Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೇತ್ರನು 4:17 - ಕನ್ನಡ ಸತ್ಯವೇದವು C.L. Bible (BSI)

17 ನ್ಯಾಯತೀರ್ಪಿನ ಕಾಲವು ಬಂದಿದೆ. ಮೊತ್ತಮೊದಲು ದೇವರ ಸ್ವಂತಜನರೇ ಆ ತೀರ್ಪಿಗೆ ಗುರಿಯಾಗುವರು. ದೇವಜನರಾದ ನಾವೇ ಅದಕ್ಕೆ ಮೊದಲು ಒಳಗಾಗುವುದಾದರೆ ದೇವರ ಶುಭಸಂದೇಶದಲ್ಲಿ ವಿಶ್ವಾಸವಿಡದವರ ಗತಿಯಾದರೂ ಏನು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ನ್ಯಾಯವಿಚಾರಣೆಯ ಸಮಯ ಬಂದಿದೆ. ಆ ವಿಚಾರಣೆಯು ದೇವರ ಮನೆಯಲ್ಲಿಯೇ ಪ್ರಾರಂಭವಾಗಿದೆಯಲ್ಲಾ. ಅದು ನಮ್ಮಲ್ಲಿ ಪ್ರಾರಂಭವಾಗುವುದಾದರೆ, ದೇವರ ಸುವಾರ್ತೆಯನ್ನು ನಂಬಲೊಲ್ಲದವರ ಅಂತ್ಯ ಹೇಗಿರಬಹುದು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ನ್ಯಾಯವಿಚಾರಣೆಯ ಸಮಯ ಬಂದದೆ; ಆ ವಿಚಾರಣೆಯು ದೇವರ ಮನೆಯಲ್ಲಿಯೇ ಪ್ರಾರಂಭವಾಯಿತಲ್ಲಾ. ಅದು ನಮ್ಮಲ್ಲಿ ಪ್ರಾರಂಭವಾಗಲು ದೇವರ ಸುವಾರ್ತೆಯನ್ನು ನಂಬಲೊಲ್ಲದವರ ಗತಿ ಏನಾಗಬಹುದು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ನಿಮ್ಮ ನ್ಯಾಯನಿರ್ಣಯದ ಕಾಲ ಬಂದಿದೆ. ಅದು ದೇವರ ಕುಟುಂಬದಿಂದಲೇ ಆರಂಭವಾಗುವುದು. ನಮ್ಮಲ್ಲಿಯೇ ಅದು ಆರಂಭವಾದರೆ, ದೇವರ ಸುವಾರ್ತೆಗೆ ವಿಧೇಯರಾಗದ ಜನರಿಗೆ ಏನಾಗಬಹುದು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಏಕೆಂದರೆ ದೇವರ ಮನೆಯಲ್ಲಿ ಪ್ರಾರಂಭವಾಗತಕ್ಕ ನ್ಯಾಯತೀರ್ಪಿನ ಸಮಯವು ಬಂದಿದೆ. ಅದು ಮೊದಲು ನಮ್ಮಲ್ಲಿ ಪ್ರಾರಂಭವಾದರೆ ದೇವರ ಸುವಾರ್ತೆಗೆ ಅವಿಧೇಯರಾದವರ ಅಂತ್ಯವು ಏನಾಗಿರಬಹುದು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

17 ಕಶ್ಯಾಕ್ ಮಟ್ಲ್ಯಾರ್, ಝಡ್ತಿಚೊ ಯೆಳ್ ಶುರು ಹೊಲಾ ದೆವಾಚ್ಯಾ ಗುಡಿತ್ ಲೊಕಾಕ್ನಿ ಅದ್ದಿ ಝಡ್ತಿ ಕರುನ್ ಹೊತಾ, ಅಮ್ಚ್ಯಾಕ್ನಾ ತೆ ಶುರು ಹೊಲ್ಯಾರ್ ದೆವಾಚಿ ಬರಿ ಖಬರ್ ಮಾನಿನಸಲ್ಲ್ಯಾ ಲೊಕಾಕ್ನಿ ಕಾಯ್ ಹೊತಾ ಆಸಿಲ್?

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೇತ್ರನು 4:17
26 ತಿಳಿವುಗಳ ಹೋಲಿಕೆ  

ಇಗೋ, ನನ್ನ ಹೆಸರುಗೊಂಡಿರುವ ನಗರದಲ್ಲಿ ಬಾಧಿಸಲು ಪ್ರಾರಂಭಿಸುತ್ತೇನೆ. ನೀವು ಆ ದಂಡನೆಗೆ ತಪ್ಪಿಸಿಕೊಳ್ಳುವಿರೊ? ಆಗುವುದೇ ಇಲ್ಲ. ಏಕೆಂದರೆ ಭೂನಿವಾಸಿಗಳೆಲ್ಲರಿಗೆ ವಿರುದ್ಧವಾಗಿ ಖಡ್ಗವನ್ನು ಬರಮಾಡುವೆನು. ಇದು ಸರ್ವಶಕ್ತ ಸರ್ವೇಶ್ವರನ ನುಡಿ.’


ವೃದ್ಧ, ಯುವಕ, ಯುವತಿ, ಮಹಿಳೆ, ಬಾಲಕ ಎನ್ನದೆ ಸಕಲರನ್ನೂ ಸಂಹಾರ ಮಾಡಿಬಿಡಿ; ಆದರೆ ಆ ಗುರುತುಳ್ಳವರಲ್ಲಿ ಯಾರನ್ನೂ ಮುಟ್ಟಬೇಡಿ; ನನ್ನ ಆಲಯದಲ್ಲಿಯೇ ಪ್ರಾರಂಭಮಾಡಿ,” ಎಂದು ನನಗೆ ಕೇಳಿಸುವಂತೆ ಅಪ್ಪಣೆಮಾಡಿದರು. ಆಗ ದೇವಾಲಯದ ಮುಂದೆ ಇದ್ದ ಹಿರಿಯರನ್ನು ಮೊದಲುಗೊಂಡು ಹತಿಸತೊಡಗಿದರು.


“ಜನರು ಎಡವಿಬೀಳುವ ಕಲ್ಲಿದು; ಅವರು ಮುಗ್ಗರಿಸಿ ಬೀಳುವ ಬಂಡೆಯಿದು.” ವಿಶ್ವಾಸವಿಡದವರಿಗಾದರೋ ಮೇಲಿನ ವಾಕ್ಯಗಳು ಅನ್ವಯಿಸುತ್ತವೆ. ಜನರು ದೇವರ ವಾಕ್ಯದಲ್ಲಿ ವಿಶ್ವಾಸವಿಡದಿರುವುದರಿಂದಲೇ ಎಡವಿಬೀಳುತ್ತಾರೆ. ಅವರ ಬಗ್ಗೆ ದೈವಸಂಕಲ್ಪವೂ ಇದೇ ಆಗಿತ್ತು.


ಯೆಹೂದ್ಯರನ್ನು ಮೊದಲ್ಗೊಂಡು, ಇತರರಿಗೂ ಪಾಪಕೃತ್ಯಗಳನ್ನು ಮಾಡುವ ಪ್ರತಿಯೊಬ್ಬರಿಗೂ ಕಷ್ಟಸಂಕಟಗಳು ಕಾದಿರುತ್ತವೆ.


ಹಸಿಮರಕ್ಕೇ ಇಷ್ಟೆಲ್ಲಾ ಮಾಡಿದರೆ ಒಣಮರಕ್ಕಾಗುವ ಗತಿಯಾದರೂ ಏನು!” ಎಂದರು.


“ಮಾಟಗಾರರಿಗೆ, ಸೂಳೆಗಾರರಿಗೆ, ಸುಳ್ಳು ಹೇಳುವವರಿಗೆ, ಕೂಲಿಹಿಡಿದು ಕಾರ್ಮಿಕರನ್ನು ಮೋಸಗೊಳಿಸುವವರಿಗೆ, ವಿಧವೆಯರನ್ನು ಮತ್ತು ಅನಾಥರನ್ನು ಬಾಧಿಸುವವರಿಗೆ, ಪ್ರವಾಸಿಗಳಿಗೆ ಅನ್ಯಾಯ ಮಾಡುವವರಿಗೆ - ಅಂತೂ ನನಗಂಜದ ಎಲ್ಲರಿಗೆ, ಬೇಗನೆ ನ್ಯಾಯತೀರಿಸಿ, ದಂಡನೆ ವಿಧಿಸಲು ನಾನು ಬರುವೆನು,” ಇದು ಸೇನಾಧೀಶ್ವರ ಸರ್ವೇಶ್ವರಸ್ವಾಮಿಯ ನುಡಿ.


“ಜಗದ ಜನಾಂಗಗಳಲ್ಲಿ ನನಗೆ ಆಪ್ತರಾದವರೆಂದರೆ ನೀವು. ಆದಕಾರಣ ನೀವು ಮಾಡಿರುವ ಎಲ್ಲಾ ಪಾಪಗಳಿಗೆ ತಕ್ಕ ಪ್ರಾಯಶ್ಚಿತ್ತವನ್ನು ಸವಿಯುವಂತೆ ಮಾಡುವೆನು.”


ಆದರೆ ಸರ್ವೇಶ್ವರನಾದ ನಾನು ಸಿಯೋನ್ ಪರ್ವತದಲ್ಲೂ ಜೆರುಸಲೇಮಿನಲ್ಲೂ ನನ್ನ ಗುರಿಯನ್ನು ಸಾಧಿಸಿದ ಮೇಲೆ ಆ ಅಸ್ಸೀರಿಯದ ಅರಸನನ್ನು ಅವನ ದುರಹಂಕಾರಕ್ಕಾಗಿ, ಗರ್ವದ ಭಾವನೆಗಳಿಗಾಗಿ ಸರಿಯಾಗಿ ದಂಡಿಸುವೆನು.


ಹೀಗೆ, ಅವರು ಸ್ವತಃ ಪರಿಪೂರ್ಣರಾಗಿ ತಮಗೆ ವಿಧೇಯರಾಗುವ ಎಲ್ಲರಿಗೂ ಶಾಶ್ವತ ಜೀವೋದ್ಧಾರಕ್ಕೆ ಕಾರಣರಾದರು.


ಸೂಚಕಕಾರ್ಯಗಳಿಂದಲೂ ಅದ್ಭುತಕಾರ್ಯಗಳಿಂದಲೂ ಹಲವಾರು ಮಹತ್ಕಾರ್ಯಗಳಿಂದಲೂ ಮತ್ತು ತಮ್ಮ ಚಿತ್ತಾನುಸಾರ ಅನುಗ್ರಹಿಸಿದ ಪವಿತ್ರಾತ್ಮ ಅವರ ವರದಾನಗಳಿಂದಲೂ ದೇವರು ಆ ಪ್ರಮಾಣವನ್ನು ಪುಷ್ಟೀಕರಿಸಿದ್ದಾರೆ.


ಏಕೆಂದರೆ, ದೇವದೂತರ ಮುಖಾಂತರ ನಮ್ಮ ಪೂರ್ವಜರಿಗೆ ಕೊಡಲಾದ ಸಂದೇಶವು ಅಕ್ಷಯವಾಗಿದ್ದು ಅದನ್ನು ಮೀರಿ ಮಾಡಿದ ಪ್ರತಿಯೊಂದು ತಪ್ಪು ಮತ್ತು ಅವಿಧೇಯತೆಯು ಶಿಕ್ಷಾರ್ಹವಾಗಿದ್ದರೆ,


ಇದುವರೆಗೂ ನಿಮ್ಮ ಬದುಕಿನ ಓಟ ಚೆನ್ನಾಗಿ ಸಾಗುತ್ತಿತ್ತು. ಸತ್ಯಕ್ಕೆ ಶರಣರಾಗದಂತೆ ಈಗ ನಿಮ್ಮನ್ನು ತಡೆದವರು ಯಾರು?


ಅಬ್ರಹಾಮನು ದೇವರ ಕರೆಗೆ ಓಗೊಡುವುದಕ್ಕೂ ವಿಶ್ವಾಸವೇ ಕಾರಣವಾಗಿತ್ತು. ಆತನು ಆ ಕರೆಗನುಸಾರವಾಗಿ ತಾನು ಬಾಧ್ಯವಾಗಿ ಹೊಂದಬೇಕಾಗಿದ್ದ ನಾಡಿಗೆ ಹೊರಟನು. ತಾನು ಸೇರಬೇಕಾಗಿದ್ದ ಸ್ಥಳ ಯಾವುದೆಂದು ತಿಳಿಯದಿದ್ದರೂ ಸ್ವದೇಶವನ್ನು ಬಿಟ್ಟು ತೆರಳಿದನು.


ಎಲೈ ಮತಿಗೆಟ್ಟ ಗಲಾತಿಯರೇ, ನಿಮ್ಮನ್ನು ಮರುಳುಗೊಳಿಸಿದವರು ಯಾರು? ಯೇಸುಕ್ರಿಸ್ತರು ಶಿಲುಬೆಯ ಮೇಲೆ ಪ್ರಾಣಾರ್ಪಣೆ ಮಾಡಿದ್ದನ್ನು ನಿಮ್ಮ ಕಣ್ಣೆದುರಿಗೇ ಚಿತ್ರಿತಗೊಳಿಸಲಿಲ್ಲವೆ?


ಸರ್ವೇಶ್ವರ ಇಂತೆನ್ನುತ್ತಾರೆ: “ಕಷ್ಟವೆಂಬ ಕೊಡದಿಂದ ಕುಡಿಸಲು ಯಾರ ಪಾಲಿಗೆ ಬರಲಿಲ್ಲವೋ ಅಂಥವರೇ ಕುಡಿಯಬೇಕಾಗಿರುವಲ್ಲಿ ನೀನು ಅದರಿಂದ ತಪ್ಪಿಸಿಕೊಳ್ಳುವೆಯಾ? ಇಲ್ಲ, ಅದು ಸಾಧ್ಯವಿಲ್ಲ, ನೀನು ಕುಡಿದೇ ತೀರಬೇಕು.


ದೇವರಿಗೆ ಅತ್ಯಂತ ಪ್ರಿಯರು ಹಾಗು ದೇವಜನರಾಗಲು ಕರೆಹೊಂದಿದವರು ಆದ ರೋಮ್‍ನಗರ ನಿವಾಸಿಗಳೆಲ್ಲರಿಗೆ: ಕ್ರಿಸ್ತಯೇಸುವಿನ ದಾಸನೂ ಪ್ರೇಷಿತನಾಗಲು ಕರೆಹೊಂದಿದವನೂ ದೇವರ ಶುಭಸಂದೇಶವನ್ನು ಸಾರಲು ನೇಮಕಗೊಂಡವನೂ ಆದ ಪೌಲನು ಬರೆಯುವ ಪತ್ರ: ನಮ್ಮ ತಂದೆಯಾದ ದೇವರು ಹಾಗು ಪ್ರಭುವಾದ ಯೇಸುಕ್ರಿಸ್ತರು ನಿಮಗೆ ಕೃಪಾಶೀರ್ವಾದವನ್ನೂ ಶಾಂತಿಸಮಾಧಾನವನ್ನೂ ಅನುಗ್ರಹಿಸಲಿ.


ಎಂದೇ ಸಮಯಸಂದರ್ಭಗಳು ಇರುವಾಗಲೇ ಸರ್ವರಿಗೂ ಉಪಕಾರಮಾಡೋಣ. ಅದರಲ್ಲೂ ಮುಖ್ಯವಾಗಿ, ಒಂದೇ ಕುಟುಂಬದವರಂತೆ ಇರುವ ಕ್ರೈಸ್ತವಿಶ್ವಾಸಿಗಳಿಗೆ ಉಪಕಾರ ಮಾಡೋಣ.


ಒಂದು ವೇಳೆ ನಾನು ಬರುವುದು ತಡವಾದರೆ, ದೇವರ ಮಂದಿರದಲ್ಲಿ ಅಂದರೆ, ಜೀವಸ್ವರೂಪಿಯಾದ ದೇವರ ಸಭೆಯಲ್ಲಿ, ಹೇಗೆ ನಡೆದುಕೊಳ್ಳಬೇಕು ಎಂಬುದು ನಿನಗೆ ತಿಳಿಯಲೆಂದು ಇದನ್ನು ಬರೆದಿದ್ದೇನೆ. ಸಭೆಯು ಸತ್ಯಕ್ಕೆ ಸ್ತಂಭವೂ ಅಸ್ತಿವಾರವೂ ಆಗಿದೆ.


ಕ್ರಿಸ್ತಯೇಸುವಾದರೋ, ದೇವರ ಮನೆಯಲ್ಲಿ ಅಧಿಕಾರ ಹೊಂದಿದ ಪ್ರಾಮಾಣಿಕ ಪುತ್ರನಾಗಿದ್ದಾರೆ. ನಾವು ನಿರೀಕ್ಷಿಸುತ್ತಿರುವ ಭಾಗ್ಯದ ಬಗ್ಗೆ ನಮಗಿರುವ ಶ್ರದ್ಧೆಯನ್ನೂ ಶೌರ್ಯವನ್ನೂ ಕಳೆದುಕೊಳ್ಳದೆ ದೃಢವಾಗಿದ್ದರೆ, ನಾವೇ ಅವರ ಮನೆಯಾಗಿರುತ್ತೇವೆ.


ನೀವೂ ಸಹ ಸಜೀವ ಶಿಲೆಗಳಾಗಿದ್ದೀರಿ; ಆಧ್ಯಾತ್ಮಿಕ ದೇವಾಲಯವನ್ನು ನಿರ್ಮಿಸಲು ನಿಮ್ಮನ್ನೇ ಅರ್ಪಿಸಿಕೊಳ್ಳಿ. ಆ ದೇವಾಲಯದಲ್ಲೇ ಯೇಸುಕ್ರಿಸ್ತರ ಮುಖಾಂತರ ದೇವರಿಗೆ ಮೆಚ್ಚುಗೆಯಾಗಿರುವ ಆಧ್ಯಾತ್ಮಿಕ ಬಲಿಗಳನ್ನು ಸಮರ್ಪಿಸುವ ಪವಿತ್ರ ಯಾಜಕವರ್ಗದವರು ನೀವಾಗಿರುವಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು