Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಯೋಹಾನನು 2:17 - ಕನ್ನಡ ಸತ್ಯವೇದವು C.L. Bible (BSI)

17 ಲೋಕವೂ ಅದರ ವ್ಯಾಮೋಹವೂ ಗತಿಸಿಹೋಗುವುವು. ಆದರೆ ದೇವರ ಚಿತ್ತವನ್ನು ನೆರವೇರಿಸುವವನು ಚಿರಂಜೀವಿಯಾಗಿ ಬಾಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಲೋಕವೂ ಅದರ ಆಸೆಯೂ ಗತಿಸಿಹೋಗುತ್ತವೆ. ಆದರೆ ದೇವರ ಚಿತ್ತವನ್ನು ನೆರವೇರಿಸುವವನು ಸದಾಕಾಲಕ್ಕೂ ಇರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಲೋಕವೂ ಅದರ ಆಶೆಯೂ ಗತಿಸಿ ಹೋಗುತ್ತವೆ; ಆದರೆ ದೇವರ ಚಿತ್ತವನ್ನು ನೆರವೇರಿಸುವವನು ಎಂದೆಂದಿಗೂ ಇರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಈ ಲೋಕವು ಮತ್ತು ಜನರು ಬಯಸುವಂಥವುಗಳು ಗತಿಸಿಹೋಗುತ್ತವೆ. ಆದರೆ ದೇವರ ಚಿತ್ತಕ್ಕನುಸಾರವಾಗಿ ಮಾಡುವವನು ಸದಾಕಾಲ ಜೀವಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಲೋಕವೂ ಲೋಕದ ಆಶೆಗಳೂ ಗತಿಸಿಹೋಗುತ್ತವೆ. ಆದರೆ ದೇವರ ಚಿತ್ತವನ್ನು ನೆರವೇರಿಸುವವನು ಎಂದೆಂದಿಗೂ ಜೀವಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

17 ಹ್ಯೊ ಜಗ್, ಅನಿ ಲೊಕಾ ಆಶಾ ಕರ್ತಲೆ ಸಗ್ಳೆ ನಾಸ್ ಹೊವ್ನ್ ಜಾತಾ; ಖರೆ ದೆವಾಚ್ಯಾ ಮನಾ ಸಾರ್ಕೆ ಚಲ್ತಲೊ ಸದಾ ಸರ್ವತಾಕ್ ಜಿವನ್ ಕರ್ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಯೋಹಾನನು 2:17
28 ತಿಳಿವುಗಳ ಹೋಲಿಕೆ  

ಭೂಮ್ಯಾಕಾಶಗಳು ಗತಿಸಿಹೋಗುವುವು; ಆದರೆ ನನ್ನ ಮಾತುಗಳು ಶಾಶ್ವತವಾಗಿ ನಿಲ್ಲುವುವು.


ಇಹಲೋಕದ ಆಚಾರವಿಚಾರಗಳಿಗೆ ಮಾರುಹೋಗಬೇಡಿ. ಬದಲಿಗೆ, ಮಾನಸಾಂತರಗೊಂಡು ನೂತನ ಜೀವಿಗಳಾಗಿ ಬಾಳಿರಿ. ಆಗ ನೀವು ದೇವರ ಚಿತ್ತಾನುಸಾರ ಯಾವುದು ಉತ್ತಮವಾದುದು, ಯಾವುದು ಉನ್ನತವಾದುದು, ಯಾವುದು ಉತ್ಕೃಷ್ಟವಾದುದು ಎಂಬುದನ್ನು ಅರಿತುಕೊಳ್ಳುವಿರಿ.


ಲೋಕದ ವ್ಯವಹಾರದಲ್ಲಿ ಇರುವವರು ಅದರಲ್ಲಿಯೇ ತಲ್ಲೀನರಾಗದಿರಲಿ. ಏಕೆಂದರೆ, ಲೋಕದ ರೂಪರೇಷೆಗಳು ಗತಿಸಿಹೋಗುತ್ತವೆ.


ಉಳಿದಿರುವ ತನ್ನ ಜೀವಮಾನ ಕಾಲವನ್ನು ಲೌಕಿಕ ವ್ಯಾಮೋಹಗಳಲ್ಲಿ ಕಳೆಯದೆ ದೇವರ ಚಿತ್ತಕ್ಕನುಸಾರ ಕಳೆಯುತ್ತಾನೆ.


ದೇವರ ಚಿತ್ತವನ್ನು ನೆರವೇರಿಸಿ, ಅವರು ವಾಗ್ದಾನಮಾಡಿರುವುದನ್ನು ಪಡೆದುಕೊಳ್ಳುವಂತೆ, ನೀವೂ ದೃಢಮನಸ್ಕರಾಗಿರಬೇಕು.


ದೈವೇಚ್ಛೆಯನ್ನು ಯಾರು ನೆರವೇರಿಸುತ್ತಾರೋ ಅವರೇ ನನಗೆ ಸಹೋದರ, ಸಹೋದರಿ, ತಾಯಿ,” ಎಂದರು.


ಅಂತ್ಯಕಾಲದಲ್ಲಿ ಪ್ರತ್ಯಕ್ಷವಾಗಲಿರುವ ಜೀವೋದ್ಧಾರವು ವಿಶ್ವಾಸಿಗಳಾದ ನಿಮಗೆ ಲಭಿಸುವಂತೆ ದೇವರು ತಮ್ಮ ಶಕ್ತಿಯಿಂದ ನಿಮ್ಮನ್ನು ಕಾಪಾಡುತ್ತಾರೆ.


ನೀವು ಕೆಟ್ಟ ನಡತೆಯನ್ನು ಬಿಟ್ಟು ಪರಿಶುದ್ಧರಾಗಿ ಜೀವಿಸಬೇಕು ಎಂಬುದು ದೇವರ ಚಿತ್ತ.


ಆದರೆ ನಾನು ಕೊಡುವ ನೀರನ್ನು ಕುಡಿದವನಿಗೆ ಎಂದಿಗೂ ದಾಹವಾಗದು; ಆ ನೀರು ಅವನಲ್ಲಿ ಉಕ್ಕಿ ಹರಿಯುವ ಬುಗ್ಗೆಯಾಗಿ, ನಿತ್ಯಜೀವವನ್ನು ತರುತ್ತದೆ,” ಎಂದು ಉತ್ತರಕೊಟ್ಟರು.


ನೀನೆನ್ನ ದೇವರು; ಕಲಿಸೆನಗೆ ನಡೆಯಲು ನಿನ್ನ ಚಿತ್ತದಂತೆ I ನಿನ್ನ ಶುಭಾತ್ಮ ನೆರವಾಗಲಿ ನಾ ಸಮಹಾದಿಯಲಿ ನಡೆವಂತೆ II


“ನನ್ನನ್ನು ‘ಸ್ವಾಮೀ, ಸ್ವಾಮೀ,’ ಎನ್ನುವ ಪ್ರತಿಯೊಬ್ಬನೂ ಸ್ವರ್ಗಸಾಮ್ರಾಜ್ಯವನ್ನು ಪ್ರವೇಶಿಸನು. ಸ್ವರ್ಗದಲ್ಲಿರುವ ನನ್ನ ತಂದೆಯ ಚಿತ್ತಾನುಸಾರ ನಡೆಯುವವನು ಮಾತ್ರ ಅದನ್ನು ಪ್ರವೇಶಿಸುವನು.


ನಿಮ್ಮ ಜೀವಮಾನ ಎಷ್ಟುಮಾತ್ರದ್ದು? ಈಗ ಕಾಣಿಸಿಕೊಂಡು ಆಮೇಲೆ ಕಾಣದೆಹೋಗುವ ಹೊಗೆಯಂತೆ ಅದು.


ಸ್ವರ್ಗದಿಂದ ಇಳಿದುಬಂದ ರೊಟ್ಟಿ ಇದೇ. ನಿಮ್ಮ ಪೂರ್ವಜರು ‘ಮನ್ನಾ’ವನ್ನು ತಿಂದರೂ ಸಾವಿಗೆ ತುತ್ತಾದರು. ಇದು ಹಾಗಲ್ಲ. ಈ ರೊಟ್ಟಿಯನ್ನು ತಿನ್ನುವವನು ಚಿರಕಾಲ ಬಾಳುವನು,” ಎಂದು ಹೇಳಿದರು.


ಇವರಿಬ್ಬರಲ್ಲಿ ತಂದೆಯ ಇಷ್ಟದಂತೆ ನಡೆದವನು ಯಾರು?” ಎಂದು ಯೇಸು ಕೇಳಿದರು. “ಮೊದಲನೆಯ ಮಗನೇ,” ಎಂದು ಉತ್ತರಿಸಿದರು ಅವರು. ಆಗ ಯೇಸುಸ್ವಾಮಿ, “ಸುಂಕದವರೂ ವೇಶ್ಯೆಯರೂ ನಿಮಗಿಂತ ಮೊದಲೇ ದೇವರಸಾಮ್ರಾಜ್ಯವನ್ನು ಪ್ರವೇಶಿಸುವರು ಎಂದು ನಿಮಗೆ ಸ್ಪಷ್ಟವಾಗಿ ಹೇಳುತ್ತೇನೆ.


ಎಲ್ಲಾ ಸಂದರ್ಭಗಳಲ್ಲೂ ಉಪಕಾರಸ್ಮರಣೆಮಾಡಿರಿ. ಕ್ರಿಸ್ತಯೇಸುವಿನಲ್ಲಿ ದೇವರು ನಿಮ್ಮಿಂದ ಇಚ್ಛಿಸುವುದು ಇದನ್ನೇ.


ಕ್ರಿಸ್ತಯೇಸುವಿನ ಸೇವಕನೂ ನಿಮ್ಮ ಸಭೆಗೆ ಸೇರಿದವನೂ ಆದ ಎಪಫ್ರನಿಂದಲೂ ನಿಮಗೆ ವಂದನೆಗಳು. ನೀವು ಮಾಡುವ ಎಲ್ಲಾ ಕಾರ್ಯಗಳಲ್ಲೂ ದೇವರ ಚಿತ್ತಕ್ಕೆ ವಿಧೇಯರಾಗಿ ಸ್ಥಿರ ಹಾಗೂ ಸಿದ್ಧ ಕ್ರೈಸ್ತರಾಗಿ ಬಾಳಬೇಕೆಂದು ಅವನು ನಿಮಗಾಗಿ ಸದಾ ಆಸಕ್ತಿಯಿಂದ ಪ್ರಾರ್ಥಿಸುತ್ತಿದ್ದಾನೆ.


ಬಿರುಗಾಳಿ ಬೀಸಿದರೆ ದುರ್ಜನರು ಇಲ್ಲವಾಗುವರು; ಸಜ್ಜನರಾದರೋ ಸದಾಕಾಲ ಸ್ಥಿರವಾಗಿ ನಿಲ್ಲುವರು.


ಹೀಗಿರುವುದರಿಂದ ಈ ವಿಷಯವನ್ನು ನಾವು ಕೇಳಿದ ದಿನದಿಂದಲೂ ನಿಮಗಾಗಿ ಸದಾ ಪ್ರಾರ್ಥಿಸುತ್ತಲೇ ಇದ್ದೇವೆ. ನೀವು ಪರಿಪೂರ್ಣ ವಿವೇಕದಿಂದಲೂ ಆಧ್ಯಾತ್ಮಿಕ ಜ್ಞಾನದಿಂದಲೂ ದೇವರ ಚಿತ್ತವನ್ನು ಸಂಪೂರ್ಣವಾಗಿ ಅರಿಯಬೇಕೆಂಬುದೇ ನಮ್ಮ ಕೋರಿಕೆ.


ದೇವರ ಚಿತ್ತದಂತೆ ನಡೆಯಲು ಮನಸ್ಸು ಉಳ್ಳವನಿಗೆ, ನಾನು ಬೋಧಿಸುವುದು ದೇವರಿಂದ ಬಂದುದೋ ಅಥವಾ ನನ್ನ ಸ್ವಂತ ಕಲ್ಪನೆಯೋ ಎಂಬುದು ತಿಳಿಯುತ್ತದೆ.


ನಿನ್ನ ಕನಲಿನಲೇ ಕಳೆದಿವೆ ನಮ್ಮ ದಿನಗಳು I ನಿಟ್ಟುಸಿರಿನಂತೆ ಮುಗಿವುದೆಮ್ಮ ಬದುಕುಬಾಳು II


ನರಮಾನವನು ಮೆರೆದಾಡುವನು ಮಾಯೆಯಂತೆ I ಅವನ ಸಡಗರವೆಲ್ಲವೂ ನಿರರ್ಥಕದಂತೆ I ಕೂಡಿಪನಾತ ಸಿರಿ ಅದು ಯಾರದಾಗುವುದೆಂದು ಅರಿಯದೆ II


ನೀನಾದರೋ ಉಳಿದಿರುವೆ, ಅವೋ ಅಳಿದುಹೋಗುವುವು I ಹಳೆಯದಾಗುತ್ತವೆ ಬಟ್ಟೆಯಂತೆ ಅವೆಲ್ಲವು I ಉಡುಪಿನಂತೆ ಬದಲಿಸುತ್ತ, ಮಾರ್ಪಡುತ್ತವೆ ಅವು II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು