Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಯೋಹಾನನು 1:2 - ಕನ್ನಡ ಸತ್ಯವೇದವು C.L. Bible (BSI)

2 ಆ ಜೀವ ಪ್ರತ್ಯಕ್ಷವಾಯಿತು. ಅದನ್ನು ನಾವು ನೋಡಿದ್ದೇವೆ. ಆ ಬಗ್ಗೆ ಸಾಕ್ಷಿ ಹೇಳುತ್ತೇವೆ. ಪಿತನ ಬಳಿಯಿದ್ದು ನಮಗೆ ಪ್ರತ್ಯಕ್ಷವಾದಂಥ ನಿತ್ಯಜೀವವನ್ನು ನಿಮಗೆ ಸಾರುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಆ ಜೀವವು ಪ್ರತ್ಯಕ್ಷವಾಯಿತು. ತಂದೆಯ ಬಳಿಯಲ್ಲಿದ್ದು ನಮಗೆ ಪ್ರತ್ಯಕ್ಷವಾದಂಥ ಆ ನಿತ್ಯಜೀವವನ್ನು ನಾವು ಕಂಡು ಅದನ್ನು ಕುರಿತು ಸಾಕ್ಷಿ ಹೇಳಿ ಅದನ್ನು ನಿಮಗೆ ತಿಳಿಯಪಡಿಸುತ್ತಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಆ ಜೀವವು ಪ್ರತ್ಯಕ್ಷವಾಯಿತು; ತಂದೆಯ ಬಳಿಯಲ್ಲಿದ್ದು ನಮಗೆ ಪ್ರತ್ಯಕ್ಷವಾದಂಥ ಆ ನಿತ್ಯಜೀವವನ್ನು ನಾವು ಕಂಡು ಅದನ್ನು ಕುರಿತು ಸಾಕ್ಷಿ ಹೇಳಿ ಅದನ್ನು ನಿಮಗೆ ಪ್ರಸಿದ್ಧಿಪಡಿಸುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಆ ಜೀವವು ನಮಗೆ ಪ್ರತ್ಯಕ್ಷವಾಯಿತು. ನಾವು ಅದನ್ನು ನೋಡಿದ್ದರಿಂದ ಅದರ ಬಗ್ಗೆ ಸಾಕ್ಷಿ ಹೇಳ ಬಲ್ಲೆವು. ನಾವೀಗ ನಿಮಗೆ ಆ ಜೀವದ ಬಗ್ಗೆ ಸಾಕ್ಷಿ ಹೇಳುತ್ತೇವೆ. ಅದು ತಂದೆಯಾದ ದೇವರ ಸಂಗಡವಿದ್ದ ನಿತ್ಯವಾದ ಜೀವ. ದೇವರು ಈ ಜೀವವನ್ನು ನಮಗೆ ತೋರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಈ ಜೀವವು ಪ್ರತ್ಯಕ್ಷವಾಯಿತು. ತಂದೆಯ ಬಳಿಯಲ್ಲಿದ್ದು ನಮಗೆ ಪ್ರತ್ಯಕ್ಷವಾದಂಥ ಆ ನಿತ್ಯಜೀವವನ್ನು ನಾವು ಕಂಡು, ಅದನ್ನು ಕುರಿತು ಸಾಕ್ಷಿ ಹೇಳಿ ಅದನ್ನು ನಿಮಗೆ ತಿಳಿಯಪಡಿಸುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

2 ತೊ ಶಾಶ್ವತ್ ಜಿವ್ ಅಮ್ಕಾ ದಿಸ್ಲೊ. ದೆವ್ ಬಾಬಾಚ್ಯಾ ವಾಂಗ್ಡಾ ಹೊತ್ತ್ಯಾ ತ್ಯಾ ಜಿವಾಚ್ಯಾ ವಚನಾಕ್ ಅಮಿ ಬಗಟಲ್ಲ್ಯಾಸಾಟ್ನಿ, ತೆಚ್ಯಾ ವಿಶಯಾತ್ ಸಾಕ್ಷಿ ದಿತಾಂವ್ ಅನಿ ತುಮ್ಕಾ ಸಾಂಗ್ತಾಂವ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಯೋಹಾನನು 1:2
37 ತಿಳಿವುಗಳ ಹೋಲಿಕೆ  

ದೇವರ ಪುತ್ರ ಆಗಮಿಸಿ, ಸತ್ಯಸ್ವರೂಪರಾದ ದೇವರನ್ನು ನಾವು ತಿಳಿದುಕೊಳ್ಳುವಂತೆ ನಮಗೆ ಅರಿವನ್ನು ನೀಡಿದ್ದಾರೆ. ಇದನ್ನು ನಾವು ಬಲ್ಲೆವು. ದೇವರ ಪುತ್ರರಾದ ಯೇಸುಕ್ರಿಸ್ತರಲ್ಲಿ ನೆಲೆಸಿರುವ ನಾವು ಸತ್ಯಸ್ವರೂಪಿಯಲ್ಲೇ ನೆಲೆಸಿದ್ದೇವೆ. ನಿಜವಾದ ದೇವರೂ ನಿತ್ಯಜೀವವೂ ಇವರೇ.


ಆ ದಿವ್ಯವಾಣಿಯಲ್ಲಿ ಸಜ್ಜೀವವಿತ್ತು. ಆ ಜೀವವೇ ಮಾನವಜನಾಂಗದ ಜ್ಯೋತಿಯಾಗಿತ್ತು.


ನಿಜವಾಗಿಯೂ ನಮ್ಮ ಧರ್ಮದ ನಿಗೂಢಾರ್ಥ ಶ್ರೇಷ್ಠವಾದದ್ದು ಎಂಬುದು ನಿಸ್ಸಂದೇಹವಾದ ವಿಷಯ. “ನರಮಾನವ ರೂಪದಲಿ ಪ್ರತ್ಯಕ್ಷನಾಗಿ ದೇವರಿಗೆ ಪ್ರಿಯನೆಂದು ಪವಿತ್ರಾತ್ಮನಿಂದ ಪ್ರಕಟಿತನಾಗಿ ದೇವದೂತರಿಗೆ ಪ್ರದರ್ಶಿತವಾಗಿ ಅನ್ಯಜನರಿಗೆ ಪ್ರಬೋಧಿತನಾಗಿ ಜಗದಲ್ಲೆಲ್ಲೂ ವಿಶ್ವಾಸಪಡೆದವನಾಗಿ ಸ್ವರ್ಗಕ್ಕೇರಿದಾತ ಮಹಿಮಾನ್ವಿತ ಯೇಸುಕ್ರಿಸ್ತ.


ಏಕೈಕ ನಿಜದೇವರಾದ ನಿಮ್ಮನ್ನೂ ನೀವು ಕಳುಹಿಸಿಕೊಟ್ಟ ಯೇಸು ಕ್ರಿಸ್ತನನ್ನೂ ಅರಿತುಕೊಳ್ಳುವುದೇ ನಿತ್ಯಜೀವ.


ದೇವರು ನಮಗೆ ನಿತ್ಯಜೀವವನ್ನು ಅನುಗ್ರಹಿಸಿದ್ದಾರೆ. ಆ ಜೀವ ಅವರ ಪುತ್ರನಲ್ಲಿದೆ ಎಂಬುದೇ ಈ ಸಾಕ್ಷ್ಯ.


ಪಾಪಮಾಡುವವನು ಸೈತಾನನ ಸಂತಾನದವನು. ಸೈತಾನನು ಆದಿಯಿಂದಲೂ ಪಾಪಮಾಡಿದವನೇ. ಅವನ ದುಷ್ಕೃತ್ಯಗಳನ್ನು ವಿನಾಶಗೊಳಿಸಲೆಂದೇ ದೇವರ ಪುತ್ರ ಕಾಣಿಸಿಕೊಂಡಿದ್ದು.


ಅದಕ್ಕೆ ಯೇಸು, “ಮಾರ್ಗವೂ ಸತ್ಯವೂ ಜೀವವೂ ನಾನೇ. ನನ್ನ ಮುಖಾಂತರ ಬಾರದ ಹೊರತು ಯಾರೂ ಪಿತನ ಬಳಿಗೆ ಬರಲಾರರು.


ಪಾಪರಹಿತರಾದ ಕ್ರಿಸ್ತಯೇಸು ಪಾಪಪರಿಹಾರ ಮಾಡಲೆಂದೇ ಕಾಣಿಸಿಕೊಂಡರೆಂದು ನೀವು ಬಲ್ಲಿರಿ.


ಈ ಕಾಲದಲ್ಲೂ ನಮ್ಮ ಉದ್ಧಾರಕ ಕ್ರಿಸ್ತಯೇಸುವಿನ ಪ್ರತ್ಯಕ್ಷದ ಮೂಲಕ ಅದನ್ನು ಬಹಿರಂಗಪಡಿಸಲಾಗಿದೆ. ಮೃತ್ಯುಶಕ್ತಿಯನ್ನು ವಿನಾಶಗೊಳಿಸಿ ಅಮರ ಜೀವವನ್ನು ಶುಭಸಂದೇಶದ ಮೂಲಕ ಬೆಳಕಿಗೆ ತಂದವರು ಯೇಸುವೇ.


ಕಾಲವು ಪರಿಪಕ್ವವಾದಾಗ ದೇವರು ತಮ್ಮ ಪುತ್ರನನ್ನೇ ಕಳುಹಿಸಿಕೊಟ್ಟರು. ಇವರು ಧರ್ಮಶಾಸ್ತ್ರಕ್ಕೆ ಅಧೀನರಾದವರನ್ನು ಬಿಡುಗಡೆ ಮಾಡುವುದಕ್ಕಾಗಿಯೂ ದೇವಪುತ್ರರ ಪದವಿಯನ್ನು ನಮಗೆ ಒದಗಿಸಿಕೊಡುವುದಕ್ಕಾಗಿಯೂ ಒಬ್ಬ ಸ್ತ್ರೀಯಲ್ಲಿ ಜನಿಸಿದರು. ಧರ್ಮಶಾಸ್ತ್ರಕ್ಕೆ ಅಧೀನರಾಗಿಯೇ ಹುಟ್ಟಿದರು.


ಮೊತ್ತಮೊದಲಿನಿಂದಲೂ ನನ್ನ ಸಂಗಡ ಇದ್ದ ನೀವು ಕೂಡ ನನ್ನನ್ನು ಕುರಿತು ಸಾಕ್ಷಿನೀಡುವವರಾಗಿದ್ದೀರಿ.


ಜೀವದೊಡೆಯನನ್ನು ನೀವು ಕೊಂದುಹಾಕಿದಿರಿ; ದೇವರು ಅವರನ್ನು ಪುನರುತ್ಥಾನಗೊಳಿಸಿದರು. ಇದಕ್ಕೆ ನಾವೇ ಸಾಕ್ಷಿಗಳು.


ಕ್ರಿಸ್ತಯೇಸುವಿನ ಮರಣ -ಯಾತನೆಯನ್ನು ಕಣ್ಣಾರೆ ಕಂಡವನೂ ಮುಂದೆ ಪ್ರತ್ಯಕ್ಷವಾಗುವ ಮಹಿಮೆಯಲ್ಲಿ ಭಾಗಿಯಾಗಲಿರುವವನೂ ಸಭಾಪ್ರಮುಖನೂ ಆದ ನಾನು, ನಿಮ್ಮಲ್ಲಿ ಪ್ರಮುಖರಾದ ಇತರರನ್ನು ಪ್ರೋತ್ಸಾಹಿಸಿ ವಿನಂತಿಸುವುದೇನೆಂದರೆ:


ಶರೀರ ಸ್ವಭಾವದ ಬಲಹೀನತೆಯ ನಿಮಿತ್ತ ಧರ್ಮಶಾಸ್ತ್ರಕ್ಕೆ ಯಾವುದು ಸಾಧ್ಯವಾಗದೆ ಹೋಯಿತೋ, ಅದು ದೇವರಿಗೆ ಸಾಧ್ಯವಾಯಿತು. ಪಾಪಪರಿಹಾರಕ್ಕಾಗಿ ತಮ್ಮ ಸ್ವಂತ ಪುತ್ರನನ್ನು ಪಾಪಾಧೀನವಾದ ನಮ್ಮ ಸ್ವಭಾವದಂಥ ಶರೀರ ಸ್ವಭಾವದಲ್ಲಿ ಕಳುಹಿಸಿಕೊಟ್ಟರು. ಆ ಸ್ವಭಾವದಲ್ಲೇ ಪಾಪಕ್ಕೆ ಮರಣದಂಡನೆಯನ್ನು ವಿಧಿಸಿದರು.


ಅವರು ಕಾಣಿಸಿಕೊಂಡದ್ದು ಎಲ್ಲಾ ಜನರಿಗೆ ಅಲ್ಲ; ದೇವರಿಂದ ಸಾಕ್ಷಿಗಳಾಗಿ ಆಯ್ಕೆಯಾಗಿದ್ದ ನಮಗೆ. ಅವರು ಪುನರುತ್ಥಾನ ಹೊಂದಿದ ನಂತರ ಅವರೊಡನೆಯೇ ಊಟಮಾಡಿದವರು ನಾವು.


ಈ ಘಟನೆಗಳಿಗೆ ನಾವು ಸಾಕ್ಷಿಗಳು; ನಾವು ಮಾತ್ರವಲ್ಲ, ದೈವೇಚ್ಛೆಯಂತೆ ನಡೆಯುವವರಿಗೆ ದೇವರು ದಯಪಾಲಿಸುವ ಪವಿತ್ರಾತ್ಮ ಅವರು ಕೂಡ ಸಾಕ್ಷಿಯಾಗಿದ್ದಾರೆ,” ಎಂದನು.


ಈ ಯೇಸುವನ್ನೇ ದೇವರು ಪುನರುತ್ಥಾನಗೊಳಿಸಿದ್ದಾರೆ; ಈ ಘಟನೆಗೆ ನಾವೆಲ್ಲರೂ ಸಾಕ್ಷಿಗಳಾಗಿದ್ದೇವೆ.


ಅಂದರೆ, ಸ್ನಾನಿಕ ಯೊವಾನ್ನನು ಸ್ನಾನದೀಕ್ಷೆಯನ್ನು ಕುರಿತು ಬೋಧಿಸಿದ ದಿನದಿಂದ ಯೇಸುವಿನ ಸ್ವರ್ಗಾರೋಹಣದ ದಿನದವರೆಗೂ ನಮ್ಮ ಸಂಗಡ ಇದ್ದವನಾಗಿರಬೇಕು.”


ಯೇಸು ಸತ್ತು ಜೀವಂತರಾಗಿ ಎದ್ದ ಬಳಿಕ ತಮ್ಮ ಶಿಷ್ಯರಿಗೆ ಕಾಣಿಸಿಕೊಂಡದ್ದು ಇದು ಮೂರನೆಯ ಸಾರಿ.


ಪಿತನೇ, ಜಗತ್ತು ಉಂಟಾಗುವ ಮೊದಲೇ ನಿಮ್ಮೊಡನೆ ನನಗಿದ್ದ ಅದೇ ಮಹಿಮೆಯನ್ನು ಕೊಟ್ಟು ನನ್ನನ್ನು ಈಗ ನಿಮ್ಮ ಸನ್ನಿಧಿಯಲ್ಲಿ ಮಹಿಮೆಪಡಿಸಿರಿ.


ಹೌದು, ನಾನು ಪಿತನಿಂದಲೇ ಹೊರಟು ಈ ಲೋಕಕ್ಕೆ ಬಂದಿದ್ದೇನೆ. ಈಗ ಈ ಲೋಕವನ್ನು ಬಿಟ್ಟು ಪಿತನಲ್ಲಿಗೆ ಹೋಗುತ್ತಿದ್ದೇನೆ,” ಎಂದರು.


ನಾನಾಡುವ ಮಾತುಗಳು ಪಿತನ ಸನ್ನಿಧಿಯಲ್ಲಿ ನಾನು ಕಂಡದ್ದನ್ನೇ ನಿರೂಪಿಸುತ್ತವೆ. ನೀವು ಮಾಡುವ ಕಾರ್ಯಗಳೋ ನಿಮ್ಮ ತಂದೆಯಿಂದ ನೀವು ಕಲಿತದ್ದನ್ನೇ ವ್ಯಕ್ತಪಡಿಸುತ್ತವೆ,” ಎಂದರು.


ನಾನಾದರೋ ಆತನನ್ನು ಅರಿತಿದ್ದೇನೆ. ಏಕೆಂದರೆ, ನಾನು ಬಂದುದು ಆತನಿಂದಲೇ. ಆತನೇ ನನ್ನನ್ನು ಕಳುಹಿಸಿದ್ದು,”


ಸ್ವರ್ಗಲೋಕದಿಂದಲೇ ಇಳಿದುಬಂದ ನರಪುತ್ರನೇ ಹೊರತು ಬೇರೆ ಯಾರೂ ಸ್ವರ್ಗಕ್ಕೆ ಏರಿಹೋದವರಿಲ್ಲ.


ಯಾರೂ ಎಂದೂ ದೇವರನ್ನು ಕಂಡಿಲ್ಲ; ಪಿತನ ವಕ್ಷಸ್ಥಲದಲ್ಲಿರುವ, ಸ್ವತಃ ದೇವರಾಗಿರುವ ಏಕೈಕ ಪುತ್ರನೇ ಅವರನ್ನು ತಿಳಿಯಪಡಿಸಿದ್ದಾರೆ.


ನಿಮಗೆ ನಾವು ಪ್ರಚುರಪಡಿಸುವ ಸಜೀವವಾಣಿ ಆದಿಯಿಂದ ಇರುವಂಥಾದ್ದು. ಇದನ್ನು ಕಣ್ಣಾರೆ ಕಂಡಿದ್ದೇವೆ, ಕಿವಿಯಾರೆ ಕೇಳಿದ್ದೇವೆ, ಮನಸ್ಸಾರೆ ಗ್ರಹಿಸಿದ್ದೇವೆ ಮತ್ತು ಕೈಯಾರೆ ಮುಟ್ಟಿದ್ದೇವೆ.


ನಾನು ಅವುಗಳಿಗೆ ನಿತ್ಯಜೀವವನ್ನು ಕೊಡುತ್ತೇನೆ. ಅವು ಎಂದಿಗೂ ನಾಶ ಆಗುವುದಿಲ್ಲ. ನನ್ನ ಕೈಯಿಂದ ಅವನ್ನು ಯಾರೂ ಕಸಿದುಕೊಳ್ಳಲಾರರು,


ಇದು ಕಣ್ಣಾರೆ ಕಂಡವನ ಹೇಳಿಕೆ. ಈ ಹೇಳಿಕೆ ಸತ್ಯವಾದುದು; ತಾನು ಸತ್ಯವನ್ನೇ ನುಡಿಯುತ್ತಿದ್ದೇನೆಂಬ ಅರಿವು ಅವನಿಗೆ ಇದೆ. ನೀವು ವಿಶ್ವಾಸಿಸಬೇಕೆಂದೇ ಆತನು ಇದನ್ನು ಹೇಳಿದ್ದಾನೆ.


ಕ್ರಿಸ್ತಯೇಸು ನಮಗೆ ವಾಗ್ದಾನಮಾಡಿರುವ ನಿತ್ಯಜೀವ ಇದೇ.


ದೇವರ ಆತ್ಮದಿಂದ ಬಂದ ಪ್ರೇರಣೆಯನ್ನು ನೀವು ಹೀಗೆ ಗುರುತಿಸಬಹುದು; ಮನುಷ್ಯ ಆಗಿ ಬಂದ ಕ್ರಿಸ್ತಯೇಸುವನ್ನು ಒಪ್ಪಿಕೊಳ್ಳುವ ಆತ್ಮವು ದೇವರಿಂದ ಪ್ರೇರಿತವಾದುದು.


ಪಿತನು ತಮ್ಮ ಪುತ್ರನನ್ನು ಲೋಕೋದ್ಧಾರಕನನ್ನಾಗಿ ಕಳುಹಿಸಿಕೊಟ್ಟದ್ದನ್ನು ನಾವು ಕಣ್ಣಾರೆ ಕಂಡಿದ್ದೇವೆ. ಇದರ ವಿಷಯವಾಗಿ ಸಾಕ್ಷಿ ಹೇಳುತ್ತೇವೆ.


ದೇವರ ಪುತ್ರನ ನಾಮದಲ್ಲಿ ವಿಶ್ವಾಸ ಇಟ್ಟಿರುವ ನೀವು ನಿತ್ಯಜೀವವನ್ನು ಪಡೆದವರು ಎಂಬುದನ್ನು ತಿಳಿಸಲೆಂದೇ ನಾನು ನಿಮಗೆ ಇದನ್ನೆಲ್ಲಾ ಬರೆದಿದ್ದೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು