Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೇತ್ರನು 5:10 - ಕನ್ನಡ ಸತ್ಯವೇದವು C.L. Bible (BSI)

10 ಯೇಸುಕ್ರಿಸ್ತರಲ್ಲಿ ನಿಮ್ಮನ್ನು ತಮ್ಮ ಶಾಶ್ವತ ಮಹಿಮೆಗೆ ಕರೆದ ಕೃಪಾನಿಧಿಯಾದ ದೇವರು ನೀವು ಸ್ವಲ್ಪಕಾಲ ಹಿಂಸೆಬಾಧೆಯನ್ನು ಅನುಭವಿಸಿದ ನಂತರ ನಿಮ್ಮನ್ನು ಪೂರ್ವಸ್ಥಿತಿಗೆ ತರುವರು; ನಿಮ್ಮನ್ನು ಸ್ಥಿರಗೊಳಿಸಿ ಬಲಪಡಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಕ್ರಿಸ್ತನಲ್ಲಿ ನಿಮ್ಮನ್ನು ತನ್ನ ನಿತ್ಯ ಮಹಿಮೆಗೆ ಕರೆದ ಕೃಪಾಪೂರ್ಣನಾದ ದೇವರು ತಾನೇ, ನೀವು ಸ್ವಲ್ಪ ಕಾಲ ಬಾಧೆಪಟ್ಟ ಮೇಲೆ ನಿಮ್ಮನ್ನು ಯಥಾಸ್ಥಿತಿಗೆ ತಂದು ಸ್ಥಿರಪಡಿಸಿ ಬಲಪಡಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಕ್ರಿಸ್ತನಲ್ಲಿ ನಿಮ್ಮನ್ನು ತನ್ನ ನಿತ್ಯಪ್ರಭಾವಕ್ಕೆ ಕರೆದ ಕೃಪಾಪೂರ್ಣನಾದ ದೇವರು ತಾನೇ ನೀವು ಸ್ವಲ್ಪಕಾಲ ಬಾಧೆಪಟ್ಟ ಮೇಲೆ ನಿಮ್ಮನ್ನು ಯೋಗ್ಯಸ್ಥಿತಿಗೆ ತಂದು ನೆಲೆಗೊಳಿಸಿ ಬಲಪಡಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಹೌದು, ನೀವು ಸ್ವಲ್ಪಕಾಲ ಮಾತ್ರ ಸಂಕಟವನ್ನು ಅನುಭವಿಸುವಿರಿ. ಆದರೆ ಅನಂತರ ದೇವರು ಎಲ್ಲವನ್ನು ಸರಿಪಡಿಸುತ್ತಾನೆ. ಆತನು ನಿಮ್ಮನ್ನು ಬಲಪಡಿಸುತ್ತಾನೆ. ನೀವು ಕೆಳಕ್ಕೆ ಬೀಳದಂತೆ ಆತನು ನಿಮಗೆ ಆಧಾರವಾಗುವನು. ಎಲ್ಲರಿಗೂ ಕೃಪೆಯನ್ನು ತೋರುವ ದೇವರು ಆತನೇ. ತನ್ನ ಪ್ರಭಾವದಲ್ಲಿ ಪಾಲುಗಾರರಾಗಲು ಕ್ರಿಸ್ತನೇ ನಿಮ್ಮನ್ನು ಕರೆದನು. ಆ ಪ್ರಭಾವವು ಶಾಶ್ವತವಾದದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಕ್ರಿಸ್ತ ಯೇಸುವಿನ ಮೂಲಕ ನಿಮ್ಮನ್ನು ತಮ್ಮ ನಿತ್ಯ ಪ್ರಭಾವಕ್ಕೆ ಕರೆದ ಕೃಪಾಪೂರ್ಣ ಆಗಿರುವ ದೇವರು ನೀವು ಸ್ವಲ್ಪಕಾಲ ಬಾಧೆಪಟ್ಟ ಮೇಲೆ ತಾವೇ ನಿಮ್ಮನ್ನು ಪರಿಪೂರ್ಣಮಾಡಿ, ಸ್ಥಿರಪಡಿಸಿ, ಬಲಪಡಿಸಿ ನೆಲೆಗೊಳಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

10 ಖರೆ ಉಲ್ಲೊ ಕಸ್ಟ್ ತುಮಿ ಸೊಸುನ್ ಹೊಲ್ಲ್ಯಾ ಮಾನಾ ಸಗ್ಳ್ಯಾ ಕುರ್ಪೆಚೊ ದೆವ್ ತೆನಿ ಕ್ರಿಸ್ತಾಚ್ಯಾ ವಾಂಗ್ಡಾ ಅಪ್ನಾಚ್ಯಾ ಅಂತ್ ನಸಲ್ಲ್ಯಾ ಮಹಿಮೆತ್ ವಾಟೊ ಘೆವ್ಕ್ ತುಮ್ಕಾ ಬಲ್ವುತಾ, ತೊ ಅಪ್ನಿಚ್ ತುಮ್ಕಾ ಪರಿಪುರ್ನ್ ಕರ್ತಾ ಅನಿ ಆಧಾರ್ ದಿತಾ, ಅನಿ ಬಳ್ ದಿತಾ ಘಟ್ ಕರ್ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೇತ್ರನು 5:10
39 ತಿಳಿವುಗಳ ಹೋಲಿಕೆ  

ನಾವು ಅನುಭವಿಸುತ್ತಿರುವ ಕಷ್ಟಸಂಕಟಗಳು ಅಲ್ಪವಾದುವು, ಕ್ಷಣಿಕವಾದುವು. ಅವುಗಳಿಂದ ಲಭಿಸುವ ಮಹಿಮೆಯಾದರೋ ಅಪಾರವಾದುದು, ಅನಂತವಾದುದು.


ಪ್ರಭು ವಿಶ್ವಾಸಕ್ಕೆ ಪಾತ್ರರು. ಅವರು ನಿಮ್ಮನ್ನು ಸದೃಢರನ್ನಾಗಿ ಮಾಡಿ ಕೇಡಿನಿಂದ ನಿಮ್ಮನ್ನು ಕಾಪಾಡುವರು.


ಪಾಪದಲ್ಲಿ ಎಡವಿ ಬೀಳದಂತೆ ನಿಮ್ಮನ್ನು ಕಾಪಾಡುವ ತಮ್ಮ ಮಹಿಮಾಸನ್ನಿಧಿಯಲ್ಲಿ ನಿಮ್ಮನ್ನು ನಿರ್ದೋಷಿಗಳನ್ನಾಗಿಯೂ ಹರ್ಷಭರಿತರನ್ನಾಗಿಯೂ ನಿಲ್ಲಿಸಲು ಶಕ್ತರಾಗಿರುವ


ಇಕ್ಕಟ್ಟಿನಲಿ ನಡೆವಾಗಲೂ ನೀ ರಕ್ಷಿಸುವೆ ಪ್ರಭು, ಪ್ರಾಣವನು I ಶತ್ರುಕೋಪಕೆ ವಿರುದ್ಧವಾಗಿ ತೋರುವೆ ನೀ ಮುಷ್ಟಿಯನು II


ನಿತ್ಯಜೀವವೆಂಬ ಬಹುಮಾನವನ್ನು ಗಳಿಸಲು ವಿಶ್ವಾಸವೆಂಬ ಪಂದ್ಯದಲ್ಲಿ ಉತ್ತಮ ಓಟಗಾರನಾಗಿ ಓಡು. ಇದಕ್ಕಾಗಿಯೇ ದೇವರು ನಿನ್ನನ್ನು ಆರಿಸಿಕೊಂಡರೆಂಬುದನ್ನು ಮರೆಯಬೇಡ. ಈ ಗುರಿಯನ್ನು ಮುಂದಿಟ್ಟುಕೊಂಡೇ ನೀನು ಅನೇಕರ ಮುಂದೆ ವಿಶ್ವಾಸಪ್ರಮಾಣ ಮಾಡಿರುವೆ.


ಸಕಲ ಸತ್ಕಾರ್ಯಗಳಲ್ಲೂ ಸನ್ನುಡಿಯಲ್ಲೂ ನಿಮ್ಮನ್ನು ದೃಢಪಡಿಸಲಿ.


ಕೊನೆಯದಾಗಿ ಪ್ರಿಯ ಸಹೋದರರೇ, ಸಂತೋಷದಿಂದಿರಿ, ಪರಿಪೂರ್ಣರಾಗಲು ಪ್ರಯತ್ನಿಸಿರಿ. ನನ್ನ ಬುದ್ಧಿಮಾತುಗಳಿಗೆ ಕಿವಿಗೊಡಿ; ಒಮ್ಮನಸ್ಸಿನಿಂದ ಬಾಳಿರಿ; ಸಮಾಧಾನದಿಂದ ಜೀವಿಸಿರಿ; ಆಗ ಪ್ರೀತಿ ಮತ್ತು ಶಾಂತಿ ಸ್ವರೂಪರಾದ ದೇವರು ನಿಮ್ಮೊಡನೆ ಇರುತ್ತಾರೆ.


ತಮ್ಮ ಪುತ್ರನೂ ನಮ್ಮ ಪ್ರಭುವೂ ಆದ ಯೇಸುಕ್ರಿಸ್ತರ ಅನ್ಯೋನ್ಯತೆಗೆ ನಿಮ್ಮನ್ನು ಕರೆದಿರುವ ದೇವರು ನಿಜಕ್ಕೂ ವಿಶ್ವಾಸಪಾತ್ರರು.


ತಮ್ಮ ರಾಜ್ಯ ಹಾಗೂ ವೈಭವದಲ್ಲಿ ಭಾಗವಹಿಸಲು ಕರೆಯಿತ್ತ ದೇವರು ಮೆಚ್ಚುವಂತೆ ಬಾಳಬೇಕೆಂದು ನಿಮಗೆ ವಿಧಿಸಿದೆವು; ಇದೆಲ್ಲಾ ನಿಮಗೆ ತಿಳಿದಿದೆ.


“ಅನಾದಿಯಿಂದಲೂ ಗುಪ್ತವಾಗಿದ್ದ ರಹಸ್ಯವು ಈಗ ಪ್ರಕಟವಾಗಿದೆ. ಶಾಶ್ವತ ದೇವರ ಆಜ್ಞೆಯ ಮೇರೆಗೆ ಅನ್ಯಧರ್ಮೀಯರೂ ವಿಧೇಯರಾಗಿ ವಿಶ್ವಾಸಿಸುವಂತೆ ಪ್ರವಾದನಾ ಗ್ರಂಥಗಳ ಮೂಲಕ ಆ ರಹಸ್ಯವನ್ನು ಈಗ ಅವರಿಗೆ ತಿಳಿಸಲಾಗುತ್ತಿದೆ.


ಬಲಿಷ್ಠರಾಗುವರಾ ಜನರು ಸರ್ವೇಶ್ವರನಲಿ ಹೆಚ್ಚಳಪಡುವರು ಆತನ ನಾಮದಲಿ,” ನುಡಿದಿಹನು ಸರ್ವೇಶ್ವರ ಈ ರೀತಿಯಲಿ.


“ಬಲಗೊಳಿಸುವೆನು ಯೆಹೂದ್ಯ ಕುಲವನು ಉದ್ಧರಿಸುವೆನು ಜೊಸೇಫನ ವಂಶವನು. ಕನಿಕರಿಸುವೆನು, ಮರಳಿ ಬರಮಾಡುವೆನು ಅವರನು ನಾನು ಕೈಬಿಟ್ಟವರಂತೆ ಇರಲಾರರವರು ಇನ್ನು. ಏಕೆನೆ ನಾನೇ ದೇವ ಸರ್ವೇಶ್ವರ ಅವರಿಗೆ ಕಿವಿಗೊಡುವೆನು ನಾನು ಅವರ ಕರೆಗೆ ಸದುತ್ತರವೀಯುವೆನು ಅವರ ಮೊರೆಗೆ.


ತಮ್ಮ ಸ್ವಂತ ಮಹಿಮೆಯಲ್ಲೂ ಸೌಭಾಗ್ಯದಲ್ಲೂ ಭಾಗಿಗಳಾಗಲು ದೇವರು ನಮ್ಮನ್ನು ಕರೆದಿದ್ದಾರೆ. ಅವರನ್ನು ಅರಿತುಕೊಳ್ಳುವುದರ ಮೂಲಕ ನಾವು ಭಕ್ತಿಯುತ ಜೀವನವನ್ನು ನಡೆಸಲು ಬೇಕಾದುದೆಲ್ಲವನ್ನೂ ಆ ಯೇಸುವಿನ ದಿವ್ಯಶಕ್ತಿಯಿಂದ ಪಡೆದಿದ್ದೇವೆ.


ಅದಕ್ಕೆ ಬದಲು ನಿಮ್ಮನ್ನು ಕರೆದ ದೇವರು ಪವಿತ್ರರಾಗಿರುವಂತೆ ನೀವೂ ನಿಮ್ಮ ನಡೆನುಡಿಯಲ್ಲಿ ಪವಿತ್ರರಾಗಿರಿ.


ಸರ್ವೇಶನ ಶಕ್ತಿಯಿಂದ ಸರ್ವವನ್ನೂ ಸಾಧಿಸುವ ಸಾಮರ್ಥ್ಯ ನನಗಿದೆ.


ದೇವರಿಂದ ಆಯ್ಕೆಯಾದ ಪ್ರಜೆಗಳು ಪ್ರಭು ಯೇಸುವಿನಲ್ಲಿ ಲಭಿಸುವ ಜೀವೋದ್ಧಾರವನ್ನೂ ಅನಂತಮಹಿಮೆಯನ್ನೂ ನನ್ನೊಂದಿಗೆ ಪಡೆಯಲೆಂದು ನಾನು ಇದೆಲ್ಲವನ್ನೂ ಅವರಿಗಾಗಿ ಸಹಿಸುತ್ತಿದ್ದೇನೆ.


ಹೀಗೆ ಉದ್ಧಾರಹೊಂದಿ ನಮ್ಮ ಪ್ರಭು ಯೇಸುಕ್ರಿಸ್ತರ ಮಹಿಮೆಯಲ್ಲಿ ನೀವು ಸಹ ಪಾಲುಗೊಳ್ಳುವಂತೆ, ನಾವು ಸಾರಿದ ಶುಭಸಂದೇಶದ ಮೂಲಕ ದೇವರು ನಿಮ್ಮನ್ನು ಕರೆದಿದ್ದಾರೆ.


ಆದರೆ, ನಾನು ನಿನ್ನ ವಿಶ್ವಾಸವು ಕುಂದದಂತೆ ನಿನಗಾಗಿ ಪ್ರಾರ್ಥನೆ ಮಾಡಿದ್ದೇನೆ. ನೀನು ಪರಿವರ್ತನೆ ಹೊಂದಿದ ನಂತರ ನಿನ್ನ ಸಹೋದರರನ್ನು ದೃಢಪಡಿಸು,” ಎಂದರು.


ಪ್ರಭು, ನೀನು ದಯಾವಂತನು, ಕ್ಷಮಿಸುವವನು I ಮೊರೆಯಿಡುವವರಿಗೆ ನೀನು ಕೃಪಾಪೂರ್ಣನು II


ನಾವು ಸ್ವಂತ ಸತ್ಕಾರ್ಯಗಳಿಂದಲ್ಲ, ದೇವರ ಯೋಜನೆ ಹಾಗೂ ಅನುಗ್ರಹಗಳಿಂದಲೇ ಜೀವೋದ್ಧಾರ ವರವನ್ನು ಪಡೆದಿದ್ದೇವೆ; ದೇವರ ಪ್ರಜೆಗಳೆನಿಸಿಕೊಂಡಿದ್ದೇವೆ. ಈ ಅನುಗ್ರಹವನ್ನು ಕ್ರಿಸ್ತಯೇಸುವಿನಲ್ಲಿ ಅನಾದಿಯಿಂದಲೇ ನಮಗೆ ಕೊಡಲಾಯಿತು.


ಪ್ರಭು, ನೀ ದಯಾಳು, ದೇವಾ ನೀ ಕರುಣಾಮೂರ್ತಿ I ಸಹನಶೀಲನು, ಸತ್ಯಸ್ವರೂಪಿ, ಪ್ರೇಮಮೂರ್ತಿ II


ಅವರಲ್ಲಿ ಸ್ಥಿರವಾಗಿರಿ. ಅವರನ್ನೇ ಅವಲಂಬಿಸಿ ನಿಮ್ಮ ಬಾಳೆಂಬ ಸೌಧವನ್ನು ನಿರ್ಮಿಸಿರಿ. ನೀವು ಕಲಿತುಕೊಂಡಿರುವಂತೆ ನಿಮ್ಮ ವಿಶ್ವಾಸ ಅವರಲ್ಲಿ ದೃಢವಾಗಿರಲಿ. ಕೃತಜ್ಞತೆಯು ನಿಮ್ಮಲ್ಲಿ ಉಕ್ಕೇರಲಿ.


ಆ ಸ್ಥೈರಣೆ ಮತ್ತು ಉತ್ತೇಜನದ ಮೂಲವಾಗಿರುವ ದೇವರು, ನೀವೆಲ್ಲರು ಕ್ರಿಸ್ತಯೇಸುವನ್ನು ಅನುಸರಿಸುತ್ತಾ ಒಮ್ಮನಸ್ಸಿನಿಂದ ಬಾಳುವಂತೆ ಮಾಡಲಿ.


ಕ್ರಿಸ್ತಯೇಸು ನಮಗೆ ವಾಗ್ದಾನಮಾಡಿರುವ ನಿತ್ಯಜೀವ ಇದೇ.


ಈ ಕಾರಣ, ಯೇಸು ಹೊಸ ಒಡಂಬಡಿಕೆಯನ್ನು ಏರ್ಪಡಿಸಿದ ಮಧ್ಯಸ್ಥರಾಗಿದ್ದಾರೆ. ದೈವಕರೆ ಹೊಂದಿದವರು ದೇವರು ವಾಗ್ದಾನಮಾಡಿದ ಅಮರ ಸೌಭಾಗ್ಯವನ್ನು ಬಾಧ್ಯವಾಗಿ ಪಡೆಯುವಂತೆ ಈ ಒಡಂಬಡಿಕೆಯನ್ನು ಏರ್ಪಡಿಸಲಾಯಿತು. ಇದು ಯೇಸುವಿನ ಮರಣದ ಮೂಲಕವೇ ಉಂಟಾಯಿತು. ಈ ಮರಣವು ಹಳೆಯ ಒಡಂಬಡಿಕೆಯನ್ನು ಮೀರಿ ಮಾಡಿದ ಅಪರಾಧಗಳನ್ನೂ ಪರಿಹರಿಸುತ್ತದೆ.


ಭರವಸೆಯ ಮೂಲವಾಗಿರುವ ದೇವರಲ್ಲಿರುವ ನಮ್ಮ ವಿಶ್ವಾಸದ ಮೂಲಕ ಲಭಿಸುವ ಆನಂದವನ್ನೂ ಶಾಂತಿಸಮಾಧಾನವನ್ನೂ ನಿಮಗೆ ಸಮೃದ್ಧಿಯಾಗಿ ದಯಪಾಲಿಸಲಿ. ನಿಮ್ಮ ಭರವಸೆ ಪವಿತ್ರಾತ್ಮ ಅವರ ಪ್ರಭಾವದಿಂದ ಪ್ರವರ್ಧಿಸುವಂತಾಗಲಿ.


ಅವರು ಹುಟ್ಟುವುದಕ್ಕೆ ಮುಂಚೆಯೇ, ಒಳ್ಳೆಯದನ್ನಾಗಲಿ ಕೆಟ್ಟದ್ದನ್ನಾಗಲಿ ಮಾಡುವುದಕ್ಕೆ ಮೊದಲೇ, “ಹಿರಿಯವನು ಕಿರಿಯವನಿಗೆ ಸೇವೆಮಾಡುವನು,” ಎಂದು ಆಕೆಗೆ ಹೇಳಲಾಗಿತ್ತು. ಇದರಿಂದ ದೇವರು ತಮಗಿಷ್ಟಬಂದವರನ್ನು ಆರಿಸಿಕೊಳ್ಳುತ್ತಾರೆಂಬ ಸಂಕಲ್ಪವು ಸ್ಥಿರಗೊಂಡಿತು. ಈ ಸಂಕಲ್ಪ ಮಾನವನು ಸಾಧಿಸುವ ಸತ್ಕಾರ್ಯಗಳ ಮೇಲೆ ಅಲ್ಲ, ಕರೆನೀಡುವ ದೇವರ ಚಿತ್ತದ ಮೇಲೆ ನೆಲೆಗೊಂಡಿದೆ.


ಬೋಧಿಸುವ ವರವನ್ನು ಪಡೆದವನು ದೇವರ ವಾಕ್ಯವನ್ನು ಬೋಧಿಸುವವನಂತೆ ಬೋಧನೆಮಾಡಲಿ. ಸೇವೆಮಾಡುವ ವರವನ್ನು ಪಡೆದವನು, ದೇವರಿಂದ ಶಕ್ತಿಯನ್ನು ಪಡೆದವನಂತೆ ಸೇವೆಮಾಡಲಿ. ಇದರಿಂದ ಯೇಸುಕ್ರಿಸ್ತರ ಮುಖಾಂತರ ಎಲ್ಲದರಲ್ಲಿಯೂ ದೇವರಿಗೆ ಸ್ತುತಿಯುಂಟಾಗುವುದು. ಅವರಿಗೆ ಸದಾಕಾಲ ಮಹಿಮೆಯೂ ಸರ್ವಾಧಿಕಾರವೂ ಸಲ್ಲಲಿ. ಆಮೆನ್.


ಯೆಹೂದ್ಯ ಜನಾಂಗದಿಂದ ಮಾತ್ರವಲ್ಲ, ಇತರ ಜನಾಂಗದಿಂದಲೂ ಕರೆಯಲಾಗಿರುವ ನಾವೇ ಈ ಕರುಣೆಯ ಕುಡಿಕೆಗಳು.


ದುಃಖದಿಂದ ಸೊರಗಿಹೋಗಿದೆ ಎನ್ನಮನ I ನಿನ್ನ ವಾಕ್ಯಾನುಸಾರ ನೀಡು ಸಾಂತ್ವನ II


ಸಹೋದರರೇ, ನಮ್ಮ ಪ್ರಭು ಯೇಸುಕ್ರಿಸ್ತರ ಹೆಸರಿನಲ್ಲಿ ನಾನು ಕೇಳಿಕೊಳ್ಳುವುದೇನೆಂದರೆ: ವಾದವಿವಾದವಿಲ್ಲದೆ, ಭಿನ್ನಭೇದಗಳಿಲ್ಲದೆ ಒಂದೇ ಮನಸ್ಸಿನಿಂದಲೂ ಒಂದೇ ಉದ್ದೇಶದಿಂದಲೂ ನೀವು ಐಕಮತ್ಯದಿಂದ ಬಾಳಿರಿ.


ದೇವರ ವಿವಿಧ ವರಗಳ ವಿಷಯದಲ್ಲಿ ಉತ್ತಮ ನಿರ್ವಾಹಕನಂತೆ ಪ್ರತಿಯೊಬ್ಬನೂ ದೇವರು ತನಗೆ ಕೊಟ್ಟಿರುವ ವಿಶೇಷ ವರದಾನಗಳನ್ನು ಇತರರ ಒಳಿತಿಗಾಗಿ ಬಳಸಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು