Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಯೋಹಾನನು 3:14 - ಕನ್ನಡ ಸತ್ಯವೇದವು C.L. Bible (BSI)

14 ನಾವು ನಮ್ಮ ಸಹೋದರರನ್ನು ಪ್ರೀತಿಸುವುದರಿಂದ ಸಾವಿನಿಂದ ಜೀವಕ್ಕೆ ಸಾಗಿದ್ದೇವೆಂದು ತಿಳಿದಿದ್ದೇವೆ. ಪ್ರೀತಿಸದೆ ಇರುವವನು ಸಾವಿನಲ್ಲೇ ನೆಲೆಸಿರುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ನಾವಂತೂ ಕ್ರೈಸ್ತಸಹೋದರರನ್ನು ಪ್ರೀತಿಸುವವರಾಗಿರುವುದರಿಂದ ಮರಣದಿಂದ ಪಾರಾಗಿ ನಿತ್ಯಜೀವದಲ್ಲಿ ಸೇರಿದ್ದೇವೆಂಬುದು ನಮಗೆ ಗೊತ್ತಾಗಿದೆ. ತನ್ನ ಸಹೋದರನನ್ನು ಪ್ರೀತಿಸದೆ ಇರುವವನು ಮರಣದಲ್ಲೇ ಇದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ನಾವಂತೂ ಕ್ರೈಸ್ತಸಹೋದರರನ್ನು ಪ್ರೀತಿಸುವವರಾಗಿರುವದರಿಂದ ಮರಣದಿಂದ ಪಾರಾಗಿ ಜೀವದಲ್ಲಿ ಸೇರಿದ್ದೇವೆಂಬದು ನಮಗೆ ಗೊತ್ತಾಗಿದೆ. ಪ್ರೀತಿಸದೆ ಇರುವವನು ಮರಣದಲ್ಲೇ ಇದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ನಾವು ಮರಣವನ್ನು (ಪಾಪಗಳನ್ನು) ತೊರೆದು ಜೀವಕ್ಕೆ ಬಂದಿದ್ದೇವೆ ಎಂಬುದು ನಮಗೆ ಗೊತ್ತಿದೆ. ಕ್ರಿಸ್ತನಲ್ಲಿ ನಮ್ಮ ಸಹೋದರ ಸಹೋದರಿಯರನ್ನು ನಾವು ಪ್ರೀತಿಸುತ್ತಿರುವುದರಿಂದಲೇ ಇದನ್ನು ತಿಳಿದುಕೊಂಡಿದ್ದೇನೆ. ಪ್ರೀತಿಸದಿರುವ ವ್ಯಕ್ತಿಯು ಇನ್ನೂ ಮರಣದಲ್ಲಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ನಾವಂತೂ ಸಹೋದರರನ್ನು ಪ್ರೀತಿಸುವವರಾಗಿರುವುದರಿಂದ ಮರಣದಿಂದ ಪಾರಾಗಿ ಜೀವದಲ್ಲಿ ಸೇರಿದ್ದೇವೆಂಬುದು ನಮಗೆ ಗೊತ್ತಾಗಿದೆ. ಪ್ರೀತಿಸದೆ ಇರುವವನು ಮರಣದಲ್ಲೇ ಇದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

14 ಅಮಿ ಮರ್‍ನಾಕ್ ಸೊಡುನ್, ಶಾಶ್ವತ್ ಜಿವನಾತ್ ಹಾವ್ ಮನ್ತಲೆ ತುಮ್ಕಾ ಗೊತ್ತ್ ಹಾಯ್. ಅನಿ ಭಾವಾಂಚೊ ಅನಿ ಭೆನಿಯಾಂಚೊ ಪ್ರೆಮ್ ಕರ್ತಾಂವ್ ಮನುನ್ ಹೆ ಅಮ್ಕಾ ಕಳ್ತಾ, ಜೆ ಕೊನ್ ಪ್ರೆಮ್ ಕರಿನಾ ತೊ ಅಜುನ್ಬಿ ಮರ್ನಾಚ್ಯಾ ಪಾಸೆತ್ ಹಾಯ್ .

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಯೋಹಾನನು 3:14
31 ತಿಳಿವುಗಳ ಹೋಲಿಕೆ  

ದೇವರನ್ನು ಪ್ರೀತಿಸಿ, ಅವರ ಆಜ್ಞೆಗಳನ್ನು ಪಾಲಿಸುವುದರಿಂದ ನಾವು ದೇವರ ಮಕ್ಕಳನ್ನು ಪ್ರೀತಿಸುತ್ತೇವೆಂಬುದು ನಿಶ್ಚಯ ಆಗುತ್ತದೆ.


ನಿಮ್ಮ ಈ ಪರಸ್ಪರ ಪ್ರೀತಿಯನ್ನು ಕಂಡು ನೀವು ನನ್ನ ಶಿಷ್ಯರೆಂದು ಜನರೆಲ್ಲರೂ ಅರಿತುಕೊಳ್ಳುವರು.


ಸಹೋದರ ಪ್ರೇಮವನ್ನು ಕುರಿತು ನಿಮಗೆ ಬರೆಯುವ ಅವಶ್ಯಕತೆಯಿಲ್ಲ. ನೀವು ಒಬ್ಬರನ್ನೊಬ್ಬರು ಪ್ರೀತಿಸುವುದನ್ನು ದೇವರಿಂದಲೇ ಕಲಿತಿದ್ದೀರಿ.


“ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ: ನನ್ನ ಮಾತಿಗೆ ಕಿವಿಗೊಟ್ಟು ನನ್ನನ್ನು ಕಳುಹಿಸಿದ ಆತನಲ್ಲಿ ವಿಶ್ವಾಸವಿಡುವವನು ನಿತ್ಯಜೀವವನ್ನು ಪಡೆದಿರುತ್ತಾರೆ. ಅವನು ಖಂಡನೆಗೆ ಗುರಿ ಆಗನು; ಅವನು ಈಗಾಗಲೇ ಸಾವನ್ನು ದಾಟಿ ಜೀವವನ್ನು ಸೇರಿರುತ್ತಾನೆ.


ಸತ್ಯಕ್ಕೆ ಶರಣಾಗಿ ಆತ್ಮಶುದ್ಧಿಹೊಂದಿರುವ ನೀವು ಸಹೋದರರನ್ನು ನಿಷ್ಕಪಟದಿಂದ ಪ್ರೀತಿಸಬಲ್ಲಿರಿ. ಎಂದೇ, ಒಬ್ಬರನ್ನೊಬ್ಬರು ಹೃತ್ಪೂರ್ವಕವಾಗಿಯೂ ಯಥಾರ್ಥವಾಗಿಯೂ ಪ್ರೀತಿಸಿರಿ.


ಆಗ ಅರಸನು ಪ್ರತ್ಯುತ್ತರವಾಗಿ, ‘ಈ ನನ್ನ ಸೋದರರಲ್ಲಿ ಒಬ್ಬನಿಗೆ, ಅವನೆಷ್ಟೇ ಕನಿಷ್ಟನಾಗಿರಲಿ, ನೀವು ಹೀಗೆ ಮಾಡಿದಾಗಲೆಲ್ಲಾ ಅದನ್ನು ನನಗೇ ಮಾಡಿದಿರಿ, ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ,’ ಎನ್ನುವನು.


ಸೋದರ ಪ್ರೀತಿಯಲ್ಲಿ ನೆಲೆಯಾಗಿ ನಿಲ್ಲಿರಿ.


ನಾನು ಕೊಡುವ ಆಜ್ಞೆ ಏನೆಂದರೆ: ನಾನು ನಿಮ್ಮನ್ನು ಪ್ರೀತಿಸಿದಂತೆಯೇ ನೀವು ಸಹ ಒಬ್ಬರನ್ನೊಬ್ಬರು ಪ್ರೀತಿಸಬೇಕು.


ದೇವರನ್ನು ಯಾರೂ ಎಂದೂ ನೋಡಿಲ್ಲ. ಆದರೂ ನಾವು ಒಬ್ಬರನ್ನೊಬ್ಬರು ಪ್ರೀತಿಸಿದರೆ ದೇವರು ನಮ್ಮಲ್ಲಿ ನೆಲೆಸಿರುತ್ತಾರೆ. ಅವರ ಪ್ರೀತಿ ನಮ್ಮಲ್ಲಿ ಸಿದ್ಧಿಗೆ ಬರುತ್ತದೆ.


ನಾವು ದೇವರ ಪುತ್ರ ಯೇಸುಕ್ರಿಸ್ತರ ನಾಮದಲ್ಲಿ ವಿಶ್ವಾಸವಿಟ್ಟು ಅವರು ವಿಧಿಸಿದಂತೆ ಒಬ್ಬರನ್ನೊಬ್ಬರು ಪ್ರೀತಿಸಬೇಕು. ಇದೇ ದೇವರ ಆಜ್ಞೆ.


ಕಡೆಯದಾಗಿ ನೀವೆಲ್ಲರೂ ಏಕಮನಸ್ಸುಳ್ಳವರಾಗಿರಿ; ಪರಸ್ಪರ ಸಹಾನುಭೂತಿ ಇರಲಿ. ಒಡಹುಟ್ಟಿದವರಂತೆ ಒಬ್ಬರನ್ನೊಬ್ಬರು ಪ್ರೀತಿಸಿರಿ; ದಯೆತೋರುವವರೂ ದೀನಭಾವವುಳ್ಳವರೂ ಆಗಿರಿ.


ಪ್ರಭು ಯೇಸುವಿನಲ್ಲಿ ನೀವಿಟ್ಟಿರುವ ವಿಶ್ವಾಸ ಹಾಗೂ ದೇವಜನರೆಲ್ಲರ ಮೇಲೆ ನಿಮಗಿರುವ ಪ್ರೀತಿಯನ್ನು ಕುರಿತು ಕೇಳಿದ್ದೇನೆ. ಅಂದಿನಿಂದ ನಿಮ್ಮ ಸಲುವಾಗಿ ದೇವರಿಗೆ ಸದಾ ಕೃತಜ್ಞತಾಸ್ತುತಿ ಸಲ್ಲಿಸಿ, ನನ್ನ ಪ್ರಾರ್ಥನೆಯಲ್ಲಿ ನಿಮ್ಮನ್ನು ಸ್ಮರಿಸಿಕೊಳ್ಳುತ್ತಿದ್ದೇನೆ.


ದೇವರ ಪುತ್ರನ ನಾಮದಲ್ಲಿ ವಿಶ್ವಾಸ ಇಟ್ಟಿರುವ ನೀವು ನಿತ್ಯಜೀವವನ್ನು ಪಡೆದವರು ಎಂಬುದನ್ನು ತಿಳಿಸಲೆಂದೇ ನಾನು ನಿಮಗೆ ಇದನ್ನೆಲ್ಲಾ ಬರೆದಿದ್ದೇನೆ.


ನೀವು ಒಬ್ಬರನ್ನೊಬ್ಬರು ಪ್ರೀತಿಸಬೇಕೆಂಬುದೇ ನಾನು ನಿಮಗೆ ಕೊಡುವ ಆಜ್ಞೆ.


ನಾವು ದೇವರ ಆಜ್ಞೆಗಳನ್ನು ಕೈಗೊಂಡು ನಡೆದರೆ ಅದರಿಂದಲೇ ಅವರ ಅರಿವು ನಮಗಿದೆ ಎಂದು ಖಚಿತವಾಗುತ್ತದೆ.


ಈ ನಿಮ್ಮ ಸದ್ಭಕ್ತಿಗೆ ಸೋದರ ಸ್ನೇಹವನ್ನು, ಸೋದರ ಸ್ನೇಹಕ್ಕೆ ಪ್ರೀತಿಯನ್ನು ಬೆರೆಸಿರಿ.


ನಮ್ಮ ಅಪರಾಧಗಳ ನಿಮಿತ್ತ ಆಧ್ಯಾತ್ಮಿಕವಾಗಿ ಮೃತರಾಗಿದ್ದ ನಮ್ಮನ್ನು ಕ್ರಿಸ್ತಯೇಸುವಿನೊಡನೆ ಜೀವಂತರನ್ನಾಗಿ ಮಾಡಿದರು. (ದೈವಾನುಗ್ರಹದಿಂದಲೇ ನೀವೀಗ ಜೀವೋದ್ಧಾರ ಹೊಂದಿದ್ದೀರಿ).


ಭೂಮಿಯ ಮೇಲಿನ ನಮ್ಮ ಈ ದೇಹ ಎಂಬ ಗುಡಾರವು ನಾಶವಾಗಿಹೋದರೂ ಸ್ವರ್ಗದಲ್ಲಿ ಶಾಶ್ವತವಾದ ಗೃಹವೊಂದು ನಮಗೆ ದೊರಕುವುದು. ಅದು ಮಾನವರಿಂದ ನಿರ್ಮಿತ ಆದುದಲ್ಲ, ದೇವರಿಂದಲೇ ನಿರ್ಮಿತವಾದುದು. ಇದು ನಮಗೆ ತಿಳಿದ ವಿಷಯ.


ಸಂತರು ನಾಡಿಗೆ ತಿಲಕವು I ಅವರಲ್ಲಿದೆ ಎನಗೆ ಒಲವು II


ನಿಮ್ಮ ಅಪರಾಧಗಳ ಹಾಗೂ ಪಾಪಗಳ ದೆಸೆಯಿಂದ ಹಿಂದೊಮ್ಮೆ ನೀವು ಆಧ್ಯಾತ್ಮಿಕವಾಗಿ ಮೃತರಾಗಿದ್ದಿರಿ.


ಪವಿತ್ರಾತ್ಮದತ್ತವಾದ ಸತ್ಫಲಗಳು ಯಾವುವೆಂದರೆ: ಪ್ರೀತಿ, ಆನಂದ, ಶಾಂತಿಸಮಾಧಾನ, ಸಹನೆ, ದಯೆ, ಸದ್ಗುಣ, ಪ್ರಾಮಾಣಿಕತೆ, ಸೌಭಾಗ್ಯ, ಸಂಯಮ - ಇಂಥವುಗಳೇ.


ಈ ನಿನ್ನ ತಮ್ಮ ನಮ್ಮ ಪಾಲಿಗೆ ಸತ್ತುಹೋಗಿದ್ದ. ಈಗ ಬದುಕಿಬಂದಿದ್ದಾನೆ. ತಪ್ಪಿಹೋಗಿದ್ದ; ಈಗ ಸಿಕ್ಕಿದ್ದಾನೆ. ಆದುದರಿಂದ ನಾವು ಹಬ್ಬಮಾಡಿ ಆನಂದಿಸುವುದು ಸಹಜವಲ್ಲವೆ?’ ಎಂದನು.”


ಏಕೆಂದರೆ, ಈ ನನ್ನ ಮಗ ಸತ್ತುಹೋಗಿದ್ದ, ಈಗ ಬದುಕಿ ಬಂದಿದ್ದಾನೆ. ತಪ್ಪಿಹೋಗಿದ್ದ, ಈಗ ಸಿಕ್ಕಿದ್ದಾನೆ,’ ಎಂದು ಹೇಳಿದ. ಒಡನೆಯೇ ಹಬ್ಬದ ಸಡಗರ ತೊಡಗಿತು.


ಬುದ್ಧಿಮಾರ್ಗ ಬಿಟ್ಟು ನಡೆದವನು ಪ್ರೇತಗಳ ನಡುವೆ ವಿಶ್ರಾಂತಿ ಪಡೆಯುವನು.


ನಮ್ಮ ಜನರ ಮೇಲೆ ಅವನಿಗೆ ಪ್ರೀತಿ ಇದೆ; ಅಲ್ಲದೆ ನಮ್ಮ ಪ್ರಾರ್ಥನಾಮಂದಿರವನ್ನು ಕಟ್ಟಿಸಿಕೊಟ್ಟವನೂ ಅವನೇ,” ಎಂದು ಬಹಳವಾಗಿ ವಿನಂತಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು