Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೇತ್ರನು 3:10 - ಕನ್ನಡ ಸತ್ಯವೇದವು C.L. Bible (BSI)

10 “ಆನಂದಕರ ಜೀವನದ ಬಯಕೆ ಯಾರಿಗಿದೆಯೋ ಸುದಿನಗಳನು ಕಾಣುವ ಆಶೆ ಯಾರಿಗಿದೆಯೋ ಅಂಥವನು ಬಿಗಿಹಿಡಿಯಲಿ ನಾಲಿಗೆಯನು ಕೆಟ್ಟದನು ನುಡಿಯದಂತೆ ತಡೆಹಿಡಿಯಲಿ ತುಟಿಯನು ಕಪಟವನಾಡದಂತೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಏಕೆಂದರೆ ಪವಿತ್ರಗ್ರಂಥದಲ್ಲಿ ಬರೆದಿರುವಂತೆ, “ಜೀವವನ್ನು ಬಯಸುತ್ತಾ ಸುದಿನಗಳನ್ನು ನೋಡುವುದಕ್ಕೆ ಕಾದಿರುವಾತನು ಕೆಟ್ಟದ್ದನ್ನು ನುಡಿಯದಂತೆ ತನ್ನ ನಾಲಿಗೆಯನ್ನು ವಂಚನೆಯ ಮಾತುಗಳನ್ನಾಡದಂತೆ ತುಟಿಗಳನ್ನು ಬಿಗಿಹಿಡಿದುಕೊಳ್ಳಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಜೀವದಲ್ಲಿ ಸಂತೋಷಪಟ್ಟು ಸುದಿನಗಳನ್ನು ನೋಡುವದಕ್ಕೆ ಇಷ್ಟವುಳ್ಳವನು ಕೆಟ್ಟದ್ದನ್ನು ನುಡಿಯದಂತೆ ತನ್ನ ನಾಲಿಗೆಯನ್ನೂ ವಂಚನೆಯ ಮಾತುಗಳನ್ನಾಡದಂತೆ ತುಟಿಗಳನ್ನೂ ಬಿಗಿಹಿಡಿಯಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಪವಿತ್ರ ಗ್ರಂಥವು ಹೇಳುವುದೇನೆಂದರೆ, “ಈ ಜೀವಿತದಲ್ಲಿ ಸಂತೋಷಿಸುತ್ತಾ ಸುದಿನಗಳನ್ನು ನೋಡಲು ಅಪೇಕ್ಷಿಸುವವನು ಕೆಟ್ಟ ಮಾತುಗಳನ್ನಾಡದಿರಲಿ; ಸುಳ್ಳನ್ನು ನುಡಿಯದಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 “ಬಾಳನ್ನು ಪ್ರೀತಿಸಿ ಸುದಿನಗಳನ್ನು ನೋಡುವುದಕ್ಕೆ ಇಷ್ಟವುಳ್ಳವನು ಕೆಟ್ಟದ್ದನ್ನು ನುಡಿಯದಂತೆ ತನ್ನ ನಾಲಿಗೆಯನ್ನೂ ವಂಚನೆಯ ಮಾತುಗಳನ್ನಾಡದ ಹಾಗೆ ತನ್ನ ತುಟಿಗಳನ್ನೂ ಬಿಗಿ ಹಿಡಿಯಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

10 ಪವಿತ್ರ್ ಪುಸ್ತಕ್ ಅಸೆ ಸಾಂಗ್ತಾ; ಹ್ಯಾ ಜಿವನಾತ್ ಉಮ್ಮೆದಿನ್ ರ್‍ಹಾವ್ನ್ ಬರಿ ದಿಸಾ ಬಗುಚೆ ಮನುನ್ ಆಶಾ ಕರ್‍ತಲೊ ಬುರ್ಶಿ ಗೊಸ್ಟಿಯಾ ಬೊಲಿನಸ್ತಾನಾ ಅನಿ ಝುಟಿ ಬೊಲ್ನಿಯಾ ಬೊಲಿನಸ್ತಾನಾ ರ್‍ಹಾಂವ್ದಿತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೇತ್ರನು 3:10
24 ತಿಳಿವುಗಳ ಹೋಲಿಕೆ  

ತಾನು ಸದ್ಭಕ್ತನೆಂದು ಭಾವಿಸಿಕೊಳ್ಳುವ ಯಾವನಾದರೂ ತನ್ನ ನಾಲಿಗೆಗೆ ಕಡಿವಾಣ ಹಾಕದಿದ್ದರೆ, ಅಂಥವನ ಭಕ್ತಿ ವ್ಯರ್ಥ. ಅವನು ತನ್ನನ್ನೇ ವಂಚಿಸಿಕೊಳ್ಳುತ್ತಾನಷ್ಟೆ.


ಅವರು ಯಾವ ಪಾಪವನ್ನೂ ಮಾಡಲಿಲ್ಲ. ಅವರ ಬಾಯಿಂದ ಅಬದ್ಧವಾದ ಮಾತೊಂದೂ ಕೇಳಿಬರಲಿಲ್ಲ.


ಎಲ್ಲಾ ಕೆಟ್ಟತನವನ್ನು ಬಿಟ್ಟುಬಿಡಿ. ಸುಳ್ಳಾಡುವುದಾಗಲಿ, ವಂಚಿಸುವುದಾಗಲಿ, ಅಸೂಯೆಪಡುವುದಾಗಲಿ, ಪರದೂಷಣೆಮಾಡುವುದಾಗಲಿ ನಿಮ್ಮಲ್ಲಿ ಇರಬಾರದು.


ಸುಳ್ಳು ಮಾತು ಅವರ ಬಾಯಿಂದ ಬರುವುದಿಲ್ಲ; ಅವರು ನಿರ್ದೋಷಿಗಳು.


ತಮ್ಮ ಬಳಿಗೆ ಬರುತ್ತಿದ್ದ ನತಾನಿಯೇಲನನ್ನು ಕಂಡ ಯೇಸು, “ಇಗೋ ನೋಡಿ, ನಿಜವಾದ ಇಸ್ರಯೇಲನು, ಈತನಲ್ಲಿ ಕಪಟವಿಲ್ಲ,” ಎಂದು ನುಡಿದರು.


ತನ್ನ ಪ್ರಾಣವನ್ನು ಪ್ರೀತಿಸುವವನು ಅದನ್ನು ಕಳೆದುಕೊಳ್ಳುತ್ತಾನೆ. ತನ್ನ ಪ್ರಾಣವನ್ನು ಈ ಲೋಕದಲ್ಲಿ ದ್ವೇಷಿಸುವವನು ಅದನ್ನು ನಿತ್ಯಜೀವಕ್ಕಾಗಿ ಕಾಯ್ದಿರಿಸಿಕೊಳ್ಳುತ್ತಾನೆ.


ನನ್ನನ್ನು ಕಂಡುಕೊಳ್ಳುವವನು ಜೀವವನ್ನು ಕಂಡುಕೊಳ್ಳುವನು ಸರ್ವೇಶ್ವರನ ಕೃಪಾಕಟಾಕ್ಷಕ್ಕೆ ಪಾತ್ರನಾಗುವನು.


ಅವು ನಿನ್ನ ದಿನಗಳನ್ನು ಹೆಚ್ಚಿಸುತ್ತವೆ; ನಿನಗೆ ದೀರ್ಘಾಯುಸ್ಸನ್ನು ತರುತ್ತವೆ, ನಿನಗೆ ಸುಕ್ಷೇಮವನ್ನು ಉಂಟುಮಾಡುತ್ತವೆ.


ಅದಕ್ಕೆ ಅವರು, “ಒಳ್ಳೆಯದನ್ನು ಕುರಿತು ನೀನು ನನ್ನನ್ನು ವಿಚಾರಿಸುವುದು ಏಕೆ? ಒಳ್ಳೆಯವರು ಒಬ್ಚರೇ. ನೀನು ಆ ಜೀವಕ್ಕೆ ಪ್ರವೇಶಿಸಬೇಕಾದರೆ ದೈವಾಜ್ಞೆಗಳನ್ನು ಅನುಸರಿಸು,” ಎಂದರು.


ಕಂಡುಹಿಡಿಯಬಲ್ಲವನಿಗೆ ಅವು ಜೀವದಾಯಕ; ಇಡೀ ದೇಹಕ್ಕೆ ಅವು ಆರೋಗ್ಯಕರ.


ತನ್ನನ್ನು ಅಪ್ಪಿಕೊಂಡವರಿಗೆ ಜ್ಞಾನವು ಜೀವವೃಕ್ಷ; ಅದನ್ನು ಅವಲಂಬಿಸುವ ಪ್ರತಿಯೊಬ್ಬನಿಗೆ ಸೌಭಾಗ್ಯ.


ತನ್ನ ಪ್ರಾಣವನ್ನು ಉಳಿಸಿಕೊಳ್ಳಲು ಹಾತೊರೆಯುವವನು ಅದನ್ನು ಕಳೆದುಕೊಳ್ಳುವನು. ಆದರೆ ನನ್ನ ನಿಮಿತ್ತ ಹಾಗೂ ಶುಭಸಂದೇಶದ ನಿಮಿತ್ತ ತನ್ನ ಪ್ರಾಣವನ್ನು ಕಳೆದುಕೊಳ್ಳುವವನು ಅದನ್ನು ನಿತ್ಯಕ್ಕೂ ಉಳಿಸಿಕೊಳ್ಳುವನು.


ಸೇರದಿರನಾತ ಪಿತೃಗಳಧೋಗತಿಯನು I ಅವಿವೇಕಿ ಕಾಣನು ಎಂದಿಗೂ ಪರಂಜ್ಯೋತಿಯನು II


ಪ್ರಭುವಿನೊಳಿತನು ನಾ ಕಾಣುವೆ ಜೀವಲೋಕದೊಳು I ನಾನಿಟ್ಟಿರುವೆ ನಂಬಿಕೆ ನಿರೀಕ್ಷೆ ಅದರೊಳು II


ವಿಮೋಚಿಸಿದ್ದಾನೆ ನನ್ನ ಆತ್ಮ ಅಧೋಲೋಕ ಸೇರದಂತೆ ನನ್ನ ಜೀವವು ಜ್ಯೋತಿಯನು ಕಾಣುವಂತೆ.’


ನನ್ನ ದಿನಗಳು ಓಟಗಾರನಿಗಿಂತ ವೇಗ ಅವು ಓಡುತ್ತವೆ ಕಾಣದೆ ಯಾವುದೊಂದು ಸುಖ.


ಇದು ನಿರರ್ಥಕವೆಂದು ಭಾವಿಸಬೇಡಿ; ಇದರಿಂದ ನೀವು ಬಾಳುವಿರಿ; ನೀವು ಜೋರ್ಡನ್ ನದಿಯನ್ನು ದಾಟಿ ಸ್ವಾಧೀನಮಾಡಿಕೊಳ್ಳಲು ಹೋಗುವ ನಾಡಿನಲ್ಲಿ ಇದನ್ನು ಅನುಸರಿಸುವುದರಿಂದಲೇ ಬಹುಕಾಲ ಇರುವಿರಿ,” ಎಂದು ಹೇಳಿದನು.


ದೇಹಕ್ಕೆ ಮಧುಪಾನ ಮಾಡಿಸೋಣ; ಮೂರ್ಖತನದಲ್ಲಿ ತಲ್ಲೀನನಾಗೋಣ; ಜೀವಮಾನದ ಅಲ್ಪಕಾಲದಲ್ಲಿ ನರಮಾನವನಿಗೆ ಧರೆಯಲ್ಲಿ ಯಾವುದು ಹಿತ ಎಂದು ತಿಳಿದುಕೊಳ್ಳೋಣ” ಎಂದು ಜ್ಞಾನಾಶಕ್ತನಾದ ನಾನು ಮನಸ್ಸಿನಲ್ಲೇ ಅಂದುಕೊಂಡೆ.


ನೀನಾರಿಸಿಕೊಂಡಿರುವ ಪ್ರಗತಿಯನು ನಾ ಕಾಣಮಾಡು I ನಿನ್ನ ಜನಾಂಗದವರ ಸಂತಸವನು ನಾ ಸವಿಯಮಾಡು I ನಿನ್ನ ಸ್ವಕೀಯರ ಮಹಿಮೆಯಲ್ಲೆನಗೆ ಪಾಲನ್ನು ನೀಡು II


ಅದಕ್ಕೆ ಸೈತಾನನು, “ಚರ್ಮಕ್ಕೆ ಚರ್ಮ, ಎಂದ ಹಾಗೆ ಒಬ್ಬ ಮನುಷ್ಯ ಪ್ರಾಣ ಉಳಿಸಿಕೊಳ್ಳಲು ತನ್ನ ಸರ್ವಸ್ವವನ್ನೂ ತೊರೆದುಬಿಡುತ್ತಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು