Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಯೋಹಾನನು 1:10 - ಕನ್ನಡ ಸತ್ಯವೇದವು C.L. Bible (BSI)

10 ನಾವು ಪಾಪಮಾಡಲಿಲ್ಲವೆಂದು ಹೇಳಿದರೆ ದೇವರನ್ನು ಸುಳ್ಳುಗಾರರನ್ನಾಗಿಸುತ್ತೇವೆ ಮತ್ತು ಅವರ ವಾಣಿ ನಮ್ಮಲ್ಲಿ ಇರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ನಾವು ಪಾಪ ಮಾಡಲಿಲ್ಲವೆಂದು ಹೇಳಿದರೆ ಆತನನ್ನು ಸುಳ್ಳುಗಾರನನ್ನಾಗಿ ಮಾಡಿದಂತಾಗುತ್ತದೆ ಮತ್ತು ಆತನ ವಾಕ್ಯವು ನಮ್ಮಲ್ಲಿ ನೆಲೆಗೊಂಡಿರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ನಾವು ಪಾಪಮಾಡಲಿಲ್ಲವೆಂದು ಹೇಳಿದರೆ ಆತನನ್ನು ಸುಳ್ಳುಗಾರನನ್ನಾಗಿ ಮಾಡುತ್ತೇವೆ ಮತ್ತು ಆತನ ವಾಕ್ಯವು ನಮ್ಮಲ್ಲಿ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ನಾವು ಪಾಪಮಾಡಿಲ್ಲವೆಂದು ಹೇಳಿದರೆ ದೇವರನ್ನೇ ಸುಳ್ಳುಗಾರನನ್ನಾಗಿ ಮಾಡುವವರಾಗಿದ್ದೇವೆ ಮತ್ತು ದೇವರ ವಾಕ್ಯವನ್ನು ಒಪ್ಪಿಕೊಳ್ಳದವರಾಗಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ನಾವು ಪಾಪ ಮಾಡಲಿಲ್ಲವೆಂದು ಹೇಳಿದರೆ ದೇವರನ್ನು ಸುಳ್ಳುಗಾರನನ್ನಾಗಿ ಮಾಡುತ್ತೇವೆ. ಅವರ ವಾಕ್ಯವು ನಮ್ಮಲ್ಲಿ ಬಾಳುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

10 ಅಮಿ ಪಾಪ್ ಕರುಕ್ ನಾ ಮನುನ್ ಸಾಂಗ್ಲ್ಯಾರ್, ದೆವಾಕುಚ್ ಅಮಿ ಝುಟೊ ಕರ್ಲ್ಯಾ ಸಾರ್ಕೆ ಹೊತಾ, ಅನಿ ದೆವಾಚಿ ಗೊಸ್ಟ್ ಅಮ್ಚ್ಯಾ ಮದ್ದಿ ನಾ ಮನುನ್ ಹೊತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಯೋಹಾನನು 1:10
12 ತಿಳಿವುಗಳ ಹೋಲಿಕೆ  

ನಮ್ಮಲ್ಲಿ ಪಾಪವಿಲ್ಲವೆಂದು ನಾವು ಹೇಳಿಕೊಂಡರೆ, ನಮ್ಮನ್ನು ನಾವೇ ವಂಚಿಸಿಕೊಳ್ಳುತ್ತೇವೆ ಮತ್ತು ಸತ್ಯವೆಂಬುದೇ ನಮ್ಮಲ್ಲಿ ಇರುವುದಿಲ್ಲ.


ದೇವರ ಪುತ್ರನಲ್ಲಿ ವಿಶ್ವಾಸವಿಡುವವನು ಈ ಸಾಕ್ಷ್ಯವನ್ನು ತನ್ನ ಅಂತರಂಗದಲ್ಲೇ ಹೊಂದಿರುತ್ತಾನೆ. ದೇವರಲ್ಲಿ ವಿಶ್ವಾಸವಿಡದವನಾದರೋ ಅವರನ್ನು ಸುಳ್ಳುಗಾರರನ್ನಾಗಿಸುತ್ತಾನೆ. ಹೇಗೆಂದರೆ, ದೇವರು ತಮ್ಮ ಪುತ್ರನ ಪರವಾಗಿ ಕೊಟ್ಟ ಸಾಕ್ಷ್ಯದಲ್ಲಿ ಅವನಿಗೆ ನಂಬಿಕೆಯಿಲ್ಲ.


ದೇವರನ್ನು ಬಲ್ಲೆನೆಂದು ಹೇಳಿಕೊಳ್ಳುತ್ತಾ ಅವರ ಆಜ್ಞೆಗಳನ್ನು ಕೈಗೊಳ್ಳದೆ ಇರುವವನು ಸುಳ್ಳುಗಾರ ಮತ್ತು ಸತ್ಯವೆಂಬುದೇ ಅವನಲ್ಲಿ ಇರುವುದಿಲ್ಲ.


ನಮ್ಮಲ್ಲಿ ನೆಲೆಗೊಂಡಿರುವ ಹಾಗೂ ನಮ್ಮಲ್ಲಿ ಶಾಶ್ವತವಾಗಿರುವ ಸತ್ಯದ ಪ್ರಯುಕ್ತ ನಾನು ಮತ್ತು ಸತ್ಯವನ್ನು ಅರಿತಿರುವ ಎಲ್ಲರು ನಿಮ್ಮಲ್ಲಿ ಪ್ರೀತಿಯನ್ನಿಟ್ಟಿದ್ದೇವೆ.


ಪಾಪಗಳ ನೀ ಪಟ್ಟಿಮಾಡಿದೆಯಾದರೆ ಪ್ರಭು I ನಿನ್ನ ಮುಂದೆ ಯಾರುತಾನೆ ನಿಲ್ಲಬಲ್ಲರು ವಿಭು? II


ಬರೆದಿಹೆನು ಮಕ್ಕಳಿರಾ, ಇದನ್ನು ಏಕೆನೆ, ಬಲ್ಲವರಾದಿರಿ ಪರಮ ಪಿತನನ್ನು. ಬರೆದಿಹೆನು‍ ಶಕ್ತಿಯುತ ಯುವಜನರಿರಾ, ಇದನ್ನು ಏಕೆನೆ, ನೆಲೆಗೊಳಿಸಿರುವಿರಿ ನಿಮ್ಮಲ್ಲಿ ದೈವವಾಕ್ಯವನ್ನು ಮಾತ್ರವಲ್ಲ, ನೀವು ಜಯಿಸಿದ್ದಾಯಿತು ಆ ಕಡುಗೇಡಿಗನನ್ನು.


ಈ ಮಾತು ಅಬದ್ಧವೆಂದು ಯಾರು ಸ್ಥಾಪಿಸಬಲ್ಲರು? ನಾನು ಸುಳ್ಳುಗಾರನೆಂದು ನಿಮ್ಮಲ್ಲಿ ಯಾರು ತೋರಿಸಬಲ್ಲನು?”


ಕ್ರಿಸ್ತಯೇಸುವಿನ ವಾಕ್ಯ ನಿಮ್ಮಲ್ಲಿ ನೆಲೆಸಿ ಸಮೃದ್ಧಿಯಾಗಿ ಬೆಳೆಯಲಿ. ಜ್ಞಾನಸಂಪನ್ನರಾಗಿ ಒಬ್ಬರಿಗೊಬ್ಬರು ಉಪದೇಶಮಾಡಿರಿ ಹಾಗೂ ಬುದ್ಧಿ ಹೇಳಿಕೊಳ್ಳಿರಿ. ಕೃತಜ್ಞತೆಯುಳ್ಳವರಾಗಿ ಕೀರ್ತನೆಗಳಿಂದಲೂ ಸಂಗೀತಗಳಿಂದಲೂ ಭಕ್ತಿಗೀತೆಗಳಿಂದಲೂ ಹೃದಯಾಂತರಾಳದಿಂದ ದೇವರಿಗೆ ಹಾಡಿರಿ.


ಪ್ರಿಯಮಕ್ಕಳೇ, ನೀವಂತೂ ದೇವರಿಗೆ ಸೇರಿದವರು. ಲೋಕದಲ್ಲಿರುವ ದುರಾತ್ಮಕ್ಕಿಂತಲೂ ನಿಮ್ಮಲ್ಲಿರುವ ಆತ್ಮವು ಶ್ರೇಷ್ಠವಾದುದು. ಆದ್ದರಿಂದಲೇ ಆ ಕಪಟ ಪ್ರವಾದಿಗಳನ್ನು ಜಯಿಸಿದ್ದೀರಿ.


ನರನು ಎಷ್ಟರವನು? ಅವನು ಪರಿಶುದ್ಧನಿರಲು ಸಾಧ್ಯವೆ? ಸ್ತ್ರೀಯರಲ್ಲಿ ಹುಟ್ಟಿದವನು ನೀತಿವಂತನಾಗಿರಬಹುದೆ?


“ನೀವಾದರೋ, ‘ನಾವು ನಿರ್ದೋಷಿಗಳು, ಸರ್ವೇಶ್ವರನ ಕೋಪ ನಮ್ಮ ಮೇಲಿಂದ ತೊಲಗಿಹೋಗಿದೆ, ಇದು ನಿಶ್ಚಯ’ ಎಂದುಕೊಂಡಿದ್ದೀರಿ. ‘ನಾವು ಪಾಪಮಾಡಿಲ್ಲ’ ಎಂದು ನೀವು ಹೇಳಿದ ಕಾರಣ ನಿಮ್ಮನ್ನು ನ್ಯಾಯತೀರ್ಪಿಗೆ ಗುರಿಮಾಡಿಯೇ ತೀರುವೆನು.


ಆತನ ಮಾತನ್ನು ಅಂಗೀಕರಿಸುವವನು ದೇವರು ಸತ್ಯಸ್ವರೂಪಿ ಎಂದು ಸಾದೃಶ್ಯಪಡಿಸುತ್ತಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು