Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಯೋಹಾನನು 2:9 - ಕನ್ನಡ ಸತ್ಯವೇದವು C.L. Bible (BSI)

9 “ನಾನು ಬೆಳಕಿನಲ್ಲಿದ್ದೇನೆ” ಎಂದು ಹೇಳಿಕೊಂಡು ತನ್ನ ಸಹೋದರನನ್ನು ದ್ವೇಷಿಸುವವನು ಇನ್ನೂ ಕತ್ತಲಲ್ಲೇ ಇದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಬೆಳಕಿನಲ್ಲಿದ್ದೇನೆಂದು ಹೇಳಿಕೊಂಡು ತನ್ನ ಸಹೋದರನನ್ನು ದ್ವೇಷಿಸುವವನು ಈವರೆಗೂ ಕತ್ತಲೆಯಲ್ಲಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಬೆಳಕಿನಲ್ಲಿದ್ದೇನೆಂದು ಹೇಳಿಕೊಂಡು ತನ್ನ ಸಹೋದರನನ್ನು ದ್ವೇಷಿಸುವವನು ಈವರೆಗೂ ಕತ್ತಲೆಯಲ್ಲಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 “ನಾನು ಬೆಳಕಿನಲ್ಲಿದ್ದೇನೆ” ಎಂದು ಹೇಳುವವನು ತನ್ನ ಸಹೋದರನನ್ನು ದ್ವೇಷಿಸುತ್ತಿದ್ದರೆ, ಅವನಿನ್ನೂ ಅಂಧಕಾರದಲ್ಲಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಬೆಳಕಿನಲ್ಲಿದ್ದೇನೆಂದು ಹೇಳಿಕೊಂಡು ತನ್ನ ಸಹೋದರನನ್ನು ದ್ವೇಷಿಸುವವನು ಈವರೆಗೂ ಕತ್ತಲೆಯಲ್ಲಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

9 ಅಪ್ನಿ ಉಜ್ವೊಡಾತ್ ಹಾಂವ್ ಮನುನ್ ಅಪ್ನಾಚ್ಯಾ ಭಾವ್-ಭೆನಿಯಾಕ್ನಿ ಧುರ್ ಕರ್ತಾತ್, ತೆನಿ ಅಜುನ್ಬಿ ಕಾಳ್ಕಾತುಚ್ ಹಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಯೋಹಾನನು 2:9
14 ತಿಳಿವುಗಳ ಹೋಲಿಕೆ  

ತಾನು ದೇವರನ್ನು ಪ್ರೀತಿಸುತ್ತೇನೆಂದು ಒಬ್ಬನು ಹೇಳುತ್ತಾ ತನ್ನ ಸಹೋದರನನ್ನು ದ್ವೇಷಿಸಿದರೆ, ಅವನು ಸುಳ್ಳುಗಾರನಾಗುತ್ತಾನೆ. ತಾನು ಕಂಡಿರುವ ತನ್ನ ಸಹೋದರನನ್ನು ಪ್ರೀತಿಸದವನು ತಾನು ಕಾಣದಿರುವ ದೇವರನ್ನು ಹೇಗೆ ಪ್ರೀತಿಸಿಯಾನು?


ತನ್ನ ಸಹೋದರನನ್ನು ದ್ವೇಷಿಸುವವನು ಕತ್ತಲಲ್ಲಿ ಇದ್ದಾನೆ; ಕತ್ತಲಲ್ಲೇ ನಡೆಯುತ್ತಾನೆ. ಕತ್ತಲು ಅವನನ್ನು ಕುರುಡಾಗಿಸಿರುವುದರಿಂದ ಎತ್ತ ಹೋಗುತ್ತಿದ್ದಾನೆಂದು ಅವನಿಗೇ ತಿಳಿಯದು.


ಬುದ್ಧಿಹೀನರು, ಮಂದಮತಿಗಳು, ಕತ್ತಲಲಿ ನಡೆವವರು ನೀವು I ಇದರಿಂದಲೆ ಕದಲುತ್ತಿರುವುವು ಧರೆಯ ಅಸ್ತಿವಾರಗಳು II


ಈ ಗುಣಗಳಿಲ್ಲದವನು ಸಂಕುಚಿತ ಮನೋಭಾವನೆಯುಳ್ಳವನು ಹಾಗೂ ಅಂಧನು. ಹಿಂದಿನ ಪಾಪಗಳಿಂದ ತಾನು ಶುದ್ಧಗೊಂಡವನು ಎಂಬುದನ್ನು ಮರೆತುಬಿಟ್ಟವನು.


ದೇವರನ್ನು ಬಲ್ಲೆನೆಂದು ಹೇಳಿಕೊಳ್ಳುತ್ತಾ ಅವರ ಆಜ್ಞೆಗಳನ್ನು ಕೈಗೊಳ್ಳದೆ ಇರುವವನು ಸುಳ್ಳುಗಾರ ಮತ್ತು ಸತ್ಯವೆಂಬುದೇ ಅವನಲ್ಲಿ ಇರುವುದಿಲ್ಲ.


ನಾವು ಕತ್ತಲಲ್ಲಿ ಬಾಳುತ್ತಾ ದೇವರೊಡನೆ ಅನ್ಯೋನ್ಯವಾಗಿದ್ದೇವೆಂದು ಹೇಳಿದರೆ ನಾವು ಸುಳ್ಳುಗಾರರು, ಸತ್ಯಕ್ಕನುಸಾರ ಬಾಳದವರು.


ಯೇಸು, “ನೀವು ಕುರುಡರೇ ಆಗಿದ್ದರೆ ಪಾಪಿಗಳಾಗುತ್ತಿರಲಿಲ್ಲ. ಆದರೆ, ‘ನಮಗೆ ಕಣ್ಣು ಕಾಣುತ್ತದೆ,’ ಎಂದು ಹೇಳಿಕೊಳ್ಳುತ್ತೀರಿ; ಆದ್ದರಿಂದ ನೀವು ಪಾಪಿಗಳಾಗಿದ್ದೀರಿ,” ಎಂದರು.


“ಸಹೋದರನ ಬಗ್ಗೆ ಒಳಗೊಳಗೇ ಹಗೆ ಇಟ್ಟುಕೊಳ್ಳಬೇಡ. ನೆರೆಯವನ ದೋಷಕ್ಕೆ ನೀನು ಒಳಗಾಗದಂತೆ ಅವನ ತಪ್ಪನ್ನು ಅವನಿಗೆ ಎತ್ತಿ ತೋರಿಸಲೇಬೇಕು.


ಅಬ್ಷಾಲೋಮನು ಅಮ್ನೋನನ ಸಂಗಡ ಒಳ್ಳೇಮಾತನ್ನಾಗಲಿ ಕೆಟ್ಟಮಾತನ್ನಾಗಲಿ ಆಡಲಿಲ್ಲ. ತನ್ನ ತಂಗಿಯಾದ ತಾಮಾರಳನ್ನು ಕೆಡಿಸಿದ್ದಕ್ಕಾಗಿ ಅವನು ಅಮ್ನೋನನನ್ನು ದ್ವೇಷಿಸಿದನು.


ಸ್ವಲ್ಪ ದಿನಗಳ ನಂತರ ಸುಮಾರು ನೂರ ಇಪ್ಪತ್ತು ಮಂದಿ ಭಕ್ತವಿಶ್ವಾಸಿಗಳು ಸಭೆ ಸೇರಿದ್ದರು. ಆಗ ಪೇತ್ರನು ಎದ್ದುನಿಂತು ಹೀಗೆಂದನು:


ಸನ್ಮಾರ್ಗದಲ್ಲಿ ನಡೆಯದವನೂ ಸಹೋದರನನ್ನು ಪ್ರೀತಿಸದವನೂ ದೇವರಿಂದ ಜನಿಸಿದವನಲ್ಲ. ಹೀಗೆ ದೇವರ ಮಕ್ಕಳು ಯಾರು ಮತ್ತು ಸೈತಾನನ ಮಕ್ಕಳು ಯಾರು ಎಂಬುದನ್ನು ತಿಳಿಯಬಹುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು