Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೇತ್ರನು 3:1 - ಕನ್ನಡ ಸತ್ಯವೇದವು C.L. Bible (BSI)

1 ಅಂತೆಯೇ ಸ್ತ್ರೀಯರೇ, ನೀವು ನಿಮ್ಮ ಪತಿಯರಿಗೆ ವಿಧೇಯರಾಗಿರಿ. ಅವರಲ್ಲಿ ಕೆಲವರು ದೇವರ ವಾಕ್ಯವನ್ನು ನಂಬದೆ ಇರಬಹುದು. ಆದರೂ ಯಾವ ಮಾತುಕತೆಯಿಲ್ಲದೆ ನಿಮ್ಮ ಸನ್ನಡತೆಯಿಂದಲೇ ಅವರನ್ನು ಜಯಿಸಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1-2 ಅದೇ ರೀತಿಯಾಗಿ ಪತ್ನಿಯರೇ, ನಿಮ್ಮ ಪತಿಯರಿಗೆ ಅಧೀನರಾಗಿರಿ. ಅವರಲ್ಲಿ ಕೆಲವರು ದೇವರ ವಾಕ್ಯಕ್ಕೆ ಅವಿಧೇಯರಾಗಿದ್ದರೂ ನೀವು ನಿರ್ಮಲರಾಗಿಯೂ, ಗೌರವದಿಂದಲೂ ನಡೆದುಕೊಳ್ಳುವುದನ್ನು ಅವರು ನೋಡಿ ವಾಕ್ಯೋಪದೇಶವಿಲ್ಲದೆ ತಮ್ಮ ಪತ್ನಿಯರಾದ ನಿಮ್ಮ ಒಳ್ಳೆಯ ನಡತೆಗಳಿಂದಲೇ ಸನ್ಮಾರ್ಗಕ್ಕೆ ಬಂದಾರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಅದೇ ರೀತಿಯಾಗಿ ಸ್ತ್ರೀಯರೇ, ನಿಮ್ಮ ಗಂಡಂದಿರಿಗೆ ಅಧೀನರಾಗಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಸ್ತ್ರೀಯರೇ, ಇದೇ ರೀತಿಯಲ್ಲಿ ನಿಮ್ಮ ಗಂಡಂದಿರಿಗೆ ಅಧೀನರಾಗಿರಿ. ಅವರಲ್ಲಿ ಕೆಲವರು ದೇವರ ವಾಕ್ಯಕ್ಕೆ ಅವಿಧೇಯರಾಗಿದ್ದರೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಅದೇ ರೀತಿಯಾಗಿ ಪತ್ನಿಯರೇ, ನಿಮ್ಮ ಗಂಡಂದಿರಿಗೆ ಅಧೀನರಾಗಿರಿ. ಪತಿಯರಲ್ಲಿ ಯಾರಾದರೂ ವಾಕ್ಯವನ್ನು ಸ್ವೀಕರಿಸದವರಾಗಿದ್ದರೂ ಪತ್ನಿಯರ ನಡತೆಯಿಂದ ವಾಕ್ಯವಿಲ್ಲದೆ ಅವರನ್ನು ಗೆಲ್ಲುವಂತೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

1 ತಸೆಚ್ ಬಾಯ್ಕಾಮನ್ಸಾನು, ಅಸೆಚ್ ತುಮ್ಚ್ಯಾ ಘವಾಕ್ನಿ ತುಮಿ ಖಾಯ್ಲ್ ಹೊವ್ನ್ ಚಲಾ, ಅಸೆ ತೆನಿ ದೆವಾಚ್ಯಾ ಗೊಸ್ಟಿ ವರ್ತಿ ವಿಶ್ವಾಸ್ ಥವ್ ನಸಲೆ ರ್‍ಹಾಲ್ಯಾರ್‍ಬಿ ತುಮಿ ಕರಲ್ಲ್ಯಾ ಕಾಮಾಂಚ್ಯಾ ವೈನಾ ತೆಂಚಿ ಮನಾ ವಿಶ್ವಾಸ್ ಜಿಕುನ್ ಘೆತ್ಯಾಶಿ ಎಕ್ ಗೊಸ್ಟ್ ಬಿ ತುಮಿ ಬೊಲುಚೆ ಮನುನ್ ನಾ .

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೇತ್ರನು 3:1
26 ತಿಳಿವುಗಳ ಹೋಲಿಕೆ  

ಮಹಿಳೆಯರೇ, ನಿಮ್ಮ ನಿಮ್ಮ ಪತಿಯರಿಗೆ ಪ್ರಭು ಮೆಚ್ಚುವಂತೆ ತಗ್ಗಿ ನಡೆದುಕೊಳ್ಳಿರಿ.


ಆದರೆ ಇದು ನಿಮಗೂ ಅನ್ವಯಿಸುತ್ತದೆ. ಪ್ರತಿಯೊಬ್ಬ ಪುರುಷನು ತನ್ನನ್ನು ಪ್ರೀತಿಸುವಂತೆ ತನ್ನ ಪತ್ನಿಯನ್ನೂ ಪ್ರೀತಿಸಲಿ ಮತ್ತು ಪ್ರತಿಯೊಬ್ಬ ಸ್ತ್ರೀಯು ತನ್ನ ಪತಿಯ ವಿಷಯದಲ್ಲಿ ಗೌರವದಿಂದ ನಡೆದುಕೊಳ್ಳಲಿ.


ಒಂದು ವಿಷಯ ನಿಮಗೆ ತಿಳಿದಿರಲಿ. ಪ್ರತಿಯೊಬ್ಬ ವ್ಯಕ್ತಿಗೂ ಕ್ರಿಸ್ತಯೇಸುವೇ ಶಿರಸ್ಸು. ಪ್ರತಿಯೊಬ್ಬ ಸ್ತ್ರೀಗೂ ಪುರುಷನೇ ಶಿರಸ್ಸು. ಕ್ರಿಸ್ತೇಸುವಿಗೆ ದೇವರೇ ಶಿರಸ್ಸು.


ಅದೂ ಅಲ್ಲದೆ ಸ್ತ್ರೀಯೇ, ಕ್ರೈಸ್ತವಿಶ್ವಾಸಿಯಲ್ಲದ ನಿನ್ನ ಪತಿಯನ್ನು ಉದ್ಧಾರಮಾಡುವೆಯೆಂದು ಹೇಗೆ ಹೇಳಬಲ್ಲೆ? ಪುರುಷನೇ, ಕ್ರೈಸ್ತವಿಶ್ವಾಸಿಯಲ್ಲದ ನಿನ್ನ ಸತಿಯನ್ನು ಉದ್ಧಾರಮಾಡುವೆಯೆಂದು ಹೇಗೆ ಹೇಳಬಲ್ಲೆ?


ಬಳಿಕ ಆ ಮಹಿಳೆಗೆ: “ಹೆಚ್ಚಿಸುವೆನು ಪ್ರಸವಕಾಲದ ನಿನ್ನ ವೇದನೆಯನ್ನು ಹೆರುವೆ ನೀನು ಸಂಕಷ್ಟದಿಂದಲೇ ಮಕ್ಕಳನ್ನು. ಆದರೂ ನಿನಗಿರುವುದು ಗಂಡನ ಬಯಕೆ ಒಳಗಾಗುವೆ ನೀನು ಆತನ ಒಡೆತನಕ್ಕೆ."


ಅದೇ ಪ್ರಕಾರ ಪುರುಷರೇ, ಸರಿಯಾದ ತಿಳುವಳಿಕೆಯಿಂದ ನಿಮ್ಮ ನಿಮ್ಮ ಪತ್ನಿಯರೊಡನೆ ಸಹಜೀವನ ನಡೆಸಿರಿ. ಅವರು ಅಬಲೆಯರು ಮಾತ್ರವಲ್ಲ, ಸಜ್ಜೀವ ಕೊಡುಗೆಗೆ ನಿಮ್ಮೊಂದಿಗೆ ಸಮಬಾಧ್ಯರು ಎಂದು ತಿಳಿದು ಅವರನ್ನು ಗೌರವಿಸಿರಿ. ಆಗ ನಿಮ್ಮ ಪ್ರಾರ್ಥನೆಗೆ ಅಡಚಣೆ ಉಂಟಾಗದು.


ಉದಾಹರಣೆಗೆ, ಪತಿಯು ಬದುಕಿರುವವರೆಗೆ ಸತಿ ಅವನಿಗೆ ಶಾಸನಾನುಸಾರವಾಗಿ ಬದ್ಧಳು. ಒಂದು ವೇಳೆ, ಆಕೆಯ ಪತಿ ಸತ್ತುಹೋದರೆ, ಆಕೆ ವಿವಾಹಬಂಧನದಿಂದ ಬಿಡುಗಡೆ ಹೊಂದುತ್ತಾಳೆ.


ಎಲ್ಲ ಕ್ರೈಸ್ತಸಭೆಗಳಲ್ಲಿ ರೂಢಿಯಲ್ಲಿರುವಂತೆ ಮಹಿಳೆಯರು ಮೌನವಾಗಿರಲಿ; ಮಾತನಾಡಲು ಅವರಿಗೆ ಅನುಮತಿಯಿಲ್ಲ. ಧರ್ಮಶಾಸ್ತ್ರದಲ್ಲಿ ಹೇಳಿರುವಂತೆ ಅವರು ಅಧೀನರಾಗಿರಬೇಕು.


“ನಿನ್ನ ಸೋದರನು ನಿನಗೆ ಅಪರಾಧಮಾಡಿದರೆ, ನೀನು ಹೋಗಿ ನೀವಿಬ್ಬರೇ ಇರುವಾಗ, ಅವನ ತಪ್ಪನ್ನು ಮನಗಾಣಿಸು. ಅವನು ನಿನಗೆ ಕಿವಿಗೊಟ್ಟರೆ ಅವನ ಸೋದರತ್ವವನ್ನು ನೀನು ಮತ್ತೆ ಗಳಿಸಿಕೊಂಡಂತಾಗುವುದು.


ನೆರೆಯವರ ವಿಷಯದಲ್ಲಿ ಜಾಣತನದಿಂದ ವರ್ತಿಸಿರಿ. ನಿಮಗಿರುವ ಸಮಯ ಸಂದರ್ಭವನ್ನು ಸದುಪಯೋಗಪಡಿಸಿಕೊಳ್ಳಿರಿ.


ಅಬ್ರಹಾಮನು ದೇವರ ಕರೆಗೆ ಓಗೊಡುವುದಕ್ಕೂ ವಿಶ್ವಾಸವೇ ಕಾರಣವಾಗಿತ್ತು. ಆತನು ಆ ಕರೆಗನುಸಾರವಾಗಿ ತಾನು ಬಾಧ್ಯವಾಗಿ ಹೊಂದಬೇಕಾಗಿದ್ದ ನಾಡಿಗೆ ಹೊರಟನು. ತಾನು ಸೇರಬೇಕಾಗಿದ್ದ ಸ್ಥಳ ಯಾವುದೆಂದು ತಿಳಿಯದಿದ್ದರೂ ಸ್ವದೇಶವನ್ನು ಬಿಟ್ಟು ತೆರಳಿದನು.


ದೇವರಿಗೆ ಸ್ತುತಿಸ್ತೋತ್ರ ಸಲ್ಲಲಿ. ಏಕೆಂದರೆ, ಹಿಂದೊಮ್ಮೆ ನೀವು ಪಾಪಕ್ಕೆ ಗುಲಾಮರಾಗಿದ್ದರೂ ನಿಮಗೆ ಕಲಿಸಿದ ಬೋಧನೆಯನ್ನು ನೀವು ಮನಃಪೂರ್ವಕವಾಗಿ ಅಂಗೀಕರಿಸಿ ವಿಧೇಯರಾದಿರಿ;


ಸಹಾಯ ಹೊಂದಿದ ಸೋದರ ದುರ್ಗಕ್ಕಿಂತಲು ದುಸ್ತರ; ಅವನೊಡನೆ ಜಗಳ ಕೋಟೆ ಮನೆಗೆ ಹಾಕಿದ ಅಗುಳಿ.


ಸಜ್ಜನರು ಈವುದು ಜೀವಫಲ; ದುರ್ಜನರು ಪಡೆವುದು ಅಕಾಲಮರಣ.


ನ್ಯಾಯತೀರ್ಪಿನ ಕಾಲವು ಬಂದಿದೆ. ಮೊತ್ತಮೊದಲು ದೇವರ ಸ್ವಂತಜನರೇ ಆ ತೀರ್ಪಿಗೆ ಗುರಿಯಾಗುವರು. ದೇವಜನರಾದ ನಾವೇ ಅದಕ್ಕೆ ಮೊದಲು ಒಳಗಾಗುವುದಾದರೆ ದೇವರ ಶುಭಸಂದೇಶದಲ್ಲಿ ವಿಶ್ವಾಸವಿಡದವರ ಗತಿಯಾದರೂ ಏನು?


ಸತ್ಯಕ್ಕೆ ಶರಣಾಗಿ ಆತ್ಮಶುದ್ಧಿಹೊಂದಿರುವ ನೀವು ಸಹೋದರರನ್ನು ನಿಷ್ಕಪಟದಿಂದ ಪ್ರೀತಿಸಬಲ್ಲಿರಿ. ಎಂದೇ, ಒಬ್ಬರನ್ನೊಬ್ಬರು ಹೃತ್ಪೂರ್ವಕವಾಗಿಯೂ ಯಥಾರ್ಥವಾಗಿಯೂ ಪ್ರೀತಿಸಿರಿ.


ಹೀಗೆ, ಅವರು ಸ್ವತಃ ಪರಿಪೂರ್ಣರಾಗಿ ತಮಗೆ ವಿಧೇಯರಾಗುವ ಎಲ್ಲರಿಗೂ ಶಾಶ್ವತ ಜೀವೋದ್ಧಾರಕ್ಕೆ ಕಾರಣರಾದರು.


ಆದರೂ ಈ ಶುಭಸಂದೇಶವನ್ನು ಎಲ್ಲರೂ ಅಂಗೀಕರಿಸಲಿಲ್ಲ. ಆದ್ದರಿಂದಲೇ, ಯೆಶಾಯನು, “ಪ್ರಭುವೇ, ನಾವು ಸಾರಿದ ಸಂದೇಶವನ್ನು ನಂಬಿದವರು ಯಾರು?” ಎಂದು ಮೊರೆಯಿಟ್ಟಿದ್ದಾನೆ.


ಅವರು ಗಮನಿಸುವುದು ತಮ್ಮ ಪತ್ನಿಯರ ಭಯಭಕ್ತಿಯನ್ನು, ಸುಗುಣಶೀಲತೆಯನ್ನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು