Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಯೋಹಾನನು 2:6 - ಕನ್ನಡ ಸತ್ಯವೇದವು C.L. Bible (BSI)

6 ತಾನು ದೇವರಲ್ಲಿ ನೆಲೆಸಿದ್ದೇನೆಂದು ಹೇಳುವವನು ಕ್ರಿಸ್ತಯೇಸು ಜೀವಿಸಿದಂತೆಯೇ ಜೀವಿಸಬೇಕು. ಇದರಿಂದಲೇ ನಾವು ದೇವರಲ್ಲಿ ನೆಲೆಗೊಂಡಿದ್ದೇವೆಂದು ತಿಳಿದುಕೊಳ್ಳುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಆತನಲ್ಲಿ ನೆಲೆಗೊಂಡವನಾಗಿದ್ದೇನೆಂದು ಹೇಳುವವನು ಕ್ರಿಸ್ತನು ನಡೆದಂತೆಯೇ ತಾನೂ ನಡೆಯುವುದಕ್ಕೆ ಬದ್ಧನಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಆತನಲ್ಲಿ ನೆಲೆಗೊಂಡವನಾಗಿದ್ದೇನೆಂದು ಹೇಳುವವನು ಕ್ರಿಸ್ತನು ನಡೆದಂತೆಯೇ ತಾನೂ ನಡೆಯುವದಕ್ಕೆ ಬದ್ಧನಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ದೇವರಲ್ಲಿ ನೆಲೆಗೊಂಡಿದ್ದೇನೆ ಎಂದು ಹೇಳುವವನು, ಯೇಸು ಜೀವಿಸಿದಂತೆಯೇ ಜೀವಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ದೇವರಲ್ಲಿ ನೆಲೆಗೊಂಡವನಾಗಿದ್ದೇನೆಂದು ಹೇಳುವವನು ಯೇಸು ಜೀವಿಸಿದಂತೆಯೇ ತಾನೂ ಜೀವಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

6 ಮಿಯಾ ದೆವಾಚ್ಯಾ ವಾಂಗ್ಡಾ ಎಕ್ ಹೊವ್ನ್ ಹಾಂವ್ ಮನ್ತಲ್ಯಾನ್, ಜೆಜು ಕ್ರಿಸ್ತಾನ್ ಜಿವನ್ ಕರಲ್ಲ್ಯಾ ಸಾರ್ಕೆಚ್ ಜಿವನ್ ಕರುಚೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಯೋಹಾನನು 2:6
14 ತಿಳಿವುಗಳ ಹೋಲಿಕೆ  

ನೀವು ಹೀಗೆ ಜೀವಿಸಬೇಕೆಂದೇ ದೇವರು ನಿಮ್ಮನ್ನು ಕರೆದಿದ್ದಾರೆ. ಕ್ರಿಸ್ತಯೇಸು ಸಹ ನಿಮಗಾಗಿ ಹಿಂಸೆಬಾಧೆಯನ್ನು ಅನುಭವಿಸಿದರು; ತಮ್ಮ ಹೆಜ್ಜೆಯ ಜಾಡನ್ನೇ ನೀವು ಅನುಸರಿಸುವಂತೆ ನಿಮಗೊಂದು ಆದರ್ಶವನ್ನು ಬಿಟ್ಟುಹೋದರು.


ನಾನು ನಿಮಗೆ ಒಂದು ಆದರ್ಶವನ್ನು ಕೊಟ್ಟಿದ್ದೇನೆ. ನಾನು ನಿಮಗೆ ಮಾಡಿದಂತೆಯೇ ನೀವೂ ಇತರರಿಗೆ ಮಾಡಿರಿ.


ನಾನು ಕ್ರಿಸ್ತಯೇಸುವನ್ನು ಅನುಸರಿಸುವಂತೆ, ನೀವೂ ನನ್ನನ್ನೂ ಅನುಸರಿಸಿರಿ.


ಅವರಲ್ಲಿ ನೆಲೆಸಿರುವ ಪ್ರತಿಯೊಬ್ಬನೂ ಪಾಪಮಾಡನು. ಪಾಪಮಾಡುವವನು ಅವರನ್ನು ಕಂಡವನೂ ಅಲ್ಲ, ಅರಿತವನೂ ಅಲ್ಲ.


ಕ್ರಿಸ್ತಯೇಸು ನಮ್ಮನ್ನು ಪ್ರೀತಿಸಿ ನಮಗೋಸ್ಕರ ತಮ್ಮನ್ನೇ ಸಮರ್ಪಿಸಿದರು. ದೇವರಿಗೆ ಸುಗಂಧ ಕಾಣಿಕೆಯನ್ನಾಗಿಯೂ ಬಲಿಯನ್ನಾಗಿಯೂ ಅರ್ಪಿಸಿದರು. ಅಂತೆಯೇ, ನೀವೂ ಪ್ರೀತಿಯಿಂದ ಬಾಳಿರಿ.


ನಾನು ವಿನಯಶೀಲನು, ದೀನಹೃದಯನು; ನನ್ನ ನೊಗಕ್ಕೆ ಹೆಗಲುಕೊಟ್ಟು ನನ್ನಿಂದ ಕಲಿತುಕೊಳ್ಳಿ. ಆಗ ನಿಮಗೆ ವಿಶ್ರಾಂತಿ ಸಿಗುವುದು.


ದೇವರನ್ನು ಬಲ್ಲೆನೆಂದು ಹೇಳಿಕೊಳ್ಳುತ್ತಾ ಅವರ ಆಜ್ಞೆಗಳನ್ನು ಕೈಗೊಳ್ಳದೆ ಇರುವವನು ಸುಳ್ಳುಗಾರ ಮತ್ತು ಸತ್ಯವೆಂಬುದೇ ಅವನಲ್ಲಿ ಇರುವುದಿಲ್ಲ.


ಹೌದು ಪ್ರಿಯ ಮಕ್ಕಳೇ, ಕ್ರಿಸ್ತಯೇಸು ಪ್ರತ್ಯಕ್ಷರಾಗುವಾಗ, ಅವರ ಪುನರಾಗಮನದ ಪ್ರಯುಕ್ತ ಅವರ ಮುಂದೆ ನಾವು ನಾಚಿಕೆಪಡದೆ ಧೈರ್ಯದಿಂದಿರುವಂತೆ ಅವರಲ್ಲಿ ನೆಲೆಗೊಂಡಿರೋಣ.


ನಡೆವುದು ಪ್ರಭುವಿನ ಮುಂದೆ ನೀತಿ I ಮಾಡುವುದು ಆತನ ಹೆಜ್ಜೆಗೆ ಹಾದಿ II


ನನ್ನ ಪಿತನು ಕೊಟ್ಟ ಆಜ್ಞೆಗಳನ್ನು ಪಾಲಿಸಿ ಅವರ ಪ್ರೀತಿಯಲ್ಲಿ ನಾನು ನೆಲೆಗೊಂಡಿರುವ ಹಾಗೆ ನೀವು ಕೂಡ ನಾನು ಕೊಟ್ಟ ಆಜ್ಞೆಗಳನ್ನು ಪಾಲಿಸಿದರೆ ನನ್ನ ಪ್ರೀತಿಯಲ್ಲಿ ನೆಲೆಗೊಂಡಿರುವಿರಿ.


ದೇವರ ಆಜ್ಞೆಯನ್ನು ಪಾಲಿಸುವವನು ಅವರಲ್ಲಿ ನೆಲೆಸಿರುತ್ತಾನೆ. ದೇವರೂ ಅವನಲ್ಲಿ ನೆಲೆಸಿರುತ್ತಾರೆ. ದೇವರು ನಮ್ಮಲ್ಲಿ ನೆಲೆಸಿದ್ದಾರೆಂದು ಅವರು ದಯಪಾಲಿಸುವ ಪವಿತ್ರಾತ್ಮರಿಂದಲೇ ತಿಳಿದುಕೊಳ್ಳುತ್ತೇವೆ.


ಇದರಿಂದಾಗಿ, ಪ್ರೀತಿ ನಮ್ಮಲ್ಲಿ ಸಿದ್ಧಿಗೆ ಬಂದಿರುತ್ತದೆ; ನ್ಯಾಯತೀರ್ಪಿನ ದಿನದಂದು ನಾವು ಭರವಸೆಯಿಂದಿರುತ್ತೇವೆ. ಈ ಲೋಕದಲ್ಲಿ ನಮ್ಮ ಬಾಳು ಕ್ರಿಸ್ತಯೇಸುವಿನ ಬಾಳಿನಂತೆ ಇರುವುದರಿಂದಲೇ ಆ ಭರವಸೆ ನಮಗೆ ಇರುತ್ತದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು