Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಯೋಹಾನನು 2:7 - ಕನ್ನಡ ಸತ್ಯವೇದವು C.L. Bible (BSI)

7 ಪ್ರಿಯರೇ, ನಾನು ನಿಮಗೆ ಬರೆಯುತ್ತಿರುವುದು ಹೊಸ ಆಜ್ಞೆಯೇನೂ ಅಲ್ಲ, ಮೊದಲಿನಿಂದಲೂ ನೀವು ಪಡೆದಿರುವ ಹಳೆಯ ಆಜ್ಞೆಯೇ. ಈ ಆಜ್ಞೆಯೇ ನೀವು ಈಗಾಗಲೇ ಕೇಳಿರುವ ಸಂದೇಶ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಪ್ರಿಯರೇ, ನಾನು ನಿಮಗೆ ಬರೆಯುವುದು ಹೊಸ ಆಜ್ಞೆಯಲ್ಲ, ಮೊದಲಿನಿಂದಲೂ ನಿಮಗಿದ್ದ ಹಳೆಯ ಆಜ್ಞೆಯಾಗಿದೆ. ಈ ಹಳೆಯ ಆಜ್ಞೆಯು ನೀವು ಕೇಳಿದ ವಾಕ್ಯವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಪ್ರಿಯರೇ, ನಾನು ನಿಮಗೆ ಬರೆಯುವದು ಹೊಸ ಅಪ್ಪಣೆಯಲ್ಲ. ಮೊದಲಿಂದಲೂ ನಿಮಗಿದ್ದ ಹಳೆಯ ಅಪ್ಪಣೆಯಾಗಿದೆ; ಈ ಹಳೆಯ ಅಪ್ಪಣೆಯು ನೀವು ಕೇಳಿದ ವಾಕ್ಯವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ನನ್ನ ಪ್ರಿಯ ಸ್ನೇಹೀತರೇ, ನಾನು ನಿಮಗೆ ಹೊಸ ಆಜ್ಞೆಯನ್ನು ಬರೆಯುತ್ತಿಲ್ಲ. ಮೊದಲಿಂದಲೂ ಈ ಆಜ್ಞೆಯು ನಿಮಗಿತ್ತು. ನೀವು ಈಗಾಗಲೇ ಕೇಳಿರುವ ವಾಕ್ಯವೇ ಈ ಆಜ್ಞೆಯಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಪ್ರಿಯರೇ, ನಾನು ನಿಮಗೆ ಬರೆಯುವುದು ಹೊಸ ಅಪ್ಪಣೆಯಲ್ಲ, ಮೊದಲಿನಿಂದಲೂ ನಿಮಗಿದ್ದ ಹಳೆಯ ಅಪ್ಪಣೆಯಾಗಿದೆ. ಈ ಹಳೆಯ ಅಪ್ಪಣೆಯು ಮೊದಲಿನಿಂದಲೂ ನೀವು ಕೇಳಿದ ವಾಕ್ಯವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

7 ಮಾಜ್ಯಾ ಪ್ರಿತಿಚ್ಯಾ ವಾಂಗ್ಡಿಯಾನು, ಮಿಯಾ ತುಮ್ಕಾ ನವೊ ಹುಕುಮ್ ಲಿವ್ನ್ ಧಾಡಿನಾ ಹೊಲಾ, ಖರೆ ಹ್ಯೊ ಹುಕುಮ್ ಅದ್ದಿಚ್ಯಾನುಚ್ ತುಮ್ಕಾ ದಿಲ್ಲೊ ಹೊತ್ತೊ. ತುಮಿ ಆಯ್ಕಲ್ಲಿಚ್ ದೆವಾಚಿ ಗೊಸ್ಟ್ ತಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಯೋಹಾನನು 2:7
22 ತಿಳಿವುಗಳ ಹೋಲಿಕೆ  

ನಿನ್ನ ಸ್ವಜನರಲ್ಲಿ ಯಾರಿಗೂ ಕೇಡಿಗೆ ಕೇಡು ಮಾಡಬೇಡ, ಅವರಿಗೆ ವಿರುದ್ಧ ಮತ್ಸರ ಇಟ್ಟುಕೊಳ್ಳಬೇಡ; ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸು. ನಾನು ಸರ್ವೇಶ್ವರ.


ನಾವು ಒಬ್ಬರನ್ನೊಬ್ಬರು ಪ್ರೀತಿಸಬೇಕು ಎಂಬುದೇ ಮೊತ್ತಮೊದಲಿನಿಂದಲೂ ನೀವು ಕೇಳಿದ ಸಂದೇಶ.


ನಾವು ದೇವರ ಪುತ್ರ ಯೇಸುಕ್ರಿಸ್ತರ ನಾಮದಲ್ಲಿ ವಿಶ್ವಾಸವಿಟ್ಟು ಅವರು ವಿಧಿಸಿದಂತೆ ಒಬ್ಬರನ್ನೊಬ್ಬರು ಪ್ರೀತಿಸಬೇಕು. ಇದೇ ದೇವರ ಆಜ್ಞೆ.


ನಿನ್ನ ಪೂರ್ಣಹೃದಯದಿಂದ, ಪೂರ್ಣಪ್ರಾಣದಿಂದ, ಪೂರ್ಣಶಕ್ತಿಯಿಂದ ನಿನ್ನ ದೇವರಾದ ಸರ್ವೇಶ್ವರನನ್ನು ಪ್ರೀತಿಸು.


ಅವರು ನಿಮಗೆ ಸ್ವಂತನಾಡಿನವರಂತೆಯೇ ಇರಬೇಕು. ಅವರನ್ನು ನಿಮ್ಮಂತೆಯೇ ಪ್ರೀತಿಸಬೇಕು. ಈಜಿಪ್ಟಿನಲ್ಲಿದ್ದಾಗ ನೀವು ಕೂಡ ಅನ್ಯರಾಗಿದ್ದಿರಲ್ಲವೆ? ನಾನು ನಿಮ್ಮ ದೇವರಾದ ಸರ್ವೇಶ್ವರ.


ಮೊದಲಿನಿಂದಲೂ ನೀವು ಯಾವ ಸಂದೇಶವನ್ನು ಕೇಳಿದ್ದೀರೋ ಅದು ನಿಮ್ಮಲ್ಲಿ ನೆಲೆಸಲಿ. ಮೊದಲಿನಿಂದಲೂ ನೀವು ಕೇಳಿದ ಸಂದೇಶ ನಿಮ್ಮಲ್ಲಿ ನೆಲೆಸಿದರೆ ಪುತ್ರನಲ್ಲಿಯೂ ಪಿತನಲ್ಲಿಯೂ ನೀವು ನೆಲೆಸುತ್ತೀರಿ.


“ ‘ಮಿತ್ರರನ್ನು ಪ್ರೀತಿಸು, ಶತ್ರುವನ್ನು ದ್ವೇಷಿಸು’ ಎಂದು ಹೇಳಿರುವುದು ನಿಮಗೆ ತಿಳಿದೇ ಇದೆ.


ಅವರು ಪೌಲನನ್ನು ಅರಿಯೊಪಾಗ ಎಂಬ ಸ್ಥಳಕ್ಕೆ ಕರೆತಂದು, “ನೀನು ಸಾರುತ್ತಿರುವ ನೂತನ ತತ್ವವನ್ನು ನಾವು ತಿಳಿದುಕೊಳ್ಳಬಹುದೇ?


ನಿಮಗೊಂದು ಹೊಸ ಆಜ್ಞೆಯನ್ನು ಕೊಡುತ್ತೇನೆ: ಒಬ್ಬರನ್ನೊಬ್ಬರು ಪ್ರೀತಿಸಿರಿ. ನಾನು ನಿಮ್ಮನ್ನು ಪ್ರಿತಿಸಿದಂತೆಯೇ ನೀವು ಸಹ ಒಬ್ಬರನ್ನೊಬ್ಬರು ಪ್ರೀತಿಸಿರಿ.


ಪ್ರಿಯರೇ, ನಾವು ಈ ರೀತಿ ಹೇಳಿದೆವಾದರೂ ನಿಮ್ಮ ಪರಿಸ್ಥಿತಿ ಉತ್ತಮವಾಗಿದೆ ಮತ್ತು ನೀವು ಜೀವೋದ್ಧಾರದ ಮಾರ್ಗದಲ್ಲಿ ಇದ್ದೀರಿ ಎಂಬ ದೃಢವಾದ ನಂಬಿಕೆ ನನಗಿದೆ.


ಪ್ರಿಯರೇ, ನಾವೀಗ ದೇವರ ಮಕ್ಕಳು. ಮುಂದೆ ನಾವು ಎಂಥವರಾಗುತ್ತೇವೆ ಎಂಬುದು ಇನ್ನೂ ವಿಷದವಾಗಿಲ್ಲ. ಆದರೆ ಕ್ರಿಸ್ತಯೇಸು ಪ್ರತ್ಯಕ್ಷವಾಗುವಾಗ ನಾವೂ ಅವರಂತೆಯೇ ಇರುತ್ತೇವೆಂದು ಬಲ್ಲೆವು. ಏಕೆಂದರೆ, ಅವರನ್ನು ನಾವು ಅವರ ಯಥಾರ್ಥರೂಪದಲ್ಲೇ ಕಾಣುತ್ತೇವೆ.


ಪ್ರಿಯರೇ, ನಮ್ಮ ಮನಸ್ಸಾಕ್ಷಿ ನಮ್ಮನ್ನು ಖಂಡಿಸದಿದ್ದರೆ, ನಾವು ದೇವರ ಮುಂದೆ ಧೈರ್ಯದಿಂದಿರಲು ಸಾಧ್ಯವಾಗುತ್ತದೆ.


ಪ್ರಿಯರೇ, “ನಾವು ಪವಿತ್ರಾತ್ಮ ಪ್ರೇರಿತರು” ಎಂದು ಹೇಳುವ ಎಲ್ಲರನ್ನೂ ನಂಬಬಾರದು. ಆ ಪ್ರೇರಣೆ ದೇವರಿಂದ ಬಂದಿದೆಯೇ ಎಂದು ಪರೀಕ್ಷಿಸಿ ನೋಡಬೇಕು. ಏಕೆಂದರೆ, ಎಷ್ಟೋ ಮಂದಿ ಕಪಟ ಪ್ರವಾದಿಗಳು ಎಲ್ಲೆಡೆಯಲ್ಲೂ ಹರಡಿದ್ದಾರೆ.


ಪ್ರಿಯರೇ, ನಾವು ಒಬ್ಬರನ್ನೊಬ್ಬರು ಪ್ರೀತಿಸೋಣ. ಪ್ರೀತಿ ದೇವರಿಂದ ಉಗಮವಾದುದು. ಪ್ರೀತಿಸುವವನು ದೇವರ ಮಗನು. ಅವನು ದೇವರನ್ನು ಬಲ್ಲವನು.


ಪ್ರಿಯರೇ, ದೇವರೇ ನಮ್ಮನ್ನು ಇಷ್ಟಾಗಿ ಪ್ರೀತಿಸಿರುವಲ್ಲಿ ನಾವು ಸಹ ಒಬ್ಬರನ್ನೊಬ್ಬರು ಪ್ರೀತಿಸಲೇಬೇಕು.


ದೇವರನ್ನು ಪ್ರೀತಿಸುವವನು ತನ್ನ ಸಹೋದರನನ್ನೂ ಪ್ರೀತಿಸಬೇಕೆಂಬುದು ಕ್ರಿಸ್ತಯೇಸು ನಮಗೆ ಮಾಡಿರುವ ಆಜ್ಞೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು