Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೇತ್ರನು 3:13 - ಕನ್ನಡ ಸತ್ಯವೇದವು C.L. Bible (BSI)

13 ನೀವು ಒಳ್ಳೆಯದನ್ನು ಮಾಡುವುದರಲ್ಲಿ ಆಸಕ್ತರಾಗಿದ್ದರೆ ನಿಮಗೆ ಕೇಡು ಬಗೆಯುವವರು ಯಾರು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ನೀವು ಒಳ್ಳೆಯದನ್ನೇ ಮಾಡುವುದರಲ್ಲಿ ಆಸಕ್ತರಾಗಿದ್ದರೆ ನಿಮಗೆ ಕೇಡು ಮಾಡುವವರು ಯಾರಿದ್ದಾರೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ನೀವು ಒಳ್ಳೇದನ್ನೇ ಮಾಡುವದರಲ್ಲಿ ಆಸಕ್ತರಾಗಿದ್ದರೆ ನಿಮಗೆ ಕೇಡು ಮಾಡುವವರು ಯಾರಿದ್ದಾರೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ನೀವು ಯಾವಾಗಲೂ ಒಳ್ಳೆಯದನ್ನು ಮಾಡಲು ಪ್ರಯತ್ನಿಸುತ್ತಿದ್ದರೆ, ಯಾರೂ ನಿಮಗೆ ಕೇಡು ಮಾಡುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ನೀವು ಒಳ್ಳೆಯದನ್ನು ಅನುಸರಿಸಲು ಆಸಕ್ತರಾಗಿದ್ದರೆ ನಿಮಗೆ ಕೇಡು ಮಾಡುವವರು ಯಾರಿದ್ದಾರೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

13 ತುಮಿ ಬರೆ ಕರುಕ್ ಗೆಲ್ಲ್ಯಾ ತನ್ನಾ ತುಮ್ಕಾ ವಾಯ್ಟ್ ಕರ್ತಲೊ ಕೊನ್ ತೊ?

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೇತ್ರನು 3:13
13 ತಿಳಿವುಗಳ ಹೋಲಿಕೆ  

ಒಬ್ಬನ ನಡತೆಯನ್ನುಸರ್ವೇಶ್ವರ ಮೆಚ್ಚಿದರೆ, ಅವನ ಶತ್ರುಗಳನ್ನು ಆತ ಮಿತ್ರರನ್ನಾಗಿಸುತ್ತಾನೆ.


ಕೆಡುಕಿಗೆ ಪ್ರತಿಯಾಗಿ ಕೆಡುಕು ಮಾಡದೆ ಎಚ್ಚರದಿಂದಿರಿ. ಯಾವಾಗಲೂ ಒಬ್ಬರಿಗೊಬ್ಬರು ಮಾತ್ರವಲ್ಲದೆ ಎಲ್ಲರಿಗೂ ಹಿತವನ್ನೇ ಮಾಡಿರಿ.


ದೇವರನ್ನು ಪ್ರೀತಿಸುವವರಿಗೂ ದೇವರ ಸಂಕಲ್ಪದ ಮೇರೆಗೆ ಕರೆಹೊಂದಿದವರಿಗೂ ಸಕಲವೂ ಹಿತಕರವಾಗಿ ಪರಿಣಮಿಸುವುದು.ಇದನ್ನು ನಾವು ಚೆನ್ನಾಗಿ ಅರಿತಿದ್ದೇವೆ.


ಪ್ರಿಯನೇ, ನೀನು ಕೆಟ್ಟದ್ದನ್ನು ಅನುಸರಿಸದೆ ಒಳ್ಳೆಯದನ್ನೇ ಅನುಸರಿಸಿ ನಡೆ. ಒಳಿತನ್ನು ಮಾಡುವವನು ದೇವರಿಗೆ ಸೇರಿದವನು. ಕೆಡುಕನ್ನು ಮಾಡುವವನು ದೇವರನ್ನು ಕಾಣದವನು.


ಎಸಗಿಹರು ಉಪಕಾರಕೆ ಪ್ರತಿಯಾಗಿ ಅಪಕಾರ I ಎದುರಿಸುತಿಹರೀಗ ನಾ ಹಿಡಿದಿರುವ ಸನ್ಮಾರ್ಗ II


ಆಕೆ ಮಕ್ಕಳನ್ನು ಯೋಗ್ಯವಾಗಿ ಸಾಕಿಸಲಹಿದವಳೂ ಅತಿಥಿಸತ್ಕಾರ ಮಾಡಿದವಳೂ ಆಗಿರಬೇಕು. ಅಲ್ಲದೆ, ದೇವಜನರ ಪಾದಸೇವೆ ಮಾಡಿದವಳೂ ಸಂಕಷ್ಟದಲ್ಲಿದ್ದವರಿಗೆ ಸಹಾಯ ಮಾಡಿದವಳೂ ಆಗಿರಬೇಕು. ಇಂಥಾ ಪುಣ್ಯಕಾರ್ಯಗಳನ್ನು ಮಾಡಿ ಸತ್ಕ್ರಿಯೆಗಳಿಗೆ ಹೆಸರಾದವಳೂ ಆಗಿರಬೇಕು.


ಪ್ರೀತಿಯನ್ನು ಅರಸಿರಿ. ಪವಿತ್ರಾತ್ಮರ ವರಗಳನ್ನು ಬಯಸಿರಿ. ದೇವರ ಸಂದೇಶವನ್ನು ಸಾರಲು ಹಂಬಲಿಸಿರಿ.


ಕೆಟ್ಟದ್ದನ್ನು ಮಾಡುವವನೇ ಹೊರತು ಒಳ್ಳೆಯದನ್ನು ಮಾಡುವವನು ಅಧಿಕಾರಿಗೆ ಭಯಪಡಬೇಕಾಗಿಲ್ಲ. ಅಧಿಕಾರಿಯ ಮುಂದೆ ನಿರ್ಭಯನಾಗಿರಲು ನಿನಗೆ ಇಷ್ಟವಿದ್ದರೆ ಒಳ್ಳೆಯದನ್ನೇ ಮಾಡುತ್ತಿರು. ಆಗ ಆತನು ನಿನ್ನನ್ನು ಪ್ರಶಂಶಿಸುವನು.


ದುರುಳರ ನಡತೆ ಸರ್ವೇಶ್ವರನಿಗೆ ಹೇಯ; ನೀತಿವಂತರ ನಡತೆ ಆತನಿಗೆ ಸುಪ್ರಿಯ.


ದೇವರ ಅಕ್ಕರೆಯ ಮಕ್ಕಳು ನೀವು. ಆದ್ದರಿಂದ ದೇವರನ್ನೇ ಅನುಸರಿಸಿ ಬಾಳಿರಿ.


ಸಜ್ಜನರಿಗೆ ಸಂಭವಿಸದು ಯಾವ ಕೆಡುಕು; ದುರ್ಜನರಿಗೆ ತುಂಬಿತುಳುಕುವುದು ಕೇಡು.


“ಇವನನ್ನು ಕರೆದುಕೊಂಡುಹೋಗಿ ಚೆನ್ನಾಗಿ ನೋಡಿಕೊ. ಯಾವ ಹಾನಿಯನ್ನು ಮಾಡಕೂಡದು. ಬೇಡುವುದನ್ನೆಲ್ಲ ಕೊಡು,” ಎಂದು ಆಜ್ಞಾಪಿಸಿದನು.


ಯೇಸುಕ್ರಿಸ್ತರು ನಮ್ಮನ್ನು ಸಕಲ ಅಪರಾಧಗಳಿಂದ ವಿಮೋಚಿಸಿ, ಪರಿಶುದ್ಧರನ್ನಾಗಿಸಿ, ಸತ್ಕಾರ್ಯಗಳಲ್ಲಿ ಆಸಕ್ತರಾದ ಒಂದು ಜನಾಂಗವನ್ನಾಗಿ ಮಾಡಿದರು. ನಮ್ಮನ್ನು ತಮ್ಮ ಸ್ವಂತದವರನ್ನಾಗಿಸಿಕೊಳ್ಳಲೆಂದು ತಮ್ಮನ್ನೇ ನಮಗಾಗಿ ಸಮರ್ಪಿಸಿಕೊಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು