Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೇತ್ರನು 3:2 - ಕನ್ನಡ ಸತ್ಯವೇದವು C.L. Bible (BSI)

2 ಅವರು ಗಮನಿಸುವುದು ತಮ್ಮ ಪತ್ನಿಯರ ಭಯಭಕ್ತಿಯನ್ನು, ಸುಗುಣಶೀಲತೆಯನ್ನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಅವರಲ್ಲಿ ಕೆಲವರು ದೇವರ ವಾಕ್ಯಕ್ಕೆ ಅವಿಧೇಯರಾಗಿದ್ದರೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ನೀವು ದೇವರಲ್ಲಿ ಭಯಭಕ್ತಿಯುಳ್ಳವರಾಗಿದ್ದು ನಿಷ್ಕಳಂಕರಾಗಿ ಜೀವಿಸುವುದನ್ನು ಕಂಡು ವಾಕ್ಯೋಪದೇಶವಿಲ್ಲದಿದ್ದರೂ ದೇವರ ವಾಕ್ಯದ ಮೇಲೆ ನಂಬಿಕೆಯಿಡಲು ನಿಮ್ಮ ನಡತೆಯಿಂದಲೇ ಪ್ರೋತ್ಸಾಹಿಸಲ್ಪಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ನೀವು ನಿರ್ಮಲರಾಗಿಯೂ ಭಯಭರಿತರಾಗಿಯೂ ನಡೆದುಕೊಳ್ಳುವದನ್ನು ಅವರು ನೋಡಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

2 ಕಶ್ಯಾಕ್ ಮಟ್ಲ್ಯಾರ್, ತೆನಿ ತುಮ್ಚಿ ಭಕ್ತಿ ಅನಿ ತುಮ್ಚಿ ಚಲ್ನುಕ್ ಕವ್ಡಿ ಪವಿತ್ರ್ ಮನುನ್ ಬಗ್ತ್ಯಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೇತ್ರನು 3:2
13 ತಿಳಿವುಗಳ ಹೋಲಿಕೆ  

ಅನ್ಯಧರ್ಮೀಯರ ಮಧ್ಯೆ ನಿಮ್ಮ ನಡತೆ ಆದರ್ಶಪ್ರಾಯವಾಗಿರಲಿ. ಅವರು ನಿಮ್ಮನ್ನು ದುಷ್ಕರ್ಮಿಗಳೆಂದು ದೂಷಿಸಿದರೂ ನಿಮ್ಮ ಸತ್ಕಾರ್ಯಗಳನ್ನು ಮೆಚ್ಚಿಕೊಂಡು ಕ್ರಿಸ್ತಯೇಸುವಿನ ಪುನರಾಗಮನದ ದಿನದಂದು ದೇವರನ್ನು ಕೊಂಡಾಡುವರು.


ಅದಕ್ಕೆ ಬದಲು ನಿಮ್ಮನ್ನು ಕರೆದ ದೇವರು ಪವಿತ್ರರಾಗಿರುವಂತೆ ನೀವೂ ನಿಮ್ಮ ನಡೆನುಡಿಯಲ್ಲಿ ಪವಿತ್ರರಾಗಿರಿ.


ಅದೇನೇ ಇರಲಿ, ನೀವು ಮಾತ್ರ ಕ್ರಿಸ್ತಯೇಸುವಿನ ಶುಭಸಂದೇಶಕ್ಕೆ ಯೋಗ್ಯರಾಗಿ ನಡೆದುಕೊಳ್ಳಿರಿ. ನಾನು ನಿಮ್ಮಲ್ಲಿಗೆ ಬಂದರೂ ಸರಿ, ಬಾರದಿದ್ದರೂ ಸರಿ, ಇದು ಮುಖ್ಯವಲ್ಲ. ಶುಭಸಂದೇಶವು ನೀಡುವ ವಿಶ್ವಾಸಕ್ಕಾಗಿ ನೀವು ಒಮ್ಮನಸ್ಸಿನಿಂದ, ಕೆಚ್ಚಿನಿಂದ ಹೋರಾಡುವುದೇ ಮುಖ್ಯ. ಇದು ನನಗೆ ತಿಳಿದುಬಂದರೆ ಅಷ್ಟೇ ಸಾಕು.


ಇವೆಲ್ಲವೂ ಹೀಗೆ ನಾಶವಾಗಿ ಹೋಗುವುದರಿಂದ ನೀವು ಎಂಥವರಾಗಿ ಜೀವಿಸಬೇಕು? ಪರಿಶುದ್ಧರಾಗಿಯೂ ಭಕ್ತಿಪೂರಿತರಾಗಿಯೂ ಬಾಳಬೇಕು.


ಆದರೆ ಇದು ನಿಮಗೂ ಅನ್ವಯಿಸುತ್ತದೆ. ಪ್ರತಿಯೊಬ್ಬ ಪುರುಷನು ತನ್ನನ್ನು ಪ್ರೀತಿಸುವಂತೆ ತನ್ನ ಪತ್ನಿಯನ್ನೂ ಪ್ರೀತಿಸಲಿ ಮತ್ತು ಪ್ರತಿಯೊಬ್ಬ ಸ್ತ್ರೀಯು ತನ್ನ ಪತಿಯ ವಿಷಯದಲ್ಲಿ ಗೌರವದಿಂದ ನಡೆದುಕೊಳ್ಳಲಿ.


ದಾಸ್ಯದಲ್ಲಿರುವವರೇ, ಎಲ್ಲಾ ವಿಷಯಗಳಲ್ಲೂ ನಿಮ್ಮ ನಿಮ್ಮ ಧಣಿಗಳಿಗೆ ವಿಧೇಯರಾಗಿರಿ. ಧಣಿಗಳನ್ನು ಮೆಚ್ಚಿಸುವ ಸಲುವಾಗಿ ಮುಖದಾಕ್ಷಿಣ್ಯದ ಸೇವೆಮಾಡಬೇಡಿ. ಪ್ರಭುವಿಗೆ ಭಯಪಟ್ಟು ಪ್ರಾಮಾಣಿಕತೆಯಿಂದ ದುಡಿಯಿರಿ.


ನಾವಾದರೋ ಸ್ವರ್ಗಸಾಮ್ರಾಜ್ಯದ ಪ್ರಜೆಗಳು, ಉದ್ಧಾರಕರಾದ ಪ್ರಭು ಯೇಸುಕ್ರಿಸ್ತರು ಪುನರಾಗಮಿಸುವುದು ಅಲ್ಲಿಂದಲೇ ಎಂದು ಎದುರುನೋಡುತ್ತಿದ್ದೇವೆ.


ಸೇವಕರೇ, ನೀವು ಮಾಡುತ್ತಿರುವುದು ಕ್ರಿಸ್ತಯೇಸುವಿನ ಸೇವೆಯನ್ನೇ ಎಂದು ಭಾವಿಸಿ, ನಿಮ್ಮ ಲೌಕಿಕ ಧಣಿಗಳಿಗೆ ಭಯಭಕ್ತಿಯಿಂದಲೂ ಏಕಮನಸ್ಸಿನಿಂದಲೂ ವಿಧೇಯರಾಗಿರಿ.


ನೀನಿನ್ನೂ ಯುವಕನೆಂದು ನಿನ್ನನ್ನು ತಾತ್ಸಾರ ಮಾಡುವುದಕ್ಕೆ ಯಾರಿಗೂ ಅವಕಾಶ ಕೊಡಬೇಡ. ನಿನ್ನ ನಡೆನುಡಿ, ಪ್ರೀತಿವಿಶ್ವಾಸ ಹಾಗೂ ಪರಿಶುದ್ಧತೆಯ ವಿಷಯದಲ್ಲಿ ವಿಶ್ವಾಸಿಗಳಿಗೆಲ್ಲರಿಗೂ ನೀನೇ ಆದರ್ಶಪ್ರಾಯನಾಗಿರು.


ಅಂತೆಯೇ ಸ್ತ್ರೀಯರೇ, ನೀವು ನಿಮ್ಮ ಪತಿಯರಿಗೆ ವಿಧೇಯರಾಗಿರಿ. ಅವರಲ್ಲಿ ಕೆಲವರು ದೇವರ ವಾಕ್ಯವನ್ನು ನಂಬದೆ ಇರಬಹುದು. ಆದರೂ ಯಾವ ಮಾತುಕತೆಯಿಲ್ಲದೆ ನಿಮ್ಮ ಸನ್ನಡತೆಯಿಂದಲೇ ಅವರನ್ನು ಜಯಿಸಬಹುದು.


ಕೇಶವಿನ್ಯಾಸ, ಚಿನ್ನಾಭರಣದ ತೊಡುಗ಼ೆ, ನಯನವುರಾದ ಉಡುಗೆ - ಈ ಮೊದಲಾದ ಹೊರಗಣ ಶೃಂಗಾರವೇ ನಿಮ್ಮ ಅಲಂಕಾರವಾಗಿರಬಾರದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು