Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಯೋಹಾನನು 2:1 - ಕನ್ನಡ ಸತ್ಯವೇದವು C.L. Bible (BSI)

1 ಪ್ರಿಯಮಕ್ಕಳೇ, ನೀವು ಪಾಪಮಾಡಬಾರದೆಂದೇ ನಾನಿದನ್ನು ನಿಮಗೆ ಬರೆಯುತ್ತಿದ್ದೇನೆ. ಒಂದು ವೇಳೆ ಯಾರಾದರೂ ಪಾಪಮಾಡಿದ್ದೇ ಆದರೆ ನಮ್ಮ ಪರವಾಗಿ ಪಿತನ ಬಳಿಯಲ್ಲಿ ಬಿನ್ನಯಿಸಲು ಒಬ್ಬರಿದ್ದಾರೆ. ಅವರೇ ಸತ್ಯಸ್ವರೂಪರಾದ ಯೇಸುಕ್ರಿಸ್ತರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ನನ್ನ ಪ್ರಿಯಮಕ್ಕಳೇ, ನೀವು ಪಾಪಮಾಡದಂತೆ ಇರಲು ಇವುಗಳನ್ನು ನಿಮಗೆ ಬರೆಯುತ್ತಿದ್ದೇನೆ. ಯಾವನಾದರೂ ಪಾಪಮಾಡಿದರೆ ತಂದೆಯ ಬಳಿಯಲ್ಲಿ ನೀತಿವಂತನಾದ ಯೇಸು ಕ್ರಿಸ್ತನೆಂಬ ಸಹಾಯಕನು ನಮಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ನನ್ನ ಪ್ರಿಯರಾದ ಮಕ್ಕಳೇ, ನೀವು ಪಾಪಮಾಡದಂತೆ ಈ ಮಾತುಗಳನ್ನು ನಿಮಗೆ ಬರೆಯುತ್ತೇನೆ. ಯಾವನಾದರೂ ಪಾಪಮಾಡಿದರೆ ತಂದೆಯ ಬಳಿಯಲ್ಲಿ ನೀತಿವಂತನಾದ ಯೇಸು ಕ್ರಿಸ್ತನೆಂಬ ಸಹಾಯಕನು ನಮಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ನನ್ನ ಪ್ರಿಯ ಮಕ್ಕಳೇ, ನೀವು ಪಾಪಗಳನ್ನು ಮಾಡದಿರಲೆಂದು ನಾನು ನಿಮಗೆ ಈ ಪತ್ರವನ್ನು ಬರೆಯುತ್ತಿದ್ದೇನೆ. ಆದರೆ ಯಾರಾದರೂ ಪಾಪವನ್ನು ಮಾಡಿದರೆ ನಮಗೆ ಸಹಾಯ ಮಾಡಲು ಯೇಸು ಕ್ರಿಸ್ತನಿದ್ದಾನೆ. ನೀತಿವಂತನಾಗಿರುವ ಆತನು ತಂದೆಯಾದ ದೇವರ ಬಳಿಯಲ್ಲಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ನನ್ನ ಪ್ರಿಯ ಮಕ್ಕಳೇ, ನೀವು ಪಾಪಮಾಡದಂತೆ ಇವುಗಳನ್ನು ನಾನು ನಿಮಗೆ ಬರೆಯುತ್ತೇನೆ. ಯಾವನಾದರೂ ಪಾಪಮಾಡಿದರೆ ತಂದೆಯ ಬಳಿಯಲ್ಲಿ ನೀತಿವಂತರಾದ ಕ್ರಿಸ್ತ ಯೇಸುವು ನಮ್ಮ ಪರವಾಗಿ ವಾದಿಸುವ ವಕೀಲರಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

1 ಮಾಜ್ಯಾ ಪೊರಾನು, ತುಮಿ ಪಾಪ್ ಕರುಚೆ ನ್ಹಯ್ ಮನುನ್ ಮಿಯಾ ತುಮ್ಕಾ ಹೆ ಲಿವ್ಕ್ ಲಾಗ್ಲಾ, ಖರೆ ಕೊನ್ಬಿ ಪಾಪ್ ಕರ್ಲ್ಯಾರ್, ಅಮ್ಚ್ಯಾಸಾಟ್ನಿ ದೆವಾ ಬಾಬಾಕ್ಡೆ ಮಾಗ್ತಲೊ ಎಕ್ಲೊ ಹಾಯ್ ತೊಚ್ ಮಜತ್ಗಾರ್ ಜೆಜು ಕ್ರಿಸ್ತ್, ತೊ ನಿತಿವಂತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಯೋಹಾನನು 2:1
47 ತಿಳಿವುಗಳ ಹೋಲಿಕೆ  

ದೇವರು ಒಬ್ಬರೇ; ದೇವರನ್ನೂ ಮಾನವರನ್ನೂ ಒಂದುಗೂಡಿಸುವ ಮಧ್ಯಸ್ಥರೂ ಒಬ್ಬರೇ; ಅವರೇ ಮಾನವರಾಗಿರುವ ಕ್ರಿಸ್ತಯೇಸು.


ಅದಕ್ಕೆ ಯೇಸು, “ಮಾರ್ಗವೂ ಸತ್ಯವೂ ಜೀವವೂ ನಾನೇ. ನನ್ನ ಮುಖಾಂತರ ಬಾರದ ಹೊರತು ಯಾರೂ ಪಿತನ ಬಳಿಗೆ ಬರಲಾರರು.


ಪಾಪವನ್ನೇ ಅರಿಯದ ಕ್ರಿಸ್ತಯೇಸುವನ್ನು ದೇವರು ನಮಗೋಸ್ಕರ ಪಾಪಸ್ವರೂಪಿಯನ್ನಾಗಿಸಿದರು. ಕ್ರಿಸ್ತಯೇಸುವಿನಲ್ಲಿ ನಾವು ದೇವರೊಡನೆ ಸತ್ಸಂಬಂಧವನ್ನು ಪಡೆಯಲೆಂದೇ ಹೀಗೆ ಮಾಡಿದರು.


ಪ್ರಿಯಮಕ್ಕಳೇ, ನೀವಂತೂ ದೇವರಿಗೆ ಸೇರಿದವರು. ಲೋಕದಲ್ಲಿರುವ ದುರಾತ್ಮಕ್ಕಿಂತಲೂ ನಿಮ್ಮಲ್ಲಿರುವ ಆತ್ಮವು ಶ್ರೇಷ್ಠವಾದುದು. ಆದ್ದರಿಂದಲೇ ಆ ಕಪಟ ಪ್ರವಾದಿಗಳನ್ನು ಜಯಿಸಿದ್ದೀರಿ.


ಪ್ರಿಯಮಕ್ಕಳೇ, ನಾವು ಬರಿಯ ಮಾತಿನಿಂದಾಗಲಿ, ಬಾಯುಪಚಾರದಿಂದಾಗಲಿ, ಪ್ರೀತಿಸುವವರಾಗಿರಬಾರದು. ನಮ್ಮ ಪ್ರೀತಿ ಸತ್ಯದಲ್ಲೂ ಕೃತ್ಯದಲ್ಲೂ ವ್ಯಕ್ತವಾಗಬೇಕು.


ಪ್ರಿಯಮಕ್ಕಳೇ, ನಿಮ್ಮನ್ನು ಸನ್ಮಾರ್ಗದಿಂದ ತಪ್ಪಿಸುವುದಕ್ಕೆ ಯಾರಿಗೂ ಅವಕಾಶ ಕೊಡಬೇಡಿ. ಕ್ರಿಸ್ತಯೇಸು ಸತ್ಯಸ್ವರೂಪಿಯಾಗಿರುವಂತೆಯೇ ಸತ್ಯಕ್ಕನುಸಾರ ನಡೆಯುವ ಪ್ರತಿಯೊಬ್ಬನೂ ಸತ್ಯವಂತನೇ.


ಅವಳು, “ಇಲ್ಲ, ಸ್ವಾಮೀ,” ಎಂದಳು. ಯೇಸು ಅವಳಿಗೆ, “ನಾನೂ ನಿನಗೆ ಶಿಕ್ಷೆ ವಿಧಿಸುವುದಿಲ್ಲ, ಹೋಗು; ಇನ್ನು ಮೇಲೆ ಪಾಪಮಾಡಬೇಡ,” ಎಂದರು).


ಕ್ರಿಸ್ತಯೇಸು ಪ್ರವೇಶಿಸಿದ್ದು ನೈಜದೇವಾಲಯದ ಛಾಯೆಯಂತಿರುವ ಮಾನವನಿರ್ಮಿತ ಗರ್ಭಗುಡಿಯನ್ನಲ್ಲ, ನಮ್ಮ ಪರವಾಗಿ ದೇವರ ಸಮ್ಮುಖದಲ್ಲಿ ಉಪಸ್ಥಿತರಾಗಲು ಸಾಕ್ಷಾತ್ ಸ್ವರ್ಗವನ್ನೇ ಅವರು ಪ್ರವೇಶಿಸಿದರು.


ಪಾಪರಹಿತರಾದ ಕ್ರಿಸ್ತಯೇಸು ಪಾಪಪರಿಹಾರ ಮಾಡಲೆಂದೇ ಕಾಣಿಸಿಕೊಂಡರೆಂದು ನೀವು ಬಲ್ಲಿರಿ.


ಇದರ ಪರಿಣಾಮವಾಗಿ ಅವರ ಮುಖಾಂತರವೇ ಉಭಯತ್ರರು ಒಂದೇ ಪವಿತ್ರಾತ್ಮ ಅವರಲ್ಲಿ ಪಿತನ ಸಾನ್ನಿಧ್ಯವನ್ನು ಸೇರಲು ಮಾರ್ಗವಾಯಿತು.


ಅಳಿದುಹೋಗುವ ಆಹಾರಕ್ಕಾಗಿ ದುಡಿಯಬೇಡಿ; ಉಳಿಯುವ ಮತ್ತು ನಿತ್ಯಜೀವವನ್ನು ಈಯುವ ಆಹಾರಕ್ಕಾಗಿ ದುಡಿಯಿರಿ. ಇಂಥ ಆಹಾರವನ್ನು ನಿಮಗೆ ನೀಡುವವನು ನರಪುತ್ರನೇ. ಏಕೆಂದರೆ, ಪಿತನಾದ ದೇವರು ತಮ್ಮ ಅಧಿಕಾರ ಮುದ್ರೆಯನ್ನು ಆತನ ಮೇಲೆ ಒತ್ತಿದ್ದಾರೆ,” ಎಂದು ಉತ್ತರಕೊಟ್ಟರು.


ನೀನು ಆ ಸಜ್ಜನನನ್ನು ಪಾಪಮಾಡದಂತೆ ಎಚ್ಚರಿಸಿದ ಮೇಲೆ ಅವನು ಪಾಪಮಾಡದೆ ಎಚ್ಚರಗೊಂಡರೆ ಈ ಕಾರಣ ಜೀವದಿಂದ ಉಳಿಯುವನು; ನೀನೂ ನಿನ್ನ ಪ್ರಾಣವನ್ನು ಉಳಿಸಿಕೊಳ್ಳುವೆ.”


ಅಂತೆಯೇ ಕ್ರಿಸ್ತಯೇಸು ನೀತಿವಂತರಾಗಿದ್ದರೂ ಅನೀತಿವಂತರಿಗಾಗಿ ಪ್ರಾಣತ್ಯಾಗಮಾಡಿದರು. ಪಾಪ ನಿವಾರಣಾರ್ಥವಾಗಿ ಒಂದೇ ಸಾರಿಗೆ ಮಾತ್ರವಲ್ಲ, ಎಂದೆಂದಿಗೂ ನಮ್ಮನ್ನು ದೇವರ ಬಳಿಗೆ ಸೇರಿಸಲು ಸತ್ತರು. ದೇಹದಲ್ಲಿ ಅವರು ವಧಿತರಾದರೂ ಆತ್ಮದಲ್ಲಿ ಜೀವಂತರಾದರು.


ಕೋಪಮಾಡಬೇಕಾಗಿ ಬಂದರೂ ಪಾಪಮಾಡಬೇಡಿರಿ; ಸೂರ್ಯನು ಮುಳುಗುವ ಮುನ್ನ ನಿಮ್ಮ ಕೋಪವು ಇಳಿಯಲಿ.


ನನ್ನ ಪ್ರಿಯ ಮಕ್ಕಳೇ, ತಾಯಿ ತನ್ನ ಮಗುವಿಗಾಗಿ ಪ್ರಸವವೇದನೆಪಡುವ ಪ್ರಕಾರ ಕ್ರಿಸ್ತಯೇಸು ನಿಮ್ಮಲ್ಲಿ ರೂಪುಗೊಳ್ಳುವ ತನಕ ನಿಮಗಾಗಿ ನಾನು ಮತ್ತೆ ಅಂಥ ವೇದನೆಯನ್ನು ಪಡುತ್ತಿದ್ದೇನೆ.


ಯೊವಾನ್ನನು ನೀಡಿದ ಸಾಕ್ಷ್ಯಕ್ಕಿಂತಲೂ ಮಿಗಿಲಾದ ಸಾಕ್ಷ್ಯ ನನಗುಂಟು; ನಾನು ಸಾಧಿಸುತ್ತಿರುವ ಸುಕೃತ್ಯಗಳೇ, ಅಂದರೆ, ಪಿತನು ನನಗೆ ಮಾಡಿಮುಗಿಸಲು ಕೊಟ್ಟ ಕಾರ್ಯಗಳೇ, ನಾನು ಪಿತನಿಂದ ಬಂದವನೆಂದು ನನ್ನ ಪರವಾಗಿ ಸಾಕ್ಷಿಕೊಡುತ್ತವೆ.


ನನ್ನ ಪಿತ ಸಮಸ್ತವನ್ನೂ ನನ್ನ ವಶಕ್ಕೆ ಒಪ್ಪಿಸಿದ್ದಾರೆ. ಪುತ್ರನು ಯಾರೆಂದು ಪಿತನ ಹೊರತು ಬೇರಾರೂ ಅರಿಯರು. ಪಿತನು ಯಾರೆಂದು ಪುತ್ರನು ಮತ್ತು ಯಾರಿಗೆ ಪುತ್ರನು ಅವರನ್ನು ಶ್ರುತಪಡಿಸಲು ಇಚ್ಛಿಸುತ್ತಾನೋ ಅವನೇ ಹೊರತು ಮತ್ತಾರೂ ಅರಿಯರು,” ಎಂದು ಹೇಳಿದರು.


ಅವರು ಯಾವ ಪಾಪವನ್ನೂ ಮಾಡಲಿಲ್ಲ. ಅವರ ಬಾಯಿಂದ ಅಬದ್ಧವಾದ ಮಾತೊಂದೂ ಕೇಳಿಬರಲಿಲ್ಲ.


ಜಾಗೃತರಾಗಿರಿ, ದುರ್ಮಾರ್ಗವನ್ನು ಬಿಟ್ಟುಬಿಡಿ, ಸನ್ಮತಿಯುಳ್ಳವರಾಗಿರಿ. ದೇವರನ್ನು ಅರಿಯದ ಮೂಢರು ನಿಮ್ಮಲ್ಲಿ ಕೆಲವರು ಇದ್ದಾರೆ. ನಿಮಗೆ ನಾಚಿಕೆ ಆಗಲೆಂದೇ ಇದನ್ನು ಹೇಳುತ್ತಿದ್ದೇನೆ.


ಅನಂತರ ದೇವಾಲಯದಲ್ಲಿ ಯೇಸು ಆ ಮನುಷ್ಯನನ್ನು ಕಂಡು, “ನೋಡು, ನೀನು ಗುಣಹೊಂದಿರುವೆ; ಇನ್ನುಮೇಲೆ ಪಾಪಮಾಡುವುದನ್ನು ಬಿಟ್ಟುಬಿಡು. ಇಲ್ಲದಿದ್ದರೆ ನಿನ್ನ ಗತಿ ಇನ್ನಷ್ಟು ಚಿಂತಾಜನಕವಾದೀತು,” ಎಂದರು.


ಸಂತೋಷಿಸಿರಿ, ಆನಂದಿಸಿರಿ, ಸಿಯೋನಿನ ನಿವಾಸಿಗಳೇ, ಹರ್ಷೋದ್ಗಾರ ಮಾಡಿರಿ, ಜೆರುಸಲೇಮಿನ ಜನಗಳೇ, ಇಗೋ, ಬರುತಿಹನು ನಿಮ್ಮ ಅರಸನು ನ್ಯಾಯವಂತನು, ಜಯಶೀಲನು ಆತನು ವಿನಮ್ರನು, ಹೇಸರಗತ್ತೆಯನ್ನೇರಿ ಸಾಗಿಬರುತಿಹನು.


ಕಷ್ಟಸಂಕಟಗಳಲ್ಲಿರುವ ಅನಾಥರಿಗೂ ವಿಧವೆಯರಿಗೂ ನೆರವಾಗುವುದು ಹಾಗೂ ಪ್ರಾಪಂಚಿಕ ಮಲಿನತೆಯಿಂದ ದೂರವಿರುವುದು - ನಮ್ಮ ತಂದೆಯಾದ ದೇವರ ಮುಂದೆ ನಿಷ್ಕಳಂಕವಾದ ಮತ್ತು ನಿರ್ಮಲವಾದ ಧರ್ಮವೆನಿಸುತ್ತದೆ.


ಕೋಪಗೊಂಡರೂ ದೂರವಿರು ಪಾಪದಿಂದ I ಶಯನದಲ್ಲಿದ್ದರೂ ಧ್ಯಾನಿಸು ಹೃದಯದಿಂದ II


ಪ್ರಿಯ ಮಕ್ಕಳೇ, ಮಿಥ್ಯ ದೇವರುಗಳಿಂದ ನೀವು ದೂರವಿರಿ.


ಪ್ರಭುವನ್ನೂ ಪರಮ ಪಿತನನ್ನೂ ಸ್ತುತಿಸುವುದು ಅದೇ ನಾಲಿಗೆಯೇ; ದೇವಸ್ವರೂಪದಲ್ಲಿ ಸೃಷ್ಟಿಸಲಾದ ಮಾನವನನ್ನು ಶಪಿಸುವುದೂ ಅದೇ ನಾಲಿಗೆಯೇ.


ಹಾಗಾದರೆ ಏನು ಹೇಳೋಣ? ಧರ್ಮಶಾಸ್ತ್ರಕ್ಕೆ ಅಧೀನರಾಗಿರದೆ ದೈವಾನುಗ್ರಹಕ್ಕೆ ಅಧೀನರಾಗಿರುವ ನಾವು ಪಾಪಮಾಡುತ್ತಲೆ ಜೀವಿಸೋಣವೆ? ಸರ್ವಥಾ ಇಲ್ಲ.


ಪ್ರಿಯ ಮಕ್ಕಳೇ, ಇನ್ನು ತುಸುಕಾಲ ಮಾತ್ರ ನಾನು ನಿಮ್ಮೊಡನೆ ಇರುತ್ತೇನೆ, ಆಮೇಲೆ ನೀವು ನನ್ನನ್ನು ಹುಡುಕುವಿರಿ, ‘ಆದರೆ ನಾನು ಹೋಗುವಲ್ಲಿಗೆ ನೀವು ಬರಲಾರಿರಿ’ ಎಂದು ನಾನು ಯೆಹೂದ್ಯರಿಗೆ ಹೇಳಿದಂತೆಯೇ ನಿಮಗೂ ಹೇಳುತ್ತೇನೆ.


ನಾನು ನಿನ್ನ ಬಳಿಗೆ ಬೇಗನೆ ಬರುವೆನೆಂಬ ನಿರೀಕ್ಷೆಯಿಂದಲೇ ಈ ಪತ್ರವನ್ನು ಬರೆಯುತ್ತಿದ್ದೇನೆ.


ಯೇಸು ಅವರಿಗೆ, “ಮಕ್ಕಳೇ, ಊಟಕ್ಕೆ ಏನಾದರೂ ಸಿಕ್ಕಿತೇ?” ಎಂದು ಕೇಳಿದರು. “ಏನೂ ಇಲ್ಲ,” ಎಂದರು ಅವರು.


ನಾನೂ ಪಿತನನ್ನು ಕೇಳಿಕೊಳ್ಳುವೆನು; ಅವರು ನಿಮಗೆ ಬೇರೊಬ್ಬ ಪೋಷಕರನ್ನು ಕೊಡುವರು. ಇವರು ನಿಮ್ಮೊಡನೆ ಯಾವಾಗಲೂ ಇರುವರು.


ನಿಮ್ಮ ಪೂರ್ವಜರು ಹಿಂಸೆಗೆ ಗುರಿಪಡಿಸದ ಪ್ರವಾದಿ ಯಾರಾದರೂ ಇದ್ದಾರೆಯೆ? ಸತ್ಯಸ್ವರೂಪನು ಬರಲಿದ್ದಾನೆಂದು ಮುಂತಿಳಿಸಿದವರನ್ನು ಅವರು ಕೊಂದುಹಾಕಿದರು. ನೀವಾದರೋ, ಆ ಸತ್ಯಸ್ವರೂಪನನ್ನು ಹಿಡಿದುಕೊಟ್ಟು ಕೊಲೆಮಾಡಿಸಿದಿರಿ.


ನಾವು ದೇವರಿಗೆ ಶತ್ರುಗಳಾಗಿದ್ದರೂ ಅವರು ತಮ್ಮ ಮಗನ ಮರಣದ ಮೂಲಕ ನಮ್ಮನ್ನು ತಮ್ಮೊಡನೆ ಸಂಧಾನಗೊಳಿಸಿ ಮಿತ್ರರನ್ನಾಗಿ ಮಾಡಿಕೊಂಡರು. ನಾವೀಗ ದೇವರ ಮಿತ್ರರಾಗಿರುವುದರಿಂದ, ಕ್ರಿಸ್ತಯೇಸುವಿನ ಜೀವದ ಮೂಲಕ ಉದ್ಧಾರ ಹೊಂದುತ್ತೇವೆ ಎಂಬುದು ಮತ್ತಷ್ಟು ಖಚಿತವಲ್ಲವೆ?


ಅಕ್ರಮವಾದುದೆಲ್ಲವೂ ಪಾಪವೇ. ಆದರೆ ಮಾರಕವಲ್ಲದಂಥ ಪಾಪವೂ ಇದೆ.


ನನ್ನ ಪ್ರಿಯಮಕ್ಕಳು ಸತ್ಯಸಂಧರಾಗಿ ನಡೆಯುತ್ತಿದ್ದಾರೆಂದು ಕೇಳುವುದಕ್ಕಿಂತ ಮಿಗಿಲಾದ ಆನಂದ ನನಗಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು