Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಯೋಹಾನನು 1:6 - ಕನ್ನಡ ಸತ್ಯವೇದವು C.L. Bible (BSI)

6 ನಾವು ಕತ್ತಲಲ್ಲಿ ಬಾಳುತ್ತಾ ದೇವರೊಡನೆ ಅನ್ಯೋನ್ಯವಾಗಿದ್ದೇವೆಂದು ಹೇಳಿದರೆ ನಾವು ಸುಳ್ಳುಗಾರರು, ಸತ್ಯಕ್ಕನುಸಾರ ಬಾಳದವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ನಾವು ದೇವರೊಂದಿಗೆ ಅನ್ಯೋನ್ಯತೆಯುಳ್ಳವರಾಗಿದ್ದೇವೆಂದು ಹೇಳಿಕೊಳ್ಳುತ್ತಾ ಕತ್ತಲೆಯಲ್ಲಿ ನಡೆದರೆ ಸುಳ್ಳಾಡುವವರಾಗಿದ್ದೇವೆ, ಸತ್ಯವನ್ನನುಸರಿಸುತ್ತಿಲ್ಲ ಎಂದು ತಿಳಿದು ಬರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ನಾವು ದೇವರ ಸಂಗಡ ಅನ್ಯೋನ್ಯತೆಯುಳ್ಳವರಾಗಿದ್ದೇವೆಂದು ಹೇಳಿ ಕತ್ತಲೆಯಲ್ಲಿ ನಡೆದರೆ ಸುಳ್ಳಾಡುವವರಾಗಿದ್ದೇವೆ, ಸತ್ಯವನ್ನನುಸರಿಸುವವರಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಆದ್ದರಿಂದ ದೇವರ ಜೊತೆಯಲ್ಲಿ ಅನ್ಯೋನ್ಯತೆಯಿಂದ ಇದ್ದೇವೆ ಎಂದು ನಾವು ಹೇಳಿಕೊಂಡು, ಅಂಧಕಾರದಲ್ಲಿ ಜೀವಿಸುತ್ತಿದ್ದರೆ ಸುಳ್ಳು ಹೇಳಿದಂತಾಯಿತು. ಏಕೆಂದರೆ ನಾವು ಸತ್ಯವನ್ನು ಅನುಸರಿಸುತ್ತಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ನಾವು ದೇವರ ಸಂಗಡ ಅನ್ಯೋನ್ಯತೆಯುಳ್ಳವರಾಗಿದ್ದೇವೆಂದು ಹೇಳಿ ಕತ್ತಲೆಯಲ್ಲಿ ನಡೆದರೂ ಸುಳ್ಳಾಡುವವರಾಗಿದ್ದರೆ, ನಾವು ಸತ್ಯವನ್ನು ಅನುಸರಿಸುವವರಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

6 ಅಸೆ ರ್‍ಹಾತಾನಾ ದೆವಾಚ್ಯಾ ವಾಂಗ್ಡಾ ಎಕ್ವಟ್ಟಾನ್ ಹಾವ್ ಮನುನ್ ಅಮಿ ಸಾಂಗುನ್ ಘೆವ್ನ್, ಕಾಳ್ಕಾಚೆ ಜಿವನ್ ಕರುನ್ಗೆತ್ ರ್‍ಹಾಲ್ಯಾರ್. ಕರ್ನ್ಯಾನ್ಬಿ ಬೊಲ್ನ್ಯಾನ್ಬಿ ಅಮಿ ಝುಟೆ ಬೊಲಲ್ಲ್ಯಾ ಸಾರ್ಕೆ ಹೊತಾ,

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಯೋಹಾನನು 1:6
25 ತಿಳಿವುಗಳ ಹೋಲಿಕೆ  

ತಾನು ದೇವರನ್ನು ಪ್ರೀತಿಸುತ್ತೇನೆಂದು ಒಬ್ಬನು ಹೇಳುತ್ತಾ ತನ್ನ ಸಹೋದರನನ್ನು ದ್ವೇಷಿಸಿದರೆ, ಅವನು ಸುಳ್ಳುಗಾರನಾಗುತ್ತಾನೆ. ತಾನು ಕಂಡಿರುವ ತನ್ನ ಸಹೋದರನನ್ನು ಪ್ರೀತಿಸದವನು ತಾನು ಕಾಣದಿರುವ ದೇವರನ್ನು ಹೇಗೆ ಪ್ರೀತಿಸಿಯಾನು?


ದೇವರನ್ನು ಬಲ್ಲೆನೆಂದು ಹೇಳಿಕೊಳ್ಳುತ್ತಾ ಅವರ ಆಜ್ಞೆಗಳನ್ನು ಕೈಗೊಳ್ಳದೆ ಇರುವವನು ಸುಳ್ಳುಗಾರ ಮತ್ತು ಸತ್ಯವೆಂಬುದೇ ಅವನಲ್ಲಿ ಇರುವುದಿಲ್ಲ.


ನಾವು ಪಾಪಮಾಡಲಿಲ್ಲವೆಂದು ಹೇಳಿದರೆ ದೇವರನ್ನು ಸುಳ್ಳುಗಾರರನ್ನಾಗಿಸುತ್ತೇವೆ ಮತ್ತು ಅವರ ವಾಣಿ ನಮ್ಮಲ್ಲಿ ಇರುವುದಿಲ್ಲ.


ಅಂಥವರು ಹಿಡಿವುದು ಕತ್ತಲು ಹಾದಿಯನ್ನು, ತೊರೆದುಬಿಡುವರು ಸತ್ಯದ ಮಾರ್ಗವನ್ನು.


ಬಳಿಕ ಯೇಸು ಸ್ವಾಮಿ ಜನರನ್ನು ಮತ್ತೊಮ್ಮೆ ಕಂಡು ಹೀಗೆಂದರು: “ನಾನೇ ಜಗಜ್ಯೋತಿ, ನನ್ನನ್ನು ಹಿಂಬಾಲಿಸುವವನು ಕತ್ತಲಲ್ಲಿ ನಡೆಯುವುದಿಲ್ಲ. ಜೀವದಾಯಕ ಜ್ಯೋತಿ ಅವನಲ್ಲಿರುತ್ತದೆ.”


ಅದಕ್ಕೆ ಯೇಸು, “ಇನ್ನು ತುಸುಕಾಲ ಮಾತ್ರ ಜ್ಯೋತಿ ನಿಮ್ಮ ನಡುವೆ ಇರುತ್ತದೆ. ನಿಮ್ಮನ್ನು ಕತ್ತಲು ಕವಿಯದಂತೆ ಜ್ಯೋತಿಯಿರುವಾಗಲೇ ನಡೆಯಿರಿ. ಕತ್ತಲಲ್ಲಿ ನಡೆಯುವವನಿಗೆ ಗೊತ್ತುಗುರಿ ಕಾಣದು.


ಸಹೋದರರೇ, ಒಬ್ಬನು ತನಗೆ ವಿಶ್ವಾಸ ಇದೆಯೆಂದು ಕೊಚ್ಚಿಕೊಂಡು ಅದನ್ನು ಕಾರ್ಯತಃ ವ್ಯಕ್ತಪಡಿಸದಿದ್ದರೆ ಅದರಿಂದ ಪ್ರಯೋಜನ ಏನು? ಅಂಥ ವಿಶ್ವಾಸ ಅವನನ್ನು ಉದ್ಧಾರಮಾಡಬಲ್ಲುದೇ?


ನನ್ನಲ್ಲಿ ವಿಶ್ವಾಸವಿಡುವವನು ಅಂಧಕಾರದಲ್ಲಿ ಉಳಿಯಬಾರದೆಂದು ನಾನೇ ಜಗಜ್ಯೋತಿಯಾಗಿ ಬಂದಿದ್ದೇನೆ.


ಪಿತನೊಡನೆಯೂ ಅವರ ಪುತ್ರ ಕ್ರಿಸ್ತಯೇಸುವಿನೊಡನೆಯೂ ನಮಗಿರುವಂಥ ಅನ್ಯೋನ್ಯತೆಯಲ್ಲಿ ನೀವು ಸಹ ಭಾಗಿಗಳಾಗುವಂತೆ ನಾವು ಕಂಡುಕೇಳಿದ್ದನ್ನು ನಿಮಗೆ ಪ್ರಚುರಪಡಿಸುತ್ತೇವೆ.


ಆದರೆ ರಾತ್ರಿಯಲ್ಲಿ ನಡೆಯುವವನು ಎಡವಿಬೀಳುತ್ತಾನೆ. ಕಾರಣ, ಅವನಲ್ಲಿ ಬೆಳಕು ಇಲ್ಲ,” ಎಂದರು.


ಒಬ್ಬನು, “ನಿನ್ನಲ್ಲಿ ವಿಶ್ವಾಸವಿದೆ, ನನ್ನಲ್ಲಿ ಸತ್ಕ್ರಿಯೆಗಳಿವೆ,” ಎನ್ನಬಹುದು. ಅಂಥವನಿಗೆ, “ಸತ್ಕ್ರಿಯೆಗಳಿಲ್ಲದ ನಿನ್ನ ವಿಶ್ವಾಸವನ್ನು ನನಗೆ ತೋರಿಸು; ನನ್ನ ಸತ್ಕಾರ್ಯಗಳ ಮೂಲಕ ನನ್ನ ವಿಶ್ವಾಸವನ್ನು ನಿನಗೆ ವ್ಯಕ್ತಪಡಿಸುತ್ತೇನೆ,” ಎಂದು ಉತ್ತರಿಸಬಹುದು.


ಬುದ್ಧಿಹೀನರು, ಮಂದಮತಿಗಳು, ಕತ್ತಲಲಿ ನಡೆವವರು ನೀವು I ಇದರಿಂದಲೆ ಕದಲುತ್ತಿರುವುವು ಧರೆಯ ಅಸ್ತಿವಾರಗಳು II


ನಮ್ಮಲ್ಲಿ ಪಾಪವಿಲ್ಲವೆಂದು ನಾವು ಹೇಳಿಕೊಂಡರೆ, ನಮ್ಮನ್ನು ನಾವೇ ವಂಚಿಸಿಕೊಳ್ಳುತ್ತೇವೆ ಮತ್ತು ಸತ್ಯವೆಂಬುದೇ ನಮ್ಮಲ್ಲಿ ಇರುವುದಿಲ್ಲ.


ತೀರ್ಪಿನ ದಿನದಂದು, ‘ಸ್ವಾಮೀ, ಸ್ವಾಮೀ, ನಿಮ್ಮ ಹೆಸರಿನಲ್ಲಿ ನಾವು ಪ್ರವಾದನೆ ಮಾಡಲಿಲ್ಲವೇ? ನಿಮ್ಮ ಹೆಸರಿನಲ್ಲಿ ದೆವ್ವಗಳನ್ನು ಬಿಡಿಸಲಿಲ್ಲವೆ? ನಿಮ್ಮ ಹೆಸರಿನಲ್ಲಿ ಹಲವಾರು ಮಹತ್ಕಾರ್ಯಗಳನ್ನು ಮಾಡಲಿಲ್ಲವೇ?’ ಎಂದು ಅನೇಕರು ನನಗೆ ಹೇಳುವರು.


ಕಪಟಿಗಳು ದುರ್ಬೋಧನೆಗಳನ್ನು ಪ್ರಸರಿಸುತ್ತಾರೆ. ಬರೆಹಾಕಿದ ಚರ್ಮದಂತೆ ಅವರ ಮನಸ್ಸಾಕ್ಷಿಯು ಸುಟ್ಟುಹೋಗಿದೆ.


ಅನ್ಯಾಯಸ್ಥಾಪಕರಿಗೂ ನಿನಗೂ ಸಂಬಂಧವೆಲ್ಲಿ I ಕೇಡನು ಕಲ್ಪಿಸುತ್ತಾರವರು ಶಾಸನದ ಹೆಸರಿನಲ್ಲಿ II


ಆದರೆ ಅವರ ಅರಿವು ನಿಮಗಿಲ್ಲ; ನನಗಿದೆ. ಅವರ ಅರಿವು ನನಗಿಲ್ಲವೆಂದು ನಾನು ಹೇಳಿದೆಯಾದರೆ ನಿಮ್ಮಂತೆ ನಾನೂ ಸುಳ್ಳುಗಾರನಾಗುತ್ತೇನೆ. ಅವರ ಅರಿವು ನನಗಿದೆ. ಅವರ ಮಾತನ್ನು ನಾನು ಪಾಲಿಸುತ್ತೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು