Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೇತ್ರನು 3:12 - ಕನ್ನಡ ಸತ್ಯವೇದವು C.L. Bible (BSI)

12 ನೀತಿವಂತರನು ಕಾಯುವನು ಸರ್ವೇಶ್ವರನು ಅವರ ವಿಜ್ಞಾಪನೆಗೆ ಕಿವಿಗೊಡುವನು. ಕೆಡುಕರಿಗಾದರೋ ಆತನು ವಿಮುಖನು,” ಎಂದು ಪವಿತ್ರಗ್ರಂಥದಲ್ಲಿ ಬರೆದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಏಕೆಂದರೆ ಕರ್ತನು ನೀತಿವಂತರನ್ನು ಕಟಾಕ್ಷಿಸುತ್ತಾನೆ ಮತ್ತು ಆತನು ಅವರ ವಿಜ್ಞಾಪನೆಗಳಿಗೆ ಕಿವಿಗೊಡುತ್ತಾನೆ. ಆದರೆ ಕೆಡುಕರಿಗೋ ಕರ್ತನು ವಿಮುಖನಾಗಿರುತ್ತಾನೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಯಾಕಂದರೆ ಕರ್ತನು ನೀತಿವಂತರನ್ನು ಕಟಾಕ್ಷಿಸುತ್ತಾನೆ, ಆತನು ಅವರ ವಿಜ್ಞಾಪನೆಗಳಿಗೆ ಕಿವಿಗೊಡುತ್ತಾನೆ. ಕೆಡುಕರಿಗೋ ಕರ್ತನು ಕೋಪದ ಮುಖವುಳ್ಳವನಾಗಿರುತ್ತಾನೆ ಎಂದು ಬರೆದದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ನೀತಿವಂತರನ್ನು ಪ್ರಭುವು ಕಾಯುತ್ತಾನೆ; ಅವರ ಪ್ರಾರ್ಥನೆಗಳನ್ನು ಆಲಿಸುತ್ತಾನೆ. ಆದರೆ ಕೆಟ್ಟದ್ದನ್ನು ಮಾಡುವ ಜನರನ್ನು ಪ್ರಭುವು ವಿರೋಧಿಸುತ್ತಾನೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಏಕೆಂದರೆ ನೀತಿವಂತರ ಮೇಲೆ ಕರ್ತದೇವರು ದೃಷ್ಟಿ ಇಡುತ್ತಾರೆ. ಅವರ ಪ್ರಾರ್ಥನೆಗಳಿಗೆ ಕರ್ತದೇವರು ಕಿವಿಗೊಡುತ್ತಾರೆ. ಆದರೆ ಕೆಟ್ಟದ್ದನ್ನು ಮಾಡುವವರಿಗೆ ದೇವರು ವಿಮುಖರಾಗಿದ್ದಾರೆ,” ಎಂದು ಪವಿತ್ರ ವೇದದಲ್ಲಿ ಬರೆದಿದೆಯಲ್ಲಾ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

12 ಕಶ್ಯಾಕ್ ಮಟ್ಲ್ಯಾರ್, ಸರ್ವೆಸ್ವರಾಚೆ ನದರ್ ನಿತಿನ್ ಚಲ್ತಲ್ಯಾಂಚ್ಯಾ ವರ್ತಿ ಹಾಯ್ ಅನಿ ತೆಚಿ ಕಾನಾ ತೆಂಚ್ಯಾ ಮಾಗ್ನಿಚ್ಯಾ ವರ್ತಿ ಹಾಯ್, ತೆಚ್ಯಾ ಸಾಟ್ನಿ ಕಾನಾಬಿ ಉಗ್ಡಿಚ್ ಹಾತ್, ಖರೆ ಸರ್ವೆಸ್ವರ್ ವಾಯ್ಟ್ ಕರ್ತಲ್ಯಾಂಚ್ಯಾ ವಿರೊದ್ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೇತ್ರನು 3:12
21 ತಿಳಿವುಗಳ ಹೋಲಿಕೆ  

ದೇವರು ಪಾಪಿಗಳಿಗೆ ಓಗೊಡುವುದಿಲ್ಲ. ಯಾರು ಭಕ್ತಿಯಿಂದ ಅವರ ಚಿತ್ತದಂತೆ ನಡೆಯುತ್ತಾರೋ ಅವರಿಗೆ ಓಗೊಡುತ್ತಾರೆಂದು ನಮಗೆಲ್ಲಾ ಚೆನ್ನಾಗಿ ತಿಳಿದಿದೆ.


ಸರ್ವೇಶ್ವರನು ದುರುಳರಿಗೆ ದೂರ; ನೀತಿವಂತರ ಪ್ರಾರ್ಥನೆಗೆ ಹತ್ತಿರ.


ಸರ್ವೇಶ್ವರನ ದೃಷ್ಟಿ ಸರ್ವವ್ಯಾಪ್ತ; ಕೆಟ್ಟವರ ಮೇಲೂ ಒಳ್ಳೆಯವರ ಮೇಲೂ ಆತನ ನೋಟ.


ಇನ್ನು ಮುಂದೆ ಈ ಸ್ಥಳದಲ್ಲಿ ಪ್ರಾರ್ಥಿಸುವವರನ್ನು ಕಟಾಕ್ಷಿಸಿ ಅವರ ವಿಜ್ಞಾಪನೆಗೆ ಕಿವಿಗೊಡುವೆನು.


ದುರುಳರು ಅರ್ಪಿಸುವ ಬಲಿ ಸರ್ವೇಶ್ವರನಿಗೆ ಅಸಹ್ಯ; ಸಜ್ಜನರು ಮಾಡುವ ಪ್ರಾರ್ಥನೆ ಆತನಿಗೆ ಪ್ರಿಯ.


ಸರ್ವೇಶ್ವರ ಭೂಲೋಕದ ಎಲ್ಲಾ ಕಡೆ ದೃಷ್ಟಿಹರಿಸುತ್ತಾ ತಮ್ಮ ಕಡೆಗೆ ಯಥಾರ್ಥ ಮನಸ್ಸುಳ್ಳವರ ರಕ್ಷಣೆಗಾಗಿ ತಮ್ಮ ಪ್ರತಾಪವನ್ನು ತೋರ್ಪಡಿಸುತ್ತಾರೆ. ನೀವು ಈ ಕಾರ್ಯದಲ್ಲಿ ಬುದ್ಧಿಹೀನರಾಗಿ ನಡೆದುಕೊಂಡಿದ್ದೀರಿ; ಇಂದಿನಿಂದ ನಿಮಗೆ ಯುದ್ಧಗಳು ಇದ್ದೇ ಇರುತ್ತವೆ,” ಎಂದು ಹೇಳಿದನು.


ಆದ್ದರಿಂದ ಒಬ್ಬರಿಗೊಬ್ಬರು ಪಾಪಗಳನ್ನು ಒಪ್ಪಿಕೊಳ್ಳಿರಿ. ಒಬ್ಬರಿಗೊಬ್ಬರು ಪ್ರಾರ್ಥಿಸಿರಿ. ಆಗ ನೀವು ಸ್ವಸ್ಥರಾಗುತ್ತೀರಿ. ಸತ್ಪುರುಷನ ಪ್ರಾರ್ಥನೆ ಶಕ್ತಿಯುತವಾದುದು ಹಾಗೂ ಫಲದಾಯಕವಾದುದು.


ದೇವಾ, ನೀ ನಮ್ಮೆಲ್ಲರ ಪ್ರಾರ್ಥನೆಗೆ ಕಿವಿಗೊಡುವಾತ I ನರರೆಲ್ಲರು ಬರುವರು ನಿನ್ನ ಬಳಿಗೆ ಪಾಪದ ಪ್ರಯುಕ್ತ II


ನಾನವರ ಮೇಲಿಡುವೆನು ಕೋಪ ದೃಷ್ಟಿಯನ್ನು; ಬೆಂಕಿಯಿಂದ ತಪ್ಪಿಸಿಕೊಂಡರೂ ನುಂಗಿಬಿಡುವುದು ಅದು ಅವರನ್ನು. ನಾನವರ ಮೇಲೆ ಕೋಪ ದೃಷ್ಟಿಯನ್ನಿಟ್ಟಾಗ ನಾನೇ ಸರ್ವೇಶ್ವರನೆಂದು ನಿಮಗೆ ಮನದಟ್ಟಾಗುವುದು.


ಅದು ನಿಮ್ಮ ದೇವರಾದ ಸರ್ವೇಶ್ವರ ಪರಾಂಬರಿಸುವ ನಾಡು; ಸಂವತ್ಸರದ ಪ್ರಾರಂಭ ಮೊದಲುಗೊಂಡು ಕೊನೆಯವರೆಗೂ ಅವರು ಅದನ್ನು ಸದಾ ಕಟಾಕ್ಷಿಸುವರು.


ಅದನು ಬೆರಣಿಯಂತೆ ಸುಟ್ಟುಹಾಕಿದವರಾದರೋ I ನಿನ್ನ ಕೋಪದೃಷ್ಟಿಯಿಂದಲೆ ನಾಶವಾಗುವರು II


ನಾನು ನಿಮ್ಮ ಮೇಲೆ ಕಡುಕೋಪಗೊಳ್ಳುವೆನು; ನೀವು ನಿಮ್ಮ ಶತ್ರುಗಳ ಮುಂದೆಯೇ ಸೋತುಬೀಳುವಿರಿ; ನಿಮ್ಮ ವೈರಿಗಳು ನಿಮ್ಮನ್ನು ಆಳುವರು. ಯಾರೂ ಬೆನ್ನಟ್ಟಿ ಬರದಿದ್ದರೂ ನೀವು ಹೆದರಿ ಓಡುವಿರಿ.


ಅವನು ತನ್ನ ಮಕ್ಕಳಲ್ಲಿ ಒಂದನ್ನು ಮೋಲೆಕ ದೇವತೆಗೆ ಅರ್ಪಿಸಿ ನನ್ನ ದೇವಸ್ಥಾನವನ್ನು ಅಶುದ್ಧಮಾಡಿ ನನ್ನ ಪವಿತ್ರ ನಾಮಕ್ಕೆ ಅಪಕೀರ್ತಿ ತಂದಿದ್ದಾನೆ. ಆದ್ದರಿಂದ ನಾನು ಅವನಿಗೆ ವಿಮುಖನಾಗಿ ಅವನನ್ನು ನನ್ನ ಜನತೆಯಿಂದ ತೆಗೆದುಹಾಕುವೆನು.


ಈ ನಗರಕ್ಕೆ ಒಳಿತನ್ನು ಅಲ್ಲ, ಕೆಡುಕನ್ನು ಮಾಡಲೆಂದೆ ಇದರ ಮೇಲೆ ಕಣ್ಣಿಟ್ಟಿದ್ದೇನೆ. ಇದು ಬಾಬಿಲೋನಿಯಾದ ಅರಸನ ಕೈವಶವಾಗುವುದು. ಅವನು ಇದನ್ನು ಸುಟ್ಟು ಭಸ್ಮಮಾಡುವನು. ಇದು ಸರ್ವೇಶ್ವರನಾದ ನನ್ನ ನುಡಿ.’


ಪ್ರಭು ಪ್ರಸನ್ನವಿರುವನು ಪವಿತ್ರಾಲಯದಲಿ I ಸ್ಥಾಪಿಸಿಹನು ಸಿಂಹಾಸನವನು ಪರದಲಿ I ನರಮಾನವರನು ನೋಡುತಿಹನು ನೇತ್ರಗಳಲಿ I ಪರೀಕ್ಷಿಸುತಿಹನು ಅವರನು ಸೂಕ್ಷ್ಮರೀತಿಯಲಿ II


“ಯಾರಾದರು ಭೂತ-ಪ್ರೇತಗಳನ್ನು ವಿಚಾರಿಸುವವರ ಬಳಿಗೆ ಹೋಗಿ, ಅವರ ಆಲೋಚನೆಯನ್ನು ಕೇಳಿ, ದೇವದ್ರೋಹಿಯಾದರೆ ನಾನು ಅಂಥ ವ್ಯಕ್ತಿಗೆ ವಿಮುಖನಾಗಿ ಅವನನ್ನು ತನ್ನ ಜನತೆಯಿಂದ ತೆಗೆದುಹಾಕುವೆನು.


“ಅಷ್ಟುಮಾತ್ರವಲ್ಲ, ಇಸ್ರಯೇಲರಲ್ಲಾಗಲಿ, ಅವರ ನಡುವೆ ವಾಸಿಸುವ ಅನ್ಯದೇಶದವರಲ್ಲಾಗಲಿ ಯಾರಾದರು ರಕ್ತಭೋಜನ ಮಾಡಿದರೆ ಸರ್ವೇಶ್ವರ ಅಂಥ ವ್ಯಕ್ತಿಯ ವಿರುದ್ಧ ಉಗ್ರಕೋಪಗೊಳ್ಳುವರು; ಅವನನ್ನು ತನ್ನ ಪ್ರಜೆಯಿಂದ ತೆಗೆದುಹಾಕುವರು.


ಆಗ ದೂತನು, “ಈ ಸ್ತಂಭದಲ್ಲಿರುವ ಏಳು ದೀಪಗಳು ಭೂಲೋಕದ ಎಲ್ಲಾ ಭಾಗಗಳನ್ನು ವೀಕ್ಷಿಸುವ ಸರ್ವೇಶ್ವರಸ್ವಾಮಿಯ ಏಳು ಕಣ್ಣುಗಳನ್ನು ಸೂಚಿಸುತ್ತವೆ,” ಎಂದನು.


ಪ್ರಭುವಾದರೋ ಕಟಾಕ್ಷಿಸುವನು ತನಗಂಜಿ ನಡೆದವರನು I ಲಕ್ಷಿಸುವನು ತನ್ನ ಕೃಪೆಯನು ನಿರೀಕ್ಷಿಸುವವರನು II


“ಇವನನ್ನು ಕರೆದುಕೊಂಡುಹೋಗಿ ಚೆನ್ನಾಗಿ ನೋಡಿಕೊ. ಯಾವ ಹಾನಿಯನ್ನು ಮಾಡಕೂಡದು. ಬೇಡುವುದನ್ನೆಲ್ಲ ಕೊಡು,” ಎಂದು ಆಜ್ಞಾಪಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು