Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಯೋಹಾನನು 3:16 - ಕನ್ನಡ ಸತ್ಯವೇದವು C.L. Bible (BSI)

16 ಕ್ರಿಸ್ತಯೇಸು ನಮಗೋಸ್ಕರ ತಮ್ಮ ಪ್ರಾಣವನ್ನೇ ತೆತ್ತರು. ಇದರಿಂದ ಪ್ರೀತಿ ಎಂತಹುದೆಂದು ನಾವು ಅರಿತುಕೊಂಡೆವು. ನಾವೂ ಕೂಡ ಸಹೋದರರಿಗಾಗಿ ಪ್ರಾಣಾರ್ಪಣೆ ಮಾಡಲು ಬದ್ಧರಾಗಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಕ್ರಿಸ್ತನು ನಮಗೋಸ್ಕರ ತನ್ನ ಪ್ರಾಣವನ್ನು ಅರ್ಪಿಸಿದ್ದರಿಂದ ದೇವರ ಪ್ರೀತಿ ಇಂಥದ್ದೆಂದು ನಮಗೆ ತಿಳಿದು ಬಂದಿದೆ. ನಾವು ಸಹ ಸಹೋದರರಿಗೋಸ್ಕರ ನಮ್ಮ ಪ್ರಾಣಗಳನ್ನು ಕೊಡುವ ಹಂಗಿನಲ್ಲಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಕ್ರಿಸ್ತನು ನಮಗೋಸ್ಕರ ತನ್ನ ಪ್ರಾಣವನ್ನು ಕೊಟ್ಟದರಲ್ಲಿಯೇ ಪ್ರೀತಿ ಇಂಥದೆಂದು ನಮಗೆ ತಿಳಿದು ಬಂದದೆ. ನಾವು ಸಹ ಸಹೋದರರಿಗೋಸ್ಕರ ನಮ್ಮ ಪ್ರಾಣಗಳನ್ನು ಕೊಡುವ ಹಂಗಿನಲ್ಲಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಯೇಸು ತನ್ನ ಪ್ರಾಣವನ್ನೇ ಕೊಟ್ಟದ್ದರಿಂದ ನಿಜವಾದ ಪ್ರೀತಿಯೆಂದರೇನೆಂಬುದನ್ನು ನಾವು ತಿಳಿದುಕೊಂಡೆವು. ಆದ್ದರಿಂದ ಕ್ರಿಸ್ತನಲ್ಲಿ ಸಹೋದರ ಸಹೋದರಿಯರಾದವರಿಗೋಸ್ಕರ ನಾವೂ ನಮ್ಮ ಪ್ರಾಣಗಳನ್ನು ಕೊಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಕ್ರಿಸ್ತ ಯೇಸುವು ನಮಗೋಸ್ಕರ ತಮ್ಮ ಪ್ರಾಣವನ್ನು ಕೊಟ್ಟದ್ದರಲ್ಲಿಯೇ ದೇವರ ಪ್ರೀತಿ ಇಂಥದ್ದೆಂದು ನಮಗೆ ತಿಳಿದು ಬಂದಿದೆ. ನಾವು ಸಹ ಸಹೋದರ ಸಹೋದರಿಯರಿಗೋಸ್ಕರ ನಮ್ಮ ಪ್ರಾಣಗಳನ್ನು ಕೊಡುವವರಾಗಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

16 ಕ್ರಿಸ್ತಾನ್ ಅಮ್ಚ್ಯಾಸಾಟ್ನಿ ಜಿವ್ ದಿಲ್ಲ್ಯಾ ವೈನಾ ದೆವಾಚೊ ಪ್ರೆಮ್ ಕಸ್ಲೊ ಮನುನ್ ಅಮ್ಕಾ ಕಳ್ತಾ, ತನ್ನಾ ಅಮ್ಚ್ಯಾ ಭಾವಾಚ್ಯಾ ಅನಿ ಭೆನಿಚ್ಯಾಸಾಟ್ನಿ ಅಮಿಬಿ ಅಮ್ಚೊ ಜಿವ್ ದಿವ್ಕ್ ಪಾಜೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಯೋಹಾನನು 3:16
24 ತಿಳಿವುಗಳ ಹೋಲಿಕೆ  

ಕ್ರಿಸ್ತಯೇಸು ನಮ್ಮನ್ನು ಪ್ರೀತಿಸಿ ನಮಗೋಸ್ಕರ ತಮ್ಮನ್ನೇ ಸಮರ್ಪಿಸಿದರು. ದೇವರಿಗೆ ಸುಗಂಧ ಕಾಣಿಕೆಯನ್ನಾಗಿಯೂ ಬಲಿಯನ್ನಾಗಿಯೂ ಅರ್ಪಿಸಿದರು. ಅಂತೆಯೇ, ನೀವೂ ಪ್ರೀತಿಯಿಂದ ಬಾಳಿರಿ.


ನಿಮಗೊಂದು ಹೊಸ ಆಜ್ಞೆಯನ್ನು ಕೊಡುತ್ತೇನೆ: ಒಬ್ಬರನ್ನೊಬ್ಬರು ಪ್ರೀತಿಸಿರಿ. ನಾನು ನಿಮ್ಮನ್ನು ಪ್ರಿತಿಸಿದಂತೆಯೇ ನೀವು ಸಹ ಒಬ್ಬರನ್ನೊಬ್ಬರು ಪ್ರೀತಿಸಿರಿ.


ದೇವರು ಲೋಕವನ್ನು ಎಷ್ಟಾಗಿ ಪ್ರೀತಿಸಿದರೆಂದರೆ ತಮ್ಮ ಏಕೈಕ ಪುತ್ರನನ್ನೇ ಧಾರೆಯೆರೆದರು; ಆತನಲ್ಲಿ ವಿಶ್ವಾಸವಿಟ್ಟ ಯಾರೂ ನಾಶವಾಗದೆ ಎಲ್ಲರೂ ನಿತ್ಯಜೀವವನ್ನು ಪಡೆಯಬೇಕೆಂಬುದೇ ದೇವರ ಉದ್ದೇಶ.


ಆದರೆ ನಾವಿನ್ನೂ ಪಾಪಿಗಳಾಗಿರುವಾಗಲೇ ಕ್ರಿಸ್ತಯೇಸು ನಮಗೋಸ್ಕರ ಪ್ರಾಣತ್ಯಾಗ ಮಾಡಿದರು. ಇದರಿಂದ ನಮ್ಮ ಮೇಲೆ ದೇವರಿಗಿರುವ ಪ್ರೀತಿ ಎಷ್ಟೆಂದು ವ್ಯಕ್ತವಾಗುತ್ತದೆ.


ನಂಬಲರ್ಹವಾದ ಸಾಕ್ಷಿಯೂ ಮೃತ್ಯುವಿನಿಂದ ಪುನರುತ್ಥಾನ ಹೊಂದಿದವರಲ್ಲಿ ಪ್ರಪ್ರಥಮರೂ ಭೂರಾಜರ ಒಡೆಯರೂ ಆದ ಯೇಸುಕ್ರಿಸ್ತರಿಂದಲೂ ನಿಮಗೆ ಕೃಪಾಶೀರ್ವಾದವೂ ಶಾಂತಿಸಮಾಧಾನವೂ ಲಭಿಸಲಿ! ನಮ್ಮನ್ನು ಪ್ರೀತಿಸುವವರೂ ತಮ್ಮ ರಕ್ತದಿಂದ ನಮ್ಮ ಪಾಪಗಳನ್ನು ತೊಳೆದವರೂ


ಅಂತೆಯೇ ಕ್ರಿಸ್ತಯೇಸು ನೀತಿವಂತರಾಗಿದ್ದರೂ ಅನೀತಿವಂತರಿಗಾಗಿ ಪ್ರಾಣತ್ಯಾಗಮಾಡಿದರು. ಪಾಪ ನಿವಾರಣಾರ್ಥವಾಗಿ ಒಂದೇ ಸಾರಿಗೆ ಮಾತ್ರವಲ್ಲ, ಎಂದೆಂದಿಗೂ ನಮ್ಮನ್ನು ದೇವರ ಬಳಿಗೆ ಸೇರಿಸಲು ಸತ್ತರು. ದೇಹದಲ್ಲಿ ಅವರು ವಧಿತರಾದರೂ ಆತ್ಮದಲ್ಲಿ ಜೀವಂತರಾದರು.


ಹಾಗೆಯೇ ನರಪುತ್ರನು ಸೇವೆಮಾಡಿಸಿಕೊಳ್ಳುವುದಕ್ಕೆ ಅಲ್ಲ, ಇತರರ ಸೇವೆಮಾಡುವುದಕ್ಕೂ ಸರ್ವರ ಉದ್ಧಾರಕ್ಕಾಗಿ ತನ್ನ ಪ್ರಾಣವನ್ನು ಈಡಾಗಿ ಕೊಡುವುದಕ್ಕೂ ಬಂದಿದ್ದಾನೆ,” ಎಂದು ಹೇಳಿದರು.


ನೀವು ನಿಮ್ಮ ವಿಷಯದಲ್ಲಿ ಹಾಗೂ ಪವಿತ್ರಾತ್ಮ ನಿಮ್ಮ ಪಾಲನೆಗೆ ವಹಿಸಿರುವ ಮಂದೆಯ ವಿಷಯದಲ್ಲಿ ಜಾಗರೂಕರಾಗಿರಿ. ಪ್ರಭು ತಮ್ಮ ಸ್ವಂತ ರಕ್ತ ಸುರಿಸಿ ಸಂಪಾದಿಸಿದ ಧರ್ಮಸಭೆಗೆ ಉತ್ತಮ ಕುರಿಗಾಹಿಗಳಾಗಿರಿ.


ಪುರುಷರೇ, ಕ್ರಿಸ್ತಯೇಸು ಧರ್ಮಸಭೆಯನ್ನು ಪ್ರೀತಿಸಿದ ಪ್ರಕಾರ ನಿಮ್ಮ ನಿಮ್ಮ ಪತ್ನಿಯರನ್ನು ಪ್ರೀತಿಸಿರಿ. ಧರ್ಮಸಭೆಯನ್ನು ಪಾವನಗೊಳಿಸುವುದಕ್ಕಾಗಿ ಕ್ರಿಸ್ತಯೇಸು ತಮ್ಮ ಪ್ರಾಣವನ್ನೇ ಕೊಟ್ಟರು. ವಾಕ್ಯೋಪದೇಶದಿಂದಲೂ ಜಲಸ್ನಾನದಿಂದಲೂ ಅದನ್ನು ಶುದ್ಧೀಕರಿಸಿದರು.


ಅವರು ನನ್ನ ಪ್ರಾಣರಕ್ಷಣೆಗಾಗಿ ತಮ್ಮ ಪ್ರಾಣಗಳನ್ನೇ ಅಪಾಯಕ್ಕೆ ಈಡಾಗಿಸಿದವರು. ಅದಕ್ಕಾಗಿ ನಾನು ಅವರಿಗೆ ಚಿರಋಣಿ. ನಾನು ಮಾತ್ರವಲ್ಲ, ಯೆಹೂದ್ಯೇತರ ಸಭೆಗಳ ಎಲ್ಲರೂ ಅವರು ಮಾಡಿದ ಉಪಕಾರಕ್ಕೆ ಚಿರಋಣಿಗಳಾಗಿದ್ದಾರೆ.


ತಾನು ದೇವರಲ್ಲಿ ನೆಲೆಸಿದ್ದೇನೆಂದು ಹೇಳುವವನು ಕ್ರಿಸ್ತಯೇಸು ಜೀವಿಸಿದಂತೆಯೇ ಜೀವಿಸಬೇಕು. ಇದರಿಂದಲೇ ನಾವು ದೇವರಲ್ಲಿ ನೆಲೆಗೊಂಡಿದ್ದೇವೆಂದು ತಿಳಿದುಕೊಳ್ಳುತ್ತೇವೆ.


ನಿಮ್ಮ ವಿಶ್ವಾಸವೆಂಬ ಬಲಿಕಾಣಿಕೆಯ ಮೇಲೆ ನನ್ನ ರಕ್ತವನ್ನು ಧಾರೆಯಾಗಿ ಹರಿಸಬೇಕಾಗಿಬಂದರೂ ನನಗೆ ಸಂತೋಷವೇ; ನಿಮ್ಮೆಲ್ಲರೊಡನೆ ಸೇರಿ ಸಂತೋಷಿಸುತ್ತೇನೆ.


ಅವರು ಈ ಹೊಸ ಗೀತೆಯನ್ನು ಹಾಡುತ್ತಿದ್ದರು: :ಸುರುಳಿಯನ್ನು ಸ್ವೀಕರಿಸಲು ನೀ ಯೋಗ್ಯನು ಅದರ ಮುದ್ರೆಗಳನ್ನು ಮುರಿಯಲು ನೀ ಶಕ್ತನು. ಸಮರ್ಪಿಸಿಕೊಂಡಿರುವೆ ನಿನ್ನನೇ ನೀ ಬಲಿಯರ್ಪಣೆಯಾಗಿ ಸಕಲ ದೇಶ, ಭಾಷೆ, ಕುಲಗೋತ್ರಗಳಿಂದ ಕೊಂಡುಕೊಂಡಿರುವೆ ಮಾನವರನು ನಿನ್ನ ರಕ್ತದಿಂದ.


ನಾವು ಪಾಪದ ಪಾಲಿಗೆ ಸತ್ತು, ಸತ್ಯಕ್ಕೋಸ್ಕರ ಜೀವಿಸುವಂತೆ ಕ್ರಿಸ್ತಯೇಸು ತಮ್ಮ ದೇಹದಲ್ಲಿ ನಮ್ಮ ಪಾಪಗಳನ್ನು ಹೊತ್ತು ಶಿಲುಬೆಯ ಮರವನ್ನೇರಿದರು. ಅವರ ಗಾಯಗಳಿಂದ ನೀವು ಗುಣಹೊಂದಿದಿರಿ.


ನಿಮ್ಮ ಪೂರ್ವಜರಿಂದ ಪರಂಪರೆಯಾಗಿ ಬಂದಿರುವ ನಿರರ್ಥಕ ನಡವಳಿಕೆಯಿಂದ ನಿಮ್ಮನ್ನು ಬಿಡುಗಡೆಮಾಡಲು ಕೊಡಲಾದ ಬೆಲೆಯು ಎಂಥದ್ದೆಂದು ನಿಮಗೆ ತಿಳಿದಿದೆ. ಅದು ನಶಿಸಿಹೋಗುವ ಬೆಳ್ಳಿಬಂಗಾರವಲ್ಲ.


ಕ್ರಿಸ್ತಯೇಸುವಿನ ಸೇವೆಯಲ್ಲಿ ಅವನು ಸತ್ತು ಬದುಕಿದ್ದಾನೆ. ನೀವು ಕೊಡಲು ಸಾಧ್ಯವಾಗದೆ ಹೋದ ನೆರವನ್ನು ಅವನು ನನಗೆ ಕೊಟ್ಟು ಸೇವೆಯನ್ನು ಪೂರ್ಣಗೊಳಿಸಿದ್ದಾನೆ.


“ನಾನೇ ಉತ್ತಮ ಕುರಿಗಾಹಿ. ಉತ್ತಮ ಕುರಿಗಾಹಿಯು ಕುರಿಗಳಿಗೋಸ್ಕರ ತನ್ನ ಪ್ರಾಣವನ್ನೇ ಕೊಡುತ್ತಾನೆ.


ನೀವು ನಮಗೆ ಇಷ್ಟು ಪ್ರಿಯರಾದ ಕಾರಣ ದೇವರ ಶುಭಸಂದೇಶವನ್ನು ಸಾರುವುದಕ್ಕೆ ಮಾತ್ರವಲ್ಲ, ನಿಮಗಾಗಿ ನಮ್ಮ ಪ್ರಾಣವನ್ನು ನೀಡುವುದಕ್ಕೂ ಸಿದ್ಧರಾಗಿದ್ದೆವು.


“ನಾನು ಬೆಳಕಿನಲ್ಲಿದ್ದೇನೆ” ಎಂದು ಹೇಳಿಕೊಂಡು ತನ್ನ ಸಹೋದರನನ್ನು ದ್ವೇಷಿಸುವವನು ಇನ್ನೂ ಕತ್ತಲಲ್ಲೇ ಇದ್ದಾನೆ.


ಹೀಗೆ ನಮ್ಮಲ್ಲಿ ಸಾವು ಕಾರ್ಯಗತವಾಗುತ್ತಿದ್ದರೆ ನಿಮ್ಮಲ್ಲಿ ಜೀವ ಕಾರ್ಯಗತವಾಗುತ್ತಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು