Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೇತ್ರನು 3:8 - ಕನ್ನಡ ಸತ್ಯವೇದವು C.L. Bible (BSI)

8 ಕಡೆಯದಾಗಿ ನೀವೆಲ್ಲರೂ ಏಕಮನಸ್ಸುಳ್ಳವರಾಗಿರಿ; ಪರಸ್ಪರ ಸಹಾನುಭೂತಿ ಇರಲಿ. ಒಡಹುಟ್ಟಿದವರಂತೆ ಒಬ್ಬರನ್ನೊಬ್ಬರು ಪ್ರೀತಿಸಿರಿ; ದಯೆತೋರುವವರೂ ದೀನಭಾವವುಳ್ಳವರೂ ಆಗಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಕಡೆಗೆ ನೀವೆಲ್ಲರೂ ಏಕಮನಸ್ಸುಳ್ಳವರಾಗಿರಿ, ಪರಸ್ಪರ ಅನುಕಂಪವುಳ್ಳವರಾಗಿರಿ, ಅಣ್ಣತಮ್ಮಂದಿರಂತೆ ಒಬ್ಬರನ್ನೊಬ್ಬರು ಪ್ರೀತಿಸಿರಿ, ಕರುಣೆಯೂ, ದೀನಭಾವವೂ ಉಳ್ಳವರಾಗಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಕಡೆಗೆ ನೀವೆಲ್ಲರೂ ಏಕಮನಸ್ಸುಳ್ಳವರಾಗಿರಿ; ಪರರ ಸುಖದುಃಖಗಳಲ್ಲಿ ಸೇರುವವರಾಗಿರಿ; ಅಣ್ಣತಮ್ಮಂದಿರಂತೆ ಒಬ್ಬರನ್ನೊಬ್ಬರು ಪ್ರೀತಿಸಿರಿ; ಕರುಣೆಯೂ ದೀನಭಾವವೂ ಉಳ್ಳವರಾಗಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಆದ್ದರಿಂದ ನೀವೆಲ್ಲರೂ ಒಟ್ಟಾಗಿ ಶಾಂತಿಯಿಂದ ಬಾಳಿರಿ; ಒಬ್ಬರನ್ನೊಬ್ಬರು ಅರ್ಥಮಾಡಿಕೊಳ್ಳಲು ಪ್ರಯತ್ನಿಸಿರಿ. ಒಬ್ಬರನ್ನೊಬ್ಬರು ಸಹೋದರರಂತೆ ಪ್ರೀತಿಸಿರಿ. ದಯೆ ತೋರುವವರೂ ಮತ್ತು ದೀನತೆ ಉಳ್ಳವರೂ ಆಗಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಕಡೆಗೆ ನೀವೆಲ್ಲರೂ ಏಕ ಮನಸ್ಸುಳ್ಳವರಾಗಿರಿ, ಒಬ್ಬರಿಗೊಬ್ಬರೂ ಕರುಣೆಯುಳ್ಳವರಾಗಿದ್ದು ಸಹೋದರರಂತೆ ಪ್ರೀತಿಸಿರಿ. ಕನಿಕರವೂ ದೀನತೆ ಉಳ್ಳವರಾಗಿರಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

8 ಆಕ್ರಿಕ್ ಮಿಯಾ ತುಮ್ಕಾ ಸಾಂಗ್ತಾ ತುಮಿ ಸಗ್ಳೆ ಜನಾ ಎಕ್ ಮಾನಾಚೆ ಅನಿ ದಯಾಳ್ ಹೊವ್ಚೆ, ಎಕಾಮೆಕಾಕ್ ಪ್ರೆಮಾನ್ ರ್‍ಹಾವ್ಚೆ, ಅನಿ ಕರಾನ್ ದಾಕ್ವುತಲೆ ಅನಿ ಎಕಾಮೆಕಾಕ್ ಖಾಯ್ಲ್ ಹೊವ್ನ್ ಚಲ್ತಲೆ ಹೊವ್ನ್ ರ್‍ಹಾವ್ಚೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೇತ್ರನು 3:8
32 ತಿಳಿವುಗಳ ಹೋಲಿಕೆ  

ಸಹೋದರ ಭಾವನೆಯಿಂದ ಒಬ್ಬರನ್ನೊಬ್ಬರು ಹೃತ್ಪೂರ್ವಕವಾಗಿ ಪ್ರೀತಿಸಿರಿ. ಗೌರವ ತೋರಿಸುವುದರಲ್ಲಿ ಒಬ್ಬರಿಗಿಂತ ಒಬ್ಬರು ಮುಂದಾಗಿರಿ.


ಸತ್ಯಕ್ಕೆ ಶರಣಾಗಿ ಆತ್ಮಶುದ್ಧಿಹೊಂದಿರುವ ನೀವು ಸಹೋದರರನ್ನು ನಿಷ್ಕಪಟದಿಂದ ಪ್ರೀತಿಸಬಲ್ಲಿರಿ. ಎಂದೇ, ಒಬ್ಬರನ್ನೊಬ್ಬರು ಹೃತ್ಪೂರ್ವಕವಾಗಿಯೂ ಯಥಾರ್ಥವಾಗಿಯೂ ಪ್ರೀತಿಸಿರಿ.


ಎಲ್ಲ ವಿಧವಾದ ದ್ವೇಷ-ದೂಷಣೆ, ಕೋಪ-ಕ್ರೋಧ ಮತ್ತು ಕೆಡುಕುತನವನ್ನು ನಿಮ್ಮಿಂದ ದೂರಮಾಡಿರಿ.


ದೇವರಿಂದ ಬರುವ ಜ್ಞಾನವಾದರೋ ಮೊಟ್ಟಮೊದಲನೆಯದಾಗಿ ಪವಿತ್ರವಾದುದು. ಅದು ಶಾಂತಿಸಮಾಧಾನ ಉಳ್ಳದ್ದು. ಸಹನೆ ಸಂಯಮವುಳ್ಳದ್ದು, ನ್ಯಾಯಸಮ್ಮತವಾದದ್ದು, ದಯೆದಾಕ್ಷಿಣ್ಯಗಳಿಂದಲೂ ಸತ್ಕಾರ್ಯಗಳಿಂದಲೂ ಫಲಭರಿತವಾದದ್ದು. ವಂಚನೆಯಾಗಲಿ, ಚಂಚಲತೆಯಾಗಲಿ ಅದರಲ್ಲಿ ಇರುವುದಿಲ್ಲ.


ಯಾವಾಗಲೂ ದೀನದಯಾಳತೆ, ವಿನಯಶೀಲತೆ ಹಾಗೂ ಶಾಂತಿಸಮಾಧಾನವುಳ್ಳವರಾಗಿರಿ. ಪರಸ್ಪರ ಪ್ರೀತಿಯಿಂದಲೂ ಸಹನೆಯಿಂದಲೂ ವರ್ತಿಸಿರಿ.


:ಸತ್ಯಾನುಸಾರ ನ್ಯಾಯತೀರಿಸಿರಿ.


ನೀವು ದೇವರಿಂದ ಆಯ್ಕೆಯಾದವರು. ದೇವರಿಗೆ ಪ್ರಿಯವಾದವರು. ದೇವರ ಸ್ವಂತಜನರು. ಹೀಗಿರಲಾಗಿ ಕನಿಕರ, ದಯೆ, ದೀನತೆ, ವಿನಯಶೀಲತೆ, ಶಾಂತಿ, ಸಹನೆ ಎಂಬ ಸದ್ಗುಣಗಳೇ ನಿಮ್ಮ ಆಭರಣಗಳಾಗಿರಲಿ.


ಒಂದು ಅಂಗಕ್ಕೆ ನೋವಾದರೆ, ಎಲ್ಲಾ ಅಂಗಗಳೂ ಅದರೊಂದಿಗೆ ನೋವನ್ನು ಅನುಭವಿಸುತ್ತವೆ. ಒಂದು ಅಂಗಕ್ಕೆ ನಲಿವಾದರೆ, ಮಿಕ್ಕೆಲ್ಲಾ ಅಂಗಗಳು ಅದರೊಡನೆ ಸೇರಿ ನಲಿದಾಡುತ್ತವೆ.


ನಾನು ನಿನಗೆ ದಯೆತೋರಿಸಿದಂತೆ ನೀನೂ ನಿನ್ನ ಜೊತೆಗಾರನಿಗೆ ದಯೆತೋರಿಸಬೇಕಿತ್ತು ಅಲ್ಲವೇ?’ ಎಂದು ಸಿಟ್ಟುಗೊಂಡ.


ನಾವು ನಮ್ಮ ಸಹೋದರರನ್ನು ಪ್ರೀತಿಸುವುದರಿಂದ ಸಾವಿನಿಂದ ಜೀವಕ್ಕೆ ಸಾಗಿದ್ದೇವೆಂದು ತಿಳಿದಿದ್ದೇವೆ. ಪ್ರೀತಿಸದೆ ಇರುವವನು ಸಾವಿನಲ್ಲೇ ನೆಲೆಸಿರುತ್ತಾನೆ.


ಸಹೋದರರೇ, ನಮ್ಮ ಪ್ರಭು ಯೇಸುಕ್ರಿಸ್ತರ ಹೆಸರಿನಲ್ಲಿ ನಾನು ಕೇಳಿಕೊಳ್ಳುವುದೇನೆಂದರೆ: ವಾದವಿವಾದವಿಲ್ಲದೆ, ಭಿನ್ನಭೇದಗಳಿಲ್ಲದೆ ಒಂದೇ ಮನಸ್ಸಿನಿಂದಲೂ ಒಂದೇ ಉದ್ದೇಶದಿಂದಲೂ ನೀವು ಐಕಮತ್ಯದಿಂದ ಬಾಳಿರಿ.


ಭಕ್ತವಿಶ್ವಾಸಿಗಳು ಒಗ್ಗಟ್ಟಿನಿಂದಲೂ ಒಮ್ಮನಸ್ಸಿನಿಂದಲೂ ಬಾಳುತ್ತಿದ್ದರು. ಯಾರೂ ತಮ್ಮ ಸೊತ್ತನ್ನು ತನ್ನದೇ ಎಂದು ಭಾವಿಸದೆ ಹುದುವಾಗಿ ಹಂಚಿಕೊಳ್ಳುತ್ತಿದ್ದರು.


ಅಂತೆಯೇ ಯುವಜನರೇ, ನೀವು ಹಿರಿಯರಿಗೆ ವಿಧೇಯರಾಗಿ ನಡೆದುಕೊಳ್ಳಿ. ನೀವೆಲ್ಲರೂ ದೀನಮನೋಭಾವನೆಯನ್ನು ಧರಿಸಿಕೊಂಡು ಒಬ್ಬರಿಗೊಬ್ಬರು ಸೇವೆಮಾಡಿ. “ಗರ್ವಿಷ್ಠರನ್ನು ದೇವರು ವಿರೋಧಿಸುತ್ತಾರೆ. ನಮ್ರರಿಗಾದರೋ ಅವರು ದಯೆತೋರುತ್ತಾರೆ,” ಎಂದು ಪವಿತ್ರಗ್ರಂಥದಲ್ಲಿ ಲಿಖಿತವಾಗಿದೆ.


ಸೋದರ ಪ್ರೀತಿಯಲ್ಲಿ ನೆಲೆಯಾಗಿ ನಿಲ್ಲಿರಿ.


ಈ ನಿಮ್ಮ ಸದ್ಭಕ್ತಿಗೆ ಸೋದರ ಸ್ನೇಹವನ್ನು, ಸೋದರ ಸ್ನೇಹಕ್ಕೆ ಪ್ರೀತಿಯನ್ನು ಬೆರೆಸಿರಿ.


ಸರ್ವರನ್ನೂ ಸನ್ಮಾನಿಸಿರಿ, ಸಹೋದರರನ್ನು ಸ್ನೇಹಿಸಿರಿ, ದೇವರಲ್ಲಿ ಭಯಭಕ್ತಿ ಇಡಿ, ದೇಶಾಧಿಕಾರಿಗಳಿಗೆ ಗೌರವ ನೀಡಿ.


ತಂದೆ ಕರುಣೆ ತೋರಿಸುವಂತೆ ಮಕ್ಕಳಿಗೆ I ಕನಿಕರಿಸುವನಾತ ತನಗೆ ಅಂಜುವವರಿಗೆ II


ತಾಳಿದವನು ಬಾಳಿಯಾನು ಎಂದು ಹೇಳುತ್ತೇವಲ್ಲವೇ? ಯೋಬನ ತಾಳ್ಮೆಯನ್ನು ಕುರಿತು ನೀವು ಕೇಳಿದ್ದೀರಿ. ಅಂತ್ಯದಲ್ಲಿ ಆತನಿಗೆ ಸರ್ವೇಶ್ವರ ದಯಪಾಲಿಸಿದ್ದನ್ನು ಬಲ್ಲಿರಿ. ದೇವರ ದಯೆ ಅನಂತ, ಅವರ ಅನುಕಂಪ ಅಪಾರ.


ದಯೆತೋರದವನಿಗೆ, ದಯೆದಾಕ್ಷಿಣ್ಯವಿಲ್ಲದ ನ್ಯಾಯತೀರ್ಪು ಕಾದಿರುತ್ತದೆ. ನ್ಯಾಯಕ್ಕೂ ಮಿಗಿಲಾಗಿ ವಿಜೃಂಭಿಸುವುದು ದಯೆಯೇ.


ಅಂತೂ, ಇದುವರೆಗೆ ನಾವು ಎಷ್ಟೇ ಮುಂದುವರೆದಿದ್ದರೂ ಅದೇ ಮಾರ್ಗದಲ್ಲಿ ಸಾಗೋಣ.


ಆ ಸ್ಥೈರಣೆ ಮತ್ತು ಉತ್ತೇಜನದ ಮೂಲವಾಗಿರುವ ದೇವರು, ನೀವೆಲ್ಲರು ಕ್ರಿಸ್ತಯೇಸುವನ್ನು ಅನುಸರಿಸುತ್ತಾ ಒಮ್ಮನಸ್ಸಿನಿಂದ ಬಾಳುವಂತೆ ಮಾಡಲಿ.


ಆ ದ್ವೀಪದ ಮುಖ್ಯಸ್ಥನಾದ ಪೊಪ್ಲಿಯನ ಹೊಲಗದ್ದೆಗಳು ನಾವಿದ್ದ ಸ್ಥಳದ ಪಕ್ಕದಲ್ಲೇ ಇದ್ದವು. ಅವನು ನಮ್ಮನ್ನು ಸ್ವಾಗತಿಸಿ ಮೂರು ದಿನಗಳವರೆಗೆ ಆದರದಿಂದ ಸತ್ಕರಿಸಿದನು.


ಮಾರನೆಯ ದಿನ ನಾವು ಸಿದೋನಿಗೆ ಆಗಮಿಸಿದೆವು. ಪೌಲನು ತನ್ನ ಗೆಳೆಯರನ್ನು ಸಂದರ್ಶಿಸುವುದಕ್ಕೂ ಅವರಿಂದ ತನಗೆ ಅಗತ್ಯವಿದ್ದುದನ್ನು ಪಡೆಯುವುದಕ್ಕೂ ಜೂಲಿಯಸನು ಆದರದಿಂದ ಅನುಮತಿಯನ್ನು ಕೊಟ್ಟನು.


ಪಂಚಾಶತ್ತಮ ಹಬ್ಬದ ದಿನ ಭಕ್ತವಿಶ್ವಾಸಿಗಳೆಲ್ಲರೂ ಒಂದು ಸ್ಥಳದಲ್ಲಿ ಸಭೆಸೇರಿದ್ದರು.


ಬಡ್ಡಿಬಾಕಿಗಳಿಂದ ಬೆಳೆದ ಆಸ್ತಿ, ಬಡವರಲ್ಲಿ ಕನಿಕರವುಳ್ಳವನಿಗೆ ನಿಧಿ.


ಆದರೆ ಆ ಮಾರ್ಗವಾಗಿ ಪ್ರಯಾಣ ಮಾಡುತ್ತಿದ್ದ ಒಬ್ಬ ಸಮಾರಿಯದವನು ಅಲ್ಲಿಗೆ ಬಂದಾಗ, ಅವನನ್ನು ಕಂಡು ಕನಿಕರಪಟ್ಟು,


ಪರಸ್ಪರ ಕರುಣೆಯಿಂದಲೂ ಕನಿಕರದಿಂದಲೂ ವರ್ತಿಸಿರಿ. ಯೇಸುಕ್ರಿಸ್ತರಲ್ಲಿ ದೇವರು ನಿಮ್ಮನ್ನು ಕ್ಷಮಿಸಿದಂತೆಯೇ, ನೀವು ಸಹ ಒಬ್ಬರನ್ನೊಬ್ಬರು ಕ್ಷಮಿಸಿರಿ.


ಸ್ವಾರ್ಥಸಾಧನೆಗಾಗಲಿ, ಡಂಭಾಚಾರಕ್ಕಾಗಲಿ ಏನನ್ನೂ ಮಾಡಬೇಡಿ. ಪರಸ್ಪರ ನಮ್ರತೆಯಿಂದ ನಡೆದುಕೊಳ್ಳಿ; ಇತರರು ನಿಮಗಿಂತಲೂ ಶ್ರೇಷ್ಠರೆಂದು ಪರಿಗಣಿಸಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು