Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಯೋಹಾನನು 2:14 - ಕನ್ನಡ ಸತ್ಯವೇದವು C.L. Bible (BSI)

14 ಬರೆದಿಹೆನು ಮಕ್ಕಳಿರಾ, ಇದನ್ನು ಏಕೆನೆ, ಬಲ್ಲವರಾದಿರಿ ಪರಮ ಪಿತನನ್ನು. ಬರೆದಿಹೆನು‍ ಶಕ್ತಿಯುತ ಯುವಜನರಿರಾ, ಇದನ್ನು ಏಕೆನೆ, ನೆಲೆಗೊಳಿಸಿರುವಿರಿ ನಿಮ್ಮಲ್ಲಿ ದೈವವಾಕ್ಯವನ್ನು ಮಾತ್ರವಲ್ಲ, ನೀವು ಜಯಿಸಿದ್ದಾಯಿತು ಆ ಕಡುಗೇಡಿಗನನ್ನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ತಂದೆಗಳಿರಾ, ಆದಿಯಿಂದಿರುವಾತನನ್ನು ನೀವು ಬಲ್ಲವರಾಗಿರುವುದರಿಂದ ನಿಮಗೆ ಬರೆದಿದ್ದೇನೆ. ಯೌವನಸ್ಥರೇ, ನೀವು ಶಕ್ತರಾಗಿರುವುದರಿಂದಲೂ ದೇವರ ವಾಕ್ಯವು ನಿಮ್ಮಲ್ಲಿ ನೆಲೆಗೊಂಡಿರುವುದರಿಂದಲೂ ನೀವು ಕೆಡುಕನನ್ನು ಜಯಿಸಿರುವುದರಿಂದಲೂ ನಾನು ನಿಮಗೆ ಬರೆದಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ತಂದೆಗಳೇ, ಆದಿಯಿಂದಿರುವಾತನನ್ನು ನೀವು ಬಲ್ಲವರಾಗಿರುವದರಿಂದ ನಿಮಗೆ ಬರೆದಿದ್ದೇನೆ. ಯೌವನಸ್ಥರೇ, ನೀವು ಶಕ್ತರಾಗಿರುವದರಿಂದಲೂ ದೇವರ ವಾಕ್ಯವು ನಿಮ್ಮಲ್ಲಿ ನೆಲೆಗೊಂಡಿರುವದರಿಂದಲೂ ನೀವು ಕೆಡುಕನನ್ನು ಜಯಿಸಿರುವದರಿಂದಲೂ ನಿಮಗೆ ಬರೆದಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಮಕ್ಕಳೇ, ನೀವು ತಂದೆಯನ್ನು ತಿಳಿದಿರುವುದರಿಂದ ನಾನು ನಿಮಗೆ ಬರೆಯುತ್ತಿದ್ದೇನೆ. ತಂದೆಗಳೇ, ಆದಿಯಿಂದ ಇರುವಾತನನ್ನು ನೀವು ತಿಳಿದಿರುವುದರಿಂದ ನಾನು ನಿಮಗೆ ಬರೆಯುತ್ತಿದ್ದೇನೆ. ಯುವಕರೇ, ನೀವು ಬಲಶಾಲಿಗಳಾಗಿರುವುದರಿಂದ, ದೇವರ ವಾಕ್ಯವು ನಿಮ್ಮಲ್ಲಿ ನೆಲಸಿರುವುದರಿಂದ ಮತ್ತು ನೀವು ಕೆಡುಕನನ್ನು ಸೋಲಿಸಿರುವುದರಿಂದ ನಾನು ನಿಮಗೆ ಬರೆಯುತ್ತಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಮಕ್ಕಳೇ, ನೀವು ತಂದೆಯನ್ನು ತಿಳಿದುಕೊಂಡಿರುವುದರಿಂದ ನಿಮಗೆ ಬರೆಯುತ್ತೇನೆ. ತಂದೆಗಳೇ, ಆದಿಯಿಂದ ಇರುವ ದೇವರನ್ನು ನೀವು ಬಲ್ಲವರಾಗಿರುವುದರಿಂದ ನಿಮಗೆ ಬರೆದಿದ್ದೇನೆ. ಯೌವನಸ್ಥರೇ, ನೀವು ಬಲ ಹೊಂದಿರುವುದರಿಂದಲೂ ದೇವರ ವಾಕ್ಯವು ನಿಮ್ಮಲ್ಲಿ ನೆಲೆಗೊಂಡಿರುವುದರಿಂದಲೂ ನೀವು ಕೆಡುಕನನ್ನು ಜಯಿಸಿರುವುದರಿಂದಲೂ ನಿಮಗೆ ಬರೆದಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

14 ಬಾಬಾನು, ಆರಂಬಾಕ್ನಾ ಹೊತ್ತ್ಯಾಕ್ ತುಮಿ ಒಳ್ಕುನ್ ಘೆಟಲ್ಲ್ಯಾಸಾಟ್ನಿ ಮಿಯಾ ತುಮ್ಕಾ ಲಿವ್ಕ್ ಲಾಗ್ಲಾ. ದಾಂಡ್ಗ್ಯಾ ಲೊಕಾನು, ತುಮಿ ಗಟ್ಟ್ ಹಾಸಿ ದೆವಾಚಿ ಗೊಸ್ಟ್ ತುಮ್ಚ್ಯಾ ವಾಂಗ್ಡಾ ಹೊತ್ತ್ಯಾ ಸಾಟ್ನಿ ಅನಿ ತುಮಿ ವಾಯ್ಟಾಕ್ ಹರ್‍ವುನ್ ಟಾಕಲ್ಲ್ಯಾ ಸಾಟ್ನಿ ಮಿಯಾ ತುಮ್ಕಾ ಲಿವ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಯೋಹಾನನು 2:14
18 ತಿಳಿವುಗಳ ಹೋಲಿಕೆ  

ನಿನಗೆ ವಿರುದ್ಧ ನಾ ಪಾಪಮಾಡದಂತೆ I ನಿನ್ನಾ ನುಡಿಯನು ನನ್ನೆದೆಯಲ್ಲಿರಿಸಿದೆ II


ಬರೆಯುತಿಹೆನು ತಂದೆಗಳಿರಾ, ಇದನ್ನು ಏಕೆನೆ, ಬಲ್ಲವರಾದಿರಿ ಆದಿಯಿಂದಿರುವಾತನನ್ನು. ಬರೆಯುತಿಹೆನು ಯುವಜನರಿರಾ, ಇದನ್ನು ಏಕೆನೆ, ನೀವು ಜಯಿಸಿದ್ದಾಯಿತು ಆ ಕಡುಗೇಡಿಗನನ್ನು.


ಕ್ರಿಸ್ತಯೇಸುವಿನ ವಾಕ್ಯ ನಿಮ್ಮಲ್ಲಿ ನೆಲೆಸಿ ಸಮೃದ್ಧಿಯಾಗಿ ಬೆಳೆಯಲಿ. ಜ್ಞಾನಸಂಪನ್ನರಾಗಿ ಒಬ್ಬರಿಗೊಬ್ಬರು ಉಪದೇಶಮಾಡಿರಿ ಹಾಗೂ ಬುದ್ಧಿ ಹೇಳಿಕೊಳ್ಳಿರಿ. ಕೃತಜ್ಞತೆಯುಳ್ಳವರಾಗಿ ಕೀರ್ತನೆಗಳಿಂದಲೂ ಸಂಗೀತಗಳಿಂದಲೂ ಭಕ್ತಿಗೀತೆಗಳಿಂದಲೂ ಹೃದಯಾಂತರಾಳದಿಂದ ದೇವರಿಗೆ ಹಾಡಿರಿ.


“ನೀವು ನನ್ನಲ್ಲಿಯೂ ನನ್ನ ವಾಕ್ಯವು ನಿಮ್ಮಲ್ಲಿಯೂ ನೆಲೆಗೊಂಡಿದ್ದರೆ ನೀವು ಏನು ಬೇಕಾದರೂ ಕೇಳಬಹುದು. ನಿಮಗದು ಸಿಗುವುದು.


ಕೊನೆಯದಾಗಿ, ಪ್ರಭುವಿನ ಅನ್ಯೋನ್ಯತೆಯಲ್ಲಿ ಬಲಾಢ್ಯರಾಗಿರಿ. ಅವರ ಪರಾಕ್ರಮ ಶಕ್ತಿಯನ್ನು ಆಶ್ರಯಿಸಿರಿ.


ಯೇಸು ಸ್ವಾಮಿ ತಮ್ಮಲ್ಲಿ ನಂಬಿಕೆ ಇಟ್ಟಿದ್ದ ಯೆಹೂದ್ಯರಿಗೆ ಹೀಗೆಂದರು: “ನನ್ನ ಮಾತಿಗೆ ನೀವು ಶರಣಾದರೆ ನಿಜವಾಗಿಯೂ ನೀವು ನನ್ನ ಶಿಷ್ಯರು.


ಅವರ ಸಂದೇಶ ನಿಮ್ಮಲ್ಲಿ ನೆಲಸಿಲ್ಲ. ಏಕೆಂದರೆ, ಅವರು ಕಳುಹಿಸಿದವನಲ್ಲಿ ನೀವು ವಿಶ್ವಾಸವಿಡಲಿಲ್ಲ.


ಸಭೆಗಳಿಗೆ ದೇವರಾತ್ಮ ಹೇಳುವುದನ್ನು ಕಿವಿಯುಳ್ಳವನು ಕೇಳಲಿ. ಯಾರು ಜಯಹೊಂದುತ್ತಾನೋ ಅಂಥವನಿಗೆ ದೇವರ ಪರಂಧಾಮದಲ್ಲಿ ಇರುವ ಜೀವವೃಕ್ಷದ ಫಲವನ್ನು ಸವಿಯುವ ಸೌಭಾಗ್ಯವನ್ನು ನಾನು ಅನುಗ್ರಹಿಸುತ್ತೇನೆ.


ನೀನು ಸತ್ಯದಲ್ಲಿ ನಿಷ್ಠಾವಂತನಾಗಿದ್ದು, ಸನ್ಮಾರ್ಗದಲ್ಲಿ ನಡೆಯುತ್ತಿರುವುದಾಗಿ ಕೆಲವು ಸಹೋದರರು ಇಲ್ಲಿಗೆ ಬಂದು ತಿಳಿಸಿದಾಗ ನನಗಾದ ಆನಂದ ಅಷ್ಟಿಷ್ಟಲ್ಲ.


ನಮ್ಮಲ್ಲಿ ನೆಲೆಗೊಂಡಿರುವ ಹಾಗೂ ನಮ್ಮಲ್ಲಿ ಶಾಶ್ವತವಾಗಿರುವ ಸತ್ಯದ ಪ್ರಯುಕ್ತ ನಾನು ಮತ್ತು ಸತ್ಯವನ್ನು ಅರಿತಿರುವ ಎಲ್ಲರು ನಿಮ್ಮಲ್ಲಿ ಪ್ರೀತಿಯನ್ನಿಟ್ಟಿದ್ದೇವೆ.


ಆ ದಿನಗಳು ಬಂದಮೇಲೆ ಇಸ್ರಯೇಲ್ ವಂಶದವರೊಡನೆ ನಾನು ಮಾಡಿಕೊಳ್ಳುವ ಒಡಂಬಡಿಕೆ ಹೀಗಿರುವುದು, ಎಂದರು ಸರ್ವೇಶ್ವರ. ನಾಟಿಸುವೆನು ನನ್ನಾಜ್ಞೆಗಳನು ಅವರ ಮನದಲಿ ಬರೆಯುವೆನು ಅವುಗಳನು ಅವರ ಹೃದಯದಲಿ ದೇವನಾಗಿರುವೆನು ನಾನವರಿಗೆ ಅವರಾಗುವರು ಪ್ರಜೆಗಳು ನನಗೆ.


ದೇವರ ಮಹಿಮಾಶಕ್ತಿಯಿಂದ ನೀವು ಬಲಗೊಂಡು ಎಲ್ಲವನ್ನೂ ತಾಳ್ಮೆಯಿಂದಲೂ ಸಮಾಧಾನದಿಂದಲೂ ಸಹಿಸಿಕೊಳ್ಳುವಿರಿ.


ಪ್ರಿಯ ಪುತ್ರನೇ, ಕ್ರಿಸ್ತಯೇಸುವಿನಲ್ಲಿರುವವರಿಗೆ ಲಭಿಸುವ ಅನುಗ್ರಹದಲ್ಲಿ ನೀನು ದೃಢನಾಗಿರು.


ಸರ್ವೇಶನ ಶಕ್ತಿಯಿಂದ ಸರ್ವವನ್ನೂ ಸಾಧಿಸುವ ಸಾಮರ್ಥ್ಯ ನನಗಿದೆ.


ಹೌದು, ಸಹನಾಶಕ್ತಿ ನಿನಗಿದೆ. ಬೇಸರಗೊಳ್ಳದೆ ನನ್ನ ಹೆಸರಿನ ನಿಮಿತ್ತ ನೀನು ಕಷ್ಟಸಂಕಟಗಳನ್ನು ತಾಳಿಕೊಂಡೆ.


ನಾವು ಪಾಪಮಾಡಲಿಲ್ಲವೆಂದು ಹೇಳಿದರೆ ದೇವರನ್ನು ಸುಳ್ಳುಗಾರರನ್ನಾಗಿಸುತ್ತೇವೆ ಮತ್ತು ಅವರ ವಾಣಿ ನಮ್ಮಲ್ಲಿ ಇರುವುದಿಲ್ಲ.


ನೀವು ಅಬ್ರಹಾಮನ ವಂಶಜರೆಂದು ನಾನು ಬಲ್ಲೆ. ಆದರೆ ನನ್ನ ಮಾತು ಹಿಡಿಸದ ಕಾರಣ ನನ್ನನ್ನು ಕೊಲ್ಲಲು ಹವಣಿಸುತ್ತೀರಿ.


ನಿಮಗೆ ನಾವು ಪ್ರಚುರಪಡಿಸುವ ಸಜೀವವಾಣಿ ಆದಿಯಿಂದ ಇರುವಂಥಾದ್ದು. ಇದನ್ನು ಕಣ್ಣಾರೆ ಕಂಡಿದ್ದೇವೆ, ಕಿವಿಯಾರೆ ಕೇಳಿದ್ದೇವೆ, ಮನಸ್ಸಾರೆ ಗ್ರಹಿಸಿದ್ದೇವೆ ಮತ್ತು ಕೈಯಾರೆ ಮುಟ್ಟಿದ್ದೇವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು