Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಯೋಹಾನನು 2:22 - ಕನ್ನಡ ಸತ್ಯವೇದವು C.L. Bible (BSI)

22 ಅಸತ್ಯವಾದಿ ಎಂದರೆ ಯಾರು? ಯೇಸುವೇ ಕ್ರಿಸ್ತ ಎಂಬುದನ್ನು ಯಾರು ಅಲ್ಲಗಳೆಯುತ್ತಾನೋ ಅವನೇ ಅಸತ್ಯವಾದಿ; ಅವನೇ ಕ್ರಿಸ್ತವಿರೋಧಿ. ಅವನು ಪಿತನನ್ನು ಮತ್ತು ಪುತ್ರನನ್ನು ತಿರಸ್ಕರಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಸುಳ್ಳುಗಾರನು ಯಾರು? ಯೇಸುವನ್ನು ಕ್ರಿಸ್ತನಲ್ಲ ಎಂದು ಅಲ್ಲಗಳೆಯುವವನು ಸುಳ್ಳುಗಾರನಾಗಿದ್ದಾಯೇ ಹೊರತು ಮತ್ತಾರು ಆಗಿರಲು ಸಾಧ್ಯ? ತಂದೆಯನ್ನೂ ಮಗನನ್ನೂ ಅಲ್ಲಗಳೆಯುವವನು ಕ್ರಿಸ್ತವಿರೋಧಿಯಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಯೇಸುವು ಕ್ರಿಸ್ತನಲ್ಲ ಎನ್ನುವವನು ಸುಳ್ಳುಗಾರನಲ್ಲವಾದರೆ ಸುಳ್ಳುಗಾರನು ಬೇರೆ ಎಲ್ಲಿದ್ದಾನೆ? ಯಾವನಾದರೂ ತಾನು ತಂದೆಯನ್ನೂ ಮಗನನ್ನೂ ಅರಿಯೆನು ಎಂದು ಹೇಳಿದರೆ ಅವನೇ ಕ್ರಿಸ್ತ ವಿರೋಧಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಆದ್ದರಿಂದ ಸುಳ್ಳು ಹೇಳುವವನು ಯಾರು? ಯೇಸುವನ್ನು ಕ್ರಿಸ್ತನಲ್ಲವೆಂದು ಹೇಳುವವನೇ ಸುಳ್ಳುಗಾರ. ಅವನು ಕ್ರಿಸ್ತನ ವೈರಿಯಾಗಿದ್ದಾನೆ. ಅವನು ತಂದೆಯನ್ನಾಗಲಿ (ದೇವರು), ಆತನ ಮಗನನ್ನಾಗಲಿ (ಕ್ರಿಸ್ತನು) ನಂಬುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಸುಳ್ಳುಗಾರನು ಯಾರು? ಮನುಷ್ಯನಾಗಿ ಬಂದ ಯೇಸುವು ಕ್ರಿಸ್ತ ಅಲ್ಲ ಎಂದು ಯಾವನು ಅಲ್ಲಗಳೆಯುತ್ತಾನೋ ಅವನೇ ಸುಳ್ಳುಗಾರನು. ಅವನೇ ತಂದೆಯನ್ನೂ ಮಗನನ್ನೂ ಅಲ್ಲಗಳೆಯುವ ಕ್ರಿಸ್ತವಿರೋಧಿಯಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

22 ತೆಚ್ಯಾಸಾಟ್ನಿ ಝುಟೊ ಮಟ್ಲ್ಯಾರ್ ಕೊನ್? ಜೆಜು ಕ್ರಿಸ್ತ್ ನ್ಹಯ್ ಮನುನ್ ಮಾನಿನಸಲ್ಲೊ. ಮನುನ್ ಅನಿ ಜೊ ಕೊನ್ ಬಾಬಾಕ್ ಹೊಂವ್ದಿತ್ ಲೆಕಾಕ್ ಹೊಂವ್ದಿತ್ ವಳ್ಕಿನಾ ಮನುನ್ ಸಾಂಗ್ತಾ ತೊಚ್ ಕ್ರಿಸ್ತ್ ವಿರೊಧಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಯೋಹಾನನು 2:22
14 ತಿಳಿವುಗಳ ಹೋಲಿಕೆ  

ಅನೇಕ ಮಂದಿ ವಂಚಕರು ಲೋಕದಲ್ಲಿ ತಲೆದೋರಿದ್ದಾರೆ. ಯೇಸುಕ್ರಿಸ್ತರು ಮನುಷ್ಯ ಆಗಿಬಂದರೆಂಬುದನ್ನು ಇವರು ಒಪ್ಪಿಕೊಳ್ಳುವುದಿಲ್ಲ. ಇಂಥವನು ವಂಚಕನೂ ಕ್ರಿಸ್ತವಿರೋಧಿಯೂ ಹೌದು.


ಯೇಸುವನ್ನು ಒಪ್ಪಿಕೊಳ್ಳದ ಆತ್ಮ ದೇವರಿಂದ ಪ್ರೇರಿತವಾದುದಲ್ಲ. ಅದು ಕ್ರಿಸ್ತವಿರೋಧಿಯ ಆತ್ಮ. ಅದು ಬರುವುದೆಂದು ನೀವು ಕೇಳಿದ್ದೀರಿ; ಈಗಾಗಲೇ ಅದು ಲೋಕದಲ್ಲಿ ತಲೆದೋರಿದೆ.


ನನ್ನ ಪ್ರಿಯ ಮಕ್ಕಳೇ, ಅಂತಿಮ ಕಾಲ ಸಮೀಪಿಸಿತು. ಕ್ರಿಸ್ತವಿರೋಧಿ ಬರುವನೆಂದು ನೀವು ಕೇಳಿದ್ದೀರಿ. ಈಗಾಗಲೇ ಅನೇಕ ಕ್ರಿಸ್ತವಿರೋಧಿಗಳು ತಲೆದೋರಿದ್ದಾರೆ. ಇದರಿಂದ ಅಂತಿಮಕಾಲ ಸನ್ನಿಹಿತವಾಯಿತೆಂದು ನಮಗೆ ತಿಳಿದುಬರುತ್ತದೆ.


ಏಕೆಂದರೆ, ಕೆಲವರು ಕಳ್ಳತನದಿಂದ ನಿಮ್ಮ ಸಭೆಯೊಳಗೆ ಸೇರಿಕೊಂಡಿದ್ದಾರೆ. ಇವರು ಭಕ್ತಿಹೀನರು; ನಮ್ಮ ದೇವರ ಅನುಗ್ರಹದ ನೆವದಲ್ಲಿ ತಮ್ಮ ಕಾಮಾಭಿಲಾಷೆಗಳನ್ನು ಸಮರ್ಥಿಸಿಕೊಳ್ಳುತ್ತಿರುವವರು; ನಮ್ಮ ಏಕೈಕ ಒಡೆಯರೂ ಪ್ರಭುವೂ ಆದ ಯೇಸುಕ್ರಿಸ್ತರನ್ನು ನಿರಾಕರಿಸುವವರು. ಇಂಥವರಿಗೆ ದಂಡನೆಯಾಗಬೇಕೆಂದು ಬಹಳ ಹಿಂದೆಯೇ ಪವಿತ್ರಗ್ರಂಥದಲ್ಲಿ ಲಿಖಿತವಾಗಿದೆ.


ತಾನು ದೇವರನ್ನು ಪ್ರೀತಿಸುತ್ತೇನೆಂದು ಒಬ್ಬನು ಹೇಳುತ್ತಾ ತನ್ನ ಸಹೋದರನನ್ನು ದ್ವೇಷಿಸಿದರೆ, ಅವನು ಸುಳ್ಳುಗಾರನಾಗುತ್ತಾನೆ. ತಾನು ಕಂಡಿರುವ ತನ್ನ ಸಹೋದರನನ್ನು ಪ್ರೀತಿಸದವನು ತಾನು ಕಾಣದಿರುವ ದೇವರನ್ನು ಹೇಗೆ ಪ್ರೀತಿಸಿಯಾನು?


ಪುತ್ರನನ್ನು ತಿರಸ್ಕರಿಸುವವನು ಪಿತನನ್ನೂ ತಿರಸ್ಕರಿಸುತ್ತಾನೆ. ಪುತ್ರನನ್ನು ಅಂಗೀಕರಿಸುವವನು ಪಿತನನ್ನೂ ಅಂಗೀಕರಿಸುತ್ತಾನೆ.


ನಾವು ಕತ್ತಲಲ್ಲಿ ಬಾಳುತ್ತಾ ದೇವರೊಡನೆ ಅನ್ಯೋನ್ಯವಾಗಿದ್ದೇವೆಂದು ಹೇಳಿದರೆ ನಾವು ಸುಳ್ಳುಗಾರರು, ಸತ್ಯಕ್ಕನುಸಾರ ಬಾಳದವರು.


ದೇವರನ್ನು ಬಲ್ಲೆನೆಂದು ಹೇಳಿಕೊಳ್ಳುತ್ತಾ ಅವರ ಆಜ್ಞೆಗಳನ್ನು ಕೈಗೊಳ್ಳದೆ ಇರುವವನು ಸುಳ್ಳುಗಾರ ಮತ್ತು ಸತ್ಯವೆಂಬುದೇ ಅವನಲ್ಲಿ ಇರುವುದಿಲ್ಲ.


ಸೈತಾನನೇ ನಿಮಗೆ ತಂದೆ; ಆ ನಿಮ್ಮ ತಂದೆ ಮಾಡಬಯಸುವುದನ್ನು ನೀವು ಮಾಡಬಯಸುತ್ತೀರಿ; ಮೊತ್ತ ಮೊದಲಿನಿಂದಲೂ ಅವನು ಕೊಲೆಪಾತಕ. ಸತ್ಯವೆಂಬುದೇ ಅವನಲ್ಲಿ ಇಲ್ಲದ ಕಾರಣ ಅವನು ಸತ್ಯಪರನಲ್ಲ. ಸುಳ್ಳಾಡುವಾಗ ಅವನು ತನಗೆ ಸಹಜವಾದುದನ್ನೇ ಆಡುತ್ತಾನೆ. ಅವನು ಸುಳ್ಳುಗಾರ. ಸುಳ್ಳಿನ ಮೂಲಪುರುಷನೇ ಅವನು.


ತಾವು ಯೆಹೂದ್ಯರೆಂದು ಕೊಚ್ಚಿಕೊಳ್ಳುವ ‘ಸೈತಾನನ ಕೂಟಕ್ಕೆ’ ಸೇರಿದ ಕೆಲವರಿದ್ದಾರೆ. ಆದರೆ ಅವರು ವಾಸ್ತವವಾಗಿ ಯೆಹೂದ್ಯರಲ್ಲ; ಸುಳ್ಳುಗಾರರು. ಇಗೋ ನೋಡು, ಅವರು ಬಂದು ನಿನ್ನ ಪಾದಗಳಿಗೆ ಅಡ್ಡಬಿದ್ದು ಶರಣಾಗುವಂತೆ ಮಾಡುತ್ತೇನೆ. ನಿನ್ನ ಬಗ್ಗೆ ನನಗಿರುವ ಪ್ರೀತಿ ಅವರಿಗೆ ತಿಳಿಯುವಂತೆ ಮಾಡುತ್ತೇನೆ.


ಅನೇಕರು ‘ನಾನೇ ಕ್ರಿಸ್ತ, ನಾನೇ ಕ್ರಿಸ್ತ,’ ಎನ್ನುತ್ತಾ ನನ್ನ ಹೆಸರನ್ನೇ ಹೇಳಿಕೊಂಡು ಬರುವರು. ಮಾತ್ರವಲ್ಲ, ಎಷ್ಟೋ ಜನರನ್ನು ತಪ್ಪುದಾರಿಗೆಳೆಯುವರು.


ಏಕೆಂದರೆ ಕಪಟ ಉದ್ಧಾರಕರೂ ವಂಚಕ ಪ್ರವಾದಿಗಳೂ ತಲೆಯೆತ್ತಿಕೊಳ್ಳುವರು. ಸಾಧ್ಯವಾದರೆ ದೇವರು ಆರಿಸಿಕೊಂಡವರನ್ನೂ ಮೋಸಗೊಳಿಸುವಂತಹ ಮಹತ್ಕಾರ್ಯಗಳನ್ನೂ ಪವಾಡಗಳನ್ನೂ ಮಾಡಿತೋರಿಸುವರು.


ಯೇಸುವೇ ‘ಕ್ರಿಸ್ತ’ ಎಂದು ವಿಶ್ವಾಸಿಸುವ ಪ್ರತಿಯೊಬ್ಬನೂ ದೇವರ ಮಗು. ತಂದೆಯನ್ನು ಪ್ರೀತಿಸುವವನು ಆತನ ಮಗುವನ್ನೂ ಪ್ರೀತಿಸುತ್ತಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು