Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಯೋಹಾನನು 2:19 - ಕನ್ನಡ ಸತ್ಯವೇದವು C.L. Bible (BSI)

19 ಈ ಕ್ರಿಸ್ತವಿರೋಧಿಗಳು ನಮ್ಮವರಾಗಿರಲಿಲ್ಲ. ಆದಕಾರಣ, ಅವರು ನಮ್ಮನ್ನು ತೊರೆದರು. ಅವರು ನಮ್ಮವರೇ ಆಗಿದ್ದರೆ, ನಮ್ಮೊಂದಿಗೇ ಇರುತ್ತಿದ್ದರು. ಆದರೆ ಅವರು ನಮ್ಮನ್ನು ತೊರೆದು ಹೋದರು. ಇದರಿಂದ ಕ್ರೈಸ್ತರೆನಿಸಿಕೊಳ್ಳುವವರೆಲ್ಲರೂ ನಮ್ಮವರಲ್ಲ ಎಂಬುದು ಸ್ಪಷ್ಟವಾಗಿ ಕಂಡುಬರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಅವರು ನಮ್ಮಿಂದ ಹೊರಟುಹೋದವರು. ಏಕೆಂದರೆ ಅವರು ನಮ್ಮವರಾಗಿರಲಿಲ್ಲ. ಅವರು ನಮ್ಮವರಾಗಿದ್ದರೆ, ನಮ್ಮ ಜೊತೆಯಲ್ಲೇ ಇರುತ್ತಿದ್ದರು. ಆದರೆ ಅವರು ನಮ್ಮಿಂದ ಹೊರಟುಹೋದುದರಿಂದ ಅವರೆಲ್ಲರೂ ನಮ್ಮವರಲ್ಲವೆಂಬುದು ಸ್ಪಷ್ಟವಾಗಿ ತೋರಿಬಂದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಅವರು ನಮ್ಮನ್ನು ಬಿಟ್ಟು ಹೊರಟುಹೋದರು, ಆದರೆ ಅವರು ನಮ್ಮವರಾಗಿರಲಿಲ್ಲ. ಅವರು ನಮ್ಮವರಾಗಿದ್ದರೆ ನಮ್ಮ ಜೊತೆಯಲ್ಲೇ ಇರುತ್ತಿದ್ದರು, ಆದರೆ ಅವರು ನಮ್ಮನ್ನು ಬಿಟ್ಟುಹೋದದರಿಂದ ಕ್ರೈಸ್ತರೆನಿಸಿಕೊಳ್ಳುವವರೆಲ್ಲರೂ ನಮ್ಮವರಲ್ಲವೆಂಬದು ಸ್ಪಷ್ಟವಾಗಿ ತೋರಬಂತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಕ್ರಿಸ್ತನ ಶತ್ರುಗಳು ನಮ್ಮ ಗುಂಪಿನಲ್ಲೇ ಇದ್ದರು. ಅವರು ನಮ್ಮನ್ನು ಬಿಟ್ಟುಹೋದರು. ಅವರು ನಿಜವಾಗಿಯೂ ನಮ್ಮವರಾಗಿರಲಿಲ್ಲ. ಅವರು ನಿಜವಾಗಿಯೂ ನಮ್ಮ ಸಭೆಗೆ ಸೇರಿದವರಾಗಿದ್ದರೆ ನಮ್ಮೊಂದಿಗೆ ಇರುತ್ತಿದ್ದರು. ಆದರೆ ಅವರು ಹೊರಟುಹೋದರು. ಅವರು ನಿಜವಾಗಿಯೂ ನಮ್ಮವರಾಗಿರಲಿಲ್ಲ ಎಂಬುದನ್ನು ಇದೇ ತೋರ್ಪಡಿಸುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಅವರು ನಮ್ಮಿಂದ ಹೊರಟು ಹೋದರು. ಆದರೆ ಅವರು ನಮ್ಮವರಾಗಿರಲಿಲ್ಲ. ಏಕೆಂದರೆ ಅವರು ನಮ್ಮವರಾಗಿದ್ದರೆ, ನಮ್ಮ ಜೊತೆಯಲ್ಲೇ ಇರುತ್ತಿದ್ದರು. ಆದರೆ ಅವರು ನಮ್ಮಿಂದ ಹೊರಟು ಹೋದುದರಿಂದ ಅವರೆಲ್ಲರೂ ನಮ್ಮವರಲ್ಲವೆಂಬುದು ತೋರಿಬಂತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

19 ಹಿ ಮಾನ್ಸಾ ಖರೆಚ್ಬಿ ಅಮ್ಚ್ಯಾ ಪಕ್ಷಾಚಿ ನ್ಹಯ್, ತಸೆಹೊವ್ನ್ ತೆನಿ ಅಮ್ಕಾ ಸೊಡುನ್ ಗೆಲ್ಯಾತ್, ತೆನಿ ಅಮ್ಚ್ಯಾ ವಾಂಗ್ಡಾ ರ್‍ಹಾವ್ಚೆ ಹೊತ್ತೆ. ಹೆಚ್ಯಾ ವೈನಾ ತೆನಿ ಖರೆಚ್ಬಿ ಅಮ್ಚ್ಯಾ ವಾಂಗುಡ್ಚಿ ಲೊಕಾ ನ್ಹಯ್ ಮನುನ್ ದಿಸುನ್ ಯೆತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಯೋಹಾನನು 2:19
30 ತಿಳಿವುಗಳ ಹೋಲಿಕೆ  

ಇದಲ್ಲದೆ ನಿಮ್ಮಲ್ಲೇ ಕೆಲವರು ಎದ್ದು ಭಕ್ತವಿಶ್ವಾಸಿಗಳನ್ನು ತಮ್ಮ ಕಡೆ ಸೆಳೆದುಕೊಳ್ಳಲು ಅಸತ್ಯವಾದವುಗಳನ್ನು ಹೇಳುವರು.


ನಿಮ್ಮಲ್ಲಿ ಭಿನ್ನಾಭಿಪ್ರಾಯಗಳು ಇರುವುದು ಸಹಜ. ಹಾಗಿರುವಾಗಲೇ ಪ್ರಾಮಾಣಿಕರು ಯಾರೆಂದು ಕಂಡುಕೊಳ್ಳಲು ಸಾಧ್ಯ.


ಇವರು ನಿಮ್ಮಲ್ಲಿ ಭಿನ್ನಭೇದವನ್ನು ಉಂಟುಮಾಡುವವರು, ಪ್ರಾಪಂಚಿಕ ವಿಷಯಾಸಕ್ತರು; ಪವಿತ್ರಾತ್ಮರಹಿತರಾಗಿ ಬಾಳುವವರು.


ಕಲ್ಲುಭೂಮಿಯ ಮೇಲೆ ಬಿದ್ದ ಬೀಜಗಳು ಎಂದರೆ ದೇವರ ವಾಕ್ಯವನ್ನು ಕೇಳಿ ಸಂತೋಷದಿಂದ ಸ್ವೀಕರಿಸಿದವರು; ಅದು ಅವರಲ್ಲಿ ಬೇರೂರದ ಕಾರಣ ಅವರು ಸ್ವಲ್ಪಕಾಲ ವಿಶ್ವಾಸಿಸುತ್ತಾರೆ; ಶೋಧನೆಯ ಸಮಯದಲ್ಲಿ ಅದನ್ನು ತೊರೆದುಬಿಡುತ್ತಾರೆ.


ಏಕೆಂದರೆ ಕಪಟ ಉದ್ಧಾರಕರೂ ವಂಚಕ ಪ್ರವಾದಿಗಳೂ ತಲೆಯೆತ್ತಿಕೊಳ್ಳುವರು. ಸಾಧ್ಯವಾದರೆ ದೇವರು ಆರಿಸಿಕೊಂಡವರನ್ನೂ ಮೋಸಗೊಳಿಸುವಂತಹ ಮಹತ್ಕಾರ್ಯಗಳನ್ನೂ ಪವಾಡಗಳನ್ನೂ ಮಾಡಿತೋರಿಸುವರು.


ನಮ್ಮ ಕಡೆಯ ಕೆಲವು ಜನರು ನಮ್ಮಿಂದ ಯಾವ ಆದೇಶವನ್ನೂ ಪಡೆಯದೆ ನಿಮ್ಮನ್ನು ತೊಂದರೆಗೆ ಈಡುಮಾಡಿ ನಿಮ್ಮ ಮನಸ್ಸನ್ನು ಕಲಕಿದರೆಂಬ ಸಮಾಚಾರ ನಮ್ಮ ಗಮನಕ್ಕೆ ಬಂದಿದೆ.


ಕಪಟ ಉದ್ಧಾರಕರೂ ವಂಚಕಪ್ರವಾದಿಗಳೂ ತಲೆಯೆತ್ತಿಕೊಳ್ಳುವರು. ಅವರು ಪವಾಡಗಳನ್ನು ಮಾಡಿತೋರಿಸಿ, ದೇವರು ಆರಿಸಿಕೊಂಡವರನ್ನೂ ಮೋಸಗೊಳಿಸುವರು.


ಅಲ್ಲಿ ವಾಸವಾಗಿರುವ ಇಸ್ರಯೇಲರಲ್ಲಿ ಕೆಲವು ಮಂದಿ ದುಷ್ಟರು, ನಿಮಗೆ ಗೊತ್ತಿಲ್ಲದ ಇತರ ದೇವರುಗಳನ್ನು ತಮ್ಮ ಊರಿನವರಿಗೆ ಸೂಚಿಸಬಹುದು. ‘ಆ ದೇವರುಗಳನ್ನು ಪೂಜಿಸೋಣ ಬನ್ನಿ’ ಎಂದು ಹೇಳಿ ಅವರನ್ನು ಸನ್ಮಾರ್ಗದಿಂದ ತಪ್ಪಿಸಬಹುದು.


ಸನ್ಮಾರ್ಗದಲ್ಲಿ ಮುಂದುವರೆವವನು ಸಜ್ಜನನು ಬಲಗೊಳ್ಳುತ್ತಲೇ ಇರುವನು ಶುದ್ಧಹಸ್ತನು.


ಆದರೆ ದೇವರು ಹಾಕಿದಂಥ ಸುಸ್ಥಿರವಾದ ಅಸ್ತಿವಾರವನ್ನು ಯಾರಿಂದಲೂ ಕದಲಿಸಲಾಗದು. ಅದರಲ್ಲಿ “ತನ್ನವರು ಯಾರು ಎಂದು ಪ್ರಭು ಅರಿತಿದ್ದಾರೆ; ಮತ್ತು ತಾನು ಪ್ರಭುವಿನವನೆಂದು ಹೇಳಿಕೊಳ್ಳುವವರೆಲ್ಲರೂ ದುರ್ಮಾರ್ಗದಿಂದ ದೂರವಿರಲಿ,” ಎಂದು ಲಿಖಿತವಾಗಿದೆ.


ಆದರೆ ನಾವು ಹಿಮ್ಮೆಟ್ಟಿ ಹಾಳಾಗುವ ಜನರಲ್ಲ; ವಿಶ್ವಾಸವುಳ್ಳವರಾಗಿ ಜೀವೋದ್ಧಾರವನ್ನು ಪಡೆಯುವವರು.


ದೇವರಿಂದ ಆಯ್ಕೆಯಾದ ಪ್ರಜೆಗಳು ಪ್ರಭು ಯೇಸುವಿನಲ್ಲಿ ಲಭಿಸುವ ಜೀವೋದ್ಧಾರವನ್ನೂ ಅನಂತಮಹಿಮೆಯನ್ನೂ ನನ್ನೊಂದಿಗೆ ಪಡೆಯಲೆಂದು ನಾನು ಇದೆಲ್ಲವನ್ನೂ ಅವರಿಗಾಗಿ ಸಹಿಸುತ್ತಿದ್ದೇನೆ.


ದೇವರ ವಾಗ್ದಾನ ವಿಫಲವಾಯಿತೆಂದು ನಾನು ಹೇಳುತ್ತಿಲ್ಲ. ಇಸ್ರಯೇಲ್ ವಂಶದಲ್ಲಿ ಹುಟ್ಟಿದವರೆಲ್ಲರೂ ನಿಜವಾದ ಇಸ್ರಯೇಲರಲ್ಲ.


ಆದರೆ ನಾನು ಕೊಡುವ ನೀರನ್ನು ಕುಡಿದವನಿಗೆ ಎಂದಿಗೂ ದಾಹವಾಗದು; ಆ ನೀರು ಅವನಲ್ಲಿ ಉಕ್ಕಿ ಹರಿಯುವ ಬುಗ್ಗೆಯಾಗಿ, ನಿತ್ಯಜೀವವನ್ನು ತರುತ್ತದೆ,” ಎಂದು ಉತ್ತರಕೊಟ್ಟರು.


ಪ್ರಭುವು ನ್ಯಾಯಪ್ರಿಯನು, ಭಕ್ತಜನರ ಪರಿಪಾಲಕನು I ಚಿರವುಳಿಸುವನು ಇವರನು, ಅಳಿಸುವನು ದುರುಳರ ಪೀಳಿಗೆಯನು II


ಪಿತನಾದ ದೇವರ ಪ್ರೀತಿಯಲ್ಲೂ ಯೇಸುಕ್ರಿಸ್ತರ ಆಶ್ರಯದಲ್ಲೂ ಬಾಳುತ್ತಿರುವ ಭಕ್ತರಿಗೆ - ಯೇಸುಕ್ರಿಸ್ತರ ದಾಸನೂ ಯಕೋಬನ ಸಹೋದರನೂ ಆದ ಯೂದನು ಬರೆಯುವ ಪತ್ರ.


ದುರ್ಮತಿಗಳೂ ವಿಶ್ವಾಸಭ್ರಷ್ಟರೂ ಆಗಿದ್ದಾರೆ. ಆದರೆ ಅವರ ಮೂರ್ಖತನ ದೀರ್ಘಕಾಲ ಬಾಳದು. ಯನ್ನ ಮತ್ತು ಯಂಬ್ರಳ ದೋಷದಂತೆ ಅದು ಸರ್ವರಿಗೂ ಬಟ್ಟಬಯಲಾಗುತ್ತದೆ.


ನನ್ನಲ್ಲಿದ್ದೂ ಫಲಕೊಡದ ಕವಲುಬಳ್ಳಿಗಳನ್ನೆಲ್ಲಾ ಅವರು ಕತ್ತರಿಸಿಹಾಕುವರು. ಫಲಕೊಡುವ ಕವಲುಬಳ್ಳಿಗಳು ಮತ್ತಷ್ಟು ಫಲಕೊಡುವಂತೆ ಅವನ್ನು ಸವರಿ ಶುದ್ಧಗೊಳಿಸುವರು.


ನನ್ನಾಪ್ತಮಿತ್ರನು, ನನ್ನ ನಂಬಿಕೆಗೆ ಪಾತ್ರನು I ನನ್ನೊಡನೆ ಉಂಡವನು, ನನಗೆರಡು ಬಗೆದಿಹನು II


ಅನೇಕ ಮಂದಿ ವಂಚಕರು ಲೋಕದಲ್ಲಿ ತಲೆದೋರಿದ್ದಾರೆ. ಯೇಸುಕ್ರಿಸ್ತರು ಮನುಷ್ಯ ಆಗಿಬಂದರೆಂಬುದನ್ನು ಇವರು ಒಪ್ಪಿಕೊಳ್ಳುವುದಿಲ್ಲ. ಇಂಥವನು ವಂಚಕನೂ ಕ್ರಿಸ್ತವಿರೋಧಿಯೂ ಹೌದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು