Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೇತ್ರನು 5:7 - ಕನ್ನಡ ಸತ್ಯವೇದವು C.L. Bible (BSI)

7 ನಿಮ್ಮ ಚಿಂತೆಯನ್ನೆಲ್ಲಾ ಅವರಿಗೇ ಬಿಟ್ಟುಬಿಡಿ. ನಿಮ್ಮ ಮೇಲೆ ಅವರಿಗೆ ಲಕ್ಷ್ಯವಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ನಿಮ್ಮ ಚಿಂತಾಭಾರವನ್ನೆಲ್ಲಾ ಆತನ ಮೇಲೆ ಹಾಕಿರಿ ಆತನು ನಿಮಗೋಸ್ಕರ ಚಿಂತಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ನಿಮ್ಮ ಚಿಂತೆಯನ್ನೆಲ್ಲಾ ಆತನ ಮೇಲೆ ಹಾಕಿರಿ, ಆತನು ನಿಮಗೋಸ್ಕರ ಚಿಂತಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಆತನು ನಿಮ್ಮನ್ನು ಪರಿಪಾಲಿಸುವುದರಿಂದ ನಿಮ್ಮ ಚಿಂತೆಗಳನ್ನೆಲ್ಲಾ ಆತನಿಗೆ ಒಪ್ಪಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ನಿಮ್ಮ ಚಿಂತೆಯನ್ನೆಲ್ಲಾ ದೇವರ ಮೇಲೆ ಹಾಕಿರಿ. ಅವರು ನಿಮಗೋಸ್ಕರ ಚಿಂತಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

7 ತುಮ್ಚಿ ಸಗ್ಳಿ ಯಜ್ಜನಿಯಾ ತೆಜೆರ್ ಘಾಲಾ ಕಶ್ಯಾಕ್ ಮಟ್ಲ್ಯಾರ್, ತೊ ತುಮ್ಕಾ ಬಾಳ್ಗುನ್ ಘೆತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೇತ್ರನು 5:7
23 ತಿಳಿವುಗಳ ಹೋಲಿಕೆ  

ಪ್ರಭುವಿನ ಮೇಲೆ ಹಾಕು ನಿನ್ನ ಚಿಂತಾಭಾರವನು I ಉದ್ಧರಿಸುವನು, ಸಜ್ಜನರನೆಂದಿಗೂ ಕದಲಗೊಡಿಸನು II


ಯಾವ ವಿಷಯದಲ್ಲೂ ಚಿಂತಿಸದೆ, ನಿಮ್ಮ ಅಗತ್ಯಗಳಿಗಾಗಿ ದೇವರಲ್ಲಿ ಪ್ರಾರ್ಥಿಸಿರಿ. ಪ್ರಾರ್ಥಿಸುವಾಗಲೆಲ್ಲಾ ನಿಮ್ಮಲ್ಲಿ ಕೃತಜ್ಞತಾಭಾವ ಇರಲಿ.


ಪ್ರಭುವಿಗೆ ಬಿಡು ಜೀವನಯಾತ್ರಾ ಚಿಂತೆಯನು I ಭರವಸೆಯಿಂದಿರು, ಆತನದನು ಸಾಗಿಸುವನು II


ಸಜ್ಜನರನು ಪ್ರಭು ಕಟಾಕ್ಷಿಸುವನು I ಅವರ ಮೊರೆಗಾತ ಕಿವಿಗೊಡುವನು II


ಅನಂತರ ಯೇಸುಸ್ವಾಮಿ ತಮ್ಮ ಶಿಷ್ಯರಿಗೆ, “ಈ ಕಾರಣದಿಂದ ನೀವು ನಿಮ್ಮ ‘ಪ್ರಾಣಧಾರಣೆಗೆ ಏನು ಉಣ್ಣುವುದು, ದೇಹರಕ್ಷಣೆಗೆ ಏನು ಹೊದೆಯುವುದು’ ಎಂದು ಚಿಂತೆಮಾಡಬೇಡಿ.


ಇದಲ್ಲದೆ ಜನರು ತಮ್ಮ ಗಂಡುಹೆಣ್ಣು ಮಕ್ಕಳಿಗಾಗಿ ಮನಸ್ಸಿನಲ್ಲಿ ಬಹಳವಾಗಿ ನೊಂದುಕೊಂಡರು. ಮಾತ್ರವಲ್ಲ, ದಾವೀದನನ್ನು ಕಲ್ಲೆಸೆದು ಕೊಲ್ಲಬೇಕೆಂದಿದ್ದರು. ಆದುದರಿಂದ ಅವನು ಬಲು ಇಕ್ಕಟ್ಟಿಗೆ ಸಿಕ್ಕಿಕೊಂಡಿದ್ದನು.


ಯೇಸುವಾದರೋ ದೋಣಿಯ ಹಿಂಭಾಗದಲ್ಲಿ ದಿಂಬನ್ನು ಒರಗಿ ನಿದ್ದೆ ಮಾಡುತ್ತಿದ್ದರು. ಶಿಷ್ಯರು ಅವರನ್ನು ಎಬ್ಬಿಸಿ, “ಗುರುವೇ, ನಾವು ಸಾಯುತ್ತಿದ್ದೇವೆ, ತಮಗೆ ಚಿಂತೆಯೇ ಇಲ್ಲವೆ?” ಎಂದರು.


ಅವನು ಕೇವಲ ಕೂಲಿಯಾಳು; ಕುರಿಗಳ‍ ಚಿಂತೆ ಅವನಿಗಿಲ್ಲ.


ಬಡವನು, ದುರ್ಬಲನು ಆದೆನಗೆ ಪ್ರಭೂ, ನೀ ಹಿತಚಿಂತಕನು I ತಡಮಾಡಬೇಡ ದೇವಾ, ನೀನೆನಗುದ್ಧಾರಕನು, ಸಹಾಯಕನು II


ನಿನ್ನ ಕಾರ್ಯಭಾರವನ್ನು ಸರ್ವೇಶ್ವರನಿಗೆ ವಹಿಸು; ಆಗ ಸಫಲವಾಗುವುದು ನಿನ್ನ ಯೋಜನೆಯು.


ಚಿಂತಿಸಿ, ಚಿಂತಿಸಿ ನಿಮ್ಮ ಜೀವನಾವಧಿಯನ್ನು ಕೊಂಚಕಾಲವಾದರೂ ದೀರ್ಘಮಾಡಲು ನಿಮ್ಮಲ್ಲಿ ಯಾರಿಂದಾದೀತು?


ಉಡುಗೆತೊಡುಗೆಗಳ ಚಿಂತೆ ನಿಮಗೇಕೆ? ವನಕುಸುಮಗಳು ಬೆಳೆಯುವ ರೀತಿಯನ್ನು ಗಮನಿಸಿ ನೋಡಿ; ಅವು ದುಡಿಯುವುದಿಲ್ಲ, ನೂಲುವುದಿಲ್ಲ.


ಆದುದರಿಂದ ತಿನ್ನಲು ಏನು? ಕುಡಿಯಲು ಏನು? ಉಡಲು ಏನು? ಎಂದು ಪೇಚಾಡಬೇಡಿ.


ಇಂಥ ಅಲ್ಪಕಾರ್ಯಗಳನ್ನು ಮಾಡಲು ನೀವು ಅಶಕ್ತರಾಗಿ ಇರುವಾಗ, ಮಿಕ್ಕವುಗಳನ್ನು ಕುರಿತು ಚಿಂತಿಸುವುದೇಕೆ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು