Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಯೋಹಾನನು 1:5 - ಕನ್ನಡ ಸತ್ಯವೇದವು C.L. Bible (BSI)

5 ದೇವರೇ ಬೆಳಕು. ಅವರಲ್ಲಿ ಕತ್ತಲು ಎಂಬುದೇ ಇಲ್ಲ. ಅವರ ಪುತ್ರನಿಂದಲೇ ನಾವು ಕೇಳಿದ ಈ ಸಂದೇಶವನ್ನು ನಿಮಗೆ ಸಾರುತ್ತಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ನಾವು ಆತನಿಂದ ಕೇಳಿ ನಿಮಗೆ ತಿಳಿಸುತ್ತಿರುವ ಸಂದೇಶ ಯಾವುದೆಂದರೆ; ದೇವರು ಬೆಳಕಾಗಿದ್ದಾನೆ; ಮತ್ತು ಆತನಲ್ಲಿ ಸ್ವಲ್ಪವೂ ಕತ್ತಲೆಯಿಲ್ಲ ಎಂಬುದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ನಾವು ಆತನಿಂದ ಕೇಳಿ ನಿಮಗೆ ತಿಳಿಸುವ ವಾರ್ತೆ ಯಾವದಂದರೆ ದೇವರು ಬೆಳಕಾಗಿದ್ದಾನೆ; ಮತ್ತು ಆತನಲ್ಲಿ ಎಷ್ಟು ಮಾತ್ರವೂ ಕತ್ತಲೆಯಿಲ್ಲ ಎಂಬದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ನಾವು ದೇವರಿಂದ ಕೇಳಿ ನಿಮಗೆ ತಿಳಿಸುವ ವಾರ್ತೆ ಏನೆಂದರೆ, ದೇವರು ಬೆಳಕಾಗಿದ್ದಾನೆ; ಆತನಲ್ಲಿ ಅಂಧಕಾರವಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ನಾವು ಕ್ರಿಸ್ತ ಯೇಸುವಿನಿಂದ ಕೇಳಿ ನಿಮಗೆ ತಿಳಿಸುವ ವಾರ್ತೆ ಯಾವುದೆಂದರೆ: ದೇವರು ಬೆಳಕಾಗಿದ್ದಾರೆ, ಅವರಲ್ಲಿ ಎಷ್ಟು ಮಾತ್ರವೂ ಕತ್ತಲೆಯಿಲ್ಲ, ಎಂಬುದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

5 ಅಮಿ ತೆಚ್ಯಾ ಲೆಕಾಕ್ನಾ ಆಯ್ಕಲ್ಲಿ ಅನಿ ಸಾಂಗಲ್ಲಿ ಖಬರ್ ಕಾಯ್ ಮಟ್ಲ್ಯಾರ್ ದೆವ್ ಉಜ್ವೊಡ್, ತೆಚ್ಯಾಕ್ಡೆ ಕಾಳೊಕ್ ನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಯೋಹಾನನು 1:5
19 ತಿಳಿವುಗಳ ಹೋಲಿಕೆ  

ಬಳಿಕ ಯೇಸು ಸ್ವಾಮಿ ಜನರನ್ನು ಮತ್ತೊಮ್ಮೆ ಕಂಡು ಹೀಗೆಂದರು: “ನಾನೇ ಜಗಜ್ಯೋತಿ, ನನ್ನನ್ನು ಹಿಂಬಾಲಿಸುವವನು ಕತ್ತಲಲ್ಲಿ ನಡೆಯುವುದಿಲ್ಲ. ಜೀವದಾಯಕ ಜ್ಯೋತಿ ಅವನಲ್ಲಿರುತ್ತದೆ.”


ಎಲ್ಲಾ ಯೋಗ್ಯ ವರಗಳೂ ಉತ್ತಮ ಕೊಡುಗೆಗಳೂ ಬರುವುದು ಮೇಲಿನಿಂದಲೇ. ಜ್ಯೋತಿರ್ಮಂಡಲವನ್ನು ಉಂಟುಮಾಡಿದ ದೇವರೇ ಅವುಗಳ ಮೂಲದಾತರು. ಅವರಲ್ಲಿ ಚಂಚಲತೆ ಇಲ್ಲ, ಮಬ್ಬು ಮುಸುಕಿನ ಛಾಯೆಯೂ ಇಲ್ಲ.


ನಿನಗಿನ್ನು ಬೇಕಾಗಿಲ್ಲ ಸೂರ್ಯನ ಬೆಳಕು ಹಗಲೊಳು ನಿನಗೆಂದಿಗೂ ಬೇಕಾಗಿಲ್ಲ ಚಂದ್ರನ ಬೆಳಕು ಇರುಳೊಳು. ನಿನಗೆ ನಿತ್ಯಪ್ರಕಾಶ ಸರ್ವೇಶ್ವರನೆ, ನಿನ್ನ ಬೆಳಗುವ ತೇಜಸ್ಸು ನಿನ್ನ ದೇವನೆ.


ನನಗೆ ಬೆಳಕು, ನನಗೆ ರಕ್ಷೆ, ಪ್ರಭುವೆ I ನಾನಾರಿಗೂ ಅಳುಕೆನು II ನನ್ನ ಬಾಳಿಗಾಧಾರ ಪ್ರಭುವೆ I ನಾನಾರಿಗೂ ಅಂಜೆನು II


ನಿಜವಾದ ಜ್ಯೋತಿ ಆ ದಿವ್ಯವಾಣಿಯೇ. ಮಾನವರೆಲ್ಲರನ್ನು ಬೆಳಗಿಸಲು ಲೋಕಕ್ಕೆ ಆಗಮಿಸಲಿದ್ದ ಜಗಜ್ಜ್ಯೋತಿ ಅವರೇ.


ಆ ದಿವ್ಯವಾಣಿಯಲ್ಲಿ ಸಜ್ಜೀವವಿತ್ತು. ಆ ಜೀವವೇ ಮಾನವಜನಾಂಗದ ಜ್ಯೋತಿಯಾಗಿತ್ತು.


ಜಗತ್ತಿನಲ್ಲಿ ನಾನಿರುವಾಗ ಜಗದ ಜ್ಯೋತಿ ನಾನೇ,” ಎಂದು ನುಡಿದರು.


ರಾತ್ರಿ ಎಂಬುದೇ ಅಲ್ಲಿ ಇರದು; ದೀಪದ ಇಲ್ಲವೇ ಸೂರ್ಯನ ಬೆಳಕಿನ ಅವಶ್ಯಕತೆಯೂ ಇರದು; ದೇವರಾದ ಪ್ರಭುವೇ ಅವರಿಗೆ ಬೆಳಕಾಗಿರುವರು. ಯುಗಯುಗಾಂತರಕ್ಕೂ ಅವರು ರಾಜ್ಯವಾಳುವರು.


ನಗರಕ್ಕೆ ಬೆಳಕನ್ನು ಕೊಡಲು ಸೂರ್ಯನ ಇಲ್ಲವೆ ಚಂದ್ರನ ಅವಶ್ಯಕತೆ ಇಲ್ಲ. ಏಕೆಂದರೆ, ದೇವರ ತೇಜಸ್ಸೇ ಅದಕ್ಕೆ ಬೆಳಕು; ಯಜ್ಞದ ಕುರಿಮರಿಯೇ ಅದಕ್ಕೆ ಜ್ಯೋತಿ.


ನಿನ್ನಲ್ಲಿದೆ ಜೀವದ ಬುಗ್ಗೆ I ನಿನ್ನ ಬೆಳಕಿನಿಂದ ಬೆಳಕೆಮಗೆ II


ದೇವನೆಮಗೆ ಬೆಳಕು ಕೊಡುವ ಸೂರ್ಯನು I ಕಾದಿಟ್ಟು ರಕ್ಷಿಸುವ ಗುರಾಣಿಯು I ಸನ್ಮಾರ್ಗಿಗೆ ಈವನು ಸಕಲ ವರಗಳನು II


ನಾವು ಒಬ್ಬರನ್ನೊಬ್ಬರು ಪ್ರೀತಿಸಬೇಕು ಎಂಬುದೇ ಮೊತ್ತಮೊದಲಿನಿಂದಲೂ ನೀವು ಕೇಳಿದ ಸಂದೇಶ.


ನಿಮಗೆ ಮಾಡಿದ ಉಪದೇಶವನ್ನು ನಾನು ಪ್ರಭುವಿನಿಂದಲೇ ಪಡೆದೆನು. ಅದೇನೆಂದರೆ: ಪ್ರಭುಯೇಸು, ತಮ್ಮನ್ನು ಹಿಡಿದುಕೊಡಲಾದ ಆ ರಾತ್ರಿ, ರೊಟ್ಟಿಯನ್ನು ತೆಗೆದುಕೊಂಡು


ಕತ್ತಲು ಕತ್ತಲಲ್ಲ ನಿನಗೆ I ಇರುಳೂ ಹಗಲಾಗಿದೆ ನಿನಗೆ I ಕತ್ತಲು, ಬೆಳಕು - ಒಂದೇ ನಿನಗೆ II


ಯಕೋಬ ಮನೆತನದವರೇ, ಬನ್ನಿ, ಸ್ವಾಮಿಯ ಬೆಳಕಿನಲ್ಲಿ ನಡೆಯೋಣ.


ಅಗಾಧ ವಿಷಯಗಳನ್ನೂ ನಿಗೂಢ ರಹಸ್ಯಗಳನ್ನೂ ತರುವನಾತ ಬಯಲಿಗೆ. ಕಗ್ಗತ್ತಲೆಯಲ್ಲಿ ಅಡಗಿರುವುದೂ ಆತನಿಗೆ ಗೋಚರ ಏಕೆಂದರೆ ಬೆಳಕು ಆತನಲ್ಲೇ ಸುಸ್ಥಿರ.


ಜೆರುಸಲೇಮಿನ ಯೆಹೂದ್ಯ ಅಧಿಕಾರಿಗಳು, ಯಾಜಕರನ್ನೂ ಲೇವಿಯರನ್ನೂ ಯೊವಾನ್ನನ ಬಳಿಗೆ ಕಳಿಸಿದರು. ಇವರು, “ನೀನು ಯಾರು?” ಎಂದು ಪ್ರಶ್ನಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು