1 ಯೋಹಾನನು 1:7 - ಕನ್ನಡ ಸತ್ಯವೇದವು C.L. Bible (BSI)7 ಬದಲಿಗೆ, ದೇವರು ಬೆಳಕಿನಲ್ಲಿರುವಂತೆ ನಾವೂ ಬೆಳಕಿನಲ್ಲಿ ನಡೆದರೆ ನಮ್ಮಲ್ಲಿ ಪರಸ್ಪರ ಅನ್ಯೋನ್ಯತೆ ಇರುತ್ತದೆ. ಆಗ ದೇವರ ಪುತ್ರನಾದ ಯೇಸುವಿನ ರಕ್ತವು ನಮ್ಮನ್ನು ಎಲ್ಲ ಪಾಪದಿಂದಲೂ ಶುದ್ಧಗೊಳಿಸುತ್ತದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಆದರೆ ಆತನು ಬೆಳಕಿನಲ್ಲಿರುವಂತೆಯೇ ನಾವೂ ಬೆಳಕಿನಲ್ಲಿ ನಡೆದರೆ ನಾವು ಒಬ್ಬರ ಸಂಗಡಲ್ಲೊಬ್ಬರು ಅನ್ಯೋನ್ಯತೆಯಲ್ಲಿರುತ್ತೇವೆ. ಆತನ ಒಬ್ಬನೇ ಕುಮಾರನಾದ ಯೇಸುವಿನ ರಕ್ತವು ನಮ್ಮನ್ನು ಸಕಲ ಪಾಪದಿಂದ ಬಿಡಿಸಿ ಶುದ್ಧೀಕರಿಸುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಆದರೆ ಆತನು ಬೆಳಕಿನಲ್ಲಿರುವಂತೆಯೇ ನಾವು ಬೆಳಕಿನಲ್ಲಿ ನಡೆದರೆ ನಾವು ಒಬ್ಬರಸಂಗಡಲೊಬ್ಬರು ಅನ್ಯೋನ್ಯತೆಯಲ್ಲಿದ್ದೇವೆ, ಮತ್ತು ಆತನ ಮಗನಾದ ಯೇಸುವಿನ ರಕ್ತವು ಸಕಲಪಾಪವನ್ನು ನಿವಾರಣಮಾಡಿ ನಮ್ಮನ್ನು ಶುದ್ಧಿಮಾಡುತ್ತದೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ದೇವರು ಬೆಳಕಿನಲ್ಲಿದ್ದಾನೆ. ಆದ್ದರಿಂದ ನಾವೂ ಬೆಳಕಿನಲ್ಲಿ ಜೀವಿಸಬೇಕಾಗಿದೆ. ನಾವು ಬೆಳಕಿನಲ್ಲಿ ಜೀವಿಸುವವರಾಗಿದ್ದರೆ ಪರಸ್ಪರ ಅನ್ಯೋನ್ಯತೆಯಲ್ಲಿದ್ದೇವೆ ಮತ್ತು ದೇವರ ಮಗನಾದ ಯೇಸುವಿನ ರಕ್ತವು ನಮ್ಮ ಪಾಪಗಳನ್ನೆಲ್ಲಾ ನಿವಾರಣೆ ಮಾಡುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ದೇವರು ಬೆಳಕಿನಲ್ಲಿರುವಂತೆಯೇ ನಾವೂ ಬೆಳಕಿನಲ್ಲಿ ಬಾಳಿದರೆ, ನಾವು ಒಬ್ಬರ ಸಂಗಡಲೊಬ್ಬರು ಅನ್ಯೋನ್ಯತೆಯಲ್ಲಿದ್ದೇವೆ, ಆಗ ದೇವರ ಮಗನಾದ ಯೇಸುವಿನ ರಕ್ತವು ನಮ್ಮನ್ನು ಸಕಲ ಪಾಪದಿಂದ ಶುದ್ಧಿಮಾಡುತ್ತದೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್7 ತಸೆ ಹೊವ್ನ್, ದೆವ್ ಕಸೊ ಉಜ್ವೊಡಾತ್ ಹಾಯ್ ತಸೆಚ್, ಅಮಿಬಿ ಉಜ್ವೊಡಾತ್ ಜಿವನ್ ಕರುಂಗೆತ್ ರ್‍ಹಾಲ್ಯಾರ್ ಎಕಾಮೆಕಾಕ್ ಎಕ್ವಟ್ಟಾನ್ ರ್‍ಹಾತಾಂವ್ ಅನಿ ದೆವಾಚ್ಯಾ ಲೆಕಾಚ್ಯಾ ಜೆಜುಚ್ಯಾ ರಗ್ತಾನ್ ಅಮ್ಚಿ ಸಗ್ಳಿ ಪಾಪಾ ಮಾಪ್ ಕರುನ್ ಹೊತಾತ್. ಅಧ್ಯಾಯವನ್ನು ನೋಡಿ |