Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಯೋಹಾನನು 2:4 - ಕನ್ನಡ ಸತ್ಯವೇದವು C.L. Bible (BSI)

4 ದೇವರನ್ನು ಬಲ್ಲೆನೆಂದು ಹೇಳಿಕೊಳ್ಳುತ್ತಾ ಅವರ ಆಜ್ಞೆಗಳನ್ನು ಕೈಗೊಳ್ಳದೆ ಇರುವವನು ಸುಳ್ಳುಗಾರ ಮತ್ತು ಸತ್ಯವೆಂಬುದೇ ಅವನಲ್ಲಿ ಇರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಒಬ್ಬನು, “ನಾನು ಆತನನ್ನು ಬಲ್ಲೆನು” ಎಂದು ಹೇಳಿ ಆತನ ಆಜ್ಞೆಗಳಂತೆ ನಡೆಯದಿದ್ದರೆ ಅವನು ಸುಳ್ಳುಗಾರನಾಗಿದ್ದಾನೆ. ಸತ್ಯವೆಂಬುದು ಅವನಲ್ಲಿ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಆತನನ್ನು ಬಲ್ಲೆನೆಂದು ಹೇಳಿ ಆತನ ಆಜ್ಞೆಗಳನ್ನು ಕೈಕೊಳ್ಳದೆ ನಡೆಯುವವನು ಸುಳ್ಳುಗಾರನಾಗಿದ್ದಾನೆ; ಸತ್ಯವೆಂಬದು ಅವನಲ್ಲಿ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 “ದೇವರನ್ನು ನಾನು ಬಲ್ಲೆನು” ಎಂದು ಹೇಳುವವನು ದೇವರ ಆಜ್ಞೆಗಳಿಗೆ ವಿಧೇಯನಾಗಿರದಿದ್ದರೆ, ಅವನು ಸುಳ್ಳುಗಾರನಾಗಿದ್ದಾನೆ. ಅವನಲ್ಲಿ ಸತ್ಯವಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಒಬ್ಬನು, “ನಾನು ಅವರನ್ನು ಬಲ್ಲೆನು,” ಎಂದು ಹೇಳಿ ಅವರ ಆಜ್ಞೆಗಳನ್ನು ಕೈಗೊಳ್ಳದಿದ್ದರೆ ಅವನು ಸುಳ್ಳುಗಾರನಾಗಿದ್ದಾನೆ. ಸತ್ಯವು ಅವನಲ್ಲಿ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

4 ಜೆ ಕೊನ್ “ಮಿಯಾ ದೆವಾಕ್ ವಳಕ್ತಾ” ಮನುನ್ಗೆತ್ ತೆಚ್ಯಾ ಹುಕುಮಾಕ್ನಿ ಖಾಲ್ತಿ ಹೊವ್ನ್ ಚಲಿನಾ ತೊ ಝುಟೊ, ಖರೆ ಮನ್ತಲೆ ತೆಂಚ್ಯಾಕ್ಡೆ ನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಯೋಹಾನನು 2:4
13 ತಿಳಿವುಗಳ ಹೋಲಿಕೆ  

ನಾವು ಕತ್ತಲಲ್ಲಿ ಬಾಳುತ್ತಾ ದೇವರೊಡನೆ ಅನ್ಯೋನ್ಯವಾಗಿದ್ದೇವೆಂದು ಹೇಳಿದರೆ ನಾವು ಸುಳ್ಳುಗಾರರು, ಸತ್ಯಕ್ಕನುಸಾರ ಬಾಳದವರು.


ತಾವು ದೇವರನ್ನು ಬಲ್ಲವರೆಂದು ಹೇಳಿಕೊಳ್ಳುತ್ತಾರೆ. ಆದರೆ ಅವರ ನಡತೆ ತದ್ವಿರುದ್ಧವಾಗಿರುತ್ತದೆ. ಇಂಥವರು ಅವಿಧೇಯರೂ ಅಸಹ್ಯರೂ ಆಗಿರುವುದರಿಂದ ಯಾವುದೇ ಸತ್ಕಾರ್ಯವನ್ನು ಮಾಡಲು ಅಯೋಗ್ಯರಾಗಿದ್ದಾರೆ.


ನಮ್ಮಲ್ಲಿ ಪಾಪವಿಲ್ಲವೆಂದು ನಾವು ಹೇಳಿಕೊಂಡರೆ, ನಮ್ಮನ್ನು ನಾವೇ ವಂಚಿಸಿಕೊಳ್ಳುತ್ತೇವೆ ಮತ್ತು ಸತ್ಯವೆಂಬುದೇ ನಮ್ಮಲ್ಲಿ ಇರುವುದಿಲ್ಲ.


ತಾನು ದೇವರನ್ನು ಪ್ರೀತಿಸುತ್ತೇನೆಂದು ಒಬ್ಬನು ಹೇಳುತ್ತಾ ತನ್ನ ಸಹೋದರನನ್ನು ದ್ವೇಷಿಸಿದರೆ, ಅವನು ಸುಳ್ಳುಗಾರನಾಗುತ್ತಾನೆ. ತಾನು ಕಂಡಿರುವ ತನ್ನ ಸಹೋದರನನ್ನು ಪ್ರೀತಿಸದವನು ತಾನು ಕಾಣದಿರುವ ದೇವರನ್ನು ಹೇಗೆ ಪ್ರೀತಿಸಿಯಾನು?


“ನಾನು ಬೆಳಕಿನಲ್ಲಿದ್ದೇನೆ” ಎಂದು ಹೇಳಿಕೊಂಡು ತನ್ನ ಸಹೋದರನನ್ನು ದ್ವೇಷಿಸುವವನು ಇನ್ನೂ ಕತ್ತಲಲ್ಲೇ ಇದ್ದಾನೆ.


ನಾವು ಪಾಪಮಾಡಲಿಲ್ಲವೆಂದು ಹೇಳಿದರೆ ದೇವರನ್ನು ಸುಳ್ಳುಗಾರರನ್ನಾಗಿಸುತ್ತೇವೆ ಮತ್ತು ಅವರ ವಾಣಿ ನಮ್ಮಲ್ಲಿ ಇರುವುದಿಲ್ಲ.


ಸೈತಾನನೇ ನಿಮಗೆ ತಂದೆ; ಆ ನಿಮ್ಮ ತಂದೆ ಮಾಡಬಯಸುವುದನ್ನು ನೀವು ಮಾಡಬಯಸುತ್ತೀರಿ; ಮೊತ್ತ ಮೊದಲಿನಿಂದಲೂ ಅವನು ಕೊಲೆಪಾತಕ. ಸತ್ಯವೆಂಬುದೇ ಅವನಲ್ಲಿ ಇಲ್ಲದ ಕಾರಣ ಅವನು ಸತ್ಯಪರನಲ್ಲ. ಸುಳ್ಳಾಡುವಾಗ ಅವನು ತನಗೆ ಸಹಜವಾದುದನ್ನೇ ಆಡುತ್ತಾನೆ. ಅವನು ಸುಳ್ಳುಗಾರ. ಸುಳ್ಳಿನ ಮೂಲಪುರುಷನೇ ಅವನು.


ಇತ್ತೀಚೆಗೆ ಅವಿಧೇಯರು, ಜೊಳ್ಳು ಮಾತಿನವರು ಹಾಗೂ ವಂಚಕಬೋಧಕರು ತಲೆ ಎತ್ತಿದ್ದಾರೆ. ಅವರಲ್ಲಿ ಕ್ರೈಸ್ತರಾಗಿರುವ ಯೆಹೂದ್ಯರು ಸಾಕಷ್ಟು ಮಂದಿ ಇದ್ದಾರೆ.


ನಾವು ದೇವರ ಆಜ್ಞೆಗಳನ್ನು ಕೈಗೊಂಡು ನಡೆದರೆ ಅದರಿಂದಲೇ ಅವರ ಅರಿವು ನಮಗಿದೆ ಎಂದು ಖಚಿತವಾಗುತ್ತದೆ.


ಅವರಲ್ಲಿ ನೆಲೆಸಿರುವ ಪ್ರತಿಯೊಬ್ಬನೂ ಪಾಪಮಾಡನು. ಪಾಪಮಾಡುವವನು ಅವರನ್ನು ಕಂಡವನೂ ಅಲ್ಲ, ಅರಿತವನೂ ಅಲ್ಲ.


ಪ್ರಿಯರೇ, ನಾವು ಒಬ್ಬರನ್ನೊಬ್ಬರು ಪ್ರೀತಿಸೋಣ. ಪ್ರೀತಿ ದೇವರಿಂದ ಉಗಮವಾದುದು. ಪ್ರೀತಿಸುವವನು ದೇವರ ಮಗನು. ಅವನು ದೇವರನ್ನು ಬಲ್ಲವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು