Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಯೋಹಾನನು 2:5 - ಕನ್ನಡ ಸತ್ಯವೇದವು C.L. Bible (BSI)

5 ಆದರೆ ದೇವರ ವಾಕ್ಯವನ್ನು ಕೈಗೊಂಡು ನಡೆಯುವವನಲ್ಲಿ ಪ್ರೀತಿ ನಿಜಕ್ಕೂ ಸಿದ್ಧಿಗೆ ಬಂದಿರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಯಾರಾದರೂ ಆತನ ವಾಕ್ಯವನ್ನು ಅನುಸರಿಸಿ ನಡೆದರೆ ಅವನಲ್ಲಿ ನಿಜವಾಗಿ ದೇವರ ಮೇಲಣ ಪ್ರೀತಿಯು ಪರಿಪೂರ್ಣವಾಗಿದೆ. ಇಂತಹ ಕಾರ್ಯದಿಂದ ನಾವು ಆತನಲ್ಲಿ ಇದ್ದೇವೆಂಬುದನ್ನು ತಿಳಿದುಕೊಳ್ಳುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಯಾವನಾದರೂ ಆತನ ವಾಕ್ಯವನ್ನು ಕೈಕೊಂಡು ನಡೆದರೆ ಅವನಲ್ಲಿ ನಿಜವಾಗಿ ದೇವರ ಮೇಲಣ ಪ್ರೀತಿಯು ಪರಿಪೂರ್ಣವಾಗಿದೆ. ಇದರಿಂದಲೇ ಆತನಲ್ಲಿದ್ದೇವೆಂಬದನ್ನು ತಿಳುಕೊಳ್ಳುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಆದರೆ ಯಾವನಾದರೂ ದೇವರ ವಾಕ್ಯಕ್ಕೆ ವಿಧೇಯನಾಗಿದ್ದರೆ, ದೇವರ ಮೇಲೆ ಅವನಿಗಿರುವ ಪ್ರೀತಿಯು ಪರಿಪೂರ್ಣವಾಗಿದೆ. ನಾವು ದೇವರನ್ನು ಅನುಸರಿಸುತ್ತಿದ್ದೇವೆ ಎಂಬುದನ್ನು ಇದರಿಂದಲೇ ತಿಳಿದುಕೊಳ್ಳುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಯಾವನಾದರೂ ದೇವರ ವಾಕ್ಯವನ್ನು ಕೈಕೊಂಡು ನಡೆದರೆ ಅವನಲ್ಲಿ ನಿಜವಾಗಿ ದೇವರ ಪ್ರೀತಿಯು ಪರಿಪೂರ್ಣವಾಗಿದೆ. ಇದರಿಂದಲೇ ನಾವು ದೇವರಲ್ಲಿದ್ದೇವೆಂಬುದನ್ನು ತಿಳಿದುಕೊಳ್ಳುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

5 ಖರೆ ಜೆ ತರ್ ದೆವಾಚ್ಯಾ ಗೊಸ್ಟಿಯಾಕ್ನಿ ಖಾಲ್ತಿ ಹೊವ್ನ್ ಚಲ್ಲ್ಯಾರ್ ದೆವಾಚ್ಯಾ ವರ್ತಿ ಹೊತ್ತೊ ತೆಚೊ ಪ್ರೆಮ್ ಪರಿಪುರ್ನ್ ಹೊತಾ ಅನಿ ಹೆಚ್ಯಾ ವೈನಾ ಅಮಿ ದೆವಾಚ್ಯಾ ವಾಂಗ್ಡಾ ಎಕ್ವಟ್ಟಾನ್ ಹಾಂವ್ ಮನ್ತಲೆ ಕಳುನ್ ಯೆತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಯೋಹಾನನು 2:5
32 ತಿಳಿವುಗಳ ಹೋಲಿಕೆ  

ಆಗ ಯೇಸು, “ನನ್ನನ್ನು ಪ್ರೀತಿಸುವವನು ನನ್ನ ಮಾತನ್ನು ಕೈಗೊಂಡು ನಡೆಯುವನು. ಅವನನ್ನು ನನ್ನ ಪಿತನೂ ಪ್ರೀತಿಸುವರು ಮತ್ತು ನಾವಿಬ್ಬರೂ ಅವನ ಬಳಿ ಬಂದು ಅವನಲ್ಲಿ ನೆಲೆಸುವೆವು.


ನನ್ನ ಆಜ್ಞೆಗಳನ್ನು ಅಂಗೀಕರಿಸಿ ಅವುಗಳ ಪ್ರಕಾರ ನಡೆಯುವವನೇ ನನ್ನನ್ನು ಪ್ರೀತಿಸುವವನು. ನನ್ನನ್ನು ಪ್ರೀತಿಸುವವನು ನನ್ನ ಪಿತನಿಗೂ ಪ್ರಿಯನಾಗಿರುವನು. ನಾನೂ ಅವನನ್ನು ಪ್ರೀತಿಸಿ ನನ್ನನ್ನೇ ಅವನಿಗೆ ಸಾಕ್ಷಾತ್ಕರಿಸಿಕೊಡುವೆನು.”


ಅದಕ್ಕೆ ಯೇಸು, “ಅದಕ್ಕಿಂತಲೂ ದೇವರ ವಾಕ್ಯವನ್ನು ಕೇಳಿ, ಅದನ್ನು ಅನುಸರಿಸುವವನು ಹೆಚ್ಚು ಭಾಗ್ಯವಂತನು!” ಎಂದರು.


ದೇವರ ಆಜ್ಞೆಯನ್ನು ಪಾಲಿಸುವವನು ಅವರಲ್ಲಿ ನೆಲೆಸಿರುತ್ತಾನೆ. ದೇವರೂ ಅವನಲ್ಲಿ ನೆಲೆಸಿರುತ್ತಾರೆ. ದೇವರು ನಮ್ಮಲ್ಲಿ ನೆಲೆಸಿದ್ದಾರೆಂದು ಅವರು ದಯಪಾಲಿಸುವ ಪವಿತ್ರಾತ್ಮರಿಂದಲೇ ತಿಳಿದುಕೊಳ್ಳುತ್ತೇವೆ.


ಆತನ ಕಟ್ಟಳೆಗಳನ್ನು ಕೈಗೊಳ್ಳುವವರು ಧನ್ಯರು I ಮನಃಪೂರ್ವಕವಾಗಿ ಆತನನು ಅರಸುವವರು ಧನ್ಯರು II


ಆದ್ದರಿಂದ ದೇವರ ಆಜ್ಞೆಗಳನ್ನು ಕೈಗೊಂಡು ಯೇಸುಸ್ವಾಮಿಯಲ್ಲಿ ವಿಶ್ವಾಸವಿಟ್ಟು ನಡೆಯುವ ದೇವಜನರಲ್ಲಿ ಸಹನೆ, ಸಹಿಷ್ಣುತೆ ಇರಬೇಕು.


ದೇವರನ್ನು ಪ್ರೀತಿಸಿ, ಅವರ ಆಜ್ಞೆಗಳನ್ನು ಪಾಲಿಸುವುದರಿಂದ ನಾವು ದೇವರ ಮಕ್ಕಳನ್ನು ಪ್ರೀತಿಸುತ್ತೇವೆಂಬುದು ನಿಶ್ಚಯ ಆಗುತ್ತದೆ.


“ಹೌದು, ನಾನೇ ದ್ರಾಕ್ಷಾಬಳ್ಳಿ; ನೀವೇ ಅದರ ಕವಲುಬಳ್ಳಿಗಳು. ಒಬ್ಬನು ನನ್ನಲ್ಲಿಯೂ ನಾನು ಅವನಲ್ಲಿಯೂ ನೆಲೆಗೊಂಡಿದ್ದರೆ ಅಂಥವನು ಸಮೃದ್ಧಿಯಾಗಿ ಫಲಕೊಡುವನು. ಏಕೆಂದರೆ, ನನ್ನಿಂದ ಬೇರ್ಪಟ್ಟು ನಿಮ್ಮಿಂದ ಏನೂ ಮಾಡಲಾಗದು.


ನನ್ನ ಆತ್ಮವನ್ನು ನಿಮ್ಮಲ್ಲಿ ನೆಲೆಸಿರುವಂತೆ ಅನುಗ್ರಹಿಸಿ, ನೀವು ನನ್ನ ನಿಯಮಗಳನ್ನು ಅನುಸರಿಸುವ ಹಾಗೆ ಮಾಡುವೆನು. ನೀವು ನನ್ನ ವಿಧಿಗಳನ್ನು ಕೈಗೊಂಡು ಆಚರಿಸುವಿರಿ.


ಪ್ರೀತಿ ಇರುವಲ್ಲಿ ಭೀತಿ ಇರುವುದಿಲ್ಲ. ಪೂರ್ಣ ಪ್ರೀತಿ ಭೀತಿಯನ್ನು ಹೊರದೂಡುತ್ತದೆ. ಭೀತಿ ಇರುವಲ್ಲಿ ಯಾತನೆ ಇರುತ್ತದೆ. ಭೀತಿಯಿಂದಿರುವವನು ಪ್ರೀತಿಯಲ್ಲಿ ಸಿದ್ಧಿಗೆ ಬಂದವನಲ್ಲ.


ಉದ್ಧರಿಸೆನ್ನನು, ನಿನಗೆ ಮೊರೆಯಿಡುವೆ I ನಿನ್ನ ಕಟ್ಟಳೆಗಳನು ಕೈಗೊಳ್ಳುವೆ II


ಯಾರಾದರೂ ಯೇಸುಕ್ರಿಸ್ತರೊಡನೆ ಒಂದಾದರೆ ಅವನು ನೂತನ ಸೃಷ್ಟಿಯಾಗುತ್ತಾನೆ. ಹಳೆಯದೆಲ್ಲಾ ಅಳಿದುಹೋಗುತ್ತದೆ. ಹೊಸದಿದೋ, ಜನ್ಮತಳೆದಿದೆ.


ಇದರಿಂದಾಗಿ ಘಟಸರ್ಪಕ್ಕೆ ಆ ಮಹಿಳೆಯ ಮೇಲೆ ತೀವ್ರತರ ರೋಷವುಂಟಾಯಿತು. ಆಕೆಯ ಇನ್ನುಳಿದ ಸಂತತಿಯವರ ಮೇಲೆ, ಅಂದರೆ ದೇವರ ಆಜ್ಞೆಗಳನ್ನು ಅನುಸರಿಸಿ ನಡೆಯುವವರ ಮೇಲೆ ಹಾಗೂ ಯೇಸುಸ್ವಾಮಿಯ ಪರವಾಗಿ ಸಾಕ್ಷಿನೀಡುವವರ ಮೇಲೆ, ಯುದ್ಧಮಾಡಲು ಹೊರಟುಹೋಯಿತು.


ದೇವರ ಪುತ್ರ ಆಗಮಿಸಿ, ಸತ್ಯಸ್ವರೂಪರಾದ ದೇವರನ್ನು ನಾವು ತಿಳಿದುಕೊಳ್ಳುವಂತೆ ನಮಗೆ ಅರಿವನ್ನು ನೀಡಿದ್ದಾರೆ. ಇದನ್ನು ನಾವು ಬಲ್ಲೆವು. ದೇವರ ಪುತ್ರರಾದ ಯೇಸುಕ್ರಿಸ್ತರಲ್ಲಿ ನೆಲೆಸಿರುವ ನಾವು ಸತ್ಯಸ್ವರೂಪಿಯಲ್ಲೇ ನೆಲೆಸಿದ್ದೇವೆ. ನಿಜವಾದ ದೇವರೂ ನಿತ್ಯಜೀವವೂ ಇವರೇ.


ಅವರ ಕೃಪೆಯಿಂದಲೇ ನೀವು ಕ್ರಿಸ್ತಯೇಸುವಿನಲ್ಲಿ ಬಾಳುತ್ತಾ ಇದ್ದೀರಿ; ಅವರ ಕೃಪೆಯಿಂದಲೇ ಕ್ರಿಸ್ತಯೇಸು ನಮಗೆ ಜ್ಞಾನ ಮೂಲವಾಗಿದ್ದಾರೆ. ದೇವರಿಂದ ನಮಗೆ ದೊರಕುವ ಸತ್ಸಂಬಂಧ, ಪಾವನತೆ ಹಾಗೂ ವಿಮೋಚನೆ ಆ ಕ್ರಿಸ್ತಯೇಸುವಿನಿಂದಲೇ.


ಆದುದರಿಂದ ಈಗ ಕ್ರಿಸ್ತಯೇಸುವಿನಲ್ಲಿ ಇರುವವರಿಗೆ ದಂಡನಾತೀರ್ಪು ಇರುವುದಿಲ್ಲ.


ಆತನ ಸತ್ಕ್ರಿಯೆಗಳಿಂದಲೇ ವಿಶ್ವಾಸವು ಸಿದ್ಧಿಗೆ ಬಂದಿತು ಎಂಬುದನ್ನು ನಾವು ನೋಡುತ್ತೇವೆ.


ಪಾಪವನ್ನೇ ಅರಿಯದ ಕ್ರಿಸ್ತಯೇಸುವನ್ನು ದೇವರು ನಮಗೋಸ್ಕರ ಪಾಪಸ್ವರೂಪಿಯನ್ನಾಗಿಸಿದರು. ಕ್ರಿಸ್ತಯೇಸುವಿನಲ್ಲಿ ನಾವು ದೇವರೊಡನೆ ಸತ್ಸಂಬಂಧವನ್ನು ಪಡೆಯಲೆಂದೇ ಹೀಗೆ ಮಾಡಿದರು.


ನನ್ನ ಮಾಂಸವನ್ನು ತಿಂದು, ನನ್ನ ರಕ್ತವನ್ನು ಕುಡಿಯುವವನು ನನ್ನಲ್ಲಿ ನೆಲೆಸಿರುತ್ತಾನೆ. ನಾನು ಅವನಲ್ಲಿ ನೆಲೆಸಿರುತ್ತೇನೆ.


ರಾಜಾಜ್ಞೆಯನ್ನು ಪಾಲಿಸುವವನಿಗೆ ಕೇಡು ಸಂಭವಿಸದು. ಅದನ್ನು ಯಾವಾಗ, ಹೇಗೆ ಪಾಲಿಸಬೇಕೆಂದು ಜ್ಞಾನಿಗೆ ಮನದಟ್ಟಾಗಿರುತ್ತದೆ.


ನ್ಯಾಯದಂತೆ ನಡೆಯುವವರು ಧನ್ಯರು I ಅವಿರತವಾಗಿ ನೀತಿವಂತರು ಧನ್ಯರು II


ಆದ್ದರಿಂದ ಮಕ್ಕಳೇ, ಕಿವಿಗೊಡಿ ನನಗೀಗ ನನ್ನ ಮಾರ್ಗಗಳನ್ನು ಅನುಸರಿಸುವವರು ಧನ್ಯರೆಂಬುದು ನಿಜ.


ನಿನ್ನ ನೇಮಗಳನು ಪ್ರಭೂ, ನೀನೆ ವ್ಯಕ್ತಪಡಿಸಿರುವೆಯಯ್ಯಾ I ಜಾಗರೂಕತೆಯಿಂದ ಪಾಲಿಸಬೇಕೆಂದು ನೀ ವಿಧಿಸಿರುವೆಯಯ್ಯಾ II


ಜ್ಞಾನಿಯಾದ ಮಗ ಧರ್ಮಶಾಸ್ತ್ರವನ್ನು ಕೈಗೊಳ್ಳುವನು; ಹೊಟ್ಟೆಬಾಕರ ಗೆಳೆಯ ತಂದೆಗೆ ಅಪಕೀರ್ತಿ ತರುವನು.


ತನ್ನ ವಿಧಿಗಳಂತೆ ನಡೆಯಲೆಂದೇ I ತನ್ನ ಶಾಸ್ತ್ರವನು ಅನುಸರಿಸಲೆಂದೇ I ಈ ಪರಿ ಮಾಡಿದಾ ಸ್ವಾಮಿಗೆ ವಂದನೆ II


ಇದರಿಂದಾಗಿ, ಪ್ರೀತಿ ನಮ್ಮಲ್ಲಿ ಸಿದ್ಧಿಗೆ ಬಂದಿರುತ್ತದೆ; ನ್ಯಾಯತೀರ್ಪಿನ ದಿನದಂದು ನಾವು ಭರವಸೆಯಿಂದಿರುತ್ತೇವೆ. ಈ ಲೋಕದಲ್ಲಿ ನಮ್ಮ ಬಾಳು ಕ್ರಿಸ್ತಯೇಸುವಿನ ಬಾಳಿನಂತೆ ಇರುವುದರಿಂದಲೇ ಆ ಭರವಸೆ ನಮಗೆ ಇರುತ್ತದೆ.


ದೇವರ ಆಜ್ಞೆಗಳನ್ನು ಅನುಸರಿಸಿ ನಡೆಯುವುದೇ ಪ್ರೀತಿ. ಪ್ರೀತಿಮಾರ್ಗದಲ್ಲಿ ನಡೆಯಬೇಕೆಂಬುದೇ ನೀವು ಮೊತ್ತಮೊದಲಿನಿಂದಲೂ ಕೇಳಿರುವ ಆಜ್ಞೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು