Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೇತ್ರನು 2:9 - ಕನ್ನಡ ಸತ್ಯವೇದವು C.L. Bible (BSI)

9 ನೀವು ದೇವರು ಆಯ್ದುಕೊಂಡ ಜನಾಂಗ, ರಾಜಯಾಜಕರು, ಪವಿತ್ರ ಪ್ರಜೆ, ದೇವರ ಸ್ವಕೀಯ ಜನ; ಅವರ ಅದ್ಭುತ ಕಾರ್ಯಗಳನ್ನು ಪ್ರಚುರಪಡಿಸುವುದಕ್ಕಾಗಿಯೇ ಆಯ್ಕೆಯಾದವರು. ಕಾರ್ಗತ್ತಲಿನಿಂದ ತಮ್ಮ ಅದ್ಭುತಕರವಾದ ಬೆಳಕಿಗೆ ನಿಮ್ಮನ್ನು ಕರೆತಂದವರು ಅವರೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ನಿಮ್ಮನ್ನು ಕತ್ತಲೆಯೊಳಗಿನಿಂದ ತನ್ನ ಆಶ್ಚರ್ಯಕರವಾದ ಬೆಳಕಿಗೆ ಕರೆದಾತನ ಅದ್ಭುತಕಾರ್ಯಗಳನ್ನು ಪ್ರಚಾರಮಾಡುವವರಾಗುವಂತೆ ನೀವು ದೇವರಿಂದ ಆರಿಸಿಕೊಳ್ಳಲ್ಪಟ್ಟ ಜನಾಂಗವೂ, ರಾಜವಂಶಸ್ಥರಾದ ಯಾಜಕರೂ, ಪರಿಶುದ್ಧ ಜನಾಂಗವೂ, ದೇವರ ಸ್ವಕೀಯ ಜನರೂ ಆಗಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ನೀವಾದರೋ ನಿಮ್ಮನ್ನು ಕತ್ತಲೆಯೊಳಗಿಂದ ಕರೆದು ತನ್ನ ಆಶ್ಚರ್ಯಕರವಾದ ಬೆಳಕಿನಲ್ಲಿ ಸೇರಿಸಿದಾತನ ಗುಣಾತಿಶಯಗಳನ್ನು ಪ್ರಚಾರಮಾಡುವವರಾಗುವಂತೆ ದೇವರಾದುಕೊಂಡ ಜನಾಂಗವೂ ರಾಜವಂಶಸ್ಥರಾದ ಯಾಜಕರೂ ಮೀಸಲಾದ ಜನವೂ ದೇವರ ಸ್ವಕೀಯ ಪ್ರಜೆಯೂ ಆಗಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ನೀವಾದರೋ ದೇವರಾದುಕೊಂಡ ಜನಾಂಗವೂ ರಾಜವಂಶಸ್ಥರಾದ ಯಾಜಕರೂ ಮೀಸಲಾದ ಜನರೂ ದೇವರ ಸ್ವಕೀಯ ಪ್ರಜೆಯೂ ಆಗಿದ್ದೀರಿ. ದೇವರು ತಾನು ಮಾಡಿದ ಅತ್ಯಾಶ್ಚರ್ಯ ಸಂಗತಿಗಳನ್ನು ತಿಳಿಸಲು ನಿಮ್ಮನ್ನು ಅಂಧಕಾರದಿಂದ (ಪಾಪಗಳಿಂದ) ತನ್ನ ಅದ್ಭುತವಾದ ಬೆಳಕಿಗೆ ಕರೆತಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಆದರೆ ಕತ್ತಲೆಯೊಳಗಿದ್ದ ನಿಮ್ಮನ್ನು ಕರೆದು ತಮ್ಮ ಆಶ್ಚರ್ಯಕರವಾದ ಬೆಳಕಿಗೆ ಸೇರಿಸಿದ ದೇವರನ್ನು ಕೊಂಡಾಡುವವರಾಗುವಂತೆ ನೀವು ಆಯ್ದುಕೊಂಡ ಜನರೂ ರಾಜತನದ ಯಾಜಕರೂ ಪರಿಶುದ್ಧ ಜನಾಂಗವೂ ದೇವರ ಜನರೂ ಆಗಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

9 ಖರೆ ತುಮಿತರ್ಬಿ ದೆವಾನ್ ಎಚುನ್ ಕಾಡಲಿ ಲೊಕಾ, ಎಕ್ ರಾಜಾ ಸಾರ್ಕೆ ಜಿವನ್ ಕರ್ತಲ್ಯಾ ಯಾಜಕಾಂಚ್ಯಾ ಸಮಾಚ್ ಅನಿ ಎಕ್ ಪವಿತ್ರ್ ದೆಶ್, ಅನಿ ದೆವಾಚಿ ಸ್ವತಾಚಿ ಲೊಕಾ ಬಿ ಹೊವ್ನ್ ಹಾಸಿ, ಅಸೆ ತುಮಿ ಅಪ್ನಾಚ್ಯಾ ಮೊಟ್ಯಾ ಉಜ್ವಾಡ್ಯಾಚ್ಯಾ ವೈನಾ ತುಮ್ಕಾ ಕಾಳ್ಕಾತ್ನಾ ಭಾಯ್ರ್ ಕಾಡಲ್ಲ್ಯಾ ದೆವಾಚಿ ಅಜಾಪಾ ಹೊತಲಿ ಕಾಮಾ ಪರ್ಗಟ್ ಕರುಕ್ ಎಚುನ್ ಕಾಡಲ್ಲೆ ಹೊವ್ನ್ ಹಾಸಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೇತ್ರನು 2:9
50 ತಿಳಿವುಗಳ ಹೋಲಿಕೆ  

ಏಕೆಂದರೆ ನೀವು ನಿಮ್ಮ ದೇವರಾದ ಸರ್ವೇಶ್ವರನಿಗೆ ಮೀಸಲಾದ ಜನರು; ಜಗದಲ್ಲಿರುವ ಸಮಸ್ತ ಜನಾಂಗಗಳಲ್ಲಿ ನಿಮ್ಮನ್ನೇ ಸ್ವಕೀಯಜನರಾಗಲು ಅವರು ಆಯ್ದುಕೊಂಡಿದ್ದಾರೆ.


ತಮ್ಮ ಪಿತನಾದ ದೇವರ ಸೇವೆಗೆ ನಮ್ಮನ್ನು ದೈವೀರಾಜ್ಯದ ಯಾಜಕರನ್ನಾಗಿ ಮಾಡಿದವರೂ ಆದ ಯೇಸುಕ್ರಿಸ್ತರಿಗೆ ಮಹಿಮೆ ಮತ್ತು ಅಧಿಪತ್ಯ ಯುಗಯುಗಾಂತರಕ್ಕೂ ಸಲ್ಲಲಿ! ಆಮೆನ್.


ಏರ್ಪಡಿಸಿದೆ ನೀ ಅವರನು ನಮ್ಮ ದೇವರಿಗೋಸ್ಕರ ರಾಜವಂಶವಾಗಿ, ಯಾಜಕವರ್ಗವಾಗಿ. ಆಳುವರವರು ಸಮಸ್ತ ಭುವಿಯ ಮೇಲೆ.”


“ಸರ್ವೇಶ್ವರನ ಯಾಜಕರು’ ಎಂಬ ಬಿರುದು ನಿಮ್ಮದಾಗುವುದು “ನಮ್ಮ ದೇವರ ಪರಿಚಾರಕರು” ಎಂಬ ಹೆಸರು ನಿಮಗೆ ಬರುವುದು. ಅನುಭವಿಸುವಿರಿ ಅನ್ಯರಾಷ್ಟ್ರಗಳ ಸಂಪತ್ತನ್ನು ಹೆಮ್ಮೆಪಡುವಿರಿ ಆ ಸಿರಿ ನಿಮ್ಮದಾಯಿತೆಂದು.


ನಾವು ಸ್ವಂತ ಸತ್ಕಾರ್ಯಗಳಿಂದಲ್ಲ, ದೇವರ ಯೋಜನೆ ಹಾಗೂ ಅನುಗ್ರಹಗಳಿಂದಲೇ ಜೀವೋದ್ಧಾರ ವರವನ್ನು ಪಡೆದಿದ್ದೇವೆ; ದೇವರ ಪ್ರಜೆಗಳೆನಿಸಿಕೊಂಡಿದ್ದೇವೆ. ಈ ಅನುಗ್ರಹವನ್ನು ಕ್ರಿಸ್ತಯೇಸುವಿನಲ್ಲಿ ಅನಾದಿಯಿಂದಲೇ ನಮಗೆ ಕೊಡಲಾಯಿತು.


ಏಕೆಂದರೆ ನೀವು ನಿಮ್ಮ ದೇವರಾದ ಸರ್ವೇಶ್ವರನಿಗೆ ಮೀಸಲು ಜನ. ಅವರು ಜಗದಲ್ಲಿರುವ ಸಮಸ್ತಜನಾಂಗಗಳಲ್ಲಿ ನಿಮ್ಮನ್ನೇ ಸ್ವಕೀಯಜನರಾಗುವುದಕ್ಕೆ ಆರಿಸಿಕೊಂಡಿದ್ದಾರೆ.


ನೀವೂ ಸಹ ಸಜೀವ ಶಿಲೆಗಳಾಗಿದ್ದೀರಿ; ಆಧ್ಯಾತ್ಮಿಕ ದೇವಾಲಯವನ್ನು ನಿರ್ಮಿಸಲು ನಿಮ್ಮನ್ನೇ ಅರ್ಪಿಸಿಕೊಳ್ಳಿ. ಆ ದೇವಾಲಯದಲ್ಲೇ ಯೇಸುಕ್ರಿಸ್ತರ ಮುಖಾಂತರ ದೇವರಿಗೆ ಮೆಚ್ಚುಗೆಯಾಗಿರುವ ಆಧ್ಯಾತ್ಮಿಕ ಬಲಿಗಳನ್ನು ಸಮರ್ಪಿಸುವ ಪವಿತ್ರ ಯಾಜಕವರ್ಗದವರು ನೀವಾಗಿರುವಿರಿ.


ಯೇಸುಕ್ರಿಸ್ತರು ನಮ್ಮನ್ನು ಸಕಲ ಅಪರಾಧಗಳಿಂದ ವಿಮೋಚಿಸಿ, ಪರಿಶುದ್ಧರನ್ನಾಗಿಸಿ, ಸತ್ಕಾರ್ಯಗಳಲ್ಲಿ ಆಸಕ್ತರಾದ ಒಂದು ಜನಾಂಗವನ್ನಾಗಿ ಮಾಡಿದರು. ನಮ್ಮನ್ನು ತಮ್ಮ ಸ್ವಂತದವರನ್ನಾಗಿಸಿಕೊಳ್ಳಲೆಂದು ತಮ್ಮನ್ನೇ ನಮಗಾಗಿ ಸಮರ್ಪಿಸಿಕೊಟ್ಟನು.


ಆದರೂ ಅವರು ನಿಮ್ಮ ಪಿತೃಗಳಲ್ಲಿ ಇಷ್ಟವುಳ್ಳವರಾಗಿ ಅವರನ್ನು ಪ್ರೀತಿಸಿದರು. ಈಗ ನಿಮ್ಮ ಅನುಭವಕ್ಕೆ ಬಂದಿರುವಂತೆ, ಅವರ ತರುವಾಯ ಅವರ ಸಂತತಿಯವರಾದ ನಿಮ್ಮನ್ನೇ ಎಲ್ಲ ಜನಾಂಗಗಳಿಂದ ಆರಿಸಿಕೊಂಡರು.


ತೆರೆಯಿರಿ ನಗರ ದ್ವಾರಗಳನು, ಪ್ರವೇಶಿಸಲಿ ವಿಶ್ವಾಸವುಳ್ಳ ಸಜ್ಜನರು.


ನೀನು ಇವರ ಕಣ್ಣುಗಳನ್ನು ತೆರೆಯಬೇಕು; ಅಂಧಕಾರವನ್ನು ಬಿಟ್ಟು ಬೆಳಕಿಗೆ ಬರುವಂತೆ ಮಾಡಬೇಕು; ಸೈತಾನನ ಆಧಿಪತ್ಯವನ್ನು ತ್ಯಜಿಸಿ ದೇವರತ್ತ ತಿರುಗುವಂತೆ ಮಾಡಬೇಕು. ಹೀಗೆ, ಅವರು ನನ್ನಲ್ಲಿಡುವ ವಿಶ್ವಾಸದ ಪ್ರಯುಕ್ತ ಪಾಪವಿಮೋಚನೆಯನ್ನು ಪಡೆಯುವರು; ಆಯ್ಕೆಯಾದವರಿಗಿರುವ ಹಕ್ಕುಬಾಧ್ಯತೆಗಳಲ್ಲಿ ಭಾಗಿಗಳಾಗುವರು,’ ಎಂದು ಹೇಳಿದರು.


ಆ ಪ್ರಥಮ ಪುನರುತ್ಥಾನದಲ್ಲಿ ಸೇರಿರುವ ದೇವಜನರು ಭಾಗ್ಯವಂತರು. ಇಂಥವರ ಮೇಲೆ ಎರಡನೆಯ ಮರಣಕ್ಕೆ ಅಧಿಕಾರವಿಲ್ಲ. ಅವರು ದೇವರಿಗೂ ಕ್ರಿಸ್ತೇಸುವಿಗೂ ಯಾಜಕರಾಗಿ ಸೇವೆಸಲ್ಲಿಸುವರು; ಮತ್ತು ಕ್ರಿಸ್ತೇಸುವಿನೊಡನೆ ಒಂದು ಸಾವಿರ ವರ್ಷಗಳ ಕಾಲ ಆಳುವರು.


ಪ್ರಭುವನು ದೇವರಾಗಿ ಪಡೆದ ಜನಾಂಗ ಧನ್ಯ I ಸ್ವಜನರಾಗಿ ಆತನಾಯ್ದುಕೊಂಡ ಜನತೆ ಧನ್ಯ II


ಅದೇ ರೀತಿ ನಿಮ್ಮ ಜ್ಯೋತಿ ಜನರ ಮುಂದೆ ಬೆಳಗಲಿ; ಹೀಗೆ ಅವರು ನಿಮ್ಮ ಸತ್ಕಾರ್ಯಗಳನ್ನು ಕಂಡು ಸ್ವರ್ಗದಲ್ಲಿರುವ ನಿಮ್ಮ ತಂದೆಯನ್ನು ಕೊಂಡಾಡಲಿ.”


ಆದರೆ ನಿಮ್ಮನ್ನು ತಮ್ಮ ಸ್ವಕೀಯ ಜನರನ್ನಾಗಿಸಿಕೊಳ್ಳಲು ಸಂಕಲ್ಪಿಸಿ ಕಬ್ಬಿಣ ಕರಗಿಸುವ ಕುಲುಮೆಯಂತಿದ್ದ ಆ ಈಜಿಪ್ಟ್ ದೇಶದಿಂದ ನಿಮ್ಮನ್ನು ಕರೆದುತಂದು ಇದ್ದಾರೆ ಆ ಸರ್ವೇಶ್ವರ. ಅಂತೆಯೇ ನೀವು ಇಂದಿಗೂ ಅವರ ಸ್ವಂತ ಜನರಾಗಿದ್ದೀರಿ.


ದೇವರು ನಮ್ಮನ್ನು ಅಂಧಕಾರದ ಆಡಳಿತದಿಂದ ಬಿಡುಗಡೆಮಾಡಿ ತಮ್ಮ ಪುತ್ರನ ಸಾಮ್ರಾಜ್ಯಕ್ಕೆ ಸುರಕ್ಷಿತವಾಗಿ ತಂದಿದ್ದಾರೆ.


ಯಾವನಾದರೂ ದೇವಾಲಯವನ್ನು ನಾಶಮಾಡಿದರೆ ದೇವರು ಅವನನ್ನು ನಾಶಮಾಡುತ್ತಾರೆ. ದೇವರ ಆಲಯವು ಪವಿತ್ರವಾದುದು. ನೀವೇ ಆ ಆಲಯ.


ನೀವು ನಿಮ್ಮ ವಿಷಯದಲ್ಲಿ ಹಾಗೂ ಪವಿತ್ರಾತ್ಮ ನಿಮ್ಮ ಪಾಲನೆಗೆ ವಹಿಸಿರುವ ಮಂದೆಯ ವಿಷಯದಲ್ಲಿ ಜಾಗರೂಕರಾಗಿರಿ. ಪ್ರಭು ತಮ್ಮ ಸ್ವಂತ ರಕ್ತ ಸುರಿಸಿ ಸಂಪಾದಿಸಿದ ಧರ್ಮಸಭೆಗೆ ಉತ್ತಮ ಕುರಿಗಾಹಿಗಳಾಗಿರಿ.


ನಾನು ಅವರಲ್ಲಿ ಕೆಲವರನ್ನು ಯಾಜಕರನ್ನಾಗಿಯೂ ಲೇವಿಯರನ್ನಾಗಿಯೂ ಆರಿಸಿಕೊಳ್ಳುವೆನು.” ಇದು ಸರ್ವೇಶ್ವರ ಸ್ವಾಮಿಯ ನುಡಿ.


ಕುರುಡರನ್ನು ನೆಪ್ಪಿಲ್ಲದ ಮಾರ್ಗದಲ್ಲಿ ಬರಮಾಡುವೆನು ಗೊತ್ತಿಲ್ಲದ ದಾರಿಗಳಲ್ಲಿ ಅವರನ್ನು ನಡೆಸುವೆನು. ಅವರೆದುರಿನ ಕತ್ತಲನ್ನು ಬೆಳಕಾಗಿಸುವೆನು ಅವರ ಹಾದಿಯ ಡೊಂಕನು ನೇರಮಾಡುವೆನು. ಬಿಡದೆ ಮಾಡುವೆನು ಈ ಕಾರ್ಯಗಳನು.


ಇಂತಿರಲು ನನ್ನ ದಾಸನಾದ ಇಸ್ರಯೇಲೇ, ನಾನು ಆಯ್ದುಕೊಂಡ ಯಕೋಬೇ, ನನ್ನ ಗೆಳೆಯ ಅಬ್ರಹಾಮನ ಸಂತತಿಯೇ,


ಕಾಣಿಸಿತೊಂದು ಮಹಾಜ್ಯೋತಿ ಕತ್ತಲಲಿ ಸಂಚರಿಸುತ್ತಿದ್ದ ಜನರಿಗೆ ಪ್ರಜ್ವಲಿಸಿತಾ ಜ್ಯೋತಿ ಕಗ್ಗತ್ತಲಲಿ ಬಾಳುತ್ತಿದ್ದಾ ನಾಡಿಗರಿಗೆ.


ಮೇಲಣ ಬಹುಮಾನವನ್ನು ಪಡೆಯಲೆಂದು ದೇವರು ನನಗೆ ಕ್ರಿಸ್ತಯೇಸುವಿನ ಮುಖಾಂತರ ಕರೆ ನೀಡಿದ್ದಾರೆ. ಆ ಗುರಿಯನ್ನು ತಲುಪಲೆಂದೇ ನಾನು ಮುಂದೋಡುತ್ತಲಿದ್ದೇನೆ.


“ಕೇಳೀಗ ನನ್ನ ದಾಸ ಯಕೋಬೇ, ನಾನು ಆರಿಸಿಕೊಂಡ ಇಸ್ರಯೇಲೇ,


ಕಾರ್ಗತ್ತಲಲಿ ವಾಸಿಸುವವರಿಗೆ ದಿವ್ಯಜ್ಯೋತಿಯೊಂದು ಕಾಣಿಸಿತು. ಮರಣಛಾಯೆ ಕವಿದ ನಾಡಿಗರಿಗೆ ಅರುಣೋದಯವಾಯಿತು,” ಎಂದು ನುಡಿದ ಪ್ರವಾದಿ ಯೆಶಾಯನ ವಚನಗಳು ಈಡೇರಿದವು.


ನೀವು ಯೇಸುಕ್ರಿಸ್ತರಿಗೆ ಶರಣಾಗಿ ಅವರ ರಕ್ತದಿಂದ ಶುದ್ಧೀಕರಣಹೊಂದಲು ತಂದೆಯಾದ ದೇವರ ಸಂಕಲ್ಪಾನುಸಾರ ಆಯ್ಕೆಯಾದವರು; ಅವರ ಆತ್ಮದ ಮುಖಾಂತರ ಪವಿತ್ರೀಕರಿಸಲಾದವರು. ನಿಮಗೆ ಕೃಪಾಶೀರ್ವಾದವೂ ಶಾಂತಿಸಮಾಧಾನವೂ ಸಮೃದ್ಧಿಯಾಗಿ ಲಭಿಸಲಿ!


ಬೆಳಗಿಸಲು ಇರುಳಿನಲು, ಮರಣದ ಮುಸುಕಿನಲು ಬಾಳುವವರನು I ನಮ್ಮ ಕಾಲುಗಳನ್ನೂರಿಸಿ ನಡೆಯಲು ಶಾಂತಿಪಥದೊಳು II


ನೀನಾರಿಸಿಕೊಂಡಿರುವ ಪ್ರಗತಿಯನು ನಾ ಕಾಣಮಾಡು I ನಿನ್ನ ಜನಾಂಗದವರ ಸಂತಸವನು ನಾ ಸವಿಯಮಾಡು I ನಿನ್ನ ಸ್ವಕೀಯರ ಮಹಿಮೆಯಲ್ಲೆನಗೆ ಪಾಲನ್ನು ನೀಡು II


ಯೆಹೂದ್ಯ ಜನಾಂಗದಿಂದ ಮಾತ್ರವಲ್ಲ, ಇತರ ಜನಾಂಗದಿಂದಲೂ ಕರೆಯಲಾಗಿರುವ ನಾವೇ ಈ ಕರುಣೆಯ ಕುಡಿಕೆಗಳು.


ಅದಕ್ಕೆ ಅಗ್ರಿಪ್ಪನು, “ಇಷ್ಟು ಅಲ್ಪಕಾಲದಲ್ಲೇ ನನ್ನನ್ನು ಕ್ರೈಸ್ತನನ್ನಾಗಿ ಮಾಡಬೇಕೆಂದು ಇಚ್ಛಿಸುತ್ತೀಯಾ?’ ಎಂದನು.


ಬೋಧಿಸುವ ವರವನ್ನು ಪಡೆದವನು ದೇವರ ವಾಕ್ಯವನ್ನು ಬೋಧಿಸುವವನಂತೆ ಬೋಧನೆಮಾಡಲಿ. ಸೇವೆಮಾಡುವ ವರವನ್ನು ಪಡೆದವನು, ದೇವರಿಂದ ಶಕ್ತಿಯನ್ನು ಪಡೆದವನಂತೆ ಸೇವೆಮಾಡಲಿ. ಇದರಿಂದ ಯೇಸುಕ್ರಿಸ್ತರ ಮುಖಾಂತರ ಎಲ್ಲದರಲ್ಲಿಯೂ ದೇವರಿಗೆ ಸ್ತುತಿಯುಂಟಾಗುವುದು. ಅವರಿಗೆ ಸದಾಕಾಲ ಮಹಿಮೆಯೂ ಸರ್ವಾಧಿಕಾರವೂ ಸಲ್ಲಲಿ. ಆಮೆನ್.


ತಮ್ಮ ಪ್ರೀತಿಯ ಪುತ್ರನಲ್ಲೇ ಅವರು ನಮಗೆ ಉಚಿತವಾಗಿ ಅನುಗ್ರಹಿಸಿರುವ ಅತಿಶಯ ವರಪ್ರಸಾದಕ್ಕಾಗಿ ಅವರಿಗೆ ಸ್ತುತಿಸಲ್ಲಿಸೋಣ.


ನಾ ಬಾಯ್ದೆರೆದು ನುಡಿದಿದ್ದೆನಾದರೆ ಈ ಪರಿ I ನಿನ್ನ ಭಕ್ತಕುಲಕೆ ನಾ ದ್ರೋಹಿಯೇ ಸರಿ II


ವಂದಿಪುದು ಪ್ರಭುವನು ಮುಂದಿನ ಪೀಳಿಗೆ I ಸಾರುವುದಾತನ ವದಂತಿಯನು ಜನರಿಗೆ II


ಹೀಗೆ ದೇವರಿಗೆ ಸೇರಿದವರು ವಿಮೋಚನೆ ಹೊಂದಿ ಸ್ವರ್ಗೀಯ ಸ್ವಾಸ್ತ್ಯಕ್ಕೆ ಬಾಧ್ಯರಾಗಲು ಆ ಪವಿತ್ರಾತ್ಮರೇ ಆಧಾರ. ಈ ಕಾರಣ ದೇವರಿಗೆ ಮಹಿಮೆ ಸಲ್ಲಲಿ.


ಸತ್ಯಸಂಧರಾಗಿ ಇವರು ನಿಮ್ಮ ಸೇವೆಗೆ ಮೀಸಲಾಗಬೇಕೆಂದು ನನ್ನನ್ನು ನಾನೇ ಮೀಸಲಾಗಿಸಿಕೊಂಡಿದ್ದೇನೆ.


ಸರ್ವೇಶ್ವರನ ದಯೆ ನಿಮ್ಮನ್ನು ಸ್ವಕೀಯ ಜನರನ್ನಾಗಿ ಆರಿಸಿಕೊಂಡ ಮೇಲೆ, ಅವರು ತಮ್ಮ ಮಹೋನ್ನತ ನಾಮದ ನಿಮಿತ್ತ, ನಿಮ್ಮನ್ನು ಖಂಡಿತವಾಗಿ ಕೈಬಿಡುವುದಿಲ್ಲ.


ಪ್ರಭುವೆ ದೇವನು, ನಮ್ಮ ಮೇಲೆ ಜ್ಯೋತಿಯನು ಬೆಳಗಿದವನು I ಪ್ರದಕ್ಷಿಣೆ ಮಾಡಿರಿ, ಬಲಿಪೀಠದ ಸುತ್ತ, ಹಿಡಿದು ರೆಂಬೆಗಳನು II


ಆಯ್ದುಕೊಂಡನಾತ ಯಕೋಬ್ಯ ವಂಶವನು I ಸ್ವಕೀಯ ಜನರನ್ನಾಗಿ ಇಸ್ರಯೇಲರನು II


‘ಪವಿತ್ರ ಪ್ರಜೆ’ ಎನಿಸಿಕೊಳ್ಳುವುದು ನಿಮ್ಮ ಜನತೆ ‘ಸರ್ವೇಶ್ವರ ಸ್ವಾಮಿಯೇ ಉದ್ಧರಿಸಿದ ಜನತೆ’. ನಿನ್ನ ಹೆಸರೋ, ‘ಪ್ರಾಪ್ತ ನಗರಿ’ ಪತಿ ವರಿಸಿ ಕೈ ಬಿಡದ ಪುರಿ.


ಸೇನಾಧೀಶ್ವರ ಸರ್ವೇಶ್ವರ ಇಂತೆನ್ನುತ್ತಾರೆ: “ಇವರು ನನ್ನ ಜನರು; ನಾನು ಕಾರ್ಯತತ್ಪರನಾಗುವ ದಿನದಂದು ಅವರು ನನಗೆ ಸ್ವಕೀಯಜನರಾಗಿರುವರು. ತಂದೆಯೊಬ್ಬನು ತನಗೆ ಸೇವೆಮಾಡುವ ಮಗನನ್ನು ಕಾಪಾಡುವಂತೆ ನಾನು ಅವರನ್ನು ಕಾಪಾಡುವೆನು.


ಸ್ವದೇಶದವರಿಗೆ ದೊರಕುವಂತೆ ಅವರಿಗೆ ಸೊತ್ತು ದೊರಕುವುದಿಲ್ಲ. ಸರ್ವೇಶ್ವರ ಸ್ವಾಮಿಯೇ ಲೇವಿಯರ ಸೊತ್ತು. ಇದನ್ನು ಸ್ವಾಮಿಯೇ ಅವರಿಗೆ ಹೇಳಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು