Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಯೋಹಾನನು 2:24 - ಕನ್ನಡ ಸತ್ಯವೇದವು C.L. Bible (BSI)

24 ಮೊದಲಿನಿಂದಲೂ ನೀವು ಯಾವ ಸಂದೇಶವನ್ನು ಕೇಳಿದ್ದೀರೋ ಅದು ನಿಮ್ಮಲ್ಲಿ ನೆಲೆಸಲಿ. ಮೊದಲಿನಿಂದಲೂ ನೀವು ಕೇಳಿದ ಸಂದೇಶ ನಿಮ್ಮಲ್ಲಿ ನೆಲೆಸಿದರೆ ಪುತ್ರನಲ್ಲಿಯೂ ಪಿತನಲ್ಲಿಯೂ ನೀವು ನೆಲೆಸುತ್ತೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ನೀವಂತೂ ಯಾವ ಬೋಧನೆಯನ್ನು ಮೊದಲಿನಿಂದ ಕೇಳಿದ್ದೀರೋ ಅದು ನಿಮ್ಮಲ್ಲಿ ನೆಲೆಗೊಂಡಿರಲಿ. ಮೊದಲಿನಿಂದ ನೀವು ಕೇಳಿದ್ದು ನಿಮ್ಮಲ್ಲಿ ನೆಲೆಗೊಂಡಿದ್ದರೆ ನೀವು ಸಹ ಮಗನಲ್ಲಿಯೂ ತಂದೆಯಾದ ದೇವರಲ್ಲಿಯೂ ನೆಲೆಗೊಂಡಿರುತ್ತೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ನೀವಂತೂ ಯಾವ ಬೋಧನೆಯನ್ನು ಮೊದಲಿನಿಂದ ಕೇಳಿದ್ದೀರೋ ಅದು ನಿಮ್ಮಲ್ಲಿ ನೆಲೆಗೊಂಡಿರಲಿ. ಮೊದಲಿನಿಂದ ನೀವು ಕೇಳಿದ ಬೋಧನೆಯು ನಿಮ್ಮಲ್ಲಿ ನೆಲೆಗೊಂಡಿದ್ದರೆ ನೀವು ಸಹ ಮಗನಲ್ಲಿಯೂ ತಂದೆಯಲ್ಲಿಯೂ ನೆಲೆಗೊಂಡಿರುತ್ತೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ನೀವು ಆರಂಭದಿಂದಲೂ ಕೇಳಿರುವ ಬೋಧನೆಯನ್ನೇ ಅನುಸರಿಸಿರಿ. ಆ ಬೋಧನೆಯನ್ನು ಅನುಸರಿಸುವವರಾಗಿದ್ದರೆ ನೀವು ಮಗನಲ್ಲಿಯೂ ತಂದೆಯಲ್ಲಿಯೂ ನೆಲೆಗೊಂಡಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ನೀವಂತೂ ಯಾವುದನ್ನು ಮೊದಲಿನಿಂದ ಕೇಳಿದ್ದೀರೋ ಅದು ನಿಮ್ಮಲ್ಲಿ ನೆಲೆಗೊಂಡಿರಲಿ. ಹಾಗಿದ್ದರೆ, ನೀವು ಸಹ ಮಗನಲ್ಲಿಯೂ ತಂದೆಯಲ್ಲಿಯೂ ನೆಲೆಗೊಂಡಿರುತ್ತೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

24 ಆರಂಬಾಕ್ನಾ ತುಮಿ ಆಯ್ಕಲ್ಲಿ ಸಂಗ್ತಿಯಾ ಮನಾತ್ನಿ ಥವ್ನ್ ಘೆವಾ, ಹೆ ಸಗ್ಳೆ ತುಮ್ಚ್ಯಾ ಮನಾತ್ ರ್‍ಹಾಲ್ಯಾರ್ ಬಾಬಾಚ್ಯಾ ಅನಿ ಲೆಕಾಚ್ಯಾ ವಾಂಗ್ಡಾ ತುಮಿಬಿ ಎಕ್ ಹೊವ್ನ್ ರ್‍ಹಾತ್ಯಾಸಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಯೋಹಾನನು 2:24
27 ತಿಳಿವುಗಳ ಹೋಲಿಕೆ  

ಆಗ ಯೇಸು, “ನನ್ನನ್ನು ಪ್ರೀತಿಸುವವನು ನನ್ನ ಮಾತನ್ನು ಕೈಗೊಂಡು ನಡೆಯುವನು. ಅವನನ್ನು ನನ್ನ ಪಿತನೂ ಪ್ರೀತಿಸುವರು ಮತ್ತು ನಾವಿಬ್ಬರೂ ಅವನ ಬಳಿ ಬಂದು ಅವನಲ್ಲಿ ನೆಲೆಸುವೆವು.


ದೇವರು ನಮಗೆ ತಮ್ಮ ಆತ್ಮವನ್ನು ನೀಡಿರುವುದರಿಂದಲೇ ನಾವು ಅವರಲ್ಲಿಯೂ ಅವರು ನಮ್ಮಲ್ಲಿಯೂ ನೆಲೆಸಿರುವುದನ್ನು ತಿಳಿದುಕೊಳ್ಳುತ್ತೇವೆ.


ಹೀಗೆ ದೇವರು ನಮ್ಮಲ್ಲಿಟ್ಟಿರುವ ಪ್ರೀತಿ ನಮಗೆ ಗೊತ್ತಿದೆ. ಅದರಲ್ಲಿ ನಮಗೆ ವಿಶ್ವಾಸವಿದೆ. ದೇವರು ಪ್ರೀತಿಸ್ವರೂಪಿ. ಪ್ರೀತಿಯಲ್ಲಿ ನೆಲೆಸಿರುವವನು ದೇವರಲ್ಲಿ ನೆಲೆಸಿದ್ದಾನೆ. ದೇವರೂ ಅವನಲ್ಲಿ ನೆಲೆಸಿರುತ್ತಾರೆ.


ನಿನಗೆ ಕೊಡಲಾದ ಬೋಧನೆಯನ್ನೂ ಅದನ್ನು ನೀನು ಕೇಳಿದ ರೀತಿಯನ್ನೂ ನೆನಪಿಗೆ ತಂದುಕೋ. ಅದರಂತೆ ನಡೆದು ಪಶ್ಚಾತ್ತಾಪಪಟ್ಟು ಪಾಪಕ್ಕೆ ವಿಮುಖನಾಗು. ನೀನು ಎಚ್ಚೆತ್ತುಕೊಳ್ಳದಿದ್ದರೆ ನಾನು ಕಳ್ಳನು ಬರುವಂತೆ ಬರುತ್ತೇನೆ. ನಾನು ಯಾವ ಗಳಿಗೆಯಲ್ಲಿ ನಿನ್ನ ಮೇಲೆ ಧಾಳಿಮಾಡುತ್ತೇನೆಂದೇ ನಿನಗೆ ತಿಳಿಯದು.


ಪ್ರಿಯರೇ, ನಾನು ನಿಮಗೆ ಬರೆಯುತ್ತಿರುವುದು ಹೊಸ ಆಜ್ಞೆಯೇನೂ ಅಲ್ಲ, ಮೊದಲಿನಿಂದಲೂ ನೀವು ಪಡೆದಿರುವ ಹಳೆಯ ಆಜ್ಞೆಯೇ. ಈ ಆಜ್ಞೆಯೇ ನೀವು ಈಗಾಗಲೇ ಕೇಳಿರುವ ಸಂದೇಶ.


ಪಿತನೊಡನೆಯೂ ಅವರ ಪುತ್ರ ಕ್ರಿಸ್ತಯೇಸುವಿನೊಡನೆಯೂ ನಮಗಿರುವಂಥ ಅನ್ಯೋನ್ಯತೆಯಲ್ಲಿ ನೀವು ಸಹ ಭಾಗಿಗಳಾಗುವಂತೆ ನಾವು ಕಂಡುಕೇಳಿದ್ದನ್ನು ನಿಮಗೆ ಪ್ರಚುರಪಡಿಸುತ್ತೇವೆ.


“ನೀವು ನನ್ನಲ್ಲಿಯೂ ನನ್ನ ವಾಕ್ಯವು ನಿಮ್ಮಲ್ಲಿಯೂ ನೆಲೆಗೊಂಡಿದ್ದರೆ ನೀವು ಏನು ಬೇಕಾದರೂ ಕೇಳಬಹುದು. ನಿಮಗದು ಸಿಗುವುದು.


ನಾನು ಬೇಗನೆ ಬರುತ್ತೇನೆ. ನಿನ್ನ ಜಯಮಾಲೆಯನ್ನು ಯಾರೂ ಕಸಿದುಕೊಳ್ಳದಂತೆ ನೀನು ಅವಲಂಬಿಸಿರುವುದನ್ನೇ ಆಶ್ರಯಿಸಿಕೊಂಡಿರು.


ಕ್ರಿಸ್ತಯೇಸುವಿನ ವಾಕ್ಯ ನಿಮ್ಮಲ್ಲಿ ನೆಲೆಸಿ ಸಮೃದ್ಧಿಯಾಗಿ ಬೆಳೆಯಲಿ. ಜ್ಞಾನಸಂಪನ್ನರಾಗಿ ಒಬ್ಬರಿಗೊಬ್ಬರು ಉಪದೇಶಮಾಡಿರಿ ಹಾಗೂ ಬುದ್ಧಿ ಹೇಳಿಕೊಳ್ಳಿರಿ. ಕೃತಜ್ಞತೆಯುಳ್ಳವರಾಗಿ ಕೀರ್ತನೆಗಳಿಂದಲೂ ಸಂಗೀತಗಳಿಂದಲೂ ಭಕ್ತಿಗೀತೆಗಳಿಂದಲೂ ಹೃದಯಾಂತರಾಳದಿಂದ ದೇವರಿಗೆ ಹಾಡಿರಿ.


ನಿನಗೆ ವಿರುದ್ಧ ನಾ ಪಾಪಮಾಡದಂತೆ I ನಿನ್ನಾ ನುಡಿಯನು ನನ್ನೆದೆಯಲ್ಲಿರಿಸಿದೆ II


ಬದಲಿಗೆ, ದೇವರು ಬೆಳಕಿನಲ್ಲಿರುವಂತೆ ನಾವೂ ಬೆಳಕಿನಲ್ಲಿ ನಡೆದರೆ ನಮ್ಮಲ್ಲಿ ಪರಸ್ಪರ ಅನ್ಯೋನ್ಯತೆ ಇರುತ್ತದೆ. ಆಗ ದೇವರ ಪುತ್ರನಾದ ಯೇಸುವಿನ ರಕ್ತವು ನಮ್ಮನ್ನು ಎಲ್ಲ ಪಾಪದಿಂದಲೂ ಶುದ್ಧಗೊಳಿಸುತ್ತದೆ.


ನಾವೆಲ್ಲರೂ ಕ್ರಿಸ್ತಯೇಸುವಿನೊಡನೆ ಸಹಬಾಧ್ಯರು; ಆದರೆ, ಪ್ರಾರಂಭದಲ್ಲಿ ನಮಗಿದ್ದ ನಂಬಿಕೆ-ನಿರೀಕ್ಷೆಯನ್ನು ಕೊನೆಯವರೆಗೂ ಸ್ಥಿರವಾಗಿ ಇರಿಸಿಕೊಳ್ಳಬೇಕು.


ಫಿಲಿಪ್ಪಿಯ ಸಹೋದರರೇ, ನಾನು ಶುಭಸಂದೇಶವನ್ನು ಸಾರಲು ಹೊರಟ ಪ್ರಾರಂಭದ ದಿನಗಳಲ್ಲಿ ಮಕೆದೋನಿಯವನ್ನು ಬಿಟ್ಟುಹೋದಾಗ ನೀವಲ್ಲದೆ ಬೇರೆ ಯಾವ ಸಭೆಯೂ ನನ್ನ ಆಯ-ವ್ಯಯಗಳಲ್ಲಿ ನೆರವಾಗಿರಲಿಲ್ಲ. ಇದು ನಿಮಗೆ ತಿಳಿದ ವಿಷಯ.


ನೀನು ಸತ್ಯದಲ್ಲಿ ನಿಷ್ಠಾವಂತನಾಗಿದ್ದು, ಸನ್ಮಾರ್ಗದಲ್ಲಿ ನಡೆಯುತ್ತಿರುವುದಾಗಿ ಕೆಲವು ಸಹೋದರರು ಇಲ್ಲಿಗೆ ಬಂದು ತಿಳಿಸಿದಾಗ ನನಗಾದ ಆನಂದ ಅಷ್ಟಿಷ್ಟಲ್ಲ.


ನಮ್ಮಲ್ಲಿ ನೆಲೆಗೊಂಡಿರುವ ಹಾಗೂ ನಮ್ಮಲ್ಲಿ ಶಾಶ್ವತವಾಗಿರುವ ಸತ್ಯದ ಪ್ರಯುಕ್ತ ನಾನು ಮತ್ತು ಸತ್ಯವನ್ನು ಅರಿತಿರುವ ಎಲ್ಲರು ನಿಮ್ಮಲ್ಲಿ ಪ್ರೀತಿಯನ್ನಿಟ್ಟಿದ್ದೇವೆ.


ಆದ್ದರಿಂದಲೇ ಹುಚ್ಚುಹೊಳೆಯಲ್ಲಿ ಕೊಚ್ಚಿಹೋಗದ ಹಾಗೆ ನಾವು ಕೇಳಿರುವ ಸತ್ಯಗಳಿಗೆ ಬಿಗಿಯಾಗಿ ಕಚ್ಚಿಕೊಳ್ಳಬೇಕು.


ಅವರು, “ನೀನು ಯಾರು?” ಎಂದು ಪ್ರಶ್ನಿಸಿದರು.


ಪ್ರಾರಂಭದಿಂದ ಕಣ್ಣಾರೆ ಕಂಡು ಶುಭಸಂದೇಶವನ್ನು ಸಾರಿದವರಿಂದಲೇ ನಾವು ಕೇಳಿದ ಘಟನೆಗಳವು.


ಸತ್ಯವನ್ನು, ಅಂದರೆ ಜ್ಞಾನ, ಸುಶಿಕ್ಷೆ, ವಿವೇಕ ಇವನ್ನು ಬೆಲೆಕೊಟ್ಟಾದರೂ ಕೊಂಡುಕೊ, ಮಾರಿಬಿಡಬೇಡ!


“ಈ ನನ್ನ ಮಾತು ನಿಮ್ಮ ಕಿವಿಗೆ ಇಳಿಯಲಿ. ಅದೇನೆಂದರೆ: “ನರಪುತ್ರನು ಜನರ ವಶಕ್ಕೆ ಒಪ್ಪಿಸಲ್ಪಡಲಿದ್ದಾನೆ,” ಎಂದರು.


ನನ್ನ ಮಾಂಸವನ್ನು ತಿಂದು, ನನ್ನ ರಕ್ತವನ್ನು ಕುಡಿಯುವವನು ನನ್ನಲ್ಲಿ ನೆಲೆಸಿರುತ್ತಾನೆ. ನಾನು ಅವನಲ್ಲಿ ನೆಲೆಸಿರುತ್ತೇನೆ.


ದೇವರ ಆಜ್ಞೆಯನ್ನು ಪಾಲಿಸುವವನು ಅವರಲ್ಲಿ ನೆಲೆಸಿರುತ್ತಾನೆ. ದೇವರೂ ಅವನಲ್ಲಿ ನೆಲೆಸಿರುತ್ತಾರೆ. ದೇವರು ನಮ್ಮಲ್ಲಿ ನೆಲೆಸಿದ್ದಾರೆಂದು ಅವರು ದಯಪಾಲಿಸುವ ಪವಿತ್ರಾತ್ಮರಿಂದಲೇ ತಿಳಿದುಕೊಳ್ಳುತ್ತೇವೆ.


ಯೇಸುವೇ ದೇವರ ಪುತ್ರನೆಂದು ಯಾವನು ಒಪ್ಪಿಕೊಳ್ಳುತ್ತಾನೋ ಅವನಲ್ಲಿ ದೇವರು ನೆಲೆಸಿದ್ದಾರೆ; ಅವನೂ ದೇವರಲ್ಲಿ ನೆಲೆಸಿದ್ದಾನೆ.


ಕ್ರಿಸ್ತಯೇಸುವಿನ ಉಪದೇಶದಲ್ಲಿ ನೆಲೆಸದೆ ಅದರ ಎಲ್ಲೆಮೀರಿ ನಡೆಯುವವನಲ್ಲಿ ದೇವರು ಇರುವುದಿಲ್ಲ. ಆ ಉಪದೇಶದಲ್ಲಿ ನೆಲೆಸಿರುವವನಲ್ಲಿ ಪಿತ ಮತ್ತು ಪುತ್ರ ಇಬ್ಬರೂ ಇರುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು