Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಯೋಹಾನನು 2:8 - ಕನ್ನಡ ಸತ್ಯವೇದವು C.L. Bible (BSI)

8 ಆದರೂ ನಾನೀಗ ನಿಮಗೆ ಬರೆಯುತ್ತಿರುವುದು ಒಂದು ವಿಧದಲ್ಲಿ ಹೊಸ ಆಜ್ಞೆಯೇ ಸರಿ. ಅದರ ನೈಜಗುಣವು ಕ್ರಿಸ್ತಯೇಸುವಿನಲ್ಲಿ ಬೆಳಗಿದಂತೆ, ನಿಮ್ಮ ಜೀವನದಲ್ಲೂ ಬೆಳಗುತ್ತದೆ. ಏಕೆಂದರೆ, ಕತ್ತಲು ಕಳೆದುಹೋಗುತ್ತಿದೆ; ನಿಜವಾದ ಬೆಳಕು ಈಗಾಗಲೇ ಪ್ರಕಾಶಿಸುತ್ತಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಆದರೂ ನಾನು ನಿಮಗೆ ಬರೆಯುವುದು ಹೊಸ ಆಜ್ಞೆಯಂತೆಯೇ ಇರುವುದು. ಇದು ಆತನಲ್ಲಿಯೂ ನಿಮ್ಮಲ್ಲಿಯೂ ಸತ್ಯವಾಗಿದೆ. ಏಕೆಂದರೆ ಕತ್ತಲೆಯು ಕಳೆದುಹೋಗುತ್ತದೆ. ನಿಜವಾದ ಬೆಳಕು ಈಗ ಪ್ರಕಾಶಿಸುತ್ತಲಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಆದರೂ ನಾನು ನಿಮಗೆ ಬರೆಯುವದು ಹೊಸ ಅಪ್ಪಣೆಯೇ; ಇದು ಆತನಲ್ಲಿಯೂ ನಿಮ್ಮಲ್ಲಿಯೂ ಸತ್ಯವಾಗಿದೆ; ಹೇಗಂದರೆ ಕತ್ತಲೆಯು ಕಳೆದುಹೋಗುತ್ತದೆ, ನಿಜವಾದ ಬೆಳಕು ಈಗ ಪ್ರಕಾಶಿಸುತ್ತಲಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಆದರೆ ಈ ಆಜ್ಞೆಯನ್ನು ನಾನು ನಿಮಗೆ ಹೊಸ ಆಜ್ಞೆಯೋ ಎಂಬಂತೆ ಬರೆಯುತ್ತಿದ್ದೇನೆ. ಈ ಆಜ್ಞೆಯು ಸತ್ಯವಾದದ್ದು. ಅದರ ಸತ್ಯತೆಯನ್ನು ನೀವು ಯೇಸುವಿನಲ್ಲಿಯೂ ನಿಮ್ಮಲ್ಲಿಯೂ ಕಾಣಬಹುದು. ಕತ್ತಲೆಯು ಕಳೆದುಹೋಗುತ್ತಿದೆ ಮತ್ತು ನಿಜವಾದ ಬೆಳಕು ಈಗಾಗಲೇ ಪ್ರಕಾಶಿಸುತ್ತಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ತಿರುಗಿ ನಾನು ನಿಮಗೆ ಬರೆಯುವುದು ಹೊಸ ಅಪ್ಪಣೆಯೇ. ಇದು ಕ್ರಿಸ್ತ ಯೇಸುವಿನಲ್ಲಿಯೂ ನಿಮ್ಮಲ್ಲಿಯೂ ಸತ್ಯವಾಗಿದೆ. ಏಕೆಂದರೆ ಕತ್ತಲೆಯು ಕಳೆದುಹೋಗುತ್ತದೆ. ಸತ್ಯವಾದ ಬೆಳಕು ಈಗ ಪ್ರಕಾಶಿಸುತ್ತಲಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

8 ಜಾಲ್ಯಾರ್‌ ಬಿ ಮಿಯಾ ತುಮ್ಕಾ ಲಿವ್ತಲೊ ಹುಕುಮ್ ನ್ಹವೊಚ್, ಕಶ್ಯಾಕ್ ಮಟ್ಲ್ಯಾರ್, ತೆಚೆ ಖರೆಪಾನ್ ಕ್ರಿಸ್ತಾತ್ ಅನಿ ತುಮ್ಚ್ಯಾ ಮದ್ದಿ ದಿಸುನ್ ಯೆತಾ. ತೆಚೆಸಾಟ್ನಿ ಕಾಳೊಕ್ ಸರುನ್ ಜಾವ್ಕಲಾಗ್ಲಾ, ಅನಿ ಖರೊ ಉಜ್ವೊಡ್ ಹೊಳ್ವಳುಕ್ ಲಾಗಲ್ಲೊ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಯೋಹಾನನು 2:8
31 ತಿಳಿವುಗಳ ಹೋಲಿಕೆ  

ನೀವು ಹಿಂದೊಮ್ಮೆ ಕತ್ತಲುಮಯವಾಗಿದ್ದಿರಿ. ಈಗಲಾದರೋ ಪ್ರಭುವಿನಲ್ಲಿ ಬೆಳಕಾಗಿದ್ದೀರಿ. ಆದ್ದರಿಂದ ಬೆಳಕಿನ ಮಕ್ಕಳಾಗಿ ಬಾಳಿರಿ.


ಇರುಳು ಬಹುಮಟ್ಟಿಗೆ ಕಳೆಯಿತು. ಹಗಲು ಸಮೀಪಿಸಿತು. ಇನ್ನು ಅಂಧಕಾರಕ್ಕೆ ಅನುಗುಣವಾದ ದುಷ್ಕೃತ್ಯಗಳನ್ನು ತ್ಯಜಿಸಿಬಿಡೋಣ. ಬೆಳಕಿಗೆ ಅನುಗುಣವಾದ ಆಯುಧಗಳನ್ನು ಧರಿಸಿಕೊಳ್ಳೋಣ.


ನಿಮಗೊಂದು ಹೊಸ ಆಜ್ಞೆಯನ್ನು ಕೊಡುತ್ತೇನೆ: ಒಬ್ಬರನ್ನೊಬ್ಬರು ಪ್ರೀತಿಸಿರಿ. ನಾನು ನಿಮ್ಮನ್ನು ಪ್ರಿತಿಸಿದಂತೆಯೇ ನೀವು ಸಹ ಒಬ್ಬರನ್ನೊಬ್ಬರು ಪ್ರೀತಿಸಿರಿ.


ಬಳಿಕ ಯೇಸು ಸ್ವಾಮಿ ಜನರನ್ನು ಮತ್ತೊಮ್ಮೆ ಕಂಡು ಹೀಗೆಂದರು: “ನಾನೇ ಜಗಜ್ಯೋತಿ, ನನ್ನನ್ನು ಹಿಂಬಾಲಿಸುವವನು ಕತ್ತಲಲ್ಲಿ ನಡೆಯುವುದಿಲ್ಲ. ಜೀವದಾಯಕ ಜ್ಯೋತಿ ಅವನಲ್ಲಿರುತ್ತದೆ.”


ನಿಜವಾದ ಜ್ಯೋತಿ ಆ ದಿವ್ಯವಾಣಿಯೇ. ಮಾನವರೆಲ್ಲರನ್ನು ಬೆಳಗಿಸಲು ಲೋಕಕ್ಕೆ ಆಗಮಿಸಲಿದ್ದ ಜಗಜ್ಜ್ಯೋತಿ ಅವರೇ.


ನನ್ನಲ್ಲಿ ವಿಶ್ವಾಸವಿಡುವವನು ಅಂಧಕಾರದಲ್ಲಿ ಉಳಿಯಬಾರದೆಂದು ನಾನೇ ಜಗಜ್ಯೋತಿಯಾಗಿ ಬಂದಿದ್ದೇನೆ.


ದೇವರನ್ನು ಪ್ರೀತಿಸುವವನು ತನ್ನ ಸಹೋದರನನ್ನೂ ಪ್ರೀತಿಸಬೇಕೆಂಬುದು ಕ್ರಿಸ್ತಯೇಸು ನಮಗೆ ಮಾಡಿರುವ ಆಜ್ಞೆ.


“ನನ್ನ ನಾಮದಲ್ಲಿ ಭಯಭಕ್ತಿಯಿಂದ ಇರುವ ನಿಮಗಾದರೋ ಜೀವೋದ್ಧಾರಕನೆಂಬ ಸೂರ್ಯನು ಉದಯಿಸಿ, ಸುಕ್ಷೇಮವನ್ನೀಯುವ ಕಿರಣಗಳನ್ನು ಬೀರುವನು. ಕೊಟ್ಟಿಗೆಯಿಂದ ಹೊರಬಂದ ಕರುಗಳಂತೆ ನೀವು ಕುಣಿದು ಕುಪ್ಪಳಿಸುವಿರಿ.


ಪ್ರಿಯರೇ, ದೇವರೇ ನಮ್ಮನ್ನು ಇಷ್ಟಾಗಿ ಪ್ರೀತಿಸಿರುವಲ್ಲಿ ನಾವು ಸಹ ಒಬ್ಬರನ್ನೊಬ್ಬರು ಪ್ರೀತಿಸಲೇಬೇಕು.


ಈ ಕಾಲದಲ್ಲೂ ನಮ್ಮ ಉದ್ಧಾರಕ ಕ್ರಿಸ್ತಯೇಸುವಿನ ಪ್ರತ್ಯಕ್ಷದ ಮೂಲಕ ಅದನ್ನು ಬಹಿರಂಗಪಡಿಸಲಾಗಿದೆ. ಮೃತ್ಯುಶಕ್ತಿಯನ್ನು ವಿನಾಶಗೊಳಿಸಿ ಅಮರ ಜೀವವನ್ನು ಶುಭಸಂದೇಶದ ಮೂಲಕ ಬೆಳಕಿಗೆ ತಂದವರು ಯೇಸುವೇ.


ಪ್ರಭು ಯೇಸುಕ್ರಿಸ್ತರ ಕೃಪಾಶಕ್ತಿಯನ್ನು ನೀವು ಬಲ್ಲಿರಿ. ಅವರು ತಮ್ಮ ಬಡತನದಿಂದ ನಿಮ್ಮನ್ನು ಶ್ರೀಮಂತವಾಗಿಸಲೆಂದು, ತಾವು ಶ್ರೀಮಂತರಾಗಿದ್ದರೂ ನಿಮಗೋಸ್ಕರ ಬಡವರಾದರು.


ನೀನು ಇವರ ಕಣ್ಣುಗಳನ್ನು ತೆರೆಯಬೇಕು; ಅಂಧಕಾರವನ್ನು ಬಿಟ್ಟು ಬೆಳಕಿಗೆ ಬರುವಂತೆ ಮಾಡಬೇಕು; ಸೈತಾನನ ಆಧಿಪತ್ಯವನ್ನು ತ್ಯಜಿಸಿ ದೇವರತ್ತ ತಿರುಗುವಂತೆ ಮಾಡಬೇಕು. ಹೀಗೆ, ಅವರು ನನ್ನಲ್ಲಿಡುವ ವಿಶ್ವಾಸದ ಪ್ರಯುಕ್ತ ಪಾಪವಿಮೋಚನೆಯನ್ನು ಪಡೆಯುವರು; ಆಯ್ಕೆಯಾದವರಿಗಿರುವ ಹಕ್ಕುಬಾಧ್ಯತೆಗಳಲ್ಲಿ ಭಾಗಿಗಳಾಗುವರು,’ ಎಂದು ಹೇಳಿದರು.


ಮಾನವರು ತಮ್ಮನ್ನು ಅರಿಯದೆ ಬಾಳಿದ ಕಾಲವನ್ನು ದೇವರು ಗಮನಕ್ಕೆ ತಂದುಕೊಳ್ಳಲಿಲ್ಲ. ಆದರೆ ಈಗ ಎಲ್ಲೆಡೆಯಲ್ಲಿರುವ ಸರ್ವಮಾನವರು ದುರ್ಮಾರ್ಗಗಳನ್ನು ಬಿಟ್ಟು ತಮಗೆ ಅಭಿಮುಖರಾಗಬೇಕೆಂದು ಆಜ್ಞಾಪಿಸುತ್ತಾರೆ.


ಬೆಳಗಿಸಲು ಇರುಳಿನಲು, ಮರಣದ ಮುಸುಕಿನಲು ಬಾಳುವವರನು I ನಮ್ಮ ಕಾಲುಗಳನ್ನೂರಿಸಿ ನಡೆಯಲು ಶಾಂತಿಪಥದೊಳು II


ನಿನ್ನಲ್ಲಿದೆ ಜೀವದ ಬುಗ್ಗೆ I ನಿನ್ನ ಬೆಳಕಿನಿಂದ ಬೆಳಕೆಮಗೆ II


ನನಗೆ ಬೆಳಕು, ನನಗೆ ರಕ್ಷೆ, ಪ್ರಭುವೆ I ನಾನಾರಿಗೂ ಅಳುಕೆನು II ನನ್ನ ಬಾಳಿಗಾಧಾರ ಪ್ರಭುವೆ I ನಾನಾರಿಗೂ ಅಂಜೆನು II


ಅದಕ್ಕೆ ಯೇಸು, “ಇನ್ನು ತುಸುಕಾಲ ಮಾತ್ರ ಜ್ಯೋತಿ ನಿಮ್ಮ ನಡುವೆ ಇರುತ್ತದೆ. ನಿಮ್ಮನ್ನು ಕತ್ತಲು ಕವಿಯದಂತೆ ಜ್ಯೋತಿಯಿರುವಾಗಲೇ ನಡೆಯಿರಿ. ಕತ್ತಲಲ್ಲಿ ನಡೆಯುವವನಿಗೆ ಗೊತ್ತುಗುರಿ ಕಾಣದು.


ಕಾರ್ಗತ್ತಲಲಿ ವಾಸಿಸುವವರಿಗೆ ದಿವ್ಯಜ್ಯೋತಿಯೊಂದು ಕಾಣಿಸಿತು. ಮರಣಛಾಯೆ ಕವಿದ ನಾಡಿಗರಿಗೆ ಅರುಣೋದಯವಾಯಿತು,” ಎಂದು ನುಡಿದ ಪ್ರವಾದಿ ಯೆಶಾಯನ ವಚನಗಳು ಈಡೇರಿದವು.


ಕಾಣಿಸಿತೊಂದು ಮಹಾಜ್ಯೋತಿ ಕತ್ತಲಲಿ ಸಂಚರಿಸುತ್ತಿದ್ದ ಜನರಿಗೆ ಪ್ರಜ್ವಲಿಸಿತಾ ಜ್ಯೋತಿ ಕಗ್ಗತ್ತಲಲಿ ಬಾಳುತ್ತಿದ್ದಾ ನಾಡಿಗರಿಗೆ.


ದೇವನೆಮಗೆ ಬೆಳಕು ಕೊಡುವ ಸೂರ್ಯನು I ಕಾದಿಟ್ಟು ರಕ್ಷಿಸುವ ಗುರಾಣಿಯು I ಸನ್ಮಾರ್ಗಿಗೆ ಈವನು ಸಕಲ ವರಗಳನು II


ಮರಣದಿಂದ ಪುನರುತ್ಥಾನಗೊಳಿಸಿ ಮಹಿಮೆಪಡಿಸಿದ ದೇವರಲ್ಲಿ ನೀವು ವಿಶ್ವಾಸವಿಟ್ಟದ್ದು ಇವರ ಮುಖಾಂತರವೇ. ಹೀಗೆ ನಿಮ್ಮ ವಿಶ್ವಾಸವೂ ನಿರೀಕ್ಷೆಯೂ ದೇವರಲ್ಲೇ ನೆಲೆಗೊಂಡಿವೆ.


ನಾವು ದೇವರ ಪುತ್ರ ಯೇಸುಕ್ರಿಸ್ತರ ನಾಮದಲ್ಲಿ ವಿಶ್ವಾಸವಿಟ್ಟು ಅವರು ವಿಧಿಸಿದಂತೆ ಒಬ್ಬರನ್ನೊಬ್ಬರು ಪ್ರೀತಿಸಬೇಕು. ಇದೇ ದೇವರ ಆಜ್ಞೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು