Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಯೋಹಾನನು 2:10 - ಕನ್ನಡ ಸತ್ಯವೇದವು C.L. Bible (BSI)

10 ತನ್ನ ಸಹೋದರನನ್ನು ಪ್ರೀತಿಸುವವನಾದರೋ ಬೆಳಕಿನಲ್ಲಿ ನೆಲೆಗೊಂಡಿರುತ್ತಾನೆ. ಎಡವಿ ಪಾಪದಲ್ಲಿ ಬೀಳಿಸುವಂಥದ್ದೇನೂ ಅವನಲ್ಲಿ ಇರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ತನ್ನ ಸಹೋದರನನ್ನು ಪ್ರೀತಿಸುವವನು ಬೆಳಕಿನಲ್ಲಿ ನೆಲೆಗೊಂಡಿದ್ದಾನೆ ಮತ್ತು ಪಾಪದಲ್ಲಿ ಎಡವಿಬೀಳುವಂಥದ್ದು ಯಾವುದೂ ಅವನಲ್ಲಿ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ತನ್ನ ಸಹೋದರನನ್ನು ಪ್ರೀತಿಸುವವನು ಬೆಳಕಿನಲ್ಲಿ ನೆಲೆಗೊಂಡಿದ್ದಾನೆ, ಮತ್ತು ಅವನಲ್ಲಿ ವಿಘ್ನಕರವಾದದ್ದು ಏನೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ತನ್ನ ಸಹೋದರನನ್ನು ಪ್ರೀತಿಸುವವನು ಬೆಳಕಿನಲ್ಲಿದ್ದಾನೆ. ಬೇರೊಬ್ಬನನ್ನು ಪಾಪಕ್ಕೆ ನಡೆಸುವಂಥದ್ದೇನೂ ಅವನಲ್ಲಿರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ತನ್ನ ಸಹೋದರನನ್ನು ಪ್ರೀತಿಸುವವನು ಬೆಳಕಿನಲ್ಲಿ ನೆಲೆಗೊಂಡಿದ್ದಾನೆ ಮತ್ತು ಅವನಲ್ಲಿ ಆತಂಕವುಳ್ಳದ್ದು ಯಾವುದೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

10 ಜೊ ಕೊನ್ ಅಪ್ನಾಚ್ಯಾ ಭಾವ್-ಭೆನಿಯಾಂಚೊ ಪ್ರೆಮ್ ಕರ್ತಾ, ತೊ ಉಜ್ವೊಡಾತ್ ರ್‍ಹಾತಾ. ದುಸ್ರ್ಯಾಕ್ ಪಾಪಾತ್ ಚಲ್ವುಕ್ ತೆಚ್ಯಾತ್ ಕಾಯ್ ರ್‍ಹಾಯ್ನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಯೋಹಾನನು 2:10
14 ತಿಳಿವುಗಳ ಹೋಲಿಕೆ  

ನಾವು ನಮ್ಮ ಸಹೋದರರನ್ನು ಪ್ರೀತಿಸುವುದರಿಂದ ಸಾವಿನಿಂದ ಜೀವಕ್ಕೆ ಸಾಗಿದ್ದೇವೆಂದು ತಿಳಿದಿದ್ದೇವೆ. ಪ್ರೀತಿಸದೆ ಇರುವವನು ಸಾವಿನಲ್ಲೇ ನೆಲೆಸಿರುತ್ತಾನೆ.


ಆದಕಾರಣ ಒಬ್ಬರ ವಿಷಯದಲ್ಲಿ ಒಬ್ಬರು ತೀರ್ಪುಮಾಡದೆ ಇರೋಣ. ಬದಲಾಗಿ ಸಹೋದರನಿಗೆ ಯಾವ ರೀತಿಯ ಅಡ್ಡಿಯನ್ನಾಗಲೀ ಅಡಚಣೆಗಳನ್ನಾಗಲೀ ಉಂಟುಮಾಡುವುದಿಲ್ಲವೆಂದು ತೀರ್ಮಾನಿಸಿಕೊಳ್ಳಿ.


ನಿರಂತರವಾಗಿ ಹುಡುಕಿ ಅವರನ್ನು ಕಂಡುಕೊಳ್ಳೋಣ; ಸರ್ವೇಶ್ವರಸ್ವಾಮಿಯನ್ನು ಅರಿತುಕೊಳ್ಳೋಣ; ಅವರ ಆಗಮನ ಸೂರ್ಯೋದಯದಂತೆ ನಿಶ್ಚಯ. ಭೂಮಿಯನ್ನು ತಣಿಸುವ ಮುಂಗಾರು ಹಿಂಗಾರು ಮಳೆಗಳಂತೆ ಅವರು ನಮ್ಮ ಬಳಿಗೆ ಬಂದೇ ಬರುವರು.


ಸಹೋದರರೇ, ನೀವು ದೇವರಿಂದ ಕರೆಹೊಂದಿದವರು; ದೇವರಿಂದ ಆಯ್ಕೆಯಾದವರು. ಈ ವರದಲ್ಲಿ ದೃಢವಾಗಿರಲು ಮತ್ತಷ್ಟು ಪ್ರಯತ್ನಿಸಿರಿ. ಹೀಗೆ ಮಾಡಿದರೆ, ನೀವೆಂದಿಗೂ ವಿಶ್ವಾಸಭ್ರಷ್ಟರಾಗಲಾರಿರಿ.


ಯೇಸು ಸ್ವಾಮಿ ತಮ್ಮಲ್ಲಿ ನಂಬಿಕೆ ಇಟ್ಟಿದ್ದ ಯೆಹೂದ್ಯರಿಗೆ ಹೀಗೆಂದರು: “ನನ್ನ ಮಾತಿಗೆ ನೀವು ಶರಣಾದರೆ ನಿಜವಾಗಿಯೂ ನೀವು ನನ್ನ ಶಿಷ್ಯರು.


ಪಾಪಕ್ಕೆ ಪ್ರಚೋದಿಸುವ ಲೋಕಕ್ಕೆ ಧಿಕ್ಕಾರ!


ಆದರೆ ಅದು ತನ್ನಲ್ಲಿ ಬೇರೂರದ ಕಾರಣ ಕೊಂಚಕಾಲ ಮಾತ್ರ ಇದ್ದು, ಸಂದೇಶದ ನಿಮಿತ್ತ ಕಷ್ಟಕೋಟಲೆಗಳು ಬಂದೊದಗಿದಾಗ ಕೂಡಲೇ ಎಡವಿಬೀಳುತ್ತಾನೆ. ಇವನು ಕಲ್ಲು ನೆಲದ ಮೇಲೆ ಬಿದ್ದ ಬೀಜವನ್ನು ಹೋಲುತ್ತಾನೆ.


ಹೀಗೆ ನೀವು ಉತ್ತಮೋತ್ತಮವಾದುವುಗಳನ್ನೇ ಆರಿಸಿಕೊಂಡು, ಪ್ರಭು ಕ್ರಿಸ್ತರ ದಿನದಂದು ನಿರ್ದೋಷಿಗಳೂ ನಿಷ್ಕಳಂಕರೂ ಆಗಿ ಕಾಣಿಸಿಕೊಳ್ಳುವಿರಿ.


ಅತಿ ನೆಮ್ಮದಿಯುಂಟು ನಿನ್ನ ಶಾಸ್ತ್ರಪ್ರಿಯರಿಗೆ I ವಿಘ್ನಕರವಾದುದೇನೂ ಇರದು ಅಂಥವರಿಗೆ II


ಅದಕ್ಕೆ ಯೇಸು, “ಹಗಲಿಗೆ ಹನ್ನೆರಡು ತಾಸು ಉಂಟಲ್ಲವೆ? ಹಗಲಿನಲ್ಲಿ ನಡೆಯುವವನು ಎಡವಿಬೀಳುವುದಿಲ್ಲ. ಏಕೆಂದರೆ ಈ ಲೋಕದ ಬೆಳಕು ಅವನಿಗೆ ಕಾಣಿಸುತ್ತದೆ.


ಅದಕ್ಕೆ ಯೇಸು, “ಇನ್ನು ತುಸುಕಾಲ ಮಾತ್ರ ಜ್ಯೋತಿ ನಿಮ್ಮ ನಡುವೆ ಇರುತ್ತದೆ. ನಿಮ್ಮನ್ನು ಕತ್ತಲು ಕವಿಯದಂತೆ ಜ್ಯೋತಿಯಿರುವಾಗಲೇ ನಡೆಯಿರಿ. ಕತ್ತಲಲ್ಲಿ ನಡೆಯುವವನಿಗೆ ಗೊತ್ತುಗುರಿ ಕಾಣದು.


ತನ್ನ ಸಹೋದರನನ್ನು ದ್ವೇಷಿಸುವವನು ಕತ್ತಲಲ್ಲಿ ಇದ್ದಾನೆ; ಕತ್ತಲಲ್ಲೇ ನಡೆಯುತ್ತಾನೆ. ಕತ್ತಲು ಅವನನ್ನು ಕುರುಡಾಗಿಸಿರುವುದರಿಂದ ಎತ್ತ ಹೋಗುತ್ತಿದ್ದಾನೆಂದು ಅವನಿಗೇ ತಿಳಿಯದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು