Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಯೋಹಾನನು 2:11 - ಕನ್ನಡ ಸತ್ಯವೇದವು C.L. Bible (BSI)

11 ತನ್ನ ಸಹೋದರನನ್ನು ದ್ವೇಷಿಸುವವನು ಕತ್ತಲಲ್ಲಿ ಇದ್ದಾನೆ; ಕತ್ತಲಲ್ಲೇ ನಡೆಯುತ್ತಾನೆ. ಕತ್ತಲು ಅವನನ್ನು ಕುರುಡಾಗಿಸಿರುವುದರಿಂದ ಎತ್ತ ಹೋಗುತ್ತಿದ್ದಾನೆಂದು ಅವನಿಗೇ ತಿಳಿಯದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಆದರೆ ತನ್ನ ಸಹೋದರನನ್ನು ದ್ವೇಷಿಸುವವನು ಕತ್ತಲೆಯಲ್ಲಿದ್ದಾನೆ ಮತ್ತು ಕತ್ತಲೆಯಲ್ಲಿ ನಡೆಯುತ್ತಿದ್ದಾನೆ. ಕತ್ತಲೆಯು ಅವನ ಕಣ್ಣುಗಳನ್ನು ಕುರುಡುಮಾಡಿರುವುದರಿಂದ ತಾನು ಎಲ್ಲಿಗೆ ಹೋಗುತ್ತಿದ್ದೇನೆ ಎಂದು ಅವನಿಗೆ ತಿಳಿಯದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ತನ್ನ ಸಹೋದರನನ್ನು ದ್ವೇಷಿಸುವವನು ಕತ್ತಲೆಯಲ್ಲಿದ್ದಾನೆ, ಕತ್ತಲೆಯಲ್ಲಿ ನಡೆದುಕೊಳ್ಳುತ್ತಾನೆ. ಕತ್ತಲೆಯು ಅವನ ಕಣ್ಣುಗಳನ್ನು ಕಾಣದ ಹಾಗೆ ಮಾಡಿದ್ದರಿಂದ ತಾನು ಎಲ್ಲಿಗೆ ಹೋಗುತ್ತಾನೋ ಅವನಿಗೆ ತಿಳಿಯದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಆದರೆ ತನ್ನ ಸಹೋದರನನ್ನು ದ್ವೇಷಿಸುವವನು ಅಂಧಕಾರದಲ್ಲಿದ್ದಾನೆ. ಅವನು ಅಂಧಕಾರದಲ್ಲಿಯೇ ಜೀವಿಸುತ್ತಾನೆ. ಅವನಿಗೆ ತಾನು ಎಲ್ಲಿಗೆ ಹೋಗುತ್ತಿದ್ದೇನೆ ಎಂಬುದೇ ತಿಳಿದಿಲ್ಲ. ಏಕೆಂದರೆ ಅಂಧಕಾರವು ಅವನನ್ನು ಕುರುಡನನ್ನಾಗಿ ಮಾಡಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಆದರೆ ತನ್ನ ಸಹೋದರನನ್ನು ದ್ವೇಷಿಸುವವನು ಕತ್ತಲೆಯಲ್ಲಿದ್ದಾನೆ ಮತ್ತು ಕತ್ತಲೆಯಲ್ಲಿ ಜೀವಿಸುತ್ತಾನೆ. ಕತ್ತಲೆಯು ಅವನ ಕಣ್ಣುಗಳನ್ನು ಕುರುಡು ಮಾಡಿದ್ದರಿಂದ ತಾನು ಎಲ್ಲಿಗೆ ಹೋಗುತ್ತಾನೋ ಎಂದು ಅವನಿಗೆ ತಿಳಿಯದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

11 ಖರೆ ಜೆ ಕೊನ್ ಅಪ್ಲ್ಯಾ ಭಾವ್-ಭೆನಿಯಾಂಚೊ ಪ್ರೆಮ್ ಕರಿನಾ ತೊ ಕಾಳ್ಕಾತ್ ಹಾಯ್; ತೊ ಅಪ್ನಿ ಖೈ ಜಾವ್ಕ್ ಲಾಗ್ಲಾ ಮನ್ತಲೆ ತೆಕಾ ಕಳಿನಾ ಹೊಲಾ, ಕಶ್ಯಾಕ್ ಮಟ್ಲ್ಯಾರ್ ಕಾಳ್ಕಾನ್ ತೆಕಾ ಕುಡ್ಡೊ ಕರುನ್ ಥವಲ್ಲೆ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಯೋಹಾನನು 2:11
16 ತಿಳಿವುಗಳ ಹೋಲಿಕೆ  

ಅದಕ್ಕೆ ಯೇಸು, “ಇನ್ನು ತುಸುಕಾಲ ಮಾತ್ರ ಜ್ಯೋತಿ ನಿಮ್ಮ ನಡುವೆ ಇರುತ್ತದೆ. ನಿಮ್ಮನ್ನು ಕತ್ತಲು ಕವಿಯದಂತೆ ಜ್ಯೋತಿಯಿರುವಾಗಲೇ ನಡೆಯಿರಿ. ಕತ್ತಲಲ್ಲಿ ನಡೆಯುವವನಿಗೆ ಗೊತ್ತುಗುರಿ ಕಾಣದು.


ಹಿಂದೆ ನಾವು ಅವಿವೇಕಿಗಳೂ ಅವಿಧೇಯರೂ ಆಗಿ ದಾರಿ ತಪ್ಪಿಹೋಗಿದ್ದೆವು. ಅನೇಕ ಪ್ರಲೋಭನೆಗಳಿಗೂ ದುರಿಚ್ಛೆಗಳಿಗೂ ಗುಲಾಮರಾಗಿದ್ದೆವು. ದುಷ್ಟತನ ಹಾಗೂ ಮತ್ಸರಗಳಲ್ಲಿ ಕಾಲ ಕಳೆಯುತ್ತಾ ಅಸಹ್ಯರೂ ಪರಸ್ಪರ ದ್ವೇಷಿಗಳೂ ಆಗಿದ್ದೆವು.


ನೀನು ನಿನ್ನ ವಿಷಯವಾಗಿ, ‘ನಾನು ಐಶ್ವರ್ಯವಂತನು, ಸಿರಿಸಂಪತ್ತುಳ್ಳವನು, ಯಾವ ಕೊರತೆಯೂ ಇಲ್ಲದವನು’ ಎಂದು ಹೇಳಿಕೊಳ್ಳುತ್ತಿರುವೆ. ಆದರೆ ನೀನು ನಿರ್ಭಾಗ್ಯನು, ದುರವಸ್ಥೆಯಲ್ಲಿರುವವನು, ದರಿದ್ರನು, ಕುರುಡನು ಮತ್ತು ಬಟ್ಟೆಬರೆಯಿಲ್ಲದೆ ಬೆತ್ತಲೆಯಾಗಿರುವವನು ಎಂಬುದು ನಿನಗೆ ತಿಳಿಯದು.


ನಾವು ಕತ್ತಲಲ್ಲಿ ಬಾಳುತ್ತಾ ದೇವರೊಡನೆ ಅನ್ಯೋನ್ಯವಾಗಿದ್ದೇವೆಂದು ಹೇಳಿದರೆ ನಾವು ಸುಳ್ಳುಗಾರರು, ಸತ್ಯಕ್ಕನುಸಾರ ಬಾಳದವರು.


“ನಾನು ಬೆಳಕಿನಲ್ಲಿದ್ದೇನೆ” ಎಂದು ಹೇಳಿಕೊಂಡು ತನ್ನ ಸಹೋದರನನ್ನು ದ್ವೇಷಿಸುವವನು ಇನ್ನೂ ಕತ್ತಲಲ್ಲೇ ಇದ್ದಾನೆ.


ಇವರು ವಿಶ್ವಾಸಿಸುವುದಿಲ್ಲ. ಏಕೆಂದರೆ, ಪೃಥ್ವಿಯ ಮಿಥ್ಯ ದೈವವು ಇವರ ಮನಸ್ಸನ್ನು ಮಂಕಾಗಿಸಿದೆ; ದೇವರ ಪ್ರತಿರೂಪವಾಗಿರುವ ಕ್ರಿಸ್ತಯೇಸುವಿನ ಮಹಿಮೆಯನ್ನು ಸಾರುವ ಶುಭಸಂದೇಶದ ಬೆಳಕನ್ನು ಕಾಣದಂತೆ ಇವರನ್ನು ಕುರುಡಾಗಿಸಿದೆ.


“ತಮ್ಮ ಕಣ್ಣುಗಳಿಂದ ಅವರು ಕಾಣದಂತೆಯೂ ತಮ್ಮ ಮನದಿಂದ ಗ್ರಹಿಸದಂತೆಯೂ ಹಾಗೂ ಮನತಿರುಗಿ ನನ್ನಿಂದ ಗುಣಹೊಂದದಂತೆಯೂ ಅವರ ಕಣ್ಣುಗಳನ್ನು ಕುರುಡಾಗಿಸಿರುವರು; ಅವರ ಮನಸ್ಸನ್ನು ಕಲ್ಲಾಗಿಸಿರುವರು ದೇವರು.”


ಆ ಜನರ ಬುದ್ಧಿಗೆ ಮಂಕು ಕವಿದಿತ್ತು. ಇಂದಿನವರೆಗೂ ಹಳೆಯ ಒಡಂಬಡಿಕೆಯನ್ನು ಓದುವಾಗಲೆಲ್ಲಾ ಅದೇ ಮಂಕಿನ ಮುಸುಕು ಕವಿದಿದೆ. ಅದನ್ನು ಕ್ರಿಸ್ತಯೇಸುವಿನ ಮುಖಾಂತರವೇ ತೆಗೆಯಲು ಸಾಧ್ಯ.


ದುರ್ಜನರ ಮಾರ್ಗ ಕಗ್ಗತ್ತಲಿನ ಹಾಗೆ, ಎಡವಿಬಿದ್ದ ಸ್ಥಳವೇ ತಿಳಿಯದು ಅವರಿಗೆ.


“ಸಹೋದರನ ಬಗ್ಗೆ ಒಳಗೊಳಗೇ ಹಗೆ ಇಟ್ಟುಕೊಳ್ಳಬೇಡ. ನೆರೆಯವನ ದೋಷಕ್ಕೆ ನೀನು ಒಳಗಾಗದಂತೆ ಅವನ ತಪ್ಪನ್ನು ಅವನಿಗೆ ಎತ್ತಿ ತೋರಿಸಲೇಬೇಕು.


ಅಬ್ಷಾಲೋಮನು ಅಮ್ನೋನನ ಸಂಗಡ ಒಳ್ಳೇಮಾತನ್ನಾಗಲಿ ಕೆಟ್ಟಮಾತನ್ನಾಗಲಿ ಆಡಲಿಲ್ಲ. ತನ್ನ ತಂಗಿಯಾದ ತಾಮಾರಳನ್ನು ಕೆಡಿಸಿದ್ದಕ್ಕಾಗಿ ಅವನು ಅಮ್ನೋನನನ್ನು ದ್ವೇಷಿಸಿದನು.


“ಜ್ಞಾನಿಗೆ ಹಣೆಯಲ್ಲಿ ಕಣ್ಣು, ಮೂಢನೋ ಕತ್ತಲೆಯಲ್ಲಿ ನಡೆಯುತ್ತಾನೆ". ಆದರೆ ಇವರಿಬ್ಬರ ಗತಿ ಒಂದೇ ಎಂದು ಕಂಡುಬಂದಿತು.


ಈ ಗುಣಗಳಿಲ್ಲದವನು ಸಂಕುಚಿತ ಮನೋಭಾವನೆಯುಳ್ಳವನು ಹಾಗೂ ಅಂಧನು. ಹಿಂದಿನ ಪಾಪಗಳಿಂದ ತಾನು ಶುದ್ಧಗೊಂಡವನು ಎಂಬುದನ್ನು ಮರೆತುಬಿಟ್ಟವನು.


ತನ್ನ ಸಹೋದರನನ್ನು ಪ್ರೀತಿಸುವವನಾದರೋ ಬೆಳಕಿನಲ್ಲಿ ನೆಲೆಗೊಂಡಿರುತ್ತಾನೆ. ಎಡವಿ ಪಾಪದಲ್ಲಿ ಬೀಳಿಸುವಂಥದ್ದೇನೂ ಅವನಲ್ಲಿ ಇರದು.


ತನ್ನ ಸಹೋದರರನ್ನು ದ್ವೇಷಿಸುವವನು ಕೊಲೆಗಾರನೇ ಹೌದು. ಯಾವ ಕೊಲೆಗಾರನಲ್ಲೂ ನಿತ್ಯಜೀವ ಇರದೆಂದು ನೀವು ಬಲ್ಲಿರಿ.


ತಾನು ದೇವರನ್ನು ಪ್ರೀತಿಸುತ್ತೇನೆಂದು ಒಬ್ಬನು ಹೇಳುತ್ತಾ ತನ್ನ ಸಹೋದರನನ್ನು ದ್ವೇಷಿಸಿದರೆ, ಅವನು ಸುಳ್ಳುಗಾರನಾಗುತ್ತಾನೆ. ತಾನು ಕಂಡಿರುವ ತನ್ನ ಸಹೋದರನನ್ನು ಪ್ರೀತಿಸದವನು ತಾನು ಕಾಣದಿರುವ ದೇವರನ್ನು ಹೇಗೆ ಪ್ರೀತಿಸಿಯಾನು?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು