Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಯೋಹಾನನು 2:23 - ಕನ್ನಡ ಸತ್ಯವೇದವು C.L. Bible (BSI)

23 ಪುತ್ರನನ್ನು ತಿರಸ್ಕರಿಸುವವನು ಪಿತನನ್ನೂ ತಿರಸ್ಕರಿಸುತ್ತಾನೆ. ಪುತ್ರನನ್ನು ಅಂಗೀಕರಿಸುವವನು ಪಿತನನ್ನೂ ಅಂಗೀಕರಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಯಾರು ದೇವರ ಮಗನನ್ನು ಅಲ್ಲಗಳೆಯುವನೋ ಅವನು ದೇವರಿಗೆ ಸೇರಿದವನಲ್ಲ. ಯಾರು ಮಗನನ್ನು ಒಪ್ಪಿಕೊಳ್ಳುವನೋ ಅವನು ತಂದೆಯಾದ ದೇವರಿಗೆ ಸೇರಿದವನಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ತಾನು ದೇವರ ಮಗನಿಗೆ ಸೇರಿದವನಲ್ಲವೆನ್ನುವವನು ತಂದೆಗೆ ಸೇರಿದವನಲ್ಲ; ತಾನು ಮಗನಿಗೆ ಸೇರಿದವನೆಂದು ಒಪ್ಪಿಕೊಳ್ಳುವವನು ತಂದೆಗೂ ಸೇರಿದವನಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಮಗನನ್ನು ನಂಬದೆ ಇರುವವನು ತಂದೆಯನ್ನು ಹೊಂದಿಲ್ಲ. ಆದರೆ ಮಗನನ್ನು ಸ್ವೀಕರಿಸಿಕೊಳ್ಳುವವನು ತಂದೆಯನ್ನು ಸಹ ಹೊಂದಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಮಗನನ್ನು ಅಲ್ಲಗಳೆಯುವವನು ತಂದೆಯನ್ನೂ ಅಲ್ಲಗಳೆಯುತ್ತಾನೆ. ಮಗನನ್ನು ಅಂಗೀಕರಿಸುವವನು ತಂದೆಯನ್ನೂ ಅಂಗೀಕರಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

23 ಕೊನ್ ದೆವಾಚ್ಯಾ ಲೆಕಾಕ್ ತಿರಸ್ಕಾರ್ ಕರ್ತಾ, ತೊ ಬಾಬಾಕ್ಬಿ ತಿರಸ್ಕಾರ್ ಕರ್ತಾ,ಲೆಕಾಕ್ ಕೊನ್ ಒಪ್ಪುನ್ ಘೆತಾ ತೊ ಬಾಬಾಕ್ಬಿ ಒಪ್ಪುನ್ ಘೆತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಯೋಹಾನನು 2:23
15 ತಿಳಿವುಗಳ ಹೋಲಿಕೆ  

ಯೇಸುವೇ ದೇವರ ಪುತ್ರನೆಂದು ಯಾವನು ಒಪ್ಪಿಕೊಳ್ಳುತ್ತಾನೋ ಅವನಲ್ಲಿ ದೇವರು ನೆಲೆಸಿದ್ದಾರೆ; ಅವನೂ ದೇವರಲ್ಲಿ ನೆಲೆಸಿದ್ದಾನೆ.


ಅದಕ್ಕೆ ಅವರು, “ನಿನ್ನ ಪಿತನೆಲ್ಲಿ?” ಎಂದು ಕೇಳಿದರು. ಯೇಸು, “ನೀವು ನನ್ನನ್ನು ಅರಿತಿಲ್ಲ, ನನ್ನ ಪಿತನನ್ನೂ ಅರಿತಿಲ್ಲ. ನೀವು ನನ್ನನ್ನು ಅರಿತಿದ್ದರೆ, ನನ್ನ ಪಿತನನ್ನೂ ಅರಿಯುತ್ತಿದ್ದಿರಿ,” ಎಂದರು.


ನಾನೂ ಪಿತನೂ ಒಂದೇ ಆಗಿದ್ದೇವೆ,” ಎಂದರು.


ಏಕೆಂದರೆ, ತಮ್ಮನ್ನು ಗೌರವಿಸುವಂತೆಯೇ ಜನರೆಲ್ಲರು ಪುತ್ರನನ್ನು ಗೌರವಿಸಬೇಕೆಂಬುದು ಅವರ ಬಯಕೆ. ಪುತ್ರನನ್ನು ಗೌರವಿಸದವನು ಆತನನ್ನು ಕಳುಹಿಸಿದ ಪಿತನನ್ನೂ ಗೌರವಿಸುವುದಿಲ್ಲ.


ಯೇಸುವೇ ‘ಕ್ರಿಸ್ತ’ ಎಂದು ವಿಶ್ವಾಸಿಸುವ ಪ್ರತಿಯೊಬ್ಬನೂ ದೇವರ ಮಗು. ತಂದೆಯನ್ನು ಪ್ರೀತಿಸುವವನು ಆತನ ಮಗುವನ್ನೂ ಪ್ರೀತಿಸುತ್ತಾನೆ.


ನನ್ನ ಪಿತ ಸಮಸ್ತವನ್ನೂ ನನ್ನ ವಶಕ್ಕೆ ಒಪ್ಪಿಸಿದ್ದಾರೆ. ಪುತ್ರನು ಯಾರೆಂದು ಪಿತನ ಹೊರತು ಬೇರಾರೂ ಅರಿಯರು. ಪಿತನು ಯಾರೆಂದು ಪುತ್ರನು ಮತ್ತು ಯಾರಿಗೆ ಪುತ್ರನು ಅವರನ್ನು ಶ್ರುತಪಡಿಸಲು ಇಚ್ಛಿಸುತ್ತಾನೋ ಅವನೇ ಹೊರತು ಮತ್ತಾರೂ ಅರಿಯರು,” ಎಂದು ಹೇಳಿದರು.


“ನನ್ನ ಪಿತ ಸಮಸ್ತವನ್ನೂ ನನ್ನ ವಶಕ್ಕೆ ಒಪ್ಪಿಸಿದ್ದಾರೆ; ಪುತ್ರನು ಯಾರೆಂಬುದನ್ನು ಪಿತನೇ ಹೊರತು ಬೇರಾರೂ ಅರಿಯರು. ಪಿತನು ಯಾರು ಎಂಬುದನ್ನು ಪುತ್ರನು ಮತ್ತು ಯಾವನಿಗೆ ಪುತ್ರನು ಅವರನ್ನು ಶ್ರುತಪಡಿಸಲು ಇಚ್ಛಿಸುತ್ತಾನೋ, ಅವರೇ ಹೊರತು ಮತ್ತಾರೂ ಅರಿಯರು.


ಅಸತ್ಯವಾದಿ ಎಂದರೆ ಯಾರು? ಯೇಸುವೇ ಕ್ರಿಸ್ತ ಎಂಬುದನ್ನು ಯಾರು ಅಲ್ಲಗಳೆಯುತ್ತಾನೋ ಅವನೇ ಅಸತ್ಯವಾದಿ; ಅವನೇ ಕ್ರಿಸ್ತವಿರೋಧಿ. ಅವನು ಪಿತನನ್ನು ಮತ್ತು ಪುತ್ರನನ್ನು ತಿರಸ್ಕರಿಸುತ್ತಾನೆ.


ನನ್ನನ್ನಾಗಲಿ, ಪಿತನನ್ನಾಗಲಿ ಅವರು ಅರಿತಿಲ್ಲದ ಕಾರಣ ನಿಮಗೆ ಹೀಗೆ ಮಾಡುವರು.


ಏಕೈಕ ನಿಜದೇವರಾದ ನಿಮ್ಮನ್ನೂ ನೀವು ಕಳುಹಿಸಿಕೊಟ್ಟ ಯೇಸು ಕ್ರಿಸ್ತನನ್ನೂ ಅರಿತುಕೊಳ್ಳುವುದೇ ನಿತ್ಯಜೀವ.


ದೇವರ ಆತ್ಮದಿಂದ ಬಂದ ಪ್ರೇರಣೆಯನ್ನು ನೀವು ಹೀಗೆ ಗುರುತಿಸಬಹುದು; ಮನುಷ್ಯ ಆಗಿ ಬಂದ ಕ್ರಿಸ್ತಯೇಸುವನ್ನು ಒಪ್ಪಿಕೊಳ್ಳುವ ಆತ್ಮವು ದೇವರಿಂದ ಪ್ರೇರಿತವಾದುದು.


ದೇವರ ಪುತ್ರ ಆಗಮಿಸಿ, ಸತ್ಯಸ್ವರೂಪರಾದ ದೇವರನ್ನು ನಾವು ತಿಳಿದುಕೊಳ್ಳುವಂತೆ ನಮಗೆ ಅರಿವನ್ನು ನೀಡಿದ್ದಾರೆ. ಇದನ್ನು ನಾವು ಬಲ್ಲೆವು. ದೇವರ ಪುತ್ರರಾದ ಯೇಸುಕ್ರಿಸ್ತರಲ್ಲಿ ನೆಲೆಸಿರುವ ನಾವು ಸತ್ಯಸ್ವರೂಪಿಯಲ್ಲೇ ನೆಲೆಸಿದ್ದೇವೆ. ನಿಜವಾದ ದೇವರೂ ನಿತ್ಯಜೀವವೂ ಇವರೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು