Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಯೋಹಾನನು 1:4 - ಕನ್ನಡ ಸತ್ಯವೇದವು C.L. Bible (BSI)

4 ನಮ್ಮೆಲ್ಲರ ಆನಂದವು ಪರಿಪೂರ್ಣವಾಗುವಂತೆ ಇದನ್ನು ಬರೆಯುತ್ತಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ನಿಮ್ಮ ಸಂತೋಷವು ಪರಿಪೂರ್ಣವಾಗಬೇಕೆಂದು ನಾವು ಇವುಗಳನ್ನು ನಿಮಗೆ ಬರೆಯುತ್ತಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ನಮ್ಮುಭಯತರ ಸಂತೋಷವು ಪರಿಪೂರ್ಣವಾಗಬೇಕೆಂದು ನಾವು ಈ ಮಾತುಗಳನ್ನು ಬರೆಯುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ನಮ್ಮ ಸಂತೋಷವು ಪರಿಪೂರ್ಣವಾಗಲೆಂದು ನಾವು ನಿಮಗೆ ಈ ಸಂಗತಿಗಳನ್ನು ಬರೆಯುತ್ತಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ನಮ್ಮ ಸಂತೋಷವು ಪರಿಪೂರ್ಣವಾಗಬೇಕೆಂದು ನಾವು ಇವುಗಳನ್ನು ಬರೆಯುತ್ತಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

4 ಅಮ್ಚಿ ಕುಶಿ ಪುರಾ ಹೊಂವ್ದಿ ಮನುನ್ ಅಮಿ ತುಮ್ಕಾ ಹ್ಯಾ ಸಗ್ಳ್ಯಾ ಸಂಗ್ತಿಯಾ ಲಿವ್ಕ್ ಲಾಗ್ಲಾಂವ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಯೋಹಾನನು 1:4
10 ತಿಳಿವುಗಳ ಹೋಲಿಕೆ  

“ನನ್ನಲ್ಲಿರುವ ಆನಂದವು ನಿಮ್ಮಲ್ಲಿ ಇರಬೇಕೆಂತಲೂ ನಿಮ್ಮ ಆನಂದವು ತುಂಬಿ ತುಳುಕಬೇಕೆಂತಲೂ ಇದನ್ನೆಲ್ಲಾ ನಿಮಗೆ ಹೇಳುತ್ತಿದ್ದೇನೆ.


ಈ ತನಕ ನನ್ನ ಹೆಸರಿನಲ್ಲಿ ನೀವೇನನ್ನೂ ಕೇಳಲಿಲ್ಲ. ಕೇಳಿ, ನಿಮಗೆ ದೊರೆಯುವುದು. ಆಗ ನಿಮ್ಮ ಆನಂದವು ತುಂಬಿ ತುಳುಕುವುದು.


ನಾನು ನಿಮಗೆ ತಿಳಿಸಬೇಕಾದ ವಿಷಯಗಳು ಬಹಳಷ್ಟಿವೆ. ಆದರೆ ಅವುಗಳನ್ನು ಕಾಗದಪತ್ರಗಳ ಮೂಲಕ ತಿಳಿಸಲು ನನಗೆ ಇಷ್ಟವಿಲ್ಲ. ನಾನೇ ನಿಮ್ಮಲ್ಲಿಗೆ ಬಂದು ನಿಮ್ಮ ಸಂಗಡ ಮಾತನಾಡುವ ನಿರೀಕ್ಷೆ ಇದೆ. ಹೀಗೆ ಮುಖಾಮುಖಿಯಾಗಿ ಮಾತನಾಡುವುದರಿಂದ ಪೂರ್ಣಸಂತೋಷವೂ ಆಗುತ್ತದೆ.


ನಿಮ್ಮ ವಿಶ್ವಾಸದ ಬಗ್ಗೆ ನಾವು ದಬ್ಬಾಳಿಕೆ ನಡೆಸುತ್ತಿದ್ದೇವೆಂದು ತಿಳಿಯಬೇಡಿ; ವಿಶ್ವಾಸದಲ್ಲಿ ನೀವು ದೃಢರಾಗಿಯೇ ಇದ್ದೀರಿ. ನಿಮ್ಮ ಸಂತೋಷಕ್ಕಾಗಿ ನಾವು ನಿಮ್ಮೊಡನೆ ಸಹಕರಿಸುತ್ತೇವೆ.


ಹೌದು, ಜ್ಞಾನವನ್ನು ಮೀರಿದ ಈ ಪ್ರೀತಿಯನ್ನು ಅರಿತುಕೊಳ್ಳಲು ಆಸಕ್ತರಾಗಬೇಕು, ದೇವರ ಪರಿಪೂರ್ಣತೆಯಿಂದ ತುಂಬಿದವರಾಗಬೇಕು ಎಂದು ನಾನು ಬೇಡಿಕೊಳ್ಳುತ್ತೇನೆ.


ಮದುಮಗಳು ಮದುಮಗನಿಗೆ ಸೇರಿದವಳು. ಮದುಮಗನ ಗೆಳೆಯನಾದರೋ ಪಕ್ಕದಲ್ಲಿದ್ದು ಮದುಮಗನ ಕರೆಗೆ ಕಿವಿಗೊಡುತ್ತಾನೆ; ಆತನ ಸ್ವರ ಕೇಳಿ ಹರ್ಷಿಸುತ್ತಾನೆ. ಇಂಥ ಆನಂದದಿಂದ ನಾನೀಗ ಭರಿತನಾಗಿದ್ದೇನೆ.


ನಾನು ಪಡೆಯುವೆ ಸರ್ವೇಶ್ವರನಲ್ಲಿ ಪರಮಾನಂದ ಹಿರಿಹಿಗ್ಗುವುದು ನನ್ನ ದೇವರಲಿ ನನ್ನಾತ್ಮ. ಮದುವಣಿಗನಿಗೆ ಬಾಸಿಂಗವನು ತೊಡಿಸುವಂತೆ ವಧುವಿಗೆ ಆಭರಣಗಳಿಂದ ಅಲಂಕರಿಸುವಂತೆ ಹೊದಿಸಿಹನಾತ ನನಗೆ ಮುಕ್ತಿಯೆಂಬ ವಸ್ತ್ರವನು ತೊಡಿಸಿಹನು ನನಗೆ ನೀತಿಯೆಂಬ ನಿಲುವಂಗಿಯನು.


ಪ್ರಿಯಮಕ್ಕಳೇ, ನೀವು ಪಾಪಮಾಡಬಾರದೆಂದೇ ನಾನಿದನ್ನು ನಿಮಗೆ ಬರೆಯುತ್ತಿದ್ದೇನೆ. ಒಂದು ವೇಳೆ ಯಾರಾದರೂ ಪಾಪಮಾಡಿದ್ದೇ ಆದರೆ ನಮ್ಮ ಪರವಾಗಿ ಪಿತನ ಬಳಿಯಲ್ಲಿ ಬಿನ್ನಯಿಸಲು ಒಬ್ಬರಿದ್ದಾರೆ. ಅವರೇ ಸತ್ಯಸ್ವರೂಪರಾದ ಯೇಸುಕ್ರಿಸ್ತರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು