Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೇತ್ರನು 4:5 - ಕನ್ನಡ ಸತ್ಯವೇದವು C.L. Bible (BSI)

5 ಜೀವಂತರಿಗೂ ಮೃತರಿಗೂ ನ್ಯಾಯತೀರಿಸಲು ಸಿದ್ಧವಾಗಿರುವ ದೇವರಿಗೆ ಅವರು ಲೆಕ್ಕಕೊಡಬೇಕಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಅವರು ಬದುಕಿರುವವರಿಗೂ ಸತ್ತವರಿಗೂ ನ್ಯಾಯತೀರಿಸುವುದಕ್ಕೆ ಸಿದ್ಧವಾಗಿರುವಾತನಿಗೆ ಉತ್ತರ ಕೊಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಅವರು ಬದುಕುವವರಿಗೂ ಸತ್ತವರಿಗೂ ನ್ಯಾಯತೀರಿಸುವದಕ್ಕೆ ಸಿದ್ಧವಾಗಿರುವಾತನಿಗೆ ಉತ್ತರಕೊಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಆದರೆ ಅವಿಶ್ವಾಸಿಗಳು ತಾವು ಮಾಡುವ ಕಾರ್ಯಗಳ ಬಗ್ಗೆ ತಾವೇ ವಿವರಣೆಯನ್ನು ನೀಡಬೇಕಾಗುತ್ತದೆ. ಜೀವಂತವಾಗಿರುವ ಮತ್ತು ಸತ್ತಿರುವ ಜನರಿಗೆ ತೀರ್ಪು ನೀಡಲು ಸಿದ್ಧನಾಗಿರುವ ಕ್ರಿಸ್ತನಿಗೆ ಅವರು ವಿವರಣೆ ನೀಡಬೇಕಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಅಂಥವರು ಬದುಕುವವರಿಗೂ ಸತ್ತವರಿಗೂ ನ್ಯಾಯತೀರಿಸುವುದಕ್ಕಾಗಿ ಸಿದ್ಧವಾಗಿರುವ ದೇವರಿಗೆ ಲೆಕ್ಕ ಕೊಡಬೇಕಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

5 ಖರೆ ವಿಶ್ವಾಸ್ ಕರಿನಸಲ್ಲಿ ಲೊಕಾ ಅಪ್ನಿ ಕರ್ತಲ್ಯಾ ಬುರ್ಶ್ಯಾ ಕಾಮಾಂಚ್ಯಾ ವಿಶಯಾತ್ ತೆನಿಚ್ ವಿವರನ್ ದಿವ್ಚೆ ಹೊತಾ, ಅನಿ ಮರಲ್ಯಾಕ್ನಿ ಅನಿ ಝಿತ್ತೆ ಹೊತ್ತ್ಯಾಕ್ನಿ ಝಡ್ತಿ ಕರುಕ್ ಇಬೆ ರ್‍ಹಾತಲ್ಯಾಚ್ಯಾ ಇದ್ರಾಕ್ ತೆನಿ ಲೆಕ್ಕ್ ದಿವ್ಚೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೇತ್ರನು 4:5
17 ತಿಳಿವುಗಳ ಹೋಲಿಕೆ  

ಸಹೋದರರೇ, ದಂಡನಾತೀರ್ಪಿಗೆ ಗುರಿ ಆಗದಂತೆ ಒಬ್ಬರ ಮೇಲೊಬ್ಬರು ಗೊಣಗುಟ್ಟಬೇಡಿ. ಇಗೋ, ನ್ಯಾಯಾಧೀಶನು ಬಾಗಿಲ ಬಳಿಯಲ್ಲೇ ನಿಂತಿದ್ದಾನೆ.


ಮಾನವರಿಗೆ ಶುಭಸಂದೇಶವನ್ನು ಬೋಧಿಸುವಂತೆಯೂ ಜೀವಂತರಿಗೂ ಹಾಗೂ ಮೃತರಿಗೂ ದೇವರೇ ಅವರನ್ನು ನ್ಯಾಯಾಧಿಪತಿಯನ್ನಾಗಿ ನೇಮಿಸಿದ್ದಾರೆಂದು ರುಜುವಾತುಪಡಿಸುವಂತೆಯೂ ನಮಗೆ ಆಜ್ಞಾಪಿಸಿದ್ದಾರೆ.


ದೇವರ ಸಮಕ್ಷಮದಲ್ಲಿ, ಮತ್ತು ಜೀವಿಸುವವರಿಗೂ ಸತ್ತವರಿಗೂ ನ್ಯಾಯತೀರ್ಪನ್ನು ಕೊಡಲು ಬರುವ ಕ್ರಿಸ್ತಯೇಸುವಿನ ಸಮಕ್ಷಮದಲ್ಲಿ, ನಾನು ಅವರ ಪ್ರತ್ಯಕ್ಷತೆಯನ್ನೂ ಸಾಮ್ರಾಜ್ಯವನ್ನೂ ಮುಂದಿಟ್ಟು ನಿನಗೆ ಆಜ್ಞಾಪಿಸುವುದೇನೆಂದರೆ:


ಏಕೆಂದರೆ, ಅವರು ಒಂದು ದಿನವನ್ನು ಗೊತ್ತುಮಾಡಿದ್ದಾರೆ; ಆ ದಿನದಂದು ತಾವು ನೇಮಿಸಿದ ಒಬ್ಬ ವ್ಯಕ್ತಿಯ ಮುಖಾಂತರ ಇಡೀ ಜಗತ್ತಿಗೆ ನ್ಯಾಯನಿರ್ಣಯ ಮಾಡುವರು. ಇದನ್ನು ಎಲ್ಲರಿಗೂ ಖಚಿತಪಡಿಸಲೆಂದೇ ಆ ವ್ಯಕ್ತಿಯನ್ನು ಮರಣದಿಂದ ಪುನರುತ್ಥಾನಗೊಳಿಸಿದ್ದಾರೆ.”


ಜನರು ತಾವಾಡುವ ಪ್ರತಿಯೊಂದು ಜೊಳ್ಳುಮಾತಿಗೂ ತೀರ್ಪಿನ ದಿನ ಲೆಕ್ಕಕೊಡಬೇಕಾಗುವುದು ಎಂಬುದು ನಿಮಗೆ ತಿಳಿದಿರಲಿ.


ಧನಿಕನು ಅವನನ್ನು ಕರೆದು, ‘ಏನಿದು, ನಿನ್ನ ವಿಷಯವಾಗಿ ನಾನು ಹೀಗೆಲ್ಲ ಕೇಳುತ್ತಾ ಇದ್ದೇನೆ? ನಿನ್ನ ಕೆಲಸದ ಲೆಕ್ಕಾಚಾರವನ್ನು ಒಪ್ಪಿಸಿಬಿಡು. ಇನ್ನು ನೀನು ಮೇಸ್ತ್ರಿ ಆಗಿರಲು ಆಗದು,’ ಎಂದ.


ಹೀಗಿರಲು ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - “ಇಸ್ರಯೇಲ್ ವಂಶದವರೇ, ನಿಮ್ಮ ನಿಮ್ಮ ನಡತೆಗೆ ತಕ್ಕ ಹಾಗೆ ನಾನು ನಿಮಗೆ ತೀರ್ಪು ನೀಡುವೆನು; ಅಧರ್ಮವು ನಿಮ್ಮನ್ನು ನಾಶಮಾಡದಂತೆ ಪಾಪಕ್ಕೆ ವಿಮುಖರಾಗಿರಿ; ನಿಮ್ಮ ಅಪರಾಧಗಳನ್ನೆಲ್ಲಾ ತೊರೆದುಬಿಡಿ.


ದೇವರು ಎಲ್ಲ ಕಾರ್ಯಗಳನ್ನು, ರಹಸ್ಯವಾದುವುಗಳನ್ನು ಕೂಡ, ಅವು ಒಳ್ಳೆಯದಾಗಿರಲಿ, ಕೆಟ್ಟದಾಗಿರಲಿ, ನ್ಯಾಯವಿಚಾರಣೆಗೆ ಗುರಿಮಾಡುವರು.


ಸಜ್ಜನರ ಮಾರ್ಗಕ್ಕಿದೆ ಪ್ರಭುವಿನ ಪಾಲನ I ದುರ್ಜನರ ಮಾರ್ಗಕ್ಕಿದೆ ಸಂಪೂರ್ಣ ವಿನಾಶನ II


ಏಕೆಂದರೆ, ಸತ್ತವರಿಗೂ ಬದುಕುವವರಿಗೂ ಪ್ರಭುವಾಗಬೇಕೆಂಬ ಉದ್ದೇಶದಿಂದಲೇ ಕ್ರಿಸ್ತಯೇಸು ಸತ್ತು ಜೀವಂತರಾದದ್ದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು