Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಯೋಹಾನನು 2:18 - ಕನ್ನಡ ಸತ್ಯವೇದವು C.L. Bible (BSI)

18 ನನ್ನ ಪ್ರಿಯ ಮಕ್ಕಳೇ, ಅಂತಿಮ ಕಾಲ ಸಮೀಪಿಸಿತು. ಕ್ರಿಸ್ತವಿರೋಧಿ ಬರುವನೆಂದು ನೀವು ಕೇಳಿದ್ದೀರಿ. ಈಗಾಗಲೇ ಅನೇಕ ಕ್ರಿಸ್ತವಿರೋಧಿಗಳು ತಲೆದೋರಿದ್ದಾರೆ. ಇದರಿಂದ ಅಂತಿಮಕಾಲ ಸನ್ನಿಹಿತವಾಯಿತೆಂದು ನಮಗೆ ತಿಳಿದುಬರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಪ್ರಿಯ ಮಕ್ಕಳೇ, ಇದು ಅಂತ್ಯ ಕಾಲವಾಗಿದೆ. ಕ್ರಿಸ್ತವಿರೋಧಿಯು ಬರುತ್ತಾನೆಂದು ನೀವು ಕೇಳಿದ್ದೀರಿ. ಈಗಾಗಲೇ ಕ್ರಿಸ್ತವಿರೋಧಿಗಳು ಅನೇಕರಿದ್ದಾರೆ. ಆದ್ದರಿಂದ ಇದು ಅಂತ್ಯ ಕಾಲವಾಗಿದೆ ಎಂದು ನಾವು ಬಲ್ಲವರಾಗಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಮಕ್ಕಳಿರಾ, ಇದು ಕಡೇ ಗಳಿಗೆಯಾಗಿದೆ; ಕ್ರಿಸ್ತವಿರೋಧಿ ಬರುತ್ತಾನೆಂದು ನೀವು ಕೇಳಿದ್ದೀರಷ್ಟೆ; ಈಗಲೂ ಕ್ರಿಸ್ತವಿರೋಧಿಗಳು ಬಹುಮಂದಿ ಎದ್ದಿದ್ದಾರೆ; ಇದರಿಂದ ಇದು ಕಡೇ ಗಳಿಗೆಯಾಗಿದೆ ಎಂದು ತಿಳುಕೊಳ್ಳುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ನನ್ನ ಪ್ರಿಯ ಮಕ್ಕಳೇ, ಅಂತ್ಯವು ಸಮೀಪಿಸಿದೆ! ಕ್ರಿಸ್ತನ ಶತ್ರು ಬರುತ್ತಿದ್ದಾನೆಂಬುದನ್ನು ನೀವು ಕೇಳಿದ್ದೀರಿ. ಕ್ರಿಸ್ತನ ಅನೇಕ ಶತ್ರುಗಳು ಈಗಾಗಲೇ ಇಲ್ಲಿದ್ದಾರೆ. ಆದ್ದರಿಂದ ಅಂತ್ಯವು ಸಮೀಪಿಸಿದೆ ಎಂಬುದು ನಮಗೆ ತಿಳಿದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಪ್ರಿಯ ಮಕ್ಕಳೇ, ಇದು ಅಂತ್ಯ ಕಾಲವಾಗಿದೆ. ಕ್ರಿಸ್ತವಿರೋಧಿಯು ಬರುತ್ತಾನೆಂದು ನೀವು ಕೇಳಿದ್ದೀರಿ. ಈಗಾಗಲೇ ಅನೇಕ ಕ್ರಿಸ್ತವಿರೋಧಿಗಳಿದ್ದಾರೆ. ಇದರಿಂದ ಇದು ಕಡೇ ಗಳಿಗೆಯಾಗಿದೆ ಎಂದು ನಾವು ತಿಳಿದುಕೊಳ್ಳುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

18 ಪೊರಾನು, ಅಂತ್ ಜಗ್ಗೊಳ್ ಯೆಲಾ! ಎಕ್ಲೊ ಕ್ರಿಸ್ತಾಚೊ ವೈರಿ ಯೆತಲೊ ಹಾಯ್ ಮನುನ್ ತುಮ್ಕಾ ಸಾಂಗಟಲ್ಲೆ ಹೊತ್ತೆ, ಅನಿ ಅತ್ತಾ ಲೈ ಕ್ರಿಸ್ತಾಚೆ ವಿರೊಧ್ ಕರ್ತಲೆ ಉಟ್ಲಾತ್,ತಸೆಹೊವ್ನ್, ಹ್ಯೊ ಆಕ್ರಿಚೊ ಎಳ್ ಮನ್ತಲೆ ಅಮಿ ಕಳ್ವುನ್ ಘೆವ್ಚೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಯೋಹಾನನು 2:18
24 ತಿಳಿವುಗಳ ಹೋಲಿಕೆ  

ಯೇಸುವನ್ನು ಒಪ್ಪಿಕೊಳ್ಳದ ಆತ್ಮ ದೇವರಿಂದ ಪ್ರೇರಿತವಾದುದಲ್ಲ. ಅದು ಕ್ರಿಸ್ತವಿರೋಧಿಯ ಆತ್ಮ. ಅದು ಬರುವುದೆಂದು ನೀವು ಕೇಳಿದ್ದೀರಿ; ಈಗಾಗಲೇ ಅದು ಲೋಕದಲ್ಲಿ ತಲೆದೋರಿದೆ.


ಅನೇಕ ಮಂದಿ ವಂಚಕರು ಲೋಕದಲ್ಲಿ ತಲೆದೋರಿದ್ದಾರೆ. ಯೇಸುಕ್ರಿಸ್ತರು ಮನುಷ್ಯ ಆಗಿಬಂದರೆಂಬುದನ್ನು ಇವರು ಒಪ್ಪಿಕೊಳ್ಳುವುದಿಲ್ಲ. ಇಂಥವನು ವಂಚಕನೂ ಕ್ರಿಸ್ತವಿರೋಧಿಯೂ ಹೌದು.


ಅಸತ್ಯವಾದಿ ಎಂದರೆ ಯಾರು? ಯೇಸುವೇ ಕ್ರಿಸ್ತ ಎಂಬುದನ್ನು ಯಾರು ಅಲ್ಲಗಳೆಯುತ್ತಾನೋ ಅವನೇ ಅಸತ್ಯವಾದಿ; ಅವನೇ ಕ್ರಿಸ್ತವಿರೋಧಿ. ಅವನು ಪಿತನನ್ನು ಮತ್ತು ಪುತ್ರನನ್ನು ತಿರಸ್ಕರಿಸುತ್ತಾನೆ.


ಏಕೆಂದರೆ ಕಪಟ ಉದ್ಧಾರಕರೂ ವಂಚಕ ಪ್ರವಾದಿಗಳೂ ತಲೆಯೆತ್ತಿಕೊಳ್ಳುವರು. ಸಾಧ್ಯವಾದರೆ ದೇವರು ಆರಿಸಿಕೊಂಡವರನ್ನೂ ಮೋಸಗೊಳಿಸುವಂತಹ ಮಹತ್ಕಾರ್ಯಗಳನ್ನೂ ಪವಾಡಗಳನ್ನೂ ಮಾಡಿತೋರಿಸುವರು.


ಅನೇಕರು ‘ನಾನೇ ಕ್ರಿಸ್ತ, ನಾನೇ ಕ್ರಿಸ್ತ,’ ಎನ್ನುತ್ತಾ ನನ್ನ ಹೆಸರನ್ನೇ ಹೇಳಿಕೊಂಡು ಬರುವರು. ಮಾತ್ರವಲ್ಲ, ಎಷ್ಟೋ ಜನರನ್ನು ತಪ್ಪುದಾರಿಗೆಳೆಯುವರು.


ಪ್ರಿಯರೇ, “ನಾವು ಪವಿತ್ರಾತ್ಮ ಪ್ರೇರಿತರು” ಎಂದು ಹೇಳುವ ಎಲ್ಲರನ್ನೂ ನಂಬಬಾರದು. ಆ ಪ್ರೇರಣೆ ದೇವರಿಂದ ಬಂದಿದೆಯೇ ಎಂದು ಪರೀಕ್ಷಿಸಿ ನೋಡಬೇಕು. ಏಕೆಂದರೆ, ಎಷ್ಟೋ ಮಂದಿ ಕಪಟ ಪ್ರವಾದಿಗಳು ಎಲ್ಲೆಡೆಯಲ್ಲೂ ಹರಡಿದ್ದಾರೆ.


ಅನೇಕರು ನನ್ನ ಹೆಸರನ್ನು ಇಟ್ಟುಕೊಂಡು ಬಂದು, ‘ನಾನೇ ಕ್ರಿಸ್ತ’, ‘ನಾನೇ ಕ್ರಿಸ್ತ’ ಎನ್ನುತ್ತಾ ಎಷ್ಟೋ ಜನರನ್ನು ತಪ್ಪುದಾರಿಗೆ ಎಳೆಯುವರು.


ಇಸ್ರಯೇಲ್ ಜನರಲ್ಲೇ ಕಪಟ ಪ್ರವಾದಿಗಳು ಕಾಣಿಸಿಕೊಂಡರು. ಅಂತೆಯೇ, ನಿಮ್ಮಲ್ಲೂ ಸುಳ್ಳುಬೋಧಕರು ಕಾಣಿಸಿಕೊಳ್ಳುವರು. ಹಾನಿಕರವಾದ ದುರ್ಬೋಧನೆಗಳನ್ನು ಗೋಪ್ಯವಾಗಿ ಪ್ರಸರಿಸುವರು. ಒತ್ತೆಯಿಟ್ಟು ತಮ್ಮನ್ನು ರಕ್ಷಿಸಿದ ಒಡೆಯನನ್ನೇ ಅರಿಯೆವೆಂದು ನಿರಾಕರಿಸುವರು. ಹೀಗೆ ತಮ್ಮ ವಿನಾಶವನ್ನು ತಾವೇ ಬೇಗನೆ ಬರಮಾಡಿಕೊಳ್ಳುವರು.


ಅನೇಕ ಸುಳ್ಳುಪ್ರವಾದಿಗಳು ತಲೆಯೆತ್ತಿಕೊಂಡು ಎಷ್ಟೋಮಂದಿಯನ್ನು ವಂಚಿಸುವರು.


“ತಮ್ಮ ದುರಿಚ್ಛೆಗಳ ಪ್ರಕಾರ ನಡೆಯುವ ಕುಚೋದ್ಯಗಾರರು ಅಂತ್ಯಕಾಲದಲ್ಲಿ ಬರುವರು,” ಎಂದು ಅವರು ಎಚ್ಚರಿಸಿದ್ದಾರೆ.


ಮೊತ್ತಮೊದಲನೆಯದಾಗಿ ನೀವು ಇದನ್ನು ನೆನಪಿನಲ್ಲಿಡಬೇಕು; ಅಂತ್ಯಕಾಲದಲ್ಲಿ ಕುಚೋದ್ಯಗಾರರು ಕಾಣಿಸಿಕೊಳ್ಳುವರು.


ಆದರೆ, ಇತ್ತೀಚಿನ ಅಂತಿಮ ದಿನಗಳಲ್ಲಿ ಅವರು ತಮ್ಮ ಪುತ್ರನ ಮುಖೇನ ನಮ್ಮೊಡನೆ ಮಾತನಾಡಿದ್ದಾರೆ. ದೇವರು ಇಡೀ ವಿಶ್ವವನ್ನು ಉಂಟುಮಾಡಿದ್ದು ಇವರ ಮುಖಾಂತರವೇ; ಸಮಸ್ತಕ್ಕೂ ಬಾಧ್ಯನನ್ನಾಗಿ ನೇಮಿಸಿರುವುದು ಇವರನ್ನೇ.


ವಿಶ್ವಸೃಷ್ಟಿಗೆ ಮೊದಲೇ ಯೇಸುಕ್ರಿಸ್ತರನ್ನು ದೇವರು ಇದಕ್ಕೆಂದು ಗೊತ್ತುಮಾಡಿದ್ದರು. ಈ ಅಂತಿಮ ದಿನಗಳಲ್ಲಿ ನಿಮಗೋಸ್ಕರ ಯೇಸು ಪ್ರತ್ಯಕ್ಷರಾದರು.


ಅಂತ್ಯಕಾಲದಲ್ಲಿ ಪ್ರತ್ಯಕ್ಷವಾಗಲಿರುವ ಜೀವೋದ್ಧಾರವು ವಿಶ್ವಾಸಿಗಳಾದ ನಿಮಗೆ ಲಭಿಸುವಂತೆ ದೇವರು ತಮ್ಮ ಶಕ್ತಿಯಿಂದ ನಿಮ್ಮನ್ನು ಕಾಪಾಡುತ್ತಾರೆ.


ಯೇಸು ಅವರಿಗೆ, “ಮಕ್ಕಳೇ, ಊಟಕ್ಕೆ ಏನಾದರೂ ಸಿಕ್ಕಿತೇ?” ಎಂದು ಕೇಳಿದರು. “ಏನೂ ಇಲ್ಲ,” ಎಂದರು ಅವರು.


ಇದೆಂಥ ಕಾಲವೆಂದು ತಿಳಿದಿರುವ ನೀವು ಇದೆಲ್ಲವನ್ನು ಮಾಡಬೇಕು. ನಿದ್ರೆಯಿಂದ ಎಚ್ಚೆತ್ತುಕೊಳ್ಳುವ ವೇಳೆಯು ಸಮೀಪಿಸಿತು. ನಾವು ಕ್ರಿಸ್ತಯೇಸುವನ್ನು ವಿಶ್ವಾಸಿಸಲು ಆರಂಭಿಸಿದಾಗ ಇದ್ದುದಕ್ಕಿಂತಲೂ ಈಗ ನಮ್ಮ ಉದ್ಧಾರವು ಸಮೀಪವಾಗಿದೆ.


ಇರುಳು ಬಹುಮಟ್ಟಿಗೆ ಕಳೆಯಿತು. ಹಗಲು ಸಮೀಪಿಸಿತು. ಇನ್ನು ಅಂಧಕಾರಕ್ಕೆ ಅನುಗುಣವಾದ ದುಷ್ಕೃತ್ಯಗಳನ್ನು ತ್ಯಜಿಸಿಬಿಡೋಣ. ಬೆಳಕಿಗೆ ಅನುಗುಣವಾದ ಆಯುಧಗಳನ್ನು ಧರಿಸಿಕೊಳ್ಳೋಣ.


ಎಲ್ಲದರ ಅಂತ್ಯಕಾಲವು ಹತ್ತಿರವಾಯಿತು. ಈ ಕಾರಣ ನೀವು ಜಿತೇಂದ್ರಿಯರಾಗಿಯೂ ಜಾಗ್ರತರಾಗಿಯೂ ಪ್ರಾರ್ಥನೆಮಾಡುತ್ತಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು