1 ಪೇತ್ರನು 3:21 - ಕನ್ನಡ ಸತ್ಯವೇದವು C.L. Bible (BSI)21 ಇದು ದೀಕ್ಷಾಸ್ನಾನವನ್ನು ಸೂಚಿಸುವ ಒಂದು ಸಂಕೇತ. ಈ ದೀಕ್ಷಾಸ್ನಾನ ಯೇಸುಕ್ರಿಸ್ತರ ಪುನರುತ್ಥಾನದ ಮೂಲಕ ನಿಮಗೆ ಜೀವೋದ್ಧಾರವನ್ನು ನೀಡುತ್ತದೆ. ಇದು ಕೇವಲ ದೇಹದ ಮಾಲಿನ್ಯವನ್ನು ಹೋಗಲಾಡಿಸುವಂಥಾದ್ದಲ್ಲ; ಶುದ್ಧಮನಸ್ಸಿನಿಂದ ದೇವರಿಗೆ ಮಾಡುವ ಪ್ರಮಾಣ ವಚನವಾಗಿದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಆ ನೀರಿಗೆ ಅನುರೂಪವಾದ ದೀಕ್ಷಾಸ್ನಾನವು ಯೇಸು ಕ್ರಿಸ್ತನ ಪುನರುತ್ಥಾನದ ಮೂಲಕ ಈಗ ನಮ್ಮನ್ನು ರಕ್ಷಿಸುತ್ತದೆ. ಅದು ದೇಹದ ಮೇಲಿನ ಕೊಳೆಯನ್ನು ಹೊಗಲಾಡಿಸುವಂಥದ್ದಲ್ಲ. ಆದರೆ ಒಳ್ಳೆಯ ಮನಸ್ಸಾಕ್ಷಿ ಬೇಕೆಂದು ದೇವರಿಗೆ ವಿಜ್ಞಾಪಿಸಿಕೊಳ್ಳುವಂಥದಾಗಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ಆ ನೀರಿಗೆ ಅನುರೂಪವಾದ ದೀಕ್ಷಾಸ್ನಾನವು ಯೇಸು ಕ್ರಿಸ್ತನ ಪುನರುತ್ಥಾನದ ಮೂಲಕ ಈಗ ನಮ್ಮನ್ನು ರಕ್ಷಿಸುತ್ತದೆ; ಅದು ಮೈಕೊಳೆಯನ್ನು ಹೋಗಲಾಡಿಸುವಂಥದಲ್ಲ, ಒಳ್ಳೇ ಮನಸ್ಸಾಕ್ಷಿ ಬೇಕೆಂದು ದೇವರಿಗೆ ವಿಜ್ಞಾಪಿಸಿಕೊಳ್ಳುವಂಥದೇ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್21 ಆ ನೀರು ಈಗ ನಿಮ್ಮನ್ನು ರಕ್ಷಿಸುತ್ತಿರುವ ದೀಕ್ಷಾಸ್ನಾನದಂತಿದೆ. ದೀಕ್ಷಾಸ್ನಾನವು ಮೈಕೊಳೆಯನ್ನು ತೊಳೆಯುವಂಥದ್ದಲ್ಲ. ಅದು ಪರಿಶುದ್ಧ ಹೃದಯ ಬೇಕೆಂದು ವಿಜ್ಞಾಪಿಸಿಕೊಳ್ಳುವಂಥದಾಗಿದೆ. ಯೇಸು ಕ್ರಿಸ್ತನು ಸಾವಿನಿಂದ ಎದ್ದುಬಂದದ್ದರಿಂದ ಅದು ನಿಮ್ಮನ್ನು ರಕ್ಷಿಸುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ಈ ನೀರು ದೀಕ್ಷಾಸ್ನಾನವನ್ನು ಸೂಚಿಸುವಂತದ್ದಾಗಿದೆ. ಈ ದೀಕ್ಷಾಸ್ನಾನ ಕ್ರಿಸ್ತ ಯೇಸುವಿನ ಪುನರುತ್ಥಾನದ ಮೂಲಕ ಈಗ ನಮ್ಮನ್ನು ರಕ್ಷಿಸುತ್ತದೆ. ಅದು ಮೈಕೊಳೆಯನ್ನು ಹೋಗಲಾಡಿಸುವಂಥದಲ್ಲ. ಆದರೆ ಒಳ್ಳೆಯ ಮನಸ್ಸಾಕ್ಷಿಯು ಬೇಕೆಂದು ದೇವರನ್ನು ಬೇಡಿಕೊಳ್ಳುವಂಥದ್ದಾಗಿದೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್21 ಖರೆ ದೆವಾಚ್ಯಾ ವಾಂಗ್ಡಾ ಎಕ್ ಬರ್‍ಯಾ ಮನಾನ್ ಗೊಸ್ಟ್ ದಿತಲೆ ಹೊವ್ನ್ ಹಾಯ್, ಹೆ ಬಾಲ್ತಿಮ್ ತುಮ್ಕಾ ಜೆಜು ಕ್ರಿಸ್ತಾಚ್ಯಾ ಝಿತ್ತೊ ಹೊವ್ನ್ ಉಟಲ್ಲ್ಯಾಚ್ಯಾ ವೈನಾ ಹುರ್‍ವುತಾ. ಅಧ್ಯಾಯವನ್ನು ನೋಡಿ |