1 ಪೇತ್ರನು 4:11 - ಕನ್ನಡ ಸತ್ಯವೇದವು C.L. Bible (BSI)11 ಬೋಧಿಸುವ ವರವನ್ನು ಪಡೆದವನು ದೇವರ ವಾಕ್ಯವನ್ನು ಬೋಧಿಸುವವನಂತೆ ಬೋಧನೆಮಾಡಲಿ. ಸೇವೆಮಾಡುವ ವರವನ್ನು ಪಡೆದವನು, ದೇವರಿಂದ ಶಕ್ತಿಯನ್ನು ಪಡೆದವನಂತೆ ಸೇವೆಮಾಡಲಿ. ಇದರಿಂದ ಯೇಸುಕ್ರಿಸ್ತರ ಮುಖಾಂತರ ಎಲ್ಲದರಲ್ಲಿಯೂ ದೇವರಿಗೆ ಸ್ತುತಿಯುಂಟಾಗುವುದು. ಅವರಿಗೆ ಸದಾಕಾಲ ಮಹಿಮೆಯೂ ಸರ್ವಾಧಿಕಾರವೂ ಸಲ್ಲಲಿ. ಆಮೆನ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಒಬ್ಬನು ಬೋಧಿಸುವವನಾದರೆ ದೈವೋಕ್ತಿಗಳನ್ನು ನುಡಿಯುವವನಾಗಿ ಬೋಧಿಸಲಿ. ಒಬ್ಬನು ಸೇವೆ ಮಾಡುವವನಾದರೆ ದೇವರು ಕೊಡುವ ಶಕ್ತಿಗನುಗುಣವಾಗಿ ಮಾಡಲಿ. ಇವೆಲ್ಲವುಗಳಿಂದ ಯೇಸು ಕ್ರಿಸ್ತನ ಮೂಲಕ ದೇವರಿಗೆ ಸ್ತೋತ್ರ ಉಂಟಾಗುವುದು. ಯೇಸು ಕ್ರಿಸ್ತನಿಗೆ ಅಧಿಪತ್ಯವೂ ಮತ್ತು ಘನವೂ ಯುಗಯುಗಾಂತರಗಳಲ್ಲಿಯೂ ಇರುವವು ಆಮೆನ್. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಒಬ್ಬನು ಬೋಧಿಸುವವನಾದರೆ ದೈವೋಕ್ತಿಗಳನ್ನು ನುಡಿಯುವವನಾಗಿ ಬೋಧಿಸಲಿ. ಒಬ್ಬನು ಸಭೆಯ ಸೇವೆ ಮಾಡುವವನಾದರೆ ದೇವರಿಂದ ಶಕ್ತಿಯನ್ನು ಹೊಂದಿದವನಾಗಿ ಮಾಡಲಿ. ಇದರಿಂದ ಎಲ್ಲಾದರಲ್ಲಿ ಯೇಸು ಕ್ರಿಸ್ತನ ಮೂಲಕ ದೇವರಿಗೆ ಸ್ತೋತ್ರ ಉಂಟಾಗುವದು. ಯೇಸು ಕ್ರಿಸ್ತನಿಗೆ ಆಧಿಪತ್ಯವೂ ಘನವೂ ಯುಗಯುಗಾಂತರಗಳಲ್ಲಿಯೂ ಇರುವವು. ಆಮೆನ್. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ಬೋಧಿಸುವವನು ದೇವರ ನುಡಿಗಳನ್ನೇ ಬೋಧಿಸಲಿ. ಸೇವೆ ಮಾಡುವವನು ದೇವರೇ ದಯಪಾಲಿಸಿದ ಶಕ್ತಿಯಿಂದ ಸೇವೆ ಮಾಡಲಿ. ನೀವು ಹೀಗೆ ಮಾಡಿದರೆ, ನೀವು ಮಾಡುವ ಪ್ರತಿಯೊಂದರಲ್ಲೂ ಯೇಸು ಕ್ರಿಸ್ತನ ಮೂಲಕ ದೇವರು ಸ್ತುತಿಸಲ್ಪಡುವನು. ಅಧಿಕಾರವೂ ಮಹಿಮೆಯೂ ಯುಗಯುಗಾಂತರಗಳಲ್ಲಿ ಆತನಿಗೆ ಸೇರಿದವುಗಳಾಗಿವೆ. ಆಮೆನ್. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಒಬ್ಬನು ಬೋಧಿಸುವವನಾದರೆ ದೇವರ ವಾಕ್ಯವನ್ನು ನುಡಿಯುವವನಾಗಿ ಬೋಧಿಸಲಿ. ಒಬ್ಬನು ಸೇವೆ ಮಾಡುವವನಾದರೆ ದೇವರಿಂದ ಶಕ್ತಿಯನ್ನು ಹೊಂದಿದವನಾಗಿ ಮಾಡಲಿ. ಇದರಿಂದ ಎಲ್ಲದರಲ್ಲಿ ಕ್ರಿಸ್ತ ಯೇಸುವಿನ ಮೂಲಕ ದೇವರಿಗೆ ಮಹಿಮೆಯೂ ಸ್ತೋತ್ರವೂ ಅಧಿಪತ್ಯವೂ ಯುಗಯುಗಾಂತರಗಳಲ್ಲಿ ಇರಲಿ. ಆಮೆನ್. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್11 ಶಿಕಾಪಾ ಕರ್ತಲೊ ದೆವಾಚಿ ಗೊಸ್ಟಿಯಾಚ್ ಶಿಕ್ವುಂದಿತ್, ಸೆವಾ ಕರ್ತಲೊ ಮಾನುಸ್ ದೆವಾನ್ ದಯಾ ಕರುನ್ ದಿಲ್ಲ್ಯಾ ಬಳಾವೈನಾ ಸೆವಾ ಕರುಂದಿತ್, ತುಮಿ ಅಸೆ ಕರ್ಲ್ಯಾರ್ ತುಮ್ಚ್ಯಾ ಹರ್ ಎಕ್ ಕಾಮಾತ್ನಿ ಬಿ ಜೆಜುಕ್ರಿಸ್ತಾ ವೈನಾ ದೆವಾಕ್ ಹೊಗ್ಳಾಪ್ ಹೊತಾ, ಅಧಿಕಾರ್ ಅನಿ ಮಹಿಮಾ ಸದಾ ಸರ್ವತಾಕ್ ತೆಜೆಚ್ ಹೊಂವ್ದಿ ಆಮೆನ್. ಅಧ್ಯಾಯವನ್ನು ನೋಡಿ |