Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಯೋಹಾನನು 2:3 - ಕನ್ನಡ ಸತ್ಯವೇದವು C.L. Bible (BSI)

3 ನಾವು ದೇವರ ಆಜ್ಞೆಗಳನ್ನು ಕೈಗೊಂಡು ನಡೆದರೆ ಅದರಿಂದಲೇ ಅವರ ಅರಿವು ನಮಗಿದೆ ಎಂದು ಖಚಿತವಾಗುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ನಾವು ಆತನ ಆಜ್ಞೆಗಳನ್ನು ಅರಿತು ನಡೆಯುವುದರಿಂದಲೇ ಆತನನ್ನು ನಾವು ಬಲ್ಲವರಾಗಿದ್ದೇವೆಂದು ತಿಳಿದುಕೊಳ್ಳುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ನಾವು ಆತನ ಆಜ್ಞೆಗಳನ್ನು ಕೈಕೊಂಡು ನಡೆದರೆ ಅದರಿಂದಲೇ ಆತನನ್ನು ಬಲ್ಲವರಾಗಿದ್ದೇವೆಂದು ತಿಳುಕೊಳ್ಳುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ದೇವರ ಆಜ್ಞೆಗಳಿಗೆ ನಾವು ವಿಧೇಯರಾಗಿದ್ದರೆ, ದೇವರ ಬಗ್ಗೆ ನಿಜವಾಗಿಯೂ ತಿಳಿದಿದ್ದೇವೆಂಬುದು ಖಚಿತವಾಗುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ನಾವು ದೇವರ ಆಜ್ಞೆಗಳನ್ನು ಕೈಕೊಂಡು ನಡೆಯುವುದರಿಂದಲೇ ದೇವರನ್ನು ಬಲ್ಲವರಾಗಿದ್ದೇವೆಂದು ತಿಳಿದುಕೊಳ್ಳುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

3 ಅಮಿ ದೆವಾಚ್ಯಾ ಹುಕುಮಾಕ್ನಿ ಮಾನುನ್ ಘೆವ್ನ್ ಚಲ್ಲ್ಯಾವ್ ಮನುನ್ ಹೊಲ್ಲ್ಯಾರ್, ಹೆಚ್ಯಾ ವೈನಾ ಅಮಿ ದೆವಾಕ್ ಖರೆಚ್ ವಳಕ್ತಾಂವ್ ಮನುನ್ ಹೊಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಯೋಹಾನನು 2:3
26 ತಿಳಿವುಗಳ ಹೋಲಿಕೆ  

ನೀವು ನನ್ನನ್ನು ಪ್ರೀತಿಸುವವರಾಗಿದ್ದರೆ ನನ್ನ ಆಜ್ಞೆಗಳನ್ನು ಕೈಗೊಂಡು ನಡೆಯುವಿರಿ.


ನನ್ನ ಪಿತನು ಕೊಟ್ಟ ಆಜ್ಞೆಗಳನ್ನು ಪಾಲಿಸಿ ಅವರ ಪ್ರೀತಿಯಲ್ಲಿ ನಾನು ನೆಲೆಗೊಂಡಿರುವ ಹಾಗೆ ನೀವು ಕೂಡ ನಾನು ಕೊಟ್ಟ ಆಜ್ಞೆಗಳನ್ನು ಪಾಲಿಸಿದರೆ ನನ್ನ ಪ್ರೀತಿಯಲ್ಲಿ ನೆಲೆಗೊಂಡಿರುವಿರಿ.


ದೇವರನ್ನು ಪ್ರೀತಿಸುವುದು ಎಂದರೆ ಅವರು ಕೊಟ್ಟ ಆಜ್ಞೆಗಳನ್ನು ಅನುಸರಿಸಿ ನಡೆಯುವುದೇ. ಅವರ ಆಜ್ಞೆಗಳು ನಮಗೆ ಹೊರೆಯೇನೂ ಅಲ್ಲ.


“ನೀವು ನನ್ನನ್ನು ‘ಸ್ವಾಮೀ ಸ್ವಾಮೀ,’ ಎಂದು ಕರೆಯುತ್ತೀರಿ; ಆದರೆ ನನ್ನ ಮಾತಿನಂತೆ ನಡೆಯುವುದಿಲ್ಲವೇಕೆ?


ನಾನು ಆಜ್ಞಾಪಿಸಿದಂತೆ ನಡೆದರೆ ನೀವು ನನ್ನ ಗೆಳೆಯರು.


ದೇವರು ನಮಗೆ ತಮ್ಮ ಆತ್ಮವನ್ನು ನೀಡಿರುವುದರಿಂದಲೇ ನಾವು ಅವರಲ್ಲಿಯೂ ಅವರು ನಮ್ಮಲ್ಲಿಯೂ ನೆಲೆಸಿರುವುದನ್ನು ತಿಳಿದುಕೊಳ್ಳುತ್ತೇವೆ.


ಹೀಗೆ, ಅವರು ಸ್ವತಃ ಪರಿಪೂರ್ಣರಾಗಿ ತಮಗೆ ವಿಧೇಯರಾಗುವ ಎಲ್ಲರಿಗೂ ಶಾಶ್ವತ ಜೀವೋದ್ಧಾರಕ್ಕೆ ಕಾರಣರಾದರು.


ಹಿಡಿದಿರುವೆನು ನಿನ್ನ ಆಜ್ಞಾಮಾರ್ಗವನು I ಏಕೆನೆ ಹಿರಿದಾಗಿಸಿರುವೆ ನೀ ನನ್ನ ಅರಿವನು II


ಹೀಗೆ ನಾವು ಸತ್ಯಕ್ಕೆ ಸೇರಿದವರು ಎಂಬುದು ಮನದಟ್ಟಾಗುವುದಲ್ಲದೆ ದೇವರ ಮುಂದೆ ನಮ್ಮ ಮನಸ್ಸು ನೆಮ್ಮದಿಯಿಂದಿರುತ್ತದೆ.


ಏಕೈಕ ನಿಜದೇವರಾದ ನಿಮ್ಮನ್ನೂ ನೀವು ಕಳುಹಿಸಿಕೊಟ್ಟ ಯೇಸು ಕ್ರಿಸ್ತನನ್ನೂ ಅರಿತುಕೊಳ್ಳುವುದೇ ನಿತ್ಯಜೀವ.


ಇಡೀ ಲೋಕವು ಕೇಡಿಗನ ವಶದಲ್ಲಿ ಇದ್ದರು ಸಹ ನಾವು ದೇವರಿಗೆ ಸೇರಿದವರೆಂಬುದು ನಮಗೆ ತಿಳಿದಿದೆ.


ನಾವು ನಮ್ಮ ಸಹೋದರರನ್ನು ಪ್ರೀತಿಸುವುದರಿಂದ ಸಾವಿನಿಂದ ಜೀವಕ್ಕೆ ಸಾಗಿದ್ದೇವೆಂದು ತಿಳಿದಿದ್ದೇವೆ. ಪ್ರೀತಿಸದೆ ಇರುವವನು ಸಾವಿನಲ್ಲೇ ನೆಲೆಸಿರುತ್ತಾನೆ.


“ಕತ್ತಲೆಯಿಂದ ಬೆಳಕು ಹೊಳೆಯಲಿ,” ಎಂದ ದೇವರೇ, ತಮ್ಮ ಜ್ಯೋತಿಯಿಂದ ನಮ್ಮ ಅಂತರಂಗವನ್ನು ಬೆಳಗಿಸಿದ್ದಾರೆ. ಇದರ ಪರಿಣಾಮವಾಗಿ ಕ್ರಿಸ್ತಯೇಸುವಿನ ಮುಖಮಂಡಲದಲ್ಲಿ ಪ್ರಜ್ವಲಿಸುತ್ತಿರುವ ದೇವರ ಮಹಿಮೆಯ ದಿವ್ಯಜ್ಞಾನವು ನಮ್ಮಲ್ಲಿ ಉದಯಿಸುವಂತಾಗಿದೆ.


“ತಮ್ಮ ನಿಲುವಂಗಿಗಳನ್ನು ತೊಳೆದು ಶುಭ್ರವಾಗಿಟ್ಟುಕೊಂಡಿರುವವರು ಭಾಗ್ಯವಂತರು. ಜೀವವೃಕ್ಷದ ಫಲವನ್ನು ಸವಿಯುವ ಹಕ್ಕು ಅವರಿಗಿರುತ್ತದೆ. ಹೆಬ್ಬಾಗಿಲಿನ ಮೂಲಕ ಅವರು ಆ ನಗರವನ್ನು ಸೇರುವರು.


ತೃಪ್ತನಾಗುವನಾತ ಕಂಡು ತನ್ನ ಪ್ರಾಣಯಾತನೆಯ ಫಲವನು. ಸಜ್ಜನನಾದ ಆ ನನ್ನ ದಾಸ ತರುವನು ಸನ್ಮಾರ್ಗಕೆ ಬಹುಜನರನು. ತಾನೇ ಹೊತ್ತುಕೊಳ್ಳುವನು ಅವರ ಅಪರಾಧಗಳ ಹೊರೆಯನು.


ಲಕ್ಷ್ಯ ಕೊಟ್ಟೆನಾದರೆ ನಿನ್ನೆಲ್ಲ ಆಜ್ಞೆಗಳಿಗೆ I ಆಸ್ಪದವಿರದು ಎನಗೆ ಪ್ರಭು, ಆಶಾಭಂಗಕೆ II


ಬರೆಯುತಿಹೆನು ತಂದೆಗಳಿರಾ, ಇದನ್ನು ಏಕೆನೆ, ಬಲ್ಲವರಾದಿರಿ ಆದಿಯಿಂದಿರುವಾತನನ್ನು. ಬರೆಯುತಿಹೆನು ಯುವಜನರಿರಾ, ಇದನ್ನು ಏಕೆನೆ, ನೀವು ಜಯಿಸಿದ್ದಾಯಿತು ಆ ಕಡುಗೇಡಿಗನನ್ನು.


ಅವರಲ್ಲಿ ನೆಲೆಸಿರುವ ಪ್ರತಿಯೊಬ್ಬನೂ ಪಾಪಮಾಡನು. ಪಾಪಮಾಡುವವನು ಅವರನ್ನು ಕಂಡವನೂ ಅಲ್ಲ, ಅರಿತವನೂ ಅಲ್ಲ.


ಪ್ರಿಯರೇ, ನಾವು ಒಬ್ಬರನ್ನೊಬ್ಬರು ಪ್ರೀತಿಸೋಣ. ಪ್ರೀತಿ ದೇವರಿಂದ ಉಗಮವಾದುದು. ಪ್ರೀತಿಸುವವನು ದೇವರ ಮಗನು. ಅವನು ದೇವರನ್ನು ಬಲ್ಲವನು.


ದೇವರನ್ನು ಪ್ರೀತಿಸಿ, ಅವರ ಆಜ್ಞೆಗಳನ್ನು ಪಾಲಿಸುವುದರಿಂದ ನಾವು ದೇವರ ಮಕ್ಕಳನ್ನು ಪ್ರೀತಿಸುತ್ತೇವೆಂಬುದು ನಿಶ್ಚಯ ಆಗುತ್ತದೆ.


ಇದರಿಂದಾಗಿ ಘಟಸರ್ಪಕ್ಕೆ ಆ ಮಹಿಳೆಯ ಮೇಲೆ ತೀವ್ರತರ ರೋಷವುಂಟಾಯಿತು. ಆಕೆಯ ಇನ್ನುಳಿದ ಸಂತತಿಯವರ ಮೇಲೆ, ಅಂದರೆ ದೇವರ ಆಜ್ಞೆಗಳನ್ನು ಅನುಸರಿಸಿ ನಡೆಯುವವರ ಮೇಲೆ ಹಾಗೂ ಯೇಸುಸ್ವಾಮಿಯ ಪರವಾಗಿ ಸಾಕ್ಷಿನೀಡುವವರ ಮೇಲೆ, ಯುದ್ಧಮಾಡಲು ಹೊರಟುಹೋಯಿತು.


ಆದ್ದರಿಂದ ದೇವರ ಆಜ್ಞೆಗಳನ್ನು ಕೈಗೊಂಡು ಯೇಸುಸ್ವಾಮಿಯಲ್ಲಿ ವಿಶ್ವಾಸವಿಟ್ಟು ನಡೆಯುವ ದೇವಜನರಲ್ಲಿ ಸಹನೆ, ಸಹಿಷ್ಣುತೆ ಇರಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು