Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೇತ್ರನು 4:18 - ಕನ್ನಡ ಸತ್ಯವೇದವು C.L. Bible (BSI)

18 “ಸಜ್ಜನರೇ ಸದ್ಗತಿಯನ್ನು ಹೊಂದುವುದು ಕಷ್ಟವಾಗುವುದಾದರೆ ಇನ್ನು ಭಕ್ತಿಹೀನರೂ ಪಾಪಿಗಳೂ ಆದವರ ಪಾಡೇನು?” ಎಂದು ಪವಿತ್ರಗ್ರಂಥದಲ್ಲೇ ಬರೆದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ನೀತಿವಂತನೇ ರಕ್ಷಣೆ ಹೊಂದುವುದು ಕಷ್ಟವಾದರೆ, ಭಕ್ತಿಹೀನನೂ ಮತ್ತು ಪಾಪಿಷ್ಠನೂ ರಕ್ಷಣೆ ಹೊಂದುವುದು ಹೇಗೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ನೀತಿವಂತನೇ ರಕ್ಷಣೆಹೊಂದುವದು ಕಷ್ಟವಾದರೆ ಭಕ್ತಿಹೀನನೂ ಪಾಪಿಷ್ಠನೂ ನಿಲ್ಲುವದು ಹೇಗೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 “ನೀತಿವಂತನೇ ರಕ್ಷಣೆ ಹೊಂದಲು ಕಷ್ಟವಾದರೆ, ಭಕ್ತಿಹೀನನ ಮತ್ತು ಪಾಪಿಷ್ಠನ ಗತಿಯೇನು?”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಮತ್ತು, “ನೀತಿವಂತನೇ ರಕ್ಷಣೆ ಹೊಂದುವುದು ಕಷ್ಟವಾದರೆ, ಭಕ್ತಿಹೀನನೂ ಪಾಪಿಷ್ಠನೂ ಆಗಿರುವವನ ಗತಿ ಏನು?”

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

18 ನಿತಿವಂತಾಕ್ನಿಚ್ ರಾಕ್ವನ್ ಘೆತಲೆ ತರಾಸ್ ಹೊಲ್ಯಾರ್ ದೆವಸ್ಪಾನ್ ನಸಲ್ಲ್ಯಾ ಅನಿ ಪಾಪಿಸ್ಟ್ ಮಾನ್ಸಾಂಚಿ ಗತ್ ಕಾಯ್?

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೇತ್ರನು 4:18
27 ತಿಳಿವುಗಳ ಹೋಲಿಕೆ  

ಸಜ್ಜನರೇ ಜಗದೊಳು ತಮ್ಮ ಕರ್ಮದ ಫಲವನ್ನು ಅನುಭವಿಸುವಲ್ಲಿ; ಹೇಳಬೇಕೆ ಇನ್ನು ದುರ್ಜನರ, ಹಾಗೂ ಪಾಪಿಗಳ ಪರಿಸ್ಥಿತಿ?


ಆದರೆ ಶಿಷ್ಟನು ತನ್ನ ಶಿಷ್ಟತನವನ್ನು ಬಿಟ್ಟು, ಅಧರ್ಮಮಾಡಿ, ದುಷ್ಟನು ನಡೆಸುವ ದುರಾಚಾರಗಳನ್ನೆಲ್ಲಾ ನಡೆಸಿದರೆ, ಅವನು ಜೀವಿಸುವನೇ? ಅವನು ಮಾಡಿದ ಯಾವ ಸುಕೃತ್ಯವೂ ಅವನ ಲೆಕ್ಕಕ್ಕೆ ಸೇರಿಸಲ್ಪಡದು, ಅವನು ಮಾಡುತ್ತಿರುವ ಪಾಪಾಪರಾಧಗಳಿಂದಲೇ ಸಾಯುವನು.


ಹಸಿಮರಕ್ಕೇ ಇಷ್ಟೆಲ್ಲಾ ಮಾಡಿದರೆ ಒಣಮರಕ್ಕಾಗುವ ಗತಿಯಾದರೂ ಏನು!” ಎಂದರು.


ಭಕ್ತಿಹೀನರು ತಮಗೆ ವಿರುದ್ಧ ಮಾಡಿದ ಎಲ್ಲಾ ದುಷ್ಕೃತ್ಯಗಳನ್ನು ಮತ್ತು ಪಾಪಿಷ್ಠರು ತಮಗೆ ವಿರುದ್ಧವಾಗಿ ಆಡಿದ ಎಲ್ಲಾ ದೂಷಣೆಗಳನ್ನು ಖಂಡಿಸಲು ಬರುವರು,” ಎಂದು ಪ್ರವಾದಿಸಿದ್ದಾನೆ.


ಆದಕಾರಣ ಸ್ಥಿರವಾಗಿ ನಿಂತಿರುವೆನೆಂದು ಕೊಚ್ಚಿಕೊಳ್ಳುವವನೇ, ಕುಸಿದುಬೀಳದಂತೆ ಎಚ್ಚರಿಕೆಯಿಂದಿರು.


ಮಾನವರ ಎಲ್ಲಾ ಪಾಪಾಕ್ರಮಗಳ ಮೇಲೆ ದೇವರ ಕೋಪಾಗ್ನಿ ಸ್ವರ್ಗದಿಂದ ಎರಗುವುದೆಂದು ಪ್ರಕಟವಾಗುತ್ತಿದೆ. ಏಕೆಂದರೆ, ಅವರ ಅಕ್ರಮ ನಡತೆ ಸತ್ಯವನ್ನು ಅಡಗಿಸುತ್ತಿದೆ.


ಅಲ್ಲಿ ಭಕ್ತಾದಿಗಳನ್ನು ದೃಢಪಡಿಸಿ ವಿಶ್ವಾಸದಲ್ಲಿ ನಿಷ್ಠರಾಗಿರುವಂತೆ ಪ್ರೋತ್ಸಾಹಿಸಿದರು. ‘ಕಷ್ಟಸಂಕಟಗಳ ಮೂಲಕ ನಾವು ದೇವರ ಸಾಮ್ರಾಜ್ಯವನ್ನು ಪ್ರವೇಶಿಸಬೇಕಾಗಿದೆ’ ಎಂದು ಬೋಧಿಸಿದರು.


ಈಗಿರುವ ಭೂಮ್ಯಾಕಾಶಗಳನ್ನು ಅದೇ ವಾಕ್ಯದ ಬಲದಿಂದ ಅಗ್ನಿನಾಶಕ್ಕಾಗಿ ಕಾದಿರಿಸಲಾಗಿದೆ. ದುರ್ಜನರು ವಿನಾಶವಾಗಬೇಕಾದ ನ್ಯಾಯತೀರ್ಪಿನ ದಿನದವರೆಗೂ ಇವನ್ನು ಉಳಿಸಲಾಗಿದೆ.


ಸ್ವಸ್ಥಚಿತ್ತರಾಗಿರಿ, ಜಾಗರೂಕರಾಗಿರಿ. ಏಕೆಂದರೆ, ನಿಮ್ಮ ಶತ್ರುವಾಗಿರುವ ಸೈತಾನನು ಗರ್ಜಿಸುವ ಸಿಂಹದಂತೆ, ಯಾರನ್ನು ಕಬಳಿಸುವುದೆಂದು ಅತ್ತಿತ್ತ ಹುಡುಕಾಡುತ್ತಿರುವನು.


ಆದರೆ ನಾವಿನ್ನೂ ಪಾಪಿಗಳಾಗಿರುವಾಗಲೇ ಕ್ರಿಸ್ತಯೇಸು ನಮಗೋಸ್ಕರ ಪ್ರಾಣತ್ಯಾಗ ಮಾಡಿದರು. ಇದರಿಂದ ನಮ್ಮ ಮೇಲೆ ದೇವರಿಗಿರುವ ಪ್ರೀತಿ ಎಷ್ಟೆಂದು ವ್ಯಕ್ತವಾಗುತ್ತದೆ.


ಹಾಕುವೆನಾ ಮೂರನೇ ಭಾಗದವರನ್ನು ಬೆಂಕಿಗೆ, ಶೋಧಿಸುವೆನು ಅವರನ್ನು ಬೆಳ್ಳಿಯ ಹಾಗೆ. ಶುದ್ಧೀಕರಿಸುವೆನು ಬಂಗಾರದ ಹಾಗೆ. ಕಿವಿಗೊಡುವೆ ನನ್ನ ಹೆಸರೆತ್ತಿ ಪ್ರಾರ್ಥಿಸುವವರಿಗೆ. ಹೇಳುವೆನು, ‘ಇವರೇ ನನ್ನ ಪ್ರಜೆಯೆಂದು. ಹೇಳುವರವರು ‘ಸರ್ವೇಶ್ವರನೇ ನಮ್ಮ ದೇವ’ ಎಂದು.


ಇಗೋ, ನನ್ನ ಹೆಸರುಗೊಂಡಿರುವ ನಗರದಲ್ಲಿ ಬಾಧಿಸಲು ಪ್ರಾರಂಭಿಸುತ್ತೇನೆ. ನೀವು ಆ ದಂಡನೆಗೆ ತಪ್ಪಿಸಿಕೊಳ್ಳುವಿರೊ? ಆಗುವುದೇ ಇಲ್ಲ. ಏಕೆಂದರೆ ಭೂನಿವಾಸಿಗಳೆಲ್ಲರಿಗೆ ವಿರುದ್ಧವಾಗಿ ಖಡ್ಗವನ್ನು ಬರಮಾಡುವೆನು. ಇದು ಸರ್ವಶಕ್ತ ಸರ್ವೇಶ್ವರನ ನುಡಿ.’


ದೇವರು ತಮ್ಮ ವಿಶ್ರಾಂತಿಯ ನೆಲೆಯನ್ನು ನೀಡುವುದಾಗಿ ಮಾಡಿದ ವಾಗ್ದಾನ ಇನ್ನೂ ರದ್ದಾಗದೆ ಉಳಿದಿದೆ. ನಿಮ್ಮಲ್ಲಿ ಯಾರೂ ಆ ವಾಗ್ದಾನದ ಫಲವನ್ನು ಪಡೆಯದೆ ಇರಬಾರದು. ಎಂತಲೇ, ನಾವು ಭಯಭಕ್ತಿಯಿಂದ ಬಾಳೋಣ.


ನಾವು ಪಾಪದಿಂದ ದುರ್ಬಲರಾಗಿದ್ದಾಗಲೇ ನಿಯಮಿತ ಕಾಲದಲ್ಲಿ ಕ್ರಿಸ್ತಯೇಸು ಪಾಪಿಗಳಿಗೋಸ್ಕರ ಪ್ರಾಣತ್ಯಾಗಮಾಡಿದರು.


ಸೋದೋಮಿನ ಪಟ್ಟಣದವರು ಬಹಳ ದುಷ್ಟರು; ಪ್ರಭುವಿನ ದೃಷ್ಟಿಯಲ್ಲಿ ಕಡುಪಾಪಿಗಳು.


‘ಪೌಲನೇ, ಭಯಪಡಬೇಡ. ನೀನು ಚಕ್ರವರ್ತಿಯ ಸಮ್ಮುಖದಲ್ಲಿ ನಿಲ್ಲಲೇಬೇಕಾಗಿದೆ; ಇಗೋ, ನಿನ್ನ ಸಂಗಡ ಪ್ರಯಾಣಮಾಡುವ ಎಲ್ಲರ ಪ್ರಾಣಗಳನ್ನು ದೇವರು ನಿನ್ನ ನಿಮಿತ್ತ ಉಳಿಸಿದ್ದಾರೆ,’ ಎಂದು ಅಭಯವಿತ್ತನು.


ಯೇಸುಸ್ವಾಮಿಯ ಉಪದೇಶವನ್ನು ಕೇಳಲು ಎಲ್ಲಾ ಸುಂಕದವರೂ ಪಾಪಿಗಳೂ ಬರುತ್ತಿದ್ದರು.


ಅವರು ನಿನಗೆ, ‘ಹೊರಟು ಹೋಗಿ ದುಷ್ಟರಾದ ಅಮಾಲೇಕ್ಯರೊಡನೆ ಯುದ್ಧಮಾಡಿ ಅವರೆಲ್ಲರನ್ನೂ ಸಂಪೂರ್ಣವಾಗಿ ನಾಶಮಾಡು’ ಎಂದು ಹೇಳಿದರು.


ಆಗ ಪೌಲನು ಶತಾಧಿಪತಿಯನ್ನು ಮತ್ತು ಸೈನಿಕರನ್ನು ಉದ್ದೇಶಿಸಿ, “ಈ ನಾವಿಕರು ಹಡಗಿನಲ್ಲೇ ಉಳಿಯದಿದ್ದರೆ ನಿಮ್ಮ ಪ್ರಾಣ ಉಳಿಯದು,” ಎಂದು ಎಚ್ಚರಿಸಿದನು.


ಧರ್ಮಶಾಸ್ತ್ರದ ನಿರ್ಬಂಧನೆಗಳು ಸಜ್ಜನರಿಗಲ್ಲ; ಬದಲಿಗೆ ಅಕ್ರಮಿಗಳಿಗೆ, ಅವಿಧೇಯರಿಗೆ, ಅಧರ್ಮಿಗಳಿಗೆ, ಭಕ್ತಿಹೀನರಿಗೆ, ಪಾಪಿಗಳಿಗೆ, ಅಶುದ್ಧರಿಗೆ, ಪ್ರಾಪಂಚಿಕರಿಗೆ, ಹೆತ್ತವರನ್ನು ಹತ್ಯೆಮಾಡುವವರಿಗೆ ಮತ್ತು ಕೊಲೆಗಾರರಿಗೆ.


ನಿಮ್ಮನ್ನು ವಿರೋಧಿಸಿದ ಸಜ್ಜನನನ್ನು ಖಂಡಿಸಿ ಕೊಲೆಮಾಡಿಸಿದ್ದೀರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು