Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಯೋಹಾನನು 2:28 - ಕನ್ನಡ ಸತ್ಯವೇದವು C.L. Bible (BSI)

28 ಹೌದು ಪ್ರಿಯ ಮಕ್ಕಳೇ, ಕ್ರಿಸ್ತಯೇಸು ಪ್ರತ್ಯಕ್ಷರಾಗುವಾಗ, ಅವರ ಪುನರಾಗಮನದ ಪ್ರಯುಕ್ತ ಅವರ ಮುಂದೆ ನಾವು ನಾಚಿಕೆಪಡದೆ ಧೈರ್ಯದಿಂದಿರುವಂತೆ ಅವರಲ್ಲಿ ನೆಲೆಗೊಂಡಿರೋಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಪ್ರಿಯ ಮಕ್ಕಳೇ, ಆತನು ಪ್ರತ್ಯಕ್ಷನಾಗುವಾಗ ನಾವು ಆತನ ಆಗಮನದಲ್ಲಿ ಆತನ ಮುಂದೆ ನಿಲ್ಲಲು ನಾಚಿಕೆಪಡದೆ ಧೈರ್ಯದಿಂದಿರುವಂತೆ ಆತನಲ್ಲಿ ನೆಲೆಗೊಂಡಿರೋಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ಪ್ರಿಯರಾದ ಮಕ್ಕಳೇ, ಆತನು ಪ್ರತ್ಯಕ್ಷನಾಗುವಾಗ ನಾವು ಆತನ ಆಗಮನದಲ್ಲಿ ಆತನ ಮುಂದೆ ನಿಲ್ಲಲು ನಾಚಿಕೆಪಡದೆ ಧೈರ್ಯದಿಂದಿರುವಂತೆ ಆತನಲ್ಲಿ ನೆಲೆಗೊಂಡಿರೋಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ಹೌದು, ನನ್ನ ಪ್ರಿಯ ಮಕ್ಕಳೇ, ಆತನಲ್ಲಿಯೇ ನೆಲೆಗೊಂಡಿರೋಣ. ನಾವು ಹೀಗೆ ಮಾಡಿದರೆ, ಕ್ರಿಸ್ತನು ಮರಳಿ ಬರುವ ದಿನದಂದು ನಾವು ಭಯಪಡಬೇಕಾಗಿಲ್ಲ; ಅಡಗಿಕೊಳ್ಳುವ ಅಗತ್ಯವಿರುವುದಿಲ್ಲ; ನಾಚಿಕೆಪಡುವ ಅಗತ್ಯವೂ ಇರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ಪ್ರಿಯ ಮಕ್ಕಳೇ, ಕ್ರಿಸ್ತ ಯೇಸು ಪ್ರತ್ಯಕ್ಷವಾಗುವಾಗ ನೀವು ಅವರ ಆಗಮನದಲ್ಲಿ ಅವರ ಮುಂದೆ ನಿಲ್ಲಲು ನಾಚಿಕೆಪಡದೆ ಧೈರ್ಯದಿಂದಿರುವಂತೆ ಅವರಲ್ಲಿ ನೆಲೆಗೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

28 ಮಾಜ್ಯಾ ಪ್ರೆಮಾಚ್ಯಾ ಪೊರಾನು, ಅತ್ತಾ ತುಮಿ ತೆಚ್ಯಾ ವಾಂಗ್ಡಾ ರ್‍ಹಾವ್ಕ್ ಜಾಯ್,ಅಸೆ ತೊ ದಿಸ್ತಲ್ಲ್ಯಾ ದಿಸಾ ತೆಚ್ಯಾಕ್ನಾ ಲಜುನ್ ಧುರ್ ಜಾತಲ್ಯಾ ಬದ್ಲಾಕ್ ವಿಶ್ವಾಸಾನ್ ತೆಚೆಕ್ಡೆ ಜಾವ್ಕ್ ಪಾವ್ತಾಂವ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಯೋಹಾನನು 2:28
29 ತಿಳಿವುಗಳ ಹೋಲಿಕೆ  

ಇದರಿಂದಾಗಿ, ಪ್ರೀತಿ ನಮ್ಮಲ್ಲಿ ಸಿದ್ಧಿಗೆ ಬಂದಿರುತ್ತದೆ; ನ್ಯಾಯತೀರ್ಪಿನ ದಿನದಂದು ನಾವು ಭರವಸೆಯಿಂದಿರುತ್ತೇವೆ. ಈ ಲೋಕದಲ್ಲಿ ನಮ್ಮ ಬಾಳು ಕ್ರಿಸ್ತಯೇಸುವಿನ ಬಾಳಿನಂತೆ ಇರುವುದರಿಂದಲೇ ಆ ಭರವಸೆ ನಮಗೆ ಇರುತ್ತದೆ.


ದೈವನಿಷ್ಠೆಯಿಲ್ಲದ ಈ ಪಾಪಿಷ್ಠ ಪೀಳಿಗೆಯವರಲ್ಲಿ ಯಾರು ನನ್ನನ್ನೂ ನನ್ನ ಮಾತುಗಳನ್ನೂ ಕುರಿತು ನಾಚಿಕೆಪಡುತ್ತಾರೋ, ಅಂಥವರನ್ನು ಕುರಿತು ನರಪುತ್ರನು ಸಹ ತನ್ನ ಪಿತನ ಪ್ರಭಾವದೊಡನೆ ದೇವದೂತರ ಪರಿವಾರ ಸಮೇತನಾಗಿ ಬರುವಾಗ, ನಾಚಿಕೆಪಡುವನು,” ಎಂದರು.


ಪ್ರಿಯರೇ, ನಾವೀಗ ದೇವರ ಮಕ್ಕಳು. ಮುಂದೆ ನಾವು ಎಂಥವರಾಗುತ್ತೇವೆ ಎಂಬುದು ಇನ್ನೂ ವಿಷದವಾಗಿಲ್ಲ. ಆದರೆ ಕ್ರಿಸ್ತಯೇಸು ಪ್ರತ್ಯಕ್ಷವಾಗುವಾಗ ನಾವೂ ಅವರಂತೆಯೇ ಇರುತ್ತೇವೆಂದು ಬಲ್ಲೆವು. ಏಕೆಂದರೆ, ಅವರನ್ನು ನಾವು ಅವರ ಯಥಾರ್ಥರೂಪದಲ್ಲೇ ಕಾಣುತ್ತೇವೆ.


ಪ್ರಿಯರೇ, ನಮ್ಮ ಮನಸ್ಸಾಕ್ಷಿ ನಮ್ಮನ್ನು ಖಂಡಿಸದಿದ್ದರೆ, ನಾವು ದೇವರ ಮುಂದೆ ಧೈರ್ಯದಿಂದಿರಲು ಸಾಧ್ಯವಾಗುತ್ತದೆ.


ಕ್ರಿಸ್ತಯೇಸುವೇ ನಿಮ್ಮ ನೈಜ ಜೀವವಾಗಿದ್ದಾರೆ. ಅವರು ಪುನರಾಗಮಿಸುವಾಗ ನೀವೂ ಸಹ ಅವರ ಮಹಿಮೆಯಲ್ಲಿ ಪಾಲುಗಾರರಾಗಿ ಅವರೊಂದಿಗೆ ಪ್ರತ್ಯಕ್ಷರಾಗುವಿರಿ.


ಪ್ರಿಯಮಕ್ಕಳೇ, ನೀವು ಪಾಪಮಾಡಬಾರದೆಂದೇ ನಾನಿದನ್ನು ನಿಮಗೆ ಬರೆಯುತ್ತಿದ್ದೇನೆ. ಒಂದು ವೇಳೆ ಯಾರಾದರೂ ಪಾಪಮಾಡಿದ್ದೇ ಆದರೆ ನಮ್ಮ ಪರವಾಗಿ ಪಿತನ ಬಳಿಯಲ್ಲಿ ಬಿನ್ನಯಿಸಲು ಒಬ್ಬರಿದ್ದಾರೆ. ಅವರೇ ಸತ್ಯಸ್ವರೂಪರಾದ ಯೇಸುಕ್ರಿಸ್ತರು.


ನಮ್ಮ ಪ್ರಭು ಯೇಸು ನಿಮ್ಮನ್ನು ದೃಢಪಡಿಸಲಿ; ತಮ್ಮ ಪರಿಶುದ್ಧ ಪರಿವಾರದ ಸಮೇತ ಯೇಸು ಪುನರಾಗಮಿಸುವಾಗ, ನಮ್ಮ ಪಿತನಾದ ದೇವರ ಸನ್ನಿಧಾನದಲ್ಲಿ ನೀವೂ ಸಹ ಪರಿಶುದ್ಧರೂ ನಿಷ್ಕಳಂಕರೂ ಆಗಿ ಕಾಣಿಸಿಕೊಳ್ಳುವಂತೆ ಮಾಡಲಿ.


“ಆದರೆ ಆತನು ಬರುವಾಗ ಆತನನ್ನು ಎದುರುಗೊಳ್ಳಬಲ್ಲವನು ಯಾರು? ಆತನ ದರ್ಶನವನ್ನು ಪಡೆದು ಬದುಕಬಲ್ಲವನು ಯಾರು?


ದೇವರ ಚಿತ್ತಾನುಸಾರ ಏನನ್ನು ಬೇಡಿಕೊಂಡರೂ ಅವರು ನಮ್ಮ ವಿಜ್ಞಾಪನೆಗೆ ಕಿವಿಗೊಡುತ್ತಾರೆಂಬ ಭರವಸೆ ನಮಗಿದೆ.


ಆಗ ಮಾತ್ರ, ಪ್ರಧಾನ ಕುರಿಗಾಹಿ ಪ್ರತ್ಯಕ್ಷನಾಗುವಾಗ ಮಲಿನವಾಗದ ಮಹಿಮಾನ್ವಿತ ಜಯಮಾಲೆಯನ್ನು ಪಡೆಯುವಿರಿ.


ಇಗೋ ನೋಡು, ಮೇಘಾರೂಢನಾಗಿ ಬರುತಿಹನು ಪ್ರತಿಯೊಂದು ಕಣ್ಣೂ ಕಾಣುವುದು ಆತನನು, ಆತನನ್ನು ಇರಿದವರೂ ವೀಕ್ಷಿಸುವರು, ಗೋಳಾಡುವರಾತನನ್ನು ಕಂಡು ಲೋಕದ ಜನರೆಲ್ಲರು. ಹೌದು, ಅದರಂತೆಯೇ ಆಗುವುದು, ಆಮೆನ್.


ಹಾಗೆಯೇ, ಎಲ್ಲಾ ಮಾನವರ ಪಾಪಗಳನ್ನು ಹೊತ್ತು ಹೋಗಲಾಡಿಸಲು ಕ್ರಿಸ್ತಯೇಸು ಒಮ್ಮೆಗೇ ಎಲ್ಲಾ ಕಾಲಕ್ಕೂ ತಮ್ಮನ್ನೇ ಬಲಿಯಾಗಿ ಸಮರ್ಪಿಸಿಕೊಂಡರು. ಅವರು ಮತ್ತೆ ಪ್ರತ್ಯಕ್ಷರಾಗುವರು; ಪಾಪನಿವಾರಣೆ ಮಾಡಲೆಂದು ಅಲ್ಲ, ತಮ್ಮನ್ನು ನಂಬಿ ನಿರೀಕ್ಷಿಸಿಕೊಂಡಿರುವವರನ್ನು ಜೀವೋದ್ಧಾರ ಮಾಡಲೆಂದು.


ನಮ್ಮ ಪ್ರಭು ಯೇಸು ಪುನರಾಗಮಿಸುವಾಗ ಅವರ ಸಮ್ಮುಖದಲ್ಲಿ ನಮ್ಮ ಆಶಯ-ಆನಂದಗಳು, ಕೀರ್ತಿ-ಕಿರೀಟಗಳಾದರೂ ಯಾರು? ನೀವೇ ಅಲ್ಲವೇ?


ಇದರಿಂದಾಗಿ ನಮ್ಮ ಪ್ರಭು ಯೇಸುಕ್ರಿಸ್ತರು ಪ್ರತ್ಯಕ್ಷವಾಗುವುದನ್ನೇ ಎದುರುನೋಡುತ್ತಿರುವ ನಿಮಗೆ ಯಾವ ಕೃಪಾಶೀರ್ವಾದಗಳ ಕೊರತೆಯು ಇಲ್ಲ.


ಪವಿತ್ರಗ್ರಂಥದಲ್ಲಿ ಹೀಗೆಂದು ಲಿಖಿತವಾಗಿದೆ: “ಇಗೋ, ಎಡವಿ ನೆಲಕ್ಕುರುಳುವಂತೆ ಮಾಡುವ ಕಲ್ಲನ್ನೂ ಮುಗ್ಗರಿಸಿ ಬೀಳುವಂತೆ ಮಾಡುವ ಬಂಡೆಯನ್ನೂ ನಾನು ಸಿಯೋನಿನಲ್ಲಿ ಇರಿಸುವೆನು; ಆತನಲ್ಲಿ ವಿಶ್ವಾಸವಿಡುವವನಾದರೋ ಎಂದಿಗೂ ಆಶಾಭಂಗಗೊಳ್ಳನು.”


ಇನ್ನು ನನಗೆ ಉಳಿದಿರುವುದು ಒಂದೇ: ಸಜ್ಜನರಿಗೆ ಸಲ್ಲುವಂಥ ಜಯಮಾಲೆ ನನಗೀಗ ಸಿದ್ಧವಾಗಿದೆ. ಅದನ್ನು ನೀತಿವಂತ ನ್ಯಾಯಾಧಿಪತಿಯಾದ ಪ್ರಭು ಆ ದಿನದಂದು ನನಗೆ ಕೊಡುವರು; ನನಗೆ ಮಾತ್ರವಲ್ಲ, ಅವರ ಪ್ರತ್ಯಕ್ಷತೆಯನ್ನು ಪ್ರೀತಿಯಿಂದ ನಿರೀಕ್ಷಿಸುತ್ತಿರುವ ಎಲ್ಲರಿಗೂ ಕೊಡುವರು.


ನಮ್ಮ ಪ್ರಭು ಯೇಸುಕ್ರಿಸ್ತರು ಪ್ರತ್ಯಕ್ಷರಾಗುವ ತನಕ ಯಾವ ದೋಷಾರೋಪಣೆಗೂ ಎಡೆಗೊಡದೆ ಈ ಕಟ್ಟಳೆಗಳೆಲ್ಲವನ್ನೂ ಪ್ರಾಮಾಣಿಕತೆಯಿಂದ ಅನುಸರಿಸು:


ಶಾಂತಿದಾಯಕ ದೇವರು ನಿಮ್ಮನ್ನು ಪೂರ್ಣವಾಗಿ ಪಾವನಗೊಳಿಸಲಿ. ನಮ್ಮ ಪ್ರಭು ಯೇಸು ಪುನರಾಗಮಿಸುವಾಗ ನಿಮ್ಮ ಆತ್ಮ, ಪ್ರಾಣ, ದೇಹ - ಇವುಗಳು ದೋಷರಹಿತವಾಗಿಯೂ ಸ್ವಸ್ಥವಾಗಿಯೂ ಇರುವಂತೆ ನಿಮ್ಮನ್ನು ಕಾಪಾಡಲಿ.


ಈ ಭಾಗ್ಯವನ್ನು ಒಬ್ಬೊಬ್ಬನೂ ಕ್ರಮಬದ್ಧ ರೀತಿಯಲ್ಲಿ ಪಡೆಯತ್ತಾನೆ. ಪ್ರಪ್ರಥಮ ಫಲವಾಗಿ ಕ್ರಿಸ್ತಯೇಸುವೇ ಜೀವಂತರಾದರು. ಅನಂತರ, ಕ್ರಿಸ್ತಯೇಸುವಿಗೆ ಸೇರಿದವರು ಯೇಸು ಪುನರಾಗಮಿಸುವಾಗ ಜೀವಂತರಾಗುತ್ತಾರೆ.


“ಇಗೋ, ಸರ್ವೇಶ್ವರಸ್ವಾಮಿಯ ಆಗಮನದ ಭಯಂಕರ ಮಹಾದಿನ ಬರುವುದಕ್ಕೆ ಮುಂಚೆ ಪ್ರವಾದಿ ಎಲೀಯನನ್ನು ನಿಮ್ಮಲ್ಲಿಗೆ ಕಳುಹಿಸುವೆನು.


ಇದು ನೆರವೇರಿದಾಗ ಜನರು : “ಇವರೇ ನಮ್ಮ ದೇವರು; ನಮ್ಮನ್ನು ರಕ್ಷಿಸುವರೆಂದು ಇವರನ್ನೇ ನೆಚ್ಚಿಕೊಂಡಿದ್ದೆವು ಇವರೇ ಸರ್ವೇಶ್ವರ; ಇವರನ್ನೇ ನೆಚ್ಚಿಕೊಂಡಿದ್ದೆವು. ಇವರು ನೀಡುವ ರಕ್ಷಣೆಯಲ್ಲಿ ಆನಂದಿಸೋಣ !” ಎಂದು ಹೇಳಿಕೊಳ್ಳುವರು.


ಪರಿಶೋಧನೆಗಳು ಬಂದೊದಗುವುದು ನಿಮ್ಮ ವಿಶ್ವಾಸವನ್ನು ಪುಟವಿಡುವುದಕ್ಕಾಗಿಯೇ. ನಶಿಸಿಹೋಗುವ ಬಂಗಾರವೂ ಕೂಡ ಬೆಂಕಿಯಿಂದ ಪರಿಶೋಧಿತವಾಗುತ್ತದೆ. ಬಂಗಾರಕ್ಕಿಂತಲೂ ಬಹು ಅಮೂಲ್ಯವಾದ ನಿಮ್ಮ ವಿಶ್ವಾಸವು ಶೋಧಿತವಾಗಬೇಕು. ಆಗ ಮಾತ್ರ ಯೇಸುಕ್ರಿಸ್ತರು ಪ್ರತ್ಯಕ್ಷವಾಗುವ ದಿನದಂದು ನಿಮಗೆ ಪ್ರಶಂಸೆ, ಪ್ರತಿಷ್ಠೆ ಹಾಗೂ ಪ್ರತಿಭೆ ದೊರಕುತ್ತವೆ.


ಇಸ್ರಯೇಲಿಗಾದರೋ, ದೊರೆವುದು ಶಾಶ್ವತ ರಕ್ಷಣೆ ಸರ್ವೇಶ್ವರನಿಂದ; ಯುಗಯುಗಾಂತರಕ್ಕೂ ಅದಕ್ಕಾಗದು ಲಜ್ಜೆ, ಮಾನಭಂಗ.”


ನರಪುತ್ರನು ತನ್ನ ಪಿತನ ಪ್ರಭಾವದೊಡನೆ ತನ್ನ ದೂತರ ಸಮೇತ ಬರಲಿದ್ದಾನೆ. ಆಗ ಪ್ರತಿಯೊಬ್ಬ ಮಾನವನಿಗೆ ಅವನವನ ಕೃತ್ಯಕ್ಕೆ ತಕ್ಕ ಪ್ರತಿಫಲ ಕೊಡುವನು.


ಇಲ್ಲಿರುವವರಲ್ಲಿ ಕೆಲವರು ನರಪುತ್ರನು ತನ್ನ ಸಾಮ್ರಾಜ್ಯದಲ್ಲಿ ಪ್ರತ್ಯಕ್ಷನಾಗುವುದನ್ನು ಕಾಣುವುದಕ್ಕೆ ಮುನ್ನ ಸಾವನ್ನು ಸವಿಯುವುದಿಲ್ಲ ಎಂದು ನಿಮಗೆ ನಿಶ್ಚಯವಾಗಿ ಹೇಳುತ್ತೇನೆ,” ಎಂದರು.


ನರಪುತ್ರನು ಪ್ರತ್ಯಕ್ಷನಾಗುವ ದಿನದಲ್ಲೂ ಹಾಗೆಯೇ ನಡೆಯುವುದು.


ಯೇಸುಕ್ರಿಸ್ತರಲ್ಲಿ ನಾವಿಟ್ಟಿರುವ ವಿಶ್ವಾಸದ ಮೂಲಕ ಅವರಲ್ಲಿ ಒಂದಾಗಿ, ದೇವರ ಸಾನ್ನಿಧ್ಯವನ್ನು ಸೇರುವ ಧೈರ್ಯ ಹಾಗೂ ಭರವಸೆ ನಮಗಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು