Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಯೋಹಾನನು 3:15 - ಕನ್ನಡ ಸತ್ಯವೇದವು C.L. Bible (BSI)

15 ತನ್ನ ಸಹೋದರರನ್ನು ದ್ವೇಷಿಸುವವನು ಕೊಲೆಗಾರನೇ ಹೌದು. ಯಾವ ಕೊಲೆಗಾರನಲ್ಲೂ ನಿತ್ಯಜೀವ ಇರದೆಂದು ನೀವು ಬಲ್ಲಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ತನ್ನ ಸಹೋದರನನ್ನು ದ್ವೇಷಿಸುವವನು ಕೊಲೆಗಾರನಾಗಿದ್ದಾನೆ. ಮತ್ತು ಯಾವ ಕೊಲೆಗಾರನಲ್ಲಿಯೂ ನಿತ್ಯಜೀವವು ಇರುವುದಿಲ್ಲವೆಂಬುದು ನಿಮಗೆ ಗೊತ್ತಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ತನ್ನ ಸಹೋದರನನ್ನು ದ್ವೇಷಿಸುವವನು ಕೊಲೆಗಾರನಾಗಿದ್ದಾನೆ, ಮತ್ತು ಯಾವ ಕೊಲೆಗಾರನಲ್ಲಿಯೂ ನಿತ್ಯಜೀವವು ಇರುವದಿಲ್ಲವೆಂಬದು ನಿಮಗೆ ಗೊತ್ತಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ತನ್ನ ಸಹೋದರನನ್ನು ದ್ವೇಷಿಸುವ ಪ್ರತಿಯೊಬ್ಬನೂ ಕೊಲೆಗಾರನಾಗಿದ್ದಾನೆ. ಯಾವ ಕೊಲೆಗಾರನಲ್ಲಿಯೂ ನಿತ್ಯಜೀವ ಇರುವುದಿಲ್ಲವೆಂಬುದು ನಿಮಗೆ ತಿಳಿದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ತನ್ನ ಸಹೋದರನನ್ನು ದ್ವೇಷಿಸುವ ಯಾರೇ ಆದರೂ ಕೊಲೆಗಾರನಾಗಿದ್ದಾನೆ ಮತ್ತು ಯಾವ ಕೊಲೆಗಾರನಲ್ಲಿಯೂ ನಿತ್ಯಜೀವವು ಇರುವುದಿಲ್ಲವೆಂಬುದು ನಿಮಗೆ ಗೊತ್ತಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

15 ಅಪ್ನಾಚ್ಯಾ ಭಾವಾಚ್ಯಾ ಅನಿ ಭೆನಿಚ್ಯಾ ವಿರೊದ್ ಕರ್ತಲೊ ಹರಿ ಎಕ್ಲೊಬಿ ಖುನಿಗಾರ್ ಹೊವ್ನ್ ರ್‍ಹಾತಾ. ಅನಿ ಖುನಿಗಾರಾಚ್ಯಾ ಭುತ್ತುರ್ ಕನ್ನಾಚ್ ಮರಾನ್ ನಸಲ್ಲೆ ಜಿವನ್ ರ್‍ಹಾಯ್ನಾ ಮನುನ್ ತುಮ್ಕಾ ಗೊತ್ತ್ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಯೋಹಾನನು 3:15
19 ತಿಳಿವುಗಳ ಹೋಲಿಕೆ  

ಆದರೆ ಹೇಡಿಗಳಿಗೆ, ಹೇಯಕೃತ್ಯಗಾರರಿಗೆ ಅವಿಶ್ವಾಸಿಗಳಿಗೆ, ಹಲವು ಅಸತ್ಯಗಾರರಿಗೆ ಕಾಮುಕರಿಗೆ, ಕೊಲೆಗಾರರಿಗೆ ವಿಗ್ರಹಾರಾಧಕರಿಗೆ, ಮಾಟಮಂತ್ರಗಾರರಿಗೆ ಗಂಧಕದಿಂದುರಿಯುವ ಅಗ್ನಿಸರೋವರವೇ ಗತಿ ಇದುವೇ ಅವರೆಲ್ಲರ ಎರಡನೆಯ ಮೃತಿ.” ಎಂದು ಹೇಳಿದನು.


ಸೈತಾನನೇ ನಿಮಗೆ ತಂದೆ; ಆ ನಿಮ್ಮ ತಂದೆ ಮಾಡಬಯಸುವುದನ್ನು ನೀವು ಮಾಡಬಯಸುತ್ತೀರಿ; ಮೊತ್ತ ಮೊದಲಿನಿಂದಲೂ ಅವನು ಕೊಲೆಪಾತಕ. ಸತ್ಯವೆಂಬುದೇ ಅವನಲ್ಲಿ ಇಲ್ಲದ ಕಾರಣ ಅವನು ಸತ್ಯಪರನಲ್ಲ. ಸುಳ್ಳಾಡುವಾಗ ಅವನು ತನಗೆ ಸಹಜವಾದುದನ್ನೇ ಆಡುತ್ತಾನೆ. ಅವನು ಸುಳ್ಳುಗಾರ. ಸುಳ್ಳಿನ ಮೂಲಪುರುಷನೇ ಅವನು.


ಇವರು ಮುಖ್ಯಯಾಜಕರ ಮತ್ತು ಪ್ರಮುಖರ ಬಳಿಗೆ ಹೋಗಿ ಇಂತೆಂದರು: “ನಾವು ಪೌಲನನ್ನು ಕೊಲ್ಲುವ ತನಕ ಏನನ್ನೂ ತಿನ್ನುವುದಿಲ್ಲವೆಂದು ಕಠಿಣ ಶಪಥಮಾಡಿಕೊಂಡಿದ್ದೇವೆ.


ದುರಿಚ್ಛೆ ಗರ್ಭಧರಿಸಿ ಪಾಪಕ್ಕೆ ಜನ್ಮವೀಯುತ್ತದೆ; ಪಾಪವು ಪೂರ್ತಿಯಾಗಿ ಬೆಳೆದು ಮರಣವನ್ನು ಹಡೆಯುತ್ತದೆ.


ಮಾರನೆಯ ದಿನ ಬೆಳಿಗ್ಗೆ ಕೆಲವು ಯೆಹೂದ್ಯರು ಒಟ್ಟುಗೂಡಿ ಒಳಸಂಚುಹೂಡಿದರು. ಪೌಲನನ್ನು ಕೊಲ್ಲುವ ತನಕ ತಾವು ಅನ್ನಪಾನವೇನೂ ಮುಟ್ಟುವುದಿಲ್ಲವೆಂದು ಶಪಥ ಮಾಡಿದರು.


ಆದರೆ ನಾನು ಕೊಡುವ ನೀರನ್ನು ಕುಡಿದವನಿಗೆ ಎಂದಿಗೂ ದಾಹವಾಗದು; ಆ ನೀರು ಅವನಲ್ಲಿ ಉಕ್ಕಿ ಹರಿಯುವ ಬುಗ್ಗೆಯಾಗಿ, ನಿತ್ಯಜೀವವನ್ನು ತರುತ್ತದೆ,” ಎಂದು ಉತ್ತರಕೊಟ್ಟರು.


ಇದರ ನಿಮಿತ್ತ ಹೆರೋದಿಯಳು ಯೊವಾನ್ನನ ಮೇಲೆ ಹಗೆಯಿಟ್ಟು ಆತನನ್ನು ಕೊಲ್ಲಿಸಬೇಕು ಎಂದಿದ್ದಳು. ಆದರೆ ತನ್ನ ಸೇಡನ್ನು ತೀರಿಸಿಕೊಳ್ಳಲು ಅವಳಿಂದಾಗಿರಲಿಲ್ಲ.


ಆದರೆ ನಾನು ಹೇಳುತ್ತೇನೆ, ಕೇಳಿ; ಪರಸ್ತ್ರೀಯನ್ನು ಕಾಮದೃಷ್ಟಿಯಿಂದ ನೋಡುವ ಪ್ರತಿಯೊಬ್ಬನೂ ತನ್ನ ಹೃದಯದಲ್ಲಿ ಆಕೆಯೊಡನೆ ಆಗಲೇ ವ್ಯಭಿಚಾರ ಮಾಡಿದವನೇ ಆಗುತ್ತಾನೆ.


ತಂದೆಯಿಂದ ಯಕೋಬನು ಪಡೆದುಕೊಂಡ ಆಶೀರ್ವಾದದ ನಿಮಿತ್ತ ಏಸಾವನು ಯಕೋಬನ ಮೇಲೆ ಹಗೆಗೊಂಡನು. “ತಂದೆಯ ಮರಣಕ್ಕಾಗಿ ದುಃಖಿಸುವ ಕಾಲ ಸಮೀಪಿಸಿತು. ಆ ಬಳಿಕ ನನ್ನ ತಮ್ಮ ಯಕೋಬನನ್ನು ಕೊಂದುಹಾಕುತ್ತೇನೆ,” ಎಂದು ತನ್ನೊಳಗೇ ನೆನಸಿಕೊಂಡನು.


ನೀವು ಸಜೀವವಾದ ಅನಂತ ದೈವವಾಕ್ಯದ ಮೂಲಕ ಹೊಸಜನ್ಮವನ್ನು ಪಡೆದಿದ್ದೀರಿ; ಈ ಜನ್ಮವನ್ನು ನೀವು ಪಡೆದಿರುವುದು ಮರ್ತ್ಯಮಾನವನಿಂದಲ್ಲ, ಅಮರ ದೇವರಿಂದ.


“ಆದರೆ ಒಬ್ಬನು ಇನ್ನೊಬ್ಬನಲ್ಲಿ ದ್ವೇಷವನ್ನೇ ಸಾಧಿಸಿ, ಸಮಯನೋಡಿ ಅವನ ಮೇಲೆ ಬಿದ್ದು, ಅವನನ್ನು ಹೊಡೆದು ಕೊಂದು ತರುವಾಯ ಈ ನಗರಗಳಲ್ಲೊಂದಕ್ಕೆ ಓಡಿಹೋಗಬಹುದು. ಆಗ


“ನಾನು ಬೆಳಕಿನಲ್ಲಿದ್ದೇನೆ” ಎಂದು ಹೇಳಿಕೊಂಡು ತನ್ನ ಸಹೋದರನನ್ನು ದ್ವೇಷಿಸುವವನು ಇನ್ನೂ ಕತ್ತಲಲ್ಲೇ ಇದ್ದಾನೆ.


ತನ್ನ ಸಹೋದರನನ್ನು ದ್ವೇಷಿಸುವವನು ಕತ್ತಲಲ್ಲಿ ಇದ್ದಾನೆ; ಕತ್ತಲಲ್ಲೇ ನಡೆಯುತ್ತಾನೆ. ಕತ್ತಲು ಅವನನ್ನು ಕುರುಡಾಗಿಸಿರುವುದರಿಂದ ಎತ್ತ ಹೋಗುತ್ತಿದ್ದಾನೆಂದು ಅವನಿಗೇ ತಿಳಿಯದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು