Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೇತ್ರನು 5:5 - ಕನ್ನಡ ಸತ್ಯವೇದವು C.L. Bible (BSI)

5 ಅಂತೆಯೇ ಯುವಜನರೇ, ನೀವು ಹಿರಿಯರಿಗೆ ವಿಧೇಯರಾಗಿ ನಡೆದುಕೊಳ್ಳಿ. ನೀವೆಲ್ಲರೂ ದೀನಮನೋಭಾವನೆಯನ್ನು ಧರಿಸಿಕೊಂಡು ಒಬ್ಬರಿಗೊಬ್ಬರು ಸೇವೆಮಾಡಿ. “ಗರ್ವಿಷ್ಠರನ್ನು ದೇವರು ವಿರೋಧಿಸುತ್ತಾರೆ. ನಮ್ರರಿಗಾದರೋ ಅವರು ದಯೆತೋರುತ್ತಾರೆ,” ಎಂದು ಪವಿತ್ರಗ್ರಂಥದಲ್ಲಿ ಲಿಖಿತವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಯೌವನಸ್ಥರೇ, ಅದೇ ರೀತಿಯಾಗಿ ಹಿರಿಯರಿಗೆ ಅಧೀನರಾಗಿರಿ. ನೀವೆಲ್ಲರೂ ದೀನಮನಸ್ಸೆಂಬ ವಸ್ತ್ರವನ್ನು ಧರಿಸಿಕೊಂಡು ಒಬ್ಬರಿಗೊಬ್ಬರು ಸೇವೆ ಮಾಡಿರಿ. ಏಕೆಂದರೆ “ದೇವರು ಅಹಂಕಾರಿಗಳನ್ನು ವಿರೋಧಿಸುತ್ತಾನೆ. ದೀನರಿಗಾದರೋ ಕೃಪೆಯನ್ನು ಅನುಗ್ರಹಿಸುತ್ತಾನೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಯೌವನಸ್ಥರೇ, ಅದೇ ರೀತಿಯಾಗಿ ಹಿರಿಯರಿಗೆ ಅಧೀನರಾಗಿರಿ. ನೀವೆಲ್ಲರೂ ದೀನಮನಸ್ಸೆಂಬ ವಸ್ತ್ರದಿಂದ ಸೊಂಟಾಕಟ್ಟಿಕೊಂಡು ಒಬ್ಬರಿಗೊಬ್ಬರು ಸೇವೆಮಾಡಿರಿ. ದೇವರು ಅಹಂಕಾರಿಗಳನ್ನು ಎದುರಿಸುತ್ತಾನೆ, ದೀನರಿಗಾದರೋ ಕೃಪೆಯನ್ನು ಅನುಗ್ರಹಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಯುವಕರೇ, ನಾನು ನಿಮಗೂ ಕೆಲವು ಮಾತುಗಳನ್ನು ಹೇಳಬೇಕಾಗಿದೆ. ನೀವು ಹಿರಿಯರಿಗೆ ಅಧೀನರಾಗಿರಬೇಕು. ನೀವೆಲ್ಲರೂ ಒಬ್ಬರಿಗೊಬ್ಬರು ನಮ್ರತೆಯಿಂದ ನಡೆದುಕೊಳ್ಳಬೇಕು. “ದೇವರು ಅಹಂಕಾರಿಗಳಿಗೆ ವಿರುದ್ಧನಾಗಿದ್ದಾನೆ. ಆದರೆ ಆತನು ನಮ್ರತೆಯಿಂದ ಇರುವ ಜನರಿಗೆ ಕೃಪೆಯನ್ನು ದಯಪಾಲಿಸುವನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಅದೇ ರೀತಿಯಾಗಿ ಯೌವನಸ್ಥರೇ, ಹಿರಿಯರಿಗೆ ಅಧೀನರಾಗಿರಿ. ನೀವೆಲ್ಲರೂ ದೀನತೆಯೆಂಬ ವಸ್ತ್ರವನ್ನು ಧರಿಸಿಕೊಂಡು ಒಬ್ಬರಿಗೊಬ್ಬರು ಅಧೀನರಾಗಿರಿ. ಏಕೆಂದರೆ, “ದೇವರು ಅಹಂಕಾರಿಗಳನ್ನು ಎದುರಿಸುತ್ತಾರೆ, ದೀನರಿಗಾದರೋ ಕೃಪೆಯನ್ನು ಕೊಡುತ್ತಾರೆ!”

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

5 ತಸೆಚ್ ತುಮಿ ದಾಂಡ್ಗ್ಯಾ ಲೊಕಾನು ತುಮಿ ಜಾನ್ತ್ಯಾಕ್ನಿ ಖಾಯ್ಲ್ ಹೊವ್ನ್ ಚಲಾ, ಅನಿ ತುಮಿ ಸಗ್ಳೆ ಜಾನಾ ಖಾಯ್ಲ್ ಚಲ್ತಲೆ ಮನ್ತಲಿ ಅಂಗಿ ನೆಸಾ ಅಸೆ ಎಕಾಮೆಕಾಚಿ ಸೆವಾ ಕರಿಸಾರ್ಕೆ ಹೊಂವ್ದಿ, ಕಶ್ಯಾಕ್ ಮಟ್ಲ್ಯಾರ್, ಪವಿತ್ರ್ ಪುಸ್ತಕ್ ಮನ್ತಾ ಗರುಕಿ ಕರ್ತಲ್ಯಾಕ್ನಿ ದೆವ್ ವಿರೊದ್ ಕರ್ತಾ, ಖರೆ ಖಾಲ್ತಿ ಹೊವ್ನ್ ಚಲ್ತಲ್ಯಾಕ್ನಿ ದೆವ್ ಕುರ್ಪಾ ದಿತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೇತ್ರನು 5:5
27 ತಿಳಿವುಗಳ ಹೋಲಿಕೆ  

ದೇವರು ನಮಗೆ ದಯಪಾಲಿಸುವ ವರಪ್ರಸಾದ ಅತ್ಯಧಿಕವಾದುದು. ಎಂತಲೇ, “ದೇವರು ಗರ್ವಿಷ್ಠರನ್ನು ವಿರೋಧಿಸುತ್ತಾರೆ. ದೀನದಲಿತರಿಗೆ ಕೃಪಾವರವನ್ನು ಅನುಗ್ರಹಿಸುತ್ತಾರೆ,” ಎಂದು ಲಿಖಿತವಾಗಿದೆ.


ಅಪಹಾಸ್ಯಮಾಡುವವರನ್ನು ಆತ ಅಪಹಾಸ್ಯ ಮಾಡುವನು; ನಮ್ರರಿಗಾದರೋ ಕೃಪಾಶೀರ್ವಾದವನ್ನು ಅನುಗ್ರಹಿಸುವನು.


ಕ್ರಿಸ್ತಯೇಸುವಿನಲ್ಲಿ ಭಯಭಕ್ತಿಯುಳ್ಳವರಾಗಿದ್ದು, ಒಬ್ಬರಿಗೊಬ್ಬರು ನಮ್ರತೆಯಿಂದ ನಡೆದುಕೊಳ್ಳಿರಿ.


ಸಹೋದರ ಭಾವನೆಯಿಂದ ಒಬ್ಬರನ್ನೊಬ್ಬರು ಹೃತ್ಪೂರ್ವಕವಾಗಿ ಪ್ರೀತಿಸಿರಿ. ಗೌರವ ತೋರಿಸುವುದರಲ್ಲಿ ಒಬ್ಬರಿಗಿಂತ ಒಬ್ಬರು ಮುಂದಾಗಿರಿ.


ಸ್ವಾರ್ಥಸಾಧನೆಗಾಗಲಿ, ಡಂಭಾಚಾರಕ್ಕಾಗಲಿ ಏನನ್ನೂ ಮಾಡಬೇಡಿ. ಪರಸ್ಪರ ನಮ್ರತೆಯಿಂದ ನಡೆದುಕೊಳ್ಳಿ; ಇತರರು ನಿಮಗಿಂತಲೂ ಶ್ರೇಷ್ಠರೆಂದು ಪರಿಗಣಿಸಿರಿ.


ನೀವು ದೇವರಿಂದ ಆಯ್ಕೆಯಾದವರು. ದೇವರಿಗೆ ಪ್ರಿಯವಾದವರು. ದೇವರ ಸ್ವಂತಜನರು. ಹೀಗಿರಲಾಗಿ ಕನಿಕರ, ದಯೆ, ದೀನತೆ, ವಿನಯಶೀಲತೆ, ಶಾಂತಿ, ಸಹನೆ ಎಂಬ ಸದ್ಗುಣಗಳೇ ನಿಮ್ಮ ಆಭರಣಗಳಾಗಿರಲಿ.


ಇವುಗಳನ್ನೆಲ್ಲ ನಿರ್ಮಿಸಿದ್ದು ನನ್ನ ಕೈಯೇ. ಹೌದು, ಇವುಗಳೆಲ್ಲ ಆದುವು ನನ್ನಿಂದಲೇ . ವಿನಮ್ರನು, ಪಶ್ಚಾತ್ತಾಪ ಪಡುವವನು, ನನ್ನ ಮಾತಿನಲ್ಲಿ ಭಯಭಕ್ತಿಯುಳ್ಳವನು, ಇಂಥವರೇ ನನಗೆ ಮೆಚ್ಚುಗೆಯಾದವರು.


ದೇಹದ ದುರಿಚ್ಛೆಗಳಿಗೆ ಬಲಿಯಾಗದೆ ಕ್ರಿಸ್ತಂಬರರಾಗಿರಿ.


ಜೀವಂತರಿಗೂ ಮೃತರಿಗೂ ನ್ಯಾಯತೀರಿಸಲು ಸಿದ್ಧವಾಗಿರುವ ದೇವರಿಗೆ ಅವರು ಲೆಕ್ಕಕೊಡಬೇಕಾಗುವುದು.


“ಪರಮ ಪವಿತ್ರನ, ಶಾಶ್ವತ ಲೋಕದ ನಿತ್ಯನಿವಾಸಿಯಾದ ಮಹೋನ್ನತನ ಮಾತಿದು : ಉನ್ನತವಾದ ಪವಿತ್ರಾಲಯದಲ್ಲಿ ವಾಸಿಸುವವನು ನಾನು; ಆದರೂ ಪಶ್ಚಾತ್ತಾಪಪಡುವ ದೀನಮನದೊಂದಿಗೆ ನಾನಿದ್ದೇನೆ. ದೀನನ ಆತ್ಮವನ್ನು ಹಾಗು ಪಶ್ಚಾತ್ತಾಪಪಡುವ ಮನಸ್ಸನ್ನು ಉಜ್ಜೀವಗೊಳಿಸುವವನಾಗಿದ್ದೇನೆ.


ನಿಮ್ಮ ಸಭಾನಾಯಕರಿಗೆ ವಿಧೇಯರಾಗಿರಿ. ಅವರ ಆಜ್ಞೆಗಳನ್ನು ಪಾಲಿಸಿರಿ. ಅವರು ನಿಮ್ಮ ಆತ್ಮಗಳ ಪಾಲಕರು; ದೇವರಿಗೆ ಲೆಕ್ಕ ಒಪ್ಪಿಸಬೇಕಾದವರು. ಈ ಸೇವೆಯನ್ನು ಅವರು ಸಂತೋಷದಿಂದ ಮಾಡುವಂತೆ ನೀವು ನಡೆದುಕೊಳ್ಳಿ. ಅವರು ಮನನೊಂದುಕೊಂಡು ಮಾಡುವ ಸೇವೆಯಿಂದ ನಿಮಗೆ ಒಳಿತಾಗದು.


“ತಲೆನರೆತ ವೃದ್ಧರ ಮುಂದೆ ಎದ್ದುನಿಂತು ಅವರನ್ನು ಸನ್ಮಾನಿಸಬೇಕು. ನಿಮ್ಮ ದೇವರಲ್ಲಿ ಭಯಭಕ್ತಿಯುಳ್ಳವರಾಗಿರಬೇಕು. ನಾನು ಸರ್ವೇಶ್ವರ.


ಕ್ರಿಸ್ತಯೇಸು ದೈಹಿಕವಾಗಿ ಹಿಂಸೆಬಾಧೆಯನ್ನು ಅನುಭವಿಸಿದ್ದರಿಂದ ನೀವೂ ಅವರಲ್ಲಿದ್ದ ಅದೇ ಭಾವನೆಯಿಂದ ನಿಮ್ಮನ್ನು ಬಲಪಡಿಸಿಕೊಳ್ಳಿರಿ. ದೈಹಿಕವಾಗಿ ಹಿಂಸೆಪಡುವವನು ಪಾಪ ಜೀವನದೊಡನೆ ಸಂಬಂಧವನ್ನು ಕಡಿದುಕೊಂಡವನು.


ನೀತಿಭೂಷಿತರಾಗಲಿ ನಿನ್ನ ಯಾಜಕರು I ಆನಂದ ಘೋಷಮಾಡಲಿ ನಿನ್ನ ಭಕ್ತಜನರು II


ಧರ್ಮವನ್ನು ನಾನು ಧರಿಸಿಕೊಂಡೆ; ಅದು ನನಗೆ ಅಂಬರವಾಗಿತ್ತು ನ್ಯಾಯನೀತಿ ನನಗೆ ನಿಲುವಂಗಿಯೂ ಪೇಟವೂ ಆಗಿತ್ತು.


ದೇವರು ಕೆಳಕ್ಕೆ ದಬ್ಬುತ್ತಾನೆ ಗರ್ವಿಗಳನು ಉದ್ಧರಿಸುತ್ತಾನೆ ದೀನಮನಸ್ಕರನು.


ನಾನು ಪಡೆಯುವೆ ಸರ್ವೇಶ್ವರನಲ್ಲಿ ಪರಮಾನಂದ ಹಿರಿಹಿಗ್ಗುವುದು ನನ್ನ ದೇವರಲಿ ನನ್ನಾತ್ಮ. ಮದುವಣಿಗನಿಗೆ ಬಾಸಿಂಗವನು ತೊಡಿಸುವಂತೆ ವಧುವಿಗೆ ಆಭರಣಗಳಿಂದ ಅಲಂಕರಿಸುವಂತೆ ಹೊದಿಸಿಹನಾತ ನನಗೆ ಮುಕ್ತಿಯೆಂಬ ವಸ್ತ್ರವನು ತೊಡಿಸಿಹನು ನನಗೆ ನೀತಿಯೆಂಬ ನಿಲುವಂಗಿಯನು.


ದೇವರಾದ ಸರ್ವೇಶ್ವರಾ, ಎದ್ದು ಬನ್ನಿ, ನಿಮ್ಮ ತೇಜೋಮಯ ಮಂಜೂಷದೊಡನೆ ನಿಮ್ಮ ವಾಸಸ್ಥಾನದೊಳಗೆ ಸೇರಿಕೊಳ್ಳಿ. ದೇವರಾದ ಸರ್ವೇಶ್ವರಾ, ನಿಮ್ಮ ಯಾಜಕರು ರಕ್ಷಣೆಯೆಂಬ ಕವಚವನ್ನು ಹೊದ್ದುಕೊಳ್ಳಲಿ, ನಿಮ್ಮ ಭಕ್ತರು ಸೌಭಾಗ್ಯದಲ್ಲಿ ಹರ್ಷಿಸಲಿ.


ಹೊದಿಸುವೆನಿದರ ಯಾಜಕರಿಗೆ ರಕ್ಷಣಾವಸ್ತ್ರವನು I ಸಾಧುಸಂತರು ಮಾಡುವರಿದರ ಹರ್ಷೋದ್ಗಾರವನು II


ಉನ್ನತನಾದರೂ ಗಮನಿಸುವನು ಪ್ರಭು ದೀನರನು I ದೂರದಿಂದಲೇ ಗುರುತಿಸುವನಾತನು ಗರ್ವಿಷ್ಠರನು II


ಆಗ ಸಮುದ್ರದ ಸುತ್ತುಮುತ್ತಲಿನ ಎಲ್ಲ ಒಡೆಯರು ತಮ್ಮ ಸಿಂಹಾಸನಗಳಿಂದಿಳಿದು, ನಿಲುವಂಗಿಗಳನ್ನು ತೆಗೆದುಹಾಕಿ, ಕಸೂತಿ ವಸ್ತ್ರಗಳನ್ನು ಕಿತ್ತೆಸೆದು, ತತ್ತರವನ್ನೇ ಹೊದ್ದುಕೊಂಡು, ನೆಲದ ಮೇಲೆ ಕುಕ್ಕರಿಸಿ, ಕ್ಷಣಕ್ಷಣವೂ ನಡುಗುತ್ತಾ ನಿನಗೆ ಬೆಚ್ಚಿಬೆರಗಾಗುವರು.


ಆದರೆ ನೀವು ಹಾಗಾಗಬಾರದು; ನಿಮ್ಮಲ್ಲಿ ಅತಿ ದೊಡ್ಡವನು ಅತಿ ಚಿಕ್ಕವನಂತಾಗಬೇಕು.


ಹಿರಿಯರನ್ನು ಗದರಿಸಬೇಡ; ಅವರನ್ನು ತಂದೆಯಂತೆ ಭಾವಿಸಿ ಗೌರವದಿಂದ ತಿಳುವಳಿಕೆ ನೀಡು. ಯುವಕರೊಡನೆ ಸೋದರಭಾವನೆಯಿಂದ ವರ್ತಿಸು.


ಕಡೆಯದಾಗಿ ನೀವೆಲ್ಲರೂ ಏಕಮನಸ್ಸುಳ್ಳವರಾಗಿರಿ; ಪರಸ್ಪರ ಸಹಾನುಭೂತಿ ಇರಲಿ. ಒಡಹುಟ್ಟಿದವರಂತೆ ಒಬ್ಬರನ್ನೊಬ್ಬರು ಪ್ರೀತಿಸಿರಿ; ದಯೆತೋರುವವರೂ ದೀನಭಾವವುಳ್ಳವರೂ ಆಗಿರಿ.


ಘನವಂತರ ಮುಂದೆ ಕೆಳಗಣ ಸ್ಥಾನಕ್ಕೆ ನೂಕಿಸಿಕೊಳ್ಳುವುದಕ್ಕಿಂತ “ಇನ್ನೂ ಮೇಲಕ್ಕೆ ಬಾ” ಎಂದು ಕರೆಸಿಕೊಳ್ಳುವುದು ಲೇಸು.


ಇದರಿಂದಾಗಿ ಅವನು ಗರ್ವಿಷ್ಠನಾಗುವನು. ಲಕ್ಷಾಂತರ ಸೈನಿಕರನ್ನು ಸದೆಬಡಿದಿದ್ದರೂ ಪ್ರಾಬಲ್ಯಕ್ಕೆ ಬಾರನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು