೆ ನಿಮ್ಮ ದೇಹ ಗರ್ಭಗುಡಿಯಾಗಿದೆ; ಆ ಪವಿತ್ರಾತ್ಮ ನಿಮ್ಮಲ್ಲಿ ವಾಸಮಾಡುತ್ತಿದ್ದಾರೆ ಎಂಬುದು ನಿಮಗೆ ಗೊತ್ತಿಲ್ಲವೇ? ನೀವು ನಿಮ್ಮ ಸ್ವಂತ ಸೊತ್ತಲ್ಲ.


ಆದುದರಿಂದ ಸಹೋದರರೇ, ದೇವರ ಅಪಾರ ಕೃಪೆಯನ್ನು ನಿಮ್ಮ ನೆನಪಿಗೆ ತಂದು ನಾನು ಬೇಡಿಕೊಳ್ಳುವುದೇನೆಂದರೆ: ನಿಮ್ಮನ್ನೇ ದೇವರಿಗೆ ಮೀಸಲಾದ, ಮೆಚ್ಚುಗೆಯಾದ ಸಜೀವವಾದ ಬಲಿಯಾಗಿ ಸಮರ್ಪಿಸಿಕೊಳ್ಳಿರಿ. ಇದೇ ನೀವು ಸಲ್ಲಿಸಬೇಕಾದ ನಿಜವಾದ ಆರಾಧನೆ.


ತಮ್ಮ ಪಿತನಾದ ದೇವರ ಸೇವೆಗೆ ನಮ್ಮನ್ನು ದೈವೀರಾಜ್ಯದ ಯಾಜಕರನ್ನಾಗಿ ಮಾಡಿದವರೂ ಆದ ಯೇಸುಕ್ರಿಸ್ತರಿಗೆ ಮಹಿಮೆ ಮತ್ತು ಅಧಿಪತ್ಯ ಯುಗಯುಗಾಂತರಕ್ಕೂ ಸಲ್ಲಲಿ! ಆಮೆನ್.


ನೀವು ಕಳುಹಿಸಿಕೊಟ್ಟಿದ್ದೆಲ್ಲವೂ ನನಗೆ ಸಂದಾಯವಾಗಿದೆ. ಈಗ ಅಗತ್ಯಕ್ಕಿಂತಲೂ ಅಧಿಕವಾಗಿದೆ, ಯಥೇಚ್ಛವಾಗಿದೆ. ಎಪಫ್ರೋದಿತನ ಮೂಲಕ ನೀವು ಕಳುಹಿಸಿದ್ದೆಲ್ಲವೂ ನನಗೆ ತಲುಪಿದೆ. ನಿಮ್ಮ ಕೊಡುಗೆ ಸುಗಂಧ ಕಾಣಿಕೆಯಾಗಿದೆ, ದೇವರಿಗೆ ಮೆಚ್ಚಿಗೆಯಾದ ಇಷ್ಟಾರ್ಥ ಬಲಿಯಾಗಿದೆ.


ದೇವರ ಆಲಯಕ್ಕೂ ಕಲ್ಲಿನ ವಿಗ್ರಹಕ್ಕೂ ಎಲ್ಲಿಯ ಸಾಮ್ಯ? ನಾವಾದರೋ ಜೀವಂತ ದೇವರ ಮಂದಿರವಾಗಿದ್ದೇವೆ. ಇದನ್ನು ದೇವರೇ ಹೇಳಿದ್ದಾರೆ: “ನನ್ನ ಜನರಲ್ಲೇ ನಾ ಮನೆಮಾಡುವೆನು ಅವರ ನಡುವೆಯೇ ನಾ ತಿರುಗಾಡುವೆನು ಅವರಿಗೆ ನಾನೇ ದೇವರಾಗಿರುವೆನು ಅವರೆನಗೆ ಪ್ರಜೆಯಾಗಿರುವರು.”


ಜಯ ಹೊಂದಿದವನನ್ನು ನನ್ನ ದೇವರ ಆಲಯದ ಸ್ತಂಭವಾಗಿ ನಿಲ್ಲಿಸುತ್ತೇನೆ. ಅವನು ಅಲ್ಲಿಯೇ ನಿರಂತರವಾಗಿ ಇರುತ್ತಾನೆ. ಅವನ ಮೇಲೆ ನನ್ನ ದೇವರ ನಾಮವನ್ನೂ ನನ್ನ ದೇವರ ನಗರವಾದ ನೂತನ ಜೆರುಸಲೇಮಿನ ನಾಮವನ್ನೂ ನನ್ನ ಹೊಸ ನಾಮವನ್ನೂ ಬರೆಯುತ್ತೇನೆ. ಈ ನೂತನ ಜೆರುಸಲೇಮ್ ನನ್ನ ದೇವರ ಸಾನ್ನಿಧ್ಯದಿಂದಲೂ ಸ್ವರ್ಗದಿಂದಲೂ ಇಳಿದುಬರುತ್ತದೆ.


ಈ ವರದಿಂದಲೇ ಯೆಹೂದ್ಯರಲ್ಲದ ಜನರಿಗೆ ನಾನು ಕ್ರಿಸ್ತಯೇಸುವಿನ ದಾಸನಾದೆ. ಯೆಹೂದ್ಯರಲ್ಲದವರು ಪವಿತ್ರಾತ್ಮರ ಮೂಲಕ ಪರಿಶುದ್ಧರಾಗಿ, ದೇವರಿಗೆ ಸಮರ್ಪಕ ಕಾಣಿಕೆಯಾಗುವಂತೆ ದೇವರ ಶುಭಸಂದೇಶವನ್ನು ಸಾರುವುದೇ ನನ್ನ ಪೂಜ್ಯಸೇವೆ, ಅದುವೇ ನನ್ನ ಯಾಜಕಸೇವೆ.


ಒಂದು ವೇಳೆ ನಾನು ಬರುವುದು ತಡವಾದರೆ, ದೇವರ ಮಂದಿರದಲ್ಲಿ ಅಂದರೆ, ಜೀವಸ್ವರೂಪಿಯಾದ ದೇವರ ಸಭೆಯಲ್ಲಿ, ಹೇಗೆ ನಡೆದುಕೊಳ್ಳಬೇಕು ಎಂಬುದು ನಿನಗೆ ತಿಳಿಯಲೆಂದು ಇದನ್ನು ಬರೆದಿದ್ದೇನೆ. ಸಭೆಯು ಸತ್ಯಕ್ಕೆ ಸ್ತಂಭವೂ ಅಸ್ತಿವಾರವೂ ಆಗಿದೆ.


ನಾನು ಅವರಲ್ಲಿ ಕೆಲವರನ್ನು ಯಾಜಕರನ್ನಾಗಿಯೂ ಲೇವಿಯರನ್ನಾಗಿಯೂ ಆರಿಸಿಕೊಳ್ಳುವೆನು.” ಇದು ಸರ್ವೇಶ್ವರ ಸ್ವಾಮಿಯ ನುಡಿ.


ಧನ್ಯವಾದದ ಬಲಿಯನರ್ಪಿಸುವವನೇ ನನಗೆ ಸನ್ಮಾನಿತನು I ಸನ್ಮಾರ್ಗ ಹಿಡಿದವನಿಗೆ ತೋರುವೆ ಪರಮ ಜೀವೋದ್ಧಾರವನು II


ನುಡಿಯಲ್ಲಾಗಲೀ ನಡೆಯಲ್ಲಾಗಲೀ ನೀವು ಏನು ಮಾಡಿದರೂ ಯೇಸುಸ್ವಾಮಿಯ ಹೆಸರಿನಲ್ಲಿಯೇ ಮಾಡಿರಿ. ಅವರ ಮುಖಾಂತರವೇ ಪಿತನಾದ ದೇವರಿಗೆ ಕೃತಜ್ಞತೆಯನ್ನು ಸಲ್ಲಿಸಿರಿ.


ನಿಮ್ಮ ವಿಶ್ವಾಸವೆಂಬ ಬಲಿಕಾಣಿಕೆಯ ಮೇಲೆ ನನ್ನ ರಕ್ತವನ್ನು ಧಾರೆಯಾಗಿ ಹರಿಸಬೇಕಾಗಿಬಂದರೂ ನನಗೆ ಸಂತೋಷವೇ; ನಿಮ್ಮೆಲ್ಲರೊಡನೆ ಸೇರಿ ಸಂತೋಷಿಸುತ್ತೇನೆ.


ಸಮರ್ಪಕವಾಗಲಿ ನನ್ನ ಪ್ರಾರ್ಥನೆ ಧೂಪಾರತಿಯಂತೆ I ಕೈಮುಗಿದು ಮಾಡುವ ವಂದನೆ ಸಂಧ್ಯಾಬಲಿಯರ್ಪಣೆಯಂತೆ II


ದೇವರಿಗೆ ಧನ್ಯವಾದವೆ ನಿನ್ನ ಬಲಿಯರ್ಪಣೆಯಾಗಿರಲಿ I ಪರಾತ್ಪರನಿಗೆ ಮಾಡಿದ ಹರಕೆಗಳು ಸಮರ್ಪಿತವಾಗಲಿ II


ಬೋಧಿಸುವ ವರವನ್ನು ಪಡೆದವನು ದೇವರ ವಾಕ್ಯವನ್ನು ಬೋಧಿಸುವವನಂತೆ ಬೋಧನೆಮಾಡಲಿ. ಸೇವೆಮಾಡುವ ವರವನ್ನು ಪಡೆದವನು, ದೇವರಿಂದ ಶಕ್ತಿಯನ್ನು ಪಡೆದವನಂತೆ ಸೇವೆಮಾಡಲಿ. ಇದರಿಂದ ಯೇಸುಕ್ರಿಸ್ತರ ಮುಖಾಂತರ ಎಲ್ಲದರಲ್ಲಿಯೂ ದೇವರಿಗೆ ಸ್ತುತಿಯುಂಟಾಗುವುದು. ಅವರಿಗೆ ಸದಾಕಾಲ ಮಹಿಮೆಯೂ ಸರ್ವಾಧಿಕಾರವೂ ಸಲ್ಲಲಿ. ಆಮೆನ್.


ಯೇಸುಕ್ರಿಸ್ತರ ಮುಖಾಂತರ ಲಭಿಸುವ ಸತ್ಸಂಬಂಧದ ಫಲಗಳಿಂದ ತುಂಬಿದವರಾಗಿ ದೇವರಿಗೆ ಸ್ತುತಿಸಲ್ಲಿಸಿ, ಅವರ ಮಹಿಮೆ ಬೆಳಗುವಂತೆ ಮಾಡುವಿರಿ.


“ಸೂರ್ಯೋದಯದಿಂದ ಸೂರ್ಯಾಸ್ತಮದವರೆಗೆ ಸರ್ವರಾಷ್ಟ್ರಗಳಲ್ಲಿ ನನ್ನ ನಾಮಕ್ಕೆ ಮಹಿಮೆ ಸಲ್ಲುವುದು. ಎಲ್ಲೆಲ್ಲಿಯೂ ನನಗೆ ಧೂಪಾರತಿಯನ್ನೂ ಕಾಣಿಕೆಗಳನ್ನೂ ಜನರು ಅರ್ಪಿಸುವರು. ಹೌದು, ಸರ್ವರಾಷ್ಟ್ರಗಳಲ್ಲಿಯೂ ನನ್ನ ನಾಮಕ್ಕೆ ಮಹಿಮೆ ಸಲ್ಲುವುದು,” ಎನ್ನುತ್ತಾರೆ ಸೇನಾಧೀಶ್ವರ ಸರ್ವೇಶ್ವರ.


ಆದುದರಿಂದ ಪಶ್ಚಾತ್ತಾಪದ ಮಾತುಗಳೊಂದಿಗೆ ದೇವರಿಗೆ ಅಭಿಮುಖವಾಗಿ, “ಪ್ರಭುವೇ, ನಮ್ಮ ಅಪರಾಧವನ್ನು ತೊಡೆದುಹಾಕು. ನಮ್ಮಲ್ಲಿ ಒಳಿತಾದುದನ್ನೇ ಅಂಗೀಕರಿಸು. ನಿನಗೆ ಸ್ತುತಿಬಲಿಯನ್ನು ಸಮರ್ಪಿಸುವೆವು.


ಅಲ್ಲದೆ ನೀವು ನನಗೆ ಯಾಜಕ ರಾಜವಂಶ ಹಾಗು ಪರಿಶುದ್ಧ ಜನಾಂಗ ಆಗುವಿರಿ,’ ಇಸ್ರಯೇಲರಿಗೆ ನೀನು ತಿಳಿಸಬೇಕಾದ ವಿಷಯವಿದು,” ಎಂದರು.


ಜ್ಞಾನವೆಂಬಾಕೆ ಮನೆಯನ್ನು ಕಟ್ಟಿಕೊಂಡಿದ್ದಾಳೆ; ಅದಕ್ಕೆ ಏಳು ಸ್ತಂಭಗಳನ್ನು ಕೆತ್ತಿಸಿದ್ದಾಳೆ.


ಎಂದೇ ಸಮಯಸಂದರ್ಭಗಳು ಇರುವಾಗಲೇ ಸರ್ವರಿಗೂ ಉಪಕಾರಮಾಡೋಣ. ಅದರಲ್ಲೂ ಮುಖ್ಯವಾಗಿ, ಒಂದೇ ಕುಟುಂಬದವರಂತೆ ಇರುವ ಕ್ರೈಸ್ತವಿಶ್ವಾಸಿಗಳಿಗೆ ಉಪಕಾರ ಮಾಡೋಣ.


ನ್ಯಾಯತೀರ್ಪಿನ ಕಾಲವು ಬಂದಿದೆ. ಮೊತ್ತಮೊದಲು ದೇವರ ಸ್ವಂತಜನರೇ ಆ ತೀರ್ಪಿಗೆ ಗುರಿಯಾಗುವರು. ದೇವಜನರಾದ ನಾವೇ ಅದಕ್ಕೆ ಮೊದಲು ಒಳಗಾಗುವುದಾದರೆ ದೇವರ ಶುಭಸಂದೇಶದಲ್ಲಿ ವಿಶ್ವಾಸವಿಡದವರ ಗತಿಯಾದರೂ ಏನು?


ಸ್ವದೇಶದವರಿಗೆ ದೊರಕುವಂತೆ ಅವರಿಗೆ ಸೊತ್ತು ದೊರಕುವುದಿಲ್ಲ. ಸರ್ವೇಶ್ವರ ಸ್ವಾಮಿಯೇ ಲೇವಿಯರ ಸೊತ್ತು. ಇದನ್ನು ಸ್ವಾಮಿಯೇ ಅವರಿಗೆ ಹೇಳಿದ್ದಾರೆ.


ಅಸ್ತಿವಾರದ ಮೇಲಣ ಭಾಗಕ್ಕೆ ಅಳತೆಯ ಮೇರೆಗೆ ಕೆತ್ತಿದ ಶ್ರೇಷ್ಠವಾದ ಕಲ್ಲುಗಳನ್ನೂ ದೇವದಾರಿನ ಮರವನ್ನೂ ಉಪಯೋಗಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು