1 ಪೇತ್ರನು 3:18 - ಕನ್ನಡ ಸತ್ಯವೇದವು C.L. Bible (BSI)18 ಅಂತೆಯೇ ಕ್ರಿಸ್ತಯೇಸು ನೀತಿವಂತರಾಗಿದ್ದರೂ ಅನೀತಿವಂತರಿಗಾಗಿ ಪ್ರಾಣತ್ಯಾಗಮಾಡಿದರು. ಪಾಪ ನಿವಾರಣಾರ್ಥವಾಗಿ ಒಂದೇ ಸಾರಿಗೆ ಮಾತ್ರವಲ್ಲ, ಎಂದೆಂದಿಗೂ ನಮ್ಮನ್ನು ದೇವರ ಬಳಿಗೆ ಸೇರಿಸಲು ಸತ್ತರು. ದೇಹದಲ್ಲಿ ಅವರು ವಧಿತರಾದರೂ ಆತ್ಮದಲ್ಲಿ ಜೀವಂತರಾದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಕ್ರಿಸ್ತನು ಸಹ ನೀತಿವಂತನಾಗಿದ್ದು ಅನೀತಿವಂತರಿಗೋಸ್ಕರ ಪ್ರಾಣ ಕೊಟ್ಟು ನಮ್ಮನ್ನು ದೇವರ ಬಳಿಗೆ ಸೇರಿಸುವುದಕ್ಕಾಗಿ ಒಂದೇ ಸಾರಿ ಪಾಪನಿವಾರಣೆಗೋಸ್ಕರ ಬಾಧೆಪಟ್ಟು ಸತ್ತನು. ಆತನು ಶರೀರಸಂಬಂಧವಾಗಿ ಕೊಲ್ಲಲ್ಪಟ್ಟು, ಆತ್ಮ ಸಂಬಂಧವಾಗಿ ತಿರುಗಿ ಬದುಕುವವನಾದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ಕ್ರಿಸ್ತನು ಸಹ ನೀತಿವಂತನಾಗಿದ್ದು ಅನೀತಿವಂತರಿಗೋಸ್ಕರ ಪ್ರಾಣಕೊಟ್ಟು ನಮ್ಮನ್ನು ದೇವರ ಬಳಿಗೆ ಸೇರಿಸುವದಕ್ಕಾಗಿ ಒಂದೇ ಸಾರಿ ಪಾಪನಿವಾರಣಕ್ಕೋಸ್ಕರ ಬಾಧೆಪಟ್ಟು ಸತ್ತನು. ಆತನು ಶರೀರಸಂಬಂಧದಲ್ಲಿ ಕೊಲ್ಲಲ್ಪಟ್ಟನು, ಆತ್ಮಸಂಬಂಧದಲ್ಲಿ ತಿರಿಗಿ ಬದುಕುವವನಾದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ನಿಮ್ಮ ಪಾಪಗಳಿಗಾಗಿ ಕ್ರಿಸ್ತನು ಒಂದೇಸಾರಿ ಬಾಧೆ ಅನುಭವಿಸಿ ಸತ್ತನು. ನೀತಿವಂತನಾಗಿದ್ದ ಆತನು ಅಪರಾಧಿಗಳಿಗಾಗಿ ಪ್ರಾಣಕೊಟ್ಟನು. ನಿಮ್ಮೆಲ್ಲರನ್ನು ದೇವರ ಬಳಿಗೆ ನಡೆಸುವುದಕ್ಕಾಗಿ ಆತನು ಹೀಗೆ ಮಾಡಿದನು. ಆತನ ದೇಹವು ಕೊಲ್ಲಲ್ಪಟ್ಟಿತು, ಆದರೆ ಆತನು ಆತ್ಮಸಂಬಂಧದಲ್ಲಿ ಮತ್ತೆ ಜೀವಂತನಾದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ಕ್ರಿಸ್ತ ಯೇಸುವು ನೀತಿವಂತರಾಗಿದ್ದರೂ ಅನೀತಿವಂತರಾದ ನಮ್ಮನ್ನು ದೇವರ ಬಳಿಗೆ ತರುವುದಕ್ಕಾಗಿ, ಒಂದೇ ಸಾರಿ ಪಾಪಗಳಿಗೋಸ್ಕರ ಬಾಧೆಪಟ್ಟು ಶರೀರದಲ್ಲಿ ಮರಣಹೊಂದಿದರು. ಆದರೆ ಆತ್ಮದಲ್ಲಿ ಬದುಕುವವರಾದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್18 ಕಶ್ಯಾಕ್ ಮಟ್ಲ್ಯಾರ್, ಕ್ರಿಸ್ತ್ ಪಾಪಾಂಚ್ಯಾ ಸಾಟ್ನಿ ಅನಿ ಸಗ್ಳ್ಯಾಂಚ್ಯಾ ಸಾಟ್ನಿ ಮರ್ಲೊ, ತುಮ್ಕಾ ದೆವಾಕ್ಡೆ ಘೆವ್ನ್ ಜಾವ್ಕ್ ಸಾಟ್ನಿ ವಿಶ್ವಾಸ್ ನತ್ತ್ಯಾ ಲೊಕಾಚ್ಯಾ ಜಾಗ್ಯಾರ್ ಎಕ್ ಬರೊ ಮಾನುಸ್ ಮರ್‍ಲೊ ತೆಕಾ ಅಂಗಾಚ್ಯಾ ಮಾಸಾಚ್ಯಾ ರುಪಾರ್ ಜಿವಾನಿ ಮಾರುನ್ ಹೊಲ್ಲೆ, ಖರೆ ಆತ್ಮಿಕ್ ರಿತಿನ್ ಝಿತ್ತೊ ಕರುನ್ ಉಟ್ವುನ್ ಹೊಲೆ. ಅಧ್ಯಾಯವನ್ನು ನೋಡಿ |