Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೇತ್ರನು 5:14 - ಕನ್ನಡ ಸತ್ಯವೇದವು C.L. Bible (BSI)

14 ಪ್ರೀತಿಯ ಮುದ್ದನ್ನಿಟ್ಟು ಒಬ್ಬರನ್ನೊಬ್ಬರು ವಂದಿಸಿರಿ. ಯೇಸುಕ್ರಿಸ್ತರಲ್ಲಿರುವ ನಿಮ್ಮೆಲ್ಲರಿಗೂ ಶಾಂತಿಸಮಾಧಾನ ಲಭಿಸಲಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಪ್ರೀತಿಯಿಂದ ಮುದ್ದಿಟ್ಟು ಒಬ್ಬರನೊಬ್ಬರು ವಂದಿಸಿರಿ. ಕ್ರಿಸ್ತನಲ್ಲಿರುವ ನಿಮ್ಮೆಲ್ಲರಿಗೂ ಸಮಾಧಾನವುಂಟಾಗಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ನನ್ನ ಮಗನಾದ ಮಾರ್ಕನು ಸಹ ವಂದನೆ ಹೇಳುತ್ತಾನೆ. ಪ್ರೀತಿಯಿಂದ ಮುದ್ದಿಟ್ಟು ಒಬ್ಬರನ್ನೊಬ್ಬರು ವಂದಿಸಿರಿ. ಕ್ರಿಸ್ತನಲ್ಲಿರುವ ನಿಮ್ಮೆಲ್ಲರಿಗೆ ಶಾಂತಿಯಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ನೀವು ಭೇಟಿ ಮಾಡಿದಾಗ ಒಬ್ಬರಿಗೊಬ್ಬರು ಪ್ರೀತಿಯ ಮುದ್ದನ್ನು ನೀಡಿರಿ. ಕ್ರಿಸ್ತನಲ್ಲಿರುವ ನಿಮಗೆಲ್ಲರಿಗೂ ಶಾಂತಿಯಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಪ್ರೀತಿಯಿಂದ ಮುದ್ದಿಟ್ಟು ಒಬ್ಬರನ್ನೊಬ್ಬರು ವಂದಿಸಿರಿ. ಕ್ರಿಸ್ತ ಯೇಸುವಿನಲ್ಲಿರುವ ನಿಮ್ಮೆಲ್ಲರಿಗೆ ಶಾಂತಿಯಿರಲಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

14 ಎಕಾಮೆಕಾಕ್ ಭೆಟುನ್ ಪ್ರೆಮಾನಿ ನಮಸ್ಕಾರ್ ಕರಾ, ಕ್ರಿಸ್ತಾತ್ ಹೊತ್ತ್ಯಾ ತುಮ್ಕಾ ಸಗ್ಳ್ಯಾಕ್ನಿ ಶಾಂತಿ ಗಾಂವ್ದಿತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೇತ್ರನು 5:14
16 ತಿಳಿವುಗಳ ಹೋಲಿಕೆ  

ಪವಿತ್ರವಾದ ಮುದ್ದನ್ನಿಟ್ಟು ಒಬ್ಬರನ್ನೊಬ್ಬರು ವಂದಿಸಿರಿ. ಎಲ್ಲಾ ಕ್ರೈಸ್ತಸಭೆಗಳವರು ನಿಮಗೆ ತಮ್ಮ ವಂದನೆಗಳನ್ನು ಕಳುಹಿಸಿದ್ದಾರೆ.


ಪಿತನಾದ ದೇವರೂ ಪ್ರಭುವಾದ ಯೇಸುಕ್ರಿಸ್ತರೂ ಸಹೋದರರಿಗೆ ಶಾಂತಿಸಮಾಧಾನವನ್ನು ಮತ್ತು ಪ್ರೀತಿವಿಶ್ವಾಸವನ್ನು ದಯಪಾಲಿಸಲಿ.


ಆದುದರಿಂದ ಈಗ ಕ್ರಿಸ್ತಯೇಸುವಿನಲ್ಲಿ ಇರುವವರಿಗೆ ದಂಡನಾತೀರ್ಪು ಇರುವುದಿಲ್ಲ.


ಇಲ್ಲಿಯ ಸಹೋದರರೆಲ್ಲರೂ ನಿಮಗೆ ನಮಸ್ಕಾರ ಹೇಳಿದ್ದಾರೆ. ನೀವು ಸಹ ಪವಿತ್ರವಾದ ಮುದ್ದಿಟ್ಟು ಒಬ್ಬರನ್ನೊಬ್ಬರು ವಂದಿಸಿರಿ.


ಯಾರಾದರೂ ಯೇಸುಕ್ರಿಸ್ತರೊಡನೆ ಒಂದಾದರೆ ಅವನು ನೂತನ ಸೃಷ್ಟಿಯಾಗುತ್ತಾನೆ. ಹಳೆಯದೆಲ್ಲಾ ಅಳಿದುಹೋಗುತ್ತದೆ. ಹೊಸದಿದೋ, ಜನ್ಮತಳೆದಿದೆ.


ಅವರ ಕೃಪೆಯಿಂದಲೇ ನೀವು ಕ್ರಿಸ್ತಯೇಸುವಿನಲ್ಲಿ ಬಾಳುತ್ತಾ ಇದ್ದೀರಿ; ಅವರ ಕೃಪೆಯಿಂದಲೇ ಕ್ರಿಸ್ತಯೇಸು ನಮಗೆ ಜ್ಞಾನ ಮೂಲವಾಗಿದ್ದಾರೆ. ದೇವರಿಂದ ನಮಗೆ ದೊರಕುವ ಸತ್ಸಂಬಂಧ, ಪಾವನತೆ ಹಾಗೂ ವಿಮೋಚನೆ ಆ ಕ್ರಿಸ್ತಯೇಸುವಿನಿಂದಲೇ.


ಎಂಟು ದಿನಗಳು ಕಳೆದವು. ಶಿಷ್ಯರು ಪುನಃ ಒಳಗೆ ಒಟ್ಟುಗೂಡಿದ್ದರು. ತೋಮನೂ ಅವರೊಡನೆ ಇದ್ದನು. ಬಾಗಿಲುಗಳು ಮುಚ್ಚಿದ್ದರೂ ಯೇಸು ಬಂದು ಅವರ ನಡುವೆ ನಿಂತು, “ನಿಮಗೆ ಶಾಂತಿ” ಎಂದರು.


ಅದೇ ಭಾನುವಾರ ಸಂಜೆ ಶಿಷ್ಯರು ಒಂದು ಮನೆಯಲ್ಲಿ ಕೂಡಿದ್ದರು. ಯೆಹೂದ್ಯರಿಗೆ ಅಂಜಿ ಮನೆಯ ಬಾಗಿಲುಗಳನ್ನು ಮುಚ್ಚಿಕೊಂಡು ಒಳಗೇ ಇದ್ದರು. ಆಗ ಯೇಸು ಬಂದು ಅವರ ನಡುವೆ ನಿಂತರು.


ನಿಮಗೆ ನನ್ನಲ್ಲಿ ಶಾಂತಿಸಮಾಧಾನ ಲಭಿಸಲೆಂದು ಇದನ್ನೆಲ್ಲಾ ನಿಮಗೆ ಹೇಳಿದ್ದೇನೆ. ಲೋಕದಲ್ಲಿ ನಿಮಗೆ ಕಷ್ಟಸಂಕಟಗಳು ತಪ್ಪಿದ್ದಲ್ಲ, ಆದರೆ ಧೈರ್ಯವಾಗಿರಿ. ನಾನು ಲೋಕವನ್ನು ಜಯಿಸಿದ್ದೇನೆ,” ಎಂದು ಹೇಳಿದರು.


ನಾನು ಶಾಂತಿಸಮಾಧಾನವನ್ನು ನಿಮಗೆ ಬಿಟ್ಟುಹೋಗುತ್ತೇನೆ; ನನ್ನ ಶಾಂತಿಸಮಾಧಾನವನ್ನು ನಿಮಗೆ ಕೊಡುತ್ತೇನೆ. ಈ ಲೋಕವು ಕೊಡುವ ರೀತಿಯಲ್ಲಿ ನಾನದನ್ನು ನಿಮಗೆ ಕೊಡುವುದಿಲ್ಲ. ನೀವು ಹೃದಯದಲ್ಲಿ ಕಳವಳಗೊಳ್ಳದಿರಿ, ಭಯಪಡಬೇಡಿ.


ಪವಿತ್ರವಾದ ಮುದ್ದಿಟ್ಟು ಸಹೋದರರೆಲ್ಲರನ್ನು ವಂದಿಸಿರಿ.


ಪವಿತ್ರವಾದ ಮುದ್ದಿಟ್ಟು ಒಬ್ಬರನ್ನು ಒಬ್ಬರು ವಂದಿಸಿರಿ. ದೇವಜನರೆಲ್ಲರೂ ನಿಮಗೆ ಶುಭಾಶಯಗಳನ್ನು ಕೋರಿದ್ದಾರೆ.


ನೀವು ಯೇಸುಕ್ರಿಸ್ತರಿಗೆ ಶರಣಾಗಿ ಅವರ ರಕ್ತದಿಂದ ಶುದ್ಧೀಕರಣಹೊಂದಲು ತಂದೆಯಾದ ದೇವರ ಸಂಕಲ್ಪಾನುಸಾರ ಆಯ್ಕೆಯಾದವರು; ಅವರ ಆತ್ಮದ ಮುಖಾಂತರ ಪವಿತ್ರೀಕರಿಸಲಾದವರು. ನಿಮಗೆ ಕೃಪಾಶೀರ್ವಾದವೂ ಶಾಂತಿಸಮಾಧಾನವೂ ಸಮೃದ್ಧಿಯಾಗಿ ಲಭಿಸಲಿ!


ನಿಮ್ಮ ಮಿತ್ರರನ್ನು ಮಾತ್ರ ನೀವು ಗೌರವಿಸಿದರೆ ಅದರಲ್ಲೇನು ವಿಶೇಷ? ಅನ್ಯಜನರೂ ಹಾಗೆ ಮಾಡುತ್ತಾರಲ್ಲವೇ?


ಸದ್ಯದಲ್ಲೇ ನಿನ್ನನ್ನು ಕಾಣುವ ನಿರೀಕ್ಷೆ ನನಗಿದೆ. ಆಗ ನಾವು ಮುಖಾಮುಖಿಯಾಗಿ ಮಾತಾಡಬಹುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು