Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಯೋಹಾನನು 2:13 - ಕನ್ನಡ ಸತ್ಯವೇದವು C.L. Bible (BSI)

13 ಬರೆಯುತಿಹೆನು ತಂದೆಗಳಿರಾ, ಇದನ್ನು ಏಕೆನೆ, ಬಲ್ಲವರಾದಿರಿ ಆದಿಯಿಂದಿರುವಾತನನ್ನು. ಬರೆಯುತಿಹೆನು ಯುವಜನರಿರಾ, ಇದನ್ನು ಏಕೆನೆ, ನೀವು ಜಯಿಸಿದ್ದಾಯಿತು ಆ ಕಡುಗೇಡಿಗನನ್ನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ತಂದೆಗಳಿರಾ, ಆದಿಯಿಂದಿರುವಾತನನ್ನು ನೀವು ಬಲ್ಲವರಾಗಿರುವುದರಿಂದ ನಾನು ನಿಮಗೆ ಬರೆಯುತ್ತಿದ್ದೇನೆ. ಯೌವನಸ್ಥರೇ, ನೀವು ಕೆಡುಕನನ್ನು ಜಯಿಸಿರುವುದರಿಂದ ನಿಮಗೆ ಬರೆಯುತ್ತಿದ್ದೇನೆ. ಮಕ್ಕಳೇ, ನೀವು ತಂದೆಯನ್ನು ಬಲ್ಲವರಾಗಿರುವುದರಿಂದ ನಿಮಗೆ ಬರೆಯುತ್ತಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ತಂದೆಗಳೇ, ಆದಿಯಿಂದಿರುವಾತನನ್ನು ನೀವು ಬಲ್ಲವರಾಗಿರುವದರಿಂದ ನಿಮಗೆ ಬರೆಯುತ್ತೇನೆ. ಯೌವನಸ್ಥರೇ, ನೀವು ಕೆಡುಕನನ್ನು ಜಯಿಸಿರುವದರಿಂದ ನಿಮಗೆ ಬರೆಯುತ್ತೇನೆ. ಮಕ್ಕಳಿರಾ, ನೀವು ತಂದೆಯನ್ನು ಬಲ್ಲವರಾಗಿರುವದರಿಂದ ನಿಮಗೆ ಬರೆದಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ತಂದೆಗಳೇ, ಆದಿಯಿಂದ ಇರುವಾತನನ್ನು ನೀವು ತಿಳಿದಿರುವುದರಿಂದ ನಾನು ನಿಮಗೆ ಬರೆಯುತ್ತಿದ್ದೇನೆ. ಯುವಕರೇ, ನೀವು ಕೆಡುಕನನ್ನು ಸೋಲಿಸಿರುವುದರಿಂದ ನಾನು ನಿಮಗೆ ಬರೆಯುತ್ತಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ತಂದೆಗಳೇ, ಆದಿಯಿಂದ ಇರುವ ದೇವರನ್ನು ನೀವು ಬಲ್ಲವರಾಗಿರುವುದರಿಂದ ನಾನು ನಿಮಗೆ ಬರೆಯುತ್ತೇನೆ. ಯೌವನಸ್ಥರೇ, ನೀವು ಕೆಡುಕನನ್ನು ಜಯಿಸಿರುವುದರಿಂದ ನಿಮಗೆ ಬರೆಯುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

13 ಬಾಬಾನು, ಆರಂಬಾಕ್ನಾ ಹೊತ್ತ್ಯಾಕ್ ತುಮಿ ಕಳ್ವುನ್ ಘೆಟಲ್ಲ್ಯಾಸಾಟ್ನಿ ಮಿಯಾ ತುಮ್ಕಾ ಲಿವ್ಕ್ ಲಾಗ್ಲಾ. ದಾಂಡ್ಗ್ಯಾ ಲೊಕಾನು ತುಮಿ ಬುರ್ಶ್ಯಾಕ್ ಹರ್ವಲ್ಲ್ಯಾ ಸಾಟ್ನಿ ಮಿಯಾ ತುಮ್ಕಾ ಲಿವ್ಕ್ ಲಾಗ್ಲಾ. ಪೊರಾನು, ತುಮಿ ಬಾಬಾಕ್ ಒಳ್ಕುನ್ ಘೆಟಲ್ಲ್ಯಾಸಾಟ್ನಿ ಮಿಯಾ ತುಮ್ಕಾ ಲಿವ್ಕ್ ಲಾಗ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಯೋಹಾನನು 2:13
36 ತಿಳಿವುಗಳ ಹೋಲಿಕೆ  

ನೀವು ನನ್ನನ್ನು ಅರಿತವರಾಗಿದ್ದರೆ ನನ್ನ ಪಿತನನ್ನು ಕೂಡ ಅರಿಯುತ್ತಿದ್ದಿರಿ. ಈಗಿನಿಂದ ಅವರನ್ನು ನೀವು ಅರಿತವರಾಗಿದ್ದೀರಿ ಹಾಗೂ ಕಂಡೂ ಇದ್ದೀರಿ,” ಎಂದು ನುಡಿದರು.


ಬರೆದಿಹೆನು ಮಕ್ಕಳಿರಾ, ಇದನ್ನು ಏಕೆನೆ, ಬಲ್ಲವರಾದಿರಿ ಪರಮ ಪಿತನನ್ನು. ಬರೆದಿಹೆನು‍ ಶಕ್ತಿಯುತ ಯುವಜನರಿರಾ, ಇದನ್ನು ಏಕೆನೆ, ನೆಲೆಗೊಳಿಸಿರುವಿರಿ ನಿಮ್ಮಲ್ಲಿ ದೈವವಾಕ್ಯವನ್ನು ಮಾತ್ರವಲ್ಲ, ನೀವು ಜಯಿಸಿದ್ದಾಯಿತು ಆ ಕಡುಗೇಡಿಗನನ್ನು.


ಪ್ರಿಯಮಕ್ಕಳೇ, ನೀವಂತೂ ದೇವರಿಗೆ ಸೇರಿದವರು. ಲೋಕದಲ್ಲಿರುವ ದುರಾತ್ಮಕ್ಕಿಂತಲೂ ನಿಮ್ಮಲ್ಲಿರುವ ಆತ್ಮವು ಶ್ರೇಷ್ಠವಾದುದು. ಆದ್ದರಿಂದಲೇ ಆ ಕಪಟ ಪ್ರವಾದಿಗಳನ್ನು ಜಯಿಸಿದ್ದೀರಿ.


ನಿಮಗೆ ನಾವು ಪ್ರಚುರಪಡಿಸುವ ಸಜೀವವಾಣಿ ಆದಿಯಿಂದ ಇರುವಂಥಾದ್ದು. ಇದನ್ನು ಕಣ್ಣಾರೆ ಕಂಡಿದ್ದೇವೆ, ಕಿವಿಯಾರೆ ಕೇಳಿದ್ದೇವೆ, ಮನಸ್ಸಾರೆ ಗ್ರಹಿಸಿದ್ದೇವೆ ಮತ್ತು ಕೈಯಾರೆ ಮುಟ್ಟಿದ್ದೇವೆ.


ನನ್ನ ಪಿತ ಸಮಸ್ತವನ್ನೂ ನನ್ನ ವಶಕ್ಕೆ ಒಪ್ಪಿಸಿದ್ದಾರೆ. ಪುತ್ರನು ಯಾರೆಂದು ಪಿತನ ಹೊರತು ಬೇರಾರೂ ಅರಿಯರು. ಪಿತನು ಯಾರೆಂದು ಪುತ್ರನು ಮತ್ತು ಯಾರಿಗೆ ಪುತ್ರನು ಅವರನ್ನು ಶ್ರುತಪಡಿಸಲು ಇಚ್ಛಿಸುತ್ತಾನೋ ಅವನೇ ಹೊರತು ಮತ್ತಾರೂ ಅರಿಯರು,” ಎಂದು ಹೇಳಿದರು.


ಏಕೈಕ ನಿಜದೇವರಾದ ನಿಮ್ಮನ್ನೂ ನೀವು ಕಳುಹಿಸಿಕೊಟ್ಟ ಯೇಸು ಕ್ರಿಸ್ತನನ್ನೂ ಅರಿತುಕೊಳ್ಳುವುದೇ ನಿತ್ಯಜೀವ.


ನಮಗೆ ತಿಳಿದಿರುವಂತೆ ದೇವರಿಂದ ಜನಿಸಿದವನು ಪಾಪಜೀವಿಯಾಗಿರುವುದಿಲ್ಲ. ಏಕೆಂದರೆ, ದೇವರ ಪುತ್ರನ ರಕ್ಷಣೆ ಅವನಿಗಿದೆ. ಕೇಡಿಗನ ಹಿಡಿತಕ್ಕೆ ಅವನು ಸಿಗನು.


ತನ್ನ ಸಹೋದರನನ್ನೇ ಕೊಂದ ಕಾಯಿನನಂತೆ ನಾವು ಇರಬಾರದು. ಅವನು ಕಡುಕೇಡಿಗನ ಕುವರ. ಅವನು ಕೊಂದುದಾದರೂ ಏಕೆ? ತನ್ನ ಕೃತ್ಯಗಳು ದುಷ್ಟವಾಗಿದ್ದು ತನ್ನ ಸಹೋದರನ ಕೃತ್ಯಗಳು ಧರ್ಮಿಷ್ಠವಾಗಿದ್ದುದರಿಂದ ಅಲ್ಲವೇ?


“ನನ್ನ ಪಿತ ಸಮಸ್ತವನ್ನೂ ನನ್ನ ವಶಕ್ಕೆ ಒಪ್ಪಿಸಿದ್ದಾರೆ; ಪುತ್ರನು ಯಾರೆಂಬುದನ್ನು ಪಿತನೇ ಹೊರತು ಬೇರಾರೂ ಅರಿಯರು. ಪಿತನು ಯಾರು ಎಂಬುದನ್ನು ಪುತ್ರನು ಮತ್ತು ಯಾವನಿಗೆ ಪುತ್ರನು ಅವರನ್ನು ಶ್ರುತಪಡಿಸಲು ಇಚ್ಛಿಸುತ್ತಾನೋ, ಅವರೇ ಹೊರತು ಮತ್ತಾರೂ ಅರಿಯರು.


ದೇವರ ಪುತ್ರ ಆಗಮಿಸಿ, ಸತ್ಯಸ್ವರೂಪರಾದ ದೇವರನ್ನು ನಾವು ತಿಳಿದುಕೊಳ್ಳುವಂತೆ ನಮಗೆ ಅರಿವನ್ನು ನೀಡಿದ್ದಾರೆ. ಇದನ್ನು ನಾವು ಬಲ್ಲೆವು. ದೇವರ ಪುತ್ರರಾದ ಯೇಸುಕ್ರಿಸ್ತರಲ್ಲಿ ನೆಲೆಸಿರುವ ನಾವು ಸತ್ಯಸ್ವರೂಪಿಯಲ್ಲೇ ನೆಲೆಸಿದ್ದೇವೆ. ನಿಜವಾದ ದೇವರೂ ನಿತ್ಯಜೀವವೂ ಇವರೇ.


ಬರೆಯುತಿಹೆನು ಪ್ರಿಯಮಕ್ಕಳಿರಾ, ಇದನ್ನು ಏಕೆನೆ, ಕ್ರಿಸ್ತನಾಮದ ನಿಮಿತ್ತ ಕ್ಷಮಿಸಲಾಯಿತು ನಿಮ್ಮ ಪಾಪಗಳನ್ನು.


ಪ್ರಿಯಮಕ್ಕಳೇ, ನೀವು ಪಾಪಮಾಡಬಾರದೆಂದೇ ನಾನಿದನ್ನು ನಿಮಗೆ ಬರೆಯುತ್ತಿದ್ದೇನೆ. ಒಂದು ವೇಳೆ ಯಾರಾದರೂ ಪಾಪಮಾಡಿದ್ದೇ ಆದರೆ ನಮ್ಮ ಪರವಾಗಿ ಪಿತನ ಬಳಿಯಲ್ಲಿ ಬಿನ್ನಯಿಸಲು ಒಬ್ಬರಿದ್ದಾರೆ. ಅವರೇ ಸತ್ಯಸ್ವರೂಪರಾದ ಯೇಸುಕ್ರಿಸ್ತರು.


ಹಾಗೆಯೇ, ಯುವಕರು ಎಲ್ಲ ವಿಷಯಗಳಲ್ಲೂ ಜಿತೇಂದ್ರಿಯರಾಗಿರಬೇಕೆಂದು ನೀನು ಎಚ್ಚರಿಸು.


“ಕತ್ತಲೆಯಿಂದ ಬೆಳಕು ಹೊಳೆಯಲಿ,” ಎಂದ ದೇವರೇ, ತಮ್ಮ ಜ್ಯೋತಿಯಿಂದ ನಮ್ಮ ಅಂತರಂಗವನ್ನು ಬೆಳಗಿಸಿದ್ದಾರೆ. ಇದರ ಪರಿಣಾಮವಾಗಿ ಕ್ರಿಸ್ತಯೇಸುವಿನ ಮುಖಮಂಡಲದಲ್ಲಿ ಪ್ರಜ್ವಲಿಸುತ್ತಿರುವ ದೇವರ ಮಹಿಮೆಯ ದಿವ್ಯಜ್ಞಾನವು ನಮ್ಮಲ್ಲಿ ಉದಯಿಸುವಂತಾಗಿದೆ.


ನನ್ನನ್ನಾಗಲಿ, ಪಿತನನ್ನಾಗಲಿ ಅವರು ಅರಿತಿಲ್ಲದ ಕಾರಣ ನಿಮಗೆ ಹೀಗೆ ಮಾಡುವರು.


ಅದಕ್ಕೆ ಉತ್ತರವಾಗಿ ಯೇಸು, “ನಾನು ಇಷ್ಟುಕಾಲ ನಿಮ್ಮೊಡನೆ ಇದ್ದರೂ ನಾನು ಯಾರೆಂಬುದನ್ನು ನೀನು ಅರಿತುಕೊಳ್ಳಲಿಲ್ಲವೆ? ನನ್ನನ್ನು ನೋಡಿದವನು ಪಿತನನ್ನೇ ನೋಡಿದವನಾಗಿದ್ದಾನೆ. ಹೀಗಿರುವಾಗ, ಫಿಲಿಪ್ಪನೇ, ‘ನಮಗೆ ಪಿತನನ್ನು ತೋರಿಸಿ’ ಎಂದು ಹೇಗೆ ಕೇಳುತ್ತೀ?


ಅದಕ್ಕೆ ಅವರು, “ನಿನ್ನ ಪಿತನೆಲ್ಲಿ?” ಎಂದು ಕೇಳಿದರು. ಯೇಸು, “ನೀವು ನನ್ನನ್ನು ಅರಿತಿಲ್ಲ, ನನ್ನ ಪಿತನನ್ನೂ ಅರಿತಿಲ್ಲ. ನೀವು ನನ್ನನ್ನು ಅರಿತಿದ್ದರೆ, ನನ್ನ ಪಿತನನ್ನೂ ಅರಿಯುತ್ತಿದ್ದಿರಿ,” ಎಂದರು.


ಹೊಲವೇ ಈ ಲೋಕ; ಒಳ್ಳೆಯ ಕಾಳುಗಳೇ ಶ್ರೀಸಾಮ್ರಾಜ್ಯದ ಮಕ್ಕಳು; ಕಳೆಗಳೇ ಕೇಡಿಗನ ಮಕ್ಕಳು.


ಒಬ್ಬನು ಶ್ರೀಸಾಮ್ರಾಜ್ಯದ ಸಂದೇಶವನ್ನು ಕೇಳಿ ಅದನ್ನು ಗ್ರಹಿಸದೆಹೋದರೆ, ಕೇಡಿಗನು ಬಂದು ಅವನ ಹೃದಯದಲ್ಲಿ ಬಿತ್ತಿದ್ದ ಬೀಜವನ್ನು ತೆಗೆದೆಸೆಯುತ್ತಾನೆ. ಇವನು ಕಾಲ್ದಾರಿಯಲ್ಲಿ ಬಿದ್ದ ಬೀಜವನ್ನು ಹೋಲುತ್ತಾನೆ.


ಯುವಕರಿಗೆ ಬಲವೆ ಭೂಷಣ; ಮುದುಕರಿಗೆ ನರೆಯೆ ಕಿರೀಟ.


ಪ್ರಭು : “ನನ್ನ ಭಕ್ತನಾದ್ದರಿಂದ ವಿಮೋಚಿಸುವೆನು ಅವನನು I ನನ್ನ ನಾಮವನು ಅರಿತವನಾದ್ದರಿಂದ ರಕ್ಷಿಸುವೆನು II


ಬೆಟ್ಟಗಳು ಹುಟ್ಟುವುದಕೆ ಮುಂಚಿನಿಂದ I ಭೂದೇಶಗಳು ಆಗುವುದಕೆ ಮೊದಲಿಂದ I ನೀನೆಮಗೆ ದೇವರು ಯುಗಯುಗಗಳಿಂದ II


ಹಿರಿಯರನ್ನು ಗದರಿಸಬೇಡ; ಅವರನ್ನು ತಂದೆಯಂತೆ ಭಾವಿಸಿ ಗೌರವದಿಂದ ತಿಳುವಳಿಕೆ ನೀಡು. ಯುವಕರೊಡನೆ ಸೋದರಭಾವನೆಯಿಂದ ವರ್ತಿಸು.


ಪಿತನೇ, ಇವರೆಲ್ಲಾ ಒಂದಾಗಿರಲಿ. ನೀವು ನನ್ನಲ್ಲಿ, ನಾನು ನಿಮ್ಮಲ್ಲಿ ಇರುವಂತೆಯೇ ಇವರೂ ನಮ್ಮಲ್ಲಿ ಒಂದಾಗಿರಲಿ. ಹೀಗೆ, ನನ್ನನ್ನು ಕಳುಹಿಸಿದವರು ನೀವೇ ಎಂದು ಲೋಕವು ವಿಶ್ವಾಸಿಸುವಂತಾಗಲಿ.


ಆಹಾ! ಎಷ್ಟು ಸುಂದರ, ಎಷ್ಟು ಮನೋಹರ ಆ ನಾಡಿನ ದೃಶ್ಯ! ಪುಷ್ಟಿಗೊಳಿಸುವುವು ಯುವಕಯುವತಿಯರನು ದ್ರಾಕ್ಷೆ, ದವಸಧಾನ್ಯ!


“ತರುವಾಯ ಎಲ್ಲಾ ಮಾನವರ ಮೇಲೆ ನನ್ನ ಆತ್ಮವನ್ನು ಸುರಿಸುವೆನು; ಪುತ್ರಪುತ್ರಿಯರು ಪ್ರವಾದನೆ ಮಾಡುವರು; ನಿಮ್ಮ ಹಿರಿಯರು ಸ್ವಪ್ನಶೀಲರಾಗುವರು; ನಿಮ್ಮ ಯುವಕರಿಗೆ ದಿವ್ಯದರ್ಶನಗಳಾಗುವುವು.


ಯುವಕರೂ ಯುವತಿಯರೂ I ಮುದುಕರೂ ಮಕ್ಕಳೂ II


ಹೌದಾದರೆ ಹೌದೆನ್ನಿ, ಅಲ್ಲವಾದರೆ ಅಲ್ಲವೆನ್ನಿ; ಇದಕ್ಕಿಂತ ಮಿಗಿಲಾದುದು ಪಿಶಾಚಿಯಿಂದ ಪ್ರೇರಿತವಾದುದು.”


ನಿಮಗೆ ನನ್ನಲ್ಲಿ ಶಾಂತಿಸಮಾಧಾನ ಲಭಿಸಲೆಂದು ಇದನ್ನೆಲ್ಲಾ ನಿಮಗೆ ಹೇಳಿದ್ದೇನೆ. ಲೋಕದಲ್ಲಿ ನಿಮಗೆ ಕಷ್ಟಸಂಕಟಗಳು ತಪ್ಪಿದ್ದಲ್ಲ, ಆದರೆ ಧೈರ್ಯವಾಗಿರಿ. ನಾನು ಲೋಕವನ್ನು ಜಯಿಸಿದ್ದೇನೆ,” ಎಂದು ಹೇಳಿದರು.


ಸಭೆಗಳಿಗೆ ದೇವರಾತ್ಮ ಹೇಳುವುದನ್ನು ಕಿವಿಯುಳ್ಳವನು ಕೇಳಲಿ. ಯಾರು ಜಯಹೊಂದುತ್ತಾನೋ ಅಂಥವನಿಗೆ ದೇವರ ಪರಂಧಾಮದಲ್ಲಿ ಇರುವ ಜೀವವೃಕ್ಷದ ಫಲವನ್ನು ಸವಿಯುವ ಸೌಭಾಗ್ಯವನ್ನು ನಾನು ಅನುಗ್ರಹಿಸುತ್ತೇನೆ.


ಜಯಿಸಿದರು ಸೋದರರು ಆ ನಿಂದಕನನ್ನು ಯಜ್ಞದ ಕುರಿಮರಿಯ ರಕ್ತದಿಂದ ಸತ್ಯಕ್ಕೆ ಸಾಕ್ಷಿಯನ್ನಿತ್ತುದರಿಂದ ಜೀವದಾಶೆಯನು ತೊರೆದುದರಿಂದ ಮರಣದ ಭಯವನು ಬಿಸುಟುದರಿಂದ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು